ದಾನಿಯೇಲ 11:16 - ಕನ್ನಡ ಸತ್ಯವೇದವು C.L. Bible (BSI)16 ದಕ್ಷಿಣದರಾಜನಿಗೆ ವಿರುದ್ಧ ಬರುವವನು ಇಚ್ಛಾನುಸಾರ ವರ್ತಿಸುವನು. ಅವನನ್ನು ಎದುರಿಸಬಲ್ಲವನು ಒಬ್ಬನೂ ಇರನು. ಆ ‘ಚೆಲುವಿನ ನಾಡನ್ನೂ’ ಗೆದ್ದು ಅದನ್ನು ಪೂರ್ತಿಯಾಗಿ ತನ್ನ ಕೈಹಿಡಿತದಲ್ಲಿ ಇಟ್ಟುಕೊಳ್ಳುವನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201916 ದಕ್ಷಿಣ ದಿಕ್ಕಿನ ರಾಜನಿಗೆ ವಿರುದ್ಧವಾಗಿ ಬರುವವನು ತನ್ನ ಇಚ್ಛಾನುಸಾರ ನಡೆಯುವನು. ಅವನನ್ನು ಎದುರಿಸುವವರು ಯಾರು ಇಲ್ಲ, ನಾಶವನ್ನು ಕೈಯಲ್ಲಿಟ್ಟುಕೊಂಡು ಅಂದ ಚಂದದ ದೇಶದಲ್ಲಿ ನಿಂತಿರುವನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)16 ದಕ್ಷಿಣರಾಜನಿಗೆ ವಿರುದ್ಧವಾಗಿ ಬರುವವನು ಇಚ್ಫಾನುಸಾರ ನಡೆಯುವನು; ಅವನಿಗೆ ಎದುರೇ ಇಲ್ಲ; ನಾಶನವನ್ನು ಕೈಯಲ್ಲಿಟ್ಟುಕೊಂಡು ಅಂದಚಂದದ ದೇಶದಲ್ಲಿ ನಿಂತಿರುವನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್16 “ಉತ್ತರದ ರಾಜನು ತನ್ನ ಇಷ್ಟಬಂದಂತೆ ಮಾಡುವನು. ಯಾರಿಂದಲೂ ಅವನನ್ನು ತಡೆಯಲು ಸಾಧ್ಯವಾಗುವದಿಲ್ಲ. ಅವನು ಸುಂದರವಾದ ನಾಡಿನ ಮೇಲೆ ಅಧಿಕಾರವನ್ನೂ ನಿಯಂತ್ರಣವನ್ನೂ ಸಂಪಾದಿಸುವನು. ಅದನ್ನು ನಾಶಮಾಡುವ ಸಾಮರ್ಥ್ಯವನ್ನು ಹೊಂದಿರುವನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ16 ಆದರೆ ಅವನಿಗೆ ಎದುರಾಗಿ ಬರುವವನು ತನ್ನ ಇಷ್ಟದ ಪ್ರಕಾರ ಮಾಡುವನು. ಯಾರೂ ಅವನ ಮುಂದೆ ನಿಲ್ಲಲಾರರು. ಅವನು ರಮ್ಯವಾದ ದೇಶದಲ್ಲಿ ನಿಲ್ಲುವನು. ಅದನ್ನು ನಾಶಮಾಡುವ ಅಧಿಕಾರ ಹೊಂದಿರುವನು. ಅಧ್ಯಾಯವನ್ನು ನೋಡಿ |