Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ದಾನಿಯೇಲ 11:23 - ಕನ್ನಡ ಸತ್ಯವೇದವು C.L. Bible (BSI)

23 ಅವನ ಸಂಗಡ ಒಪ್ಪಂದ ಮಾಡಿಕೊಂಡವನಿಗೆ ಕೂಡಲೆ ಮೋಸಮಾಡುವನು. ಕೊಂಚ ಜನರ ಸಹಾಯದಿಂದಲೆ ಏಳಿಗೆಯಾಗಿ ಬಲಗೊಳ್ಳುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

23 ಅವನ ಸಂಗಡ ಒಪ್ಪಂದ ಮಾಡಿಕೊಂಡವನಿಗೆ ಕೂಡಲೆ ಮೋಸ ಮಾಡುವನು; ಸ್ವಲ್ಪ ಜನರ ಸಹಾಯದಿಂದ ಏಳಿಗೆಯಾಗಿ ಬಲಗೊಳ್ಳುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

23 ಅವನ ಸಂಗಡ ಒಪ್ಪಂದಮಾಡಿಕೊಂಡವನಿಗೆ ಕೂಡಲೆ ಮೋಸಮಾಡುವನು; ಕೊಂಚ ಜನದ ಸಹಾಯದಿಂದ ಏಳಿಗೆಯಾಗಿ ಬಲಗೊಳ್ಳುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

23 ಅನೇಕ ರಾಷ್ಟ್ರಗಳು ಕ್ರೂರಿಯಾದ ಮತ್ತು ವಂಚಕನಾದ ಆ ಅರಸನೊಂದಿಗೆ ಒಪ್ಪಂದಗಳನ್ನು ಮಾಡಿಕೊಳ್ಳುವವು. ಆದರೆ ಅವನು ಸುಳ್ಳು ಹೇಳಿ ಅವರನ್ನು ವಂಚಿಸುವನು. ಅವನು ಹೆಚ್ಚಿನ ಅಧಿಕಾರವನ್ನು ಸಂಪಾದಿಸಿದರೂ ಕೆಲವೇ ಜನರು ಅವನಿಗೆ ಬೆಂಬಲ ನೀಡುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

23 ಅವನ ಸಂಗಡ ಒಪ್ಪಂದ ಮಾಡಿಕೊಂಡ ಮೇಲೆ ಕಪಟವಾಗಿ ನಡೆಯುವನು. ಕೆಲವು ಜನರ ಸಹಾಯದಿಂದ ಅಧಿಕಾರ ಪಡೆಯುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ದಾನಿಯೇಲ 11:23
11 ತಿಳಿವುಗಳ ಹೋಲಿಕೆ  

ಯುಕ್ತಿಯಿಂದಲೆ ತನ್ನ ಕಪಟತನವನ್ನು ಸಿದ್ಧಿಗೆ ತರುವನು. ಮನದಲ್ಲೆ ಉಬ್ಬಿಕೊಂಡು ನೆಮ್ಮದಿಯಾಗಿರುವ ಬಹುಜನರನ್ನು ನಾಶಪಡಿಸುವನು. ರಾಜಾಧಿರಾಜನಿಗೂ ವಿರುದ್ಧವಾಗಿ ಏಳುವನು. ಆದರೂ ಯಾರ ಕೈಯೂ ಸೋಕದೆ ಹಾಳಾಗುವನು.


ಆ ಅಧರ್ಮಿ ಸೈತಾನನ ಶಕ್ತಿಯೊಂದಿಗೆ ಬರುವನು. ಮೋಸಗೊಳಿಸುವ ಎಲ್ಲಾ ಬಗೆಯ ಪವಾಡಗಳನ್ನು, ಚಮತ್ಕಾರಗಳನ್ನು ಮತ್ತು ಶಕ್ತಿಯುತ ಕಾರ್ಯಗಳನ್ನು ಮಾಡಿತೋರಿಸುವನು.


ಆದರೂ ಹವ್ವಳು ಸರ್ಪದ ಕುಯುಕ್ತಿಗೆ ಸಿಕ್ಕಿ ಮೋಸಹೋದಂತೆ ನೀವೂ ಕೂಡ ಕ್ರಿಸ್ತಯೇಸುವಿನ ವಿಷಯದಲ್ಲಿ ಇರಬೇಕಾದ ಶುದ್ಧ ಪಾತಿವ್ರತ್ಯವನ್ನು ಕಳೆದುಕೊಂಡು ಕೆಟ್ಟುಹೋದೀರಿ ಎಂಬ ಭಯ ನನಗುಂಟು.


ಸಕಲ ವಿಧವಾದ ಅನ್ಯಾಯ, ಅಕ್ರಮ, ದುರಾಶೆ, ದುರ್ನಡತೆ ಅವರಲ್ಲಿ ತುಂಬಿಕೊಂಡವು. ಮತ್ಸರ, ಕೊಲೆ, ಕಲಹ, ಕಪಟತನ, ಹಗೆತನ, ಇವೆಲ್ಲವೂ ಅವರಲ್ಲಿ ತುಂಬಿಹೋಗಿವೆ.


ದುರುಳನು ಪಡೆವ ಸಂಬಳ ಜೊಳ್ಳು ಸಂಬಳ; ನೀತಿಯನ್ನು ಬಿತ್ತುವವನು ಪಡೆವನು ಸತ್ಫಲ.


ಕ್ಷೌರಗತ್ತಿಗೂ ಹರಿತ ನಿನ್ನ ನಾಲಿಗೆ, ವಂಚಕನೆ I ಕಲ್ಪಿಸುವೆಯಾ ದಿನವೆಲ್ಲಾ ನಾಶವಿನಾಶವನೆ? II


ಶೆಕೆಮನು ತಮ್ಮ ತಂಗಿ ದೀನಳನ್ನು ಕೆಡಿಸಿದ್ದರಿಂದ ಯಕೋಬನ ಮಕ್ಕಳು ಅವನಿಗೂ ಅವನ ತಂದೆ ಹಮೋರನಿಗೂ ಕಪಟದಿಂದ ಈ ಉತ್ತರಕೊಟ್ಟರು;


ಅವನನ್ನು ಎದುರಿಸುವ ದೊಡ್ಡ ದೊಡ್ಡ ಸೈನ್ಯಗಳು ಹಾಗು ದೇವರ ಪ್ರಧಾನ ಯಾಜಕನು ಅವನ ಸೈನ್ಯ ಪ್ರವಾಹಕ್ಕೆ ಸಿಕ್ಕಿ ಅದರಲ್ಲಿ ಮುಳುಗಿ ನಾಶವಾಗುವರು.


ನೆಮ್ಮದಿಯ ಕಾಲದಲ್ಲಿ ಸಂಸ್ಥಾನದ ಫಲವತ್ತಾದ ಪ್ರದೇಶಗಳ ಮೇಲೆ ದಾಳಿಮಾಡುವನು. ತಂದೆತಾತಂದಿರು ಮಾಡದಂಥ ಕಾರ್ಯಗಳನ್ನು ಮಾಡುವನು. ಸೂರೆ-ಸುಲಿಗೆ-ಕೊಳ್ಳೆಹೊಡೆದವುಗಳನ್ನು ತನ್ನವರಿಗೆ ಚೆಲ್ಲಿಬಿಡುವನು. ಕೋಟೆಗಳನ್ನು ಹಿಡಿಯುವ ಕುತಂತ್ರಗಳನ್ನು ಕೊನೆಯವರೆಗೂ ಮುಂದುವರೆಸುವನು.


ಅವನು ಪ್ರಬಲನಾಗುವನು, ಆದರೆ ಸ್ವಬಲದಿಂದಲ್ಲ. ಅತ್ಯಧಿಕವಾಗಿ ಹಾಳುಮಾಡಿ, ಅಭಿವೃದ್ಧಿಯಾಗುವನು. ತನ್ನ ಇಷ್ಟಾರ್ಥವನ್ನು ತೀರಿಸಿಕೊಳ್ಳುವನು. ಬಲಿಷ್ಠರನ್ನೂ ದೇವಜನರನ್ನೂ ಧ್ವಂಸಮಾಡುವನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು