Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ದಾನಿಯೇಲ 11:19 - ಕನ್ನಡ ಸತ್ಯವೇದವು C.L. Bible (BSI)

19 ಬಳಿಕ ರಾಜನು ಸ್ವದೇಶದ ದುರ್ಗಗಳ ಕಡೆಗೆ ಹಿಂದಿರುಗುವನು. ಆದರೆ ಎಡವಿಬಿದ್ದು ಅಳಿದುಹೋಗುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

19 ಆ ಮೇಲೆ ಸ್ವದೇಶದ ದುರ್ಗಗಳ ಕಡೆಗೆ ಹಿಂದಿರುಗಿ ಎಡವಿ ಬಿದ್ದು ಇಲ್ಲವಾಗುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

19 ಆಮೇಲೆ ಸ್ವದೇಶದ ದುರ್ಗಗಳ ಕಡೆಗೆ ಹಿಂದಿರುಗಿ ಎಡವಿಬಿದ್ದು ಇಲ್ಲವಾಗುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

19 “ಅದಾದ ಮೇಲೆ ಉತ್ತರದ ರಾಜನು ತನ್ನ ದೇಶದ ಭದ್ರವಾದ ಕೋಟೆಗಳಿಗೆ ಹಿಂದಿರುಗುವನು. ಆದರೆ ಅವನು ದುರ್ಬಲನಾಗಿ ಬಿದ್ದುಹೋಗುವನು; ಕೊನೆಗೊಳ್ಳುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

19 ಆಗ ಅವನು ತನ್ನ ಸ್ವದೇಶದ ಕೋಟೆಗೆ ಮುಖವನ್ನು ತಿರುಗಿಸುವನು. ಆದರೆ ಅವನು ಎಡವಿಬಿದ್ದು, ಕಾಣದೆ ಹೋಗುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ದಾನಿಯೇಲ 11:19
9 ತಿಳಿವುಗಳ ಹೋಲಿಕೆ  

ನಿನ್ನನ್ನು ಪೂರ್ತಿಯಾಗಿ ಧ್ವಂಸಮಾಡುವೆನು; ನೀನು ಇಲ್ಲವಾಗುವೆ; ಎಷ್ಟು ಹುಡುಕಿದರೂ ನೀನು ಎಂದಿಗೂ ಸಿಕ್ಕುವುದಿಲ್ಲ; ಇದು ಸರ್ವೇಶ್ವರನಾದ ದೇವರ ನುಡಿ.”


ಕ್ರಮೇಣ ನಾನು ಆ ಮಾರ್ಗವಾಗಿ ನಡೆಯಲು I ಕಾಣಲಿಲ್ಲ, ಗುರುತೂ ಇರಲಿಲ್ಲ ಹುಡುಕಲು II


“ವೇಗಶಾಲಿಗಳು ಓಡಿಹೋಗಲಾರರು ಬಲಿಷ್ಟರು ತಪ್ಪಿಸಿಕೊಳ್ಳಲಾರರು. ಉತ್ತರದಲ್ಲಿ, ಯೂಫ್ರೆಟಿಸ್ ನದಿಯ ಹತ್ತಿರದಲ್ಲಿ, ಎಡವಿಬಿದ್ದಿರುವರು.


ಕೇಡು ಮಾಡಬಂದರೆನಗೆ ಕೊಲೆಗಡುಕರು I ಎಡವಿಬಿದ್ದರು, ತಾವೇ ಅಳಿದುಹೋದರು II


ಸ್ವಪ್ನದಂತೆ ಅವನು ಸಿಗದೆ ಹಾರಿಹೋಗುವನು ರಾತ್ರಿಯ ಕನಸಿನಂತೆ ಓಡಿಹೋಗುವನು.


ಓಲಾಡುವುದು ಭೂಮಿ ಅಮಲೇರಿದವನಂತೆ, ತೂಗಾಡುವುದು ಬಿರುಗಾಳಿಗೆ ಸಿಕ್ಕಿದ ಗುಡಿಸಲಂತೆ, ಕುಸಿದು ಬೀಳುವುದು ದ್ರೋಹದ ಭಾರಕೆ, ಮರಳಿ ಏಳದಂತೆ.


ಅನಂತರ ಅವಳು ಹುಟ್ಟಿದ ಬುಡದಿಂದ ಒಡೆದ ಸಸಿಯೊಂದು ಅದರ ಸ್ಥಾನದಲ್ಲಿ ನಿಲ್ಲುವುದು. ಉತ್ತರರಾಜನ ಸೈನ್ಯಕ್ಕೆ ವಿರುದ್ಧವಾಗಿ ಹೊರಟು, ಅವನ ದುರ್ಗದೊಳಗೆ ನುಗ್ಗಿ, ಅಲ್ಲಿನವರಿಗೆ ಮಾಡುವಷ್ಟೂ ಮಾಡಿ ಗೆಲ್ಲುವನು.


ವಿಚಾರಣೆ ಇಲ್ಲದೆಯೆ ಪರಾಕ್ರಮಿಗಳನು ಸದೆಬಡಿಯುವನು ಅವರ ಸ್ಥಾನದಲ್ಲಿ ಇತರರನ್ನು ನಿಲ್ಲಿಸಬಲ್ಲನು.


ದುರುಳನೋರ್ವ ಮಹಾಗರ್ವದಿಂದ ಬಾಳುತ್ತಿದ್ದ I ಹುಲುಸಾಗಿ ಬೆಳೆದ ದೇವದಾರು ಮರದಂತಿದ್ದ II


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು