Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ದಾನಿಯೇಲ 11:27 - ಕನ್ನಡ ಸತ್ಯವೇದವು C.L. Bible (BSI)

27 ಆ ಇಬ್ಬರು ರಾಜರು ಪರಸ್ಪರ ಕೇಡಿನ ಮನಸ್ಸು ಉಳ್ಳವರಾಗಿ ಸಹಪಂಕ್ತಿಯಲ್ಲಿ ಕುಳಿತಿದ್ದರೂ ಸುಳ್ಳುಪೊಳ್ಳು ಮಾತಾಡಿಕೊಳ್ಳುವರು. ಆದರೆ ನಿಶ್ಚಿತಕಾಲ ಬರುವ ತನಕ ಅವರಿಂದ ಏನೂ ಸಾಧಿಸಲಾಗದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

27 ಆ ಇಬ್ಬರು ರಾಜರು ಒಬ್ಬರಿಗೊಬ್ಬರು ಕೇಡಿನ ಮನಸುಳ್ಳವರಾಗಿ ಸಹ ಪಂಕ್ತಿಯಲ್ಲಿ ಸುಳ್ಳುಸುಳ್ಳು ಮಾತನಾಡಿಕೊಳ್ಳುವರು. ಆದರೆ ಏನೂ ಸಾಗದು, ಪರಿಣಾಮವು ನಿಶ್ಚಿತ ಕಾಲದಲ್ಲೇ ತಲೆದೋರುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

27 ಆ ಇಬ್ಬರು ರಾಜರು [ಒಬ್ಬರಿಗೊಬ್ಬರು] ಕೇಡಿನ ಮನಸ್ಸುಳ್ಳವರಾಗಿ ಸಹಪಂಕ್ತಿಯಲ್ಲಿ ಸುಳ್ಳುಸುಳ್ಳು ಮಾತಾಡಿಕೊಳ್ಳುವರು; ಆದರೆ ಏನೂ ಸಾಗದು; ಪರಿಣಾಮವು ಕ್ಲುಪ್ತಕಾಲದಲ್ಲೇ ತಲೆದೋರುವದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

27 ಆ ಇಬ್ಬರು ಅರಸರು ಒಬ್ಬರಿಗೊಬ್ಬರು ಕೇಡುಮಾಡಬೇಕೆಂದು ನಿಶ್ಚಯಿಸುವರು. ಅವರಿಬ್ಬರೂ ಒಂದೇ ಮೇಜಿನಲ್ಲಿ ಕುಳಿತುಕೊಳ್ಳುವರು ಮತ್ತು ಒಬ್ಬರಿಗೊಬ್ಬರು ಸುಳ್ಳು ಹೇಳುವರು. ಆದರೆ ಇದರಿಂದ ಅವರಿಬ್ಬರಲ್ಲಿ ಯಾರಿಗೂ ಒಳ್ಳೆಯದಾಗುವದಿಲ್ಲ. ಏಕೆಂದರೆ ದೇವರು ಅವರ ಅಂತ್ಯಕಾಲವನ್ನು ನಿರ್ಧರಿಸಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

27 ಈ ಇಬ್ಬರ ಅರಸನ ಹೃದಯಗಳು ಕೇಡನ್ನು ಮಾಡುವಂತವುಗಳಾಗಿರುವುವು. ಒಂದೇ ಮೇಜಿನಲ್ಲಿ ಕುಳಿತು ಒಬ್ಬರಿಗೊಬ್ಬರು ಸುಳ್ಳು ಹೇಳುವರು. ಆದರೆ ಅದು ಅನುಕೂಲವಾಗದು. ಏಕೆಂದರೆ ಅದು ಹೇಗಾದರೂ ನಿಶ್ಚಿತ ಕಾಲದಲ್ಲಿಯೇ ಅಂತ್ಯವಾಗುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ದಾನಿಯೇಲ 11:27
24 ತಿಳಿವುಗಳ ಹೋಲಿಕೆ  

ಹುಸಿಯ ನುಡಿವರು ನೆರೆಯವರೊಡನೆ ಪ್ರತಿಯೋರ್ವರು I ಕಪಟ ಮನದ ತುಟಿಮಾತಿನ ಸ್ತುತಿಗಾರರವರು II


ನಿಯಮಿತ ಕಾಲದಲ್ಲಿ ಆ ದರ್ಶನ ನೆರವೇರುವುದು. ಅದರ ಅಂತಿಮ ಪರಿಣಾಮ ಶೀಘ್ರದಲ್ಲಿ ಗೊತ್ತಾಗುವುದು. ತಡವಾದರೂ ಕಾದಿರು; ಮೋಸಮಾಡದು. ಅದು ಖಂಡಿತವಾಗಿ ಕೈಗೂಡುವುದು; ತಾಮಸವಾಗದು.


ಅಂತ್ಯಕಾಲದವರೆಗೆ ಬುದ್ಧಿವಂತ ನಾಯಕರಲ್ಲಿ ಕೆಲವರು ಸಾವಿಗೆ ತುತ್ತಾಗುವರು. ಇದರಿಂದ ಜನರು ಶೋಧಿಸಲ್ಪಟ್ಟು, ಶುದ್ಧಿಹೊಂದಿ ಶುಭ್ರರಾಗುವರು. ಅಂತ್ಯವು ಕ್ಲುಪ್ತಕಾಲದಲ್ಲೇ ಬರುವುದು.


ಅವರು ಹೂಡಿರುವುದು ಕುತಂತ್ರವನು I ಕೊಚ್ಚಿಕೊಳ್ವುದು ಚತುರೋಪಾಯವನು I ಅಶೋಧ್ಯ ಮಾನವನ ಹೃನ್ಮನಗಳು! II


“ಅಂತ್ಯಕಾಲದಲ್ಲಿ ದಕ್ಷಿಣರಾಜನು ಉತ್ತರರಾಜನ ಮೇಲೆ ಬೀಳುವನು. ಆದರೆ ಉತ್ತರರಾಜನು ರಥಾಶ್ವಬಲಗಳಿಂದಲೂ ಬಹು ನಾವೆಗಳಿಂದಲೂ ಕೂಡಿದವನಾಗಿ ದಕ್ಷಿಣರಾಜನ ಮೇಲೆ ಧಾಳಿಮಾಡಿ ನಾಡುನಾಡುಗಳನ್ನು ನುಗ್ಗಿ, ಪ್ರವಾಹದಂತೆ ಹರಡಿಕೊಳ್ಳುವನು.


“ದೇವರು ತಮ್ಮ ಕೋಪವನ್ನು ತೀರಿಸುವ ಮುಂದಿನ ಕಾಲದಲ್ಲಿ ನಡೆಯತಕ್ಕದ್ದನ್ನು ನಿನಗೆ ತಿಳಿಸುತ್ತೇನೆ ಕೇಳು - ಅದು ನಿಯಮಿತ ಅಂತ್ಯಕಾಲಕ್ಕೆ ಸಂಬಂಧಪಟ್ಟದ್ದು.”


ಕೆಟ್ಟ ಹೃದಯದಿಂದ ಸವಿನುಡಿಯು ತುಟಿ, ಬೆಳ್ಳಿ ಮೆರುಗಿನಿಂದ ಥಳಿಸುವ ಮಣ್ಣಿನ ಬೋಕಿ.


ಕೇಡನ್ನು ಕಲ್ಪಿಸುವವರ ಮನದಲ್ಲಿ ಮೋಸ; ಒಳಿತನ್ನು ಬಯಸುವವರ ಮನದಲ್ಲಿ ಉಲ್ಲಾಸ.


ಬದಲಿಗೆ ಕಲ್ಪಿಸುತ್ತೀರಿ ಅಕ್ರಮವನು ಮನದಲಿ I ಧರೆಗೀಯುತ್ತೀರಿ ಹಿಂಸಾಚಾರವನು ತೂಕದಲಿ II


ನೀಚಕಾರ್ಯವೆಸಗಿ ಹಿಗ್ಗುವ ಘನ ಮಾನವನೆ I ದೇವರ ಅನಂತ ಕೃಪೆಯನು ಪ್ರತಿಭಟಿಸುವವನೆ I ದೇವರ ದೃಷ್ಟಿಯಲಿ ನೀನು ಹೀನಾಯನೆ II


ಸಹೋದರರೇ, ಇದೆಲ್ಲ ನಡೆಯಲಿರುವ ಸಮಯ ಸಂದರ್ಭಗಳನ್ನು ಕುರಿತು ನಿಮಗೆ ಬರೆಯುವ ಅವಶ್ಯಕತೆಯಿಲ್ಲ.


ಏಕೆಂದರೆ, ಅವರು ಒಂದು ದಿನವನ್ನು ಗೊತ್ತುಮಾಡಿದ್ದಾರೆ; ಆ ದಿನದಂದು ತಾವು ನೇಮಿಸಿದ ಒಬ್ಬ ವ್ಯಕ್ತಿಯ ಮುಖಾಂತರ ಇಡೀ ಜಗತ್ತಿಗೆ ನ್ಯಾಯನಿರ್ಣಯ ಮಾಡುವರು. ಇದನ್ನು ಎಲ್ಲರಿಗೂ ಖಚಿತಪಡಿಸಲೆಂದೇ ಆ ವ್ಯಕ್ತಿಯನ್ನು ಮರಣದಿಂದ ಪುನರುತ್ಥಾನಗೊಳಿಸಿದ್ದಾರೆ.”


ಯೇಸು ಪ್ರತ್ಯುತ್ತರವಾಗಿ, “ಸಮಯ ಸಂದರ್ಭಗಳು ನನ್ನ ಪಿತನ ಸ್ವಾಧೀನದಲ್ಲಿವೆ. ಅವುಗಳನ್ನು ತಿಳಿಯುವುದು ನಿಮ್ಮ ಕೆಲಸವಲ್ಲ.


“ನಿಶ್ಚಿತ ಕಾಲದಲ್ಲಿ ಪುನಃ ದಕ್ಷಿಣದೇಶದ ಮೇಲೆ ದಾಳಿಮಾಡುವನು. ಆದರೆ ಮೊದಲು ಆದಂತೆಯೇ ಎರಡನೇಯ ಸಲ ಆಗದು.


ಪರ್ಷಿಯದ ರಾಜನಾದ ಸೈರೆಷನ ಆಳ್ವಿಕೆಯ ಮೂರನೇ ವರ್ಷದಲ್ಲಿ ಬೇಲ್ತೆಶಚ್ಚೆರನೆಂಬ ದಾನಿಯೇಲನಿಗೆ ಒಂದು ಸಂಗತಿ ಪ್ರಕಟವಾಯಿತು. ಅದು ಮಹಾ ಹೋರಾಟದ ಸಂಗತಿ, ಸತ್ಯವಾದ ಸಂಗತಿ. ಅದರ ಅರ್ಥವನ್ನು ತಾನು ಕಂಡ ದರ್ಶನದಿಂದ ಮನದಟ್ಟು ಮಾಡಿಕೊಂಡನು.


“ಈ ಮಾತನ್ನು ನುಡಿ - ಸರ್ವೇಶ್ವರನಾದ ದೇವರು ಇಂತೆನ್ನುತ್ತಾರೆ - ಅದು ಯಾವಾಗಲು ಸಮೃದ್ಧವಾಗಿಯೆ ಇರುವುದೇ? ಅದನ್ನು ನಾಟಿದ ಆ ಹದ್ದು ಅದರ ಬೇರುಗಳನ್ನು ಕಿತ್ತು ಅದರ ಫಲವನ್ನು ಕಡಿದುಬಿಡುವುದು . ಆಗ ಅದು ಒಣಗಿ ಅದರ ಹಸುರೆಲೆಗಳೆಲ್ಲಾ ಬಾಡುವುದಲ್ಲವೆ? ಅದನ್ನು ಬೇರುಸಹಿತ ಕೀಳಲು ಹೆಚ್ಚು ಬಲಬೇಕಾಗಿಲ್ಲ , ಬಹುಜನರ ಅಗತ್ಯವಿಲ್ಲ


ಮನುಜನ ಮನದಲ್ಲಿ ಏಳುವ ಯೋಜನೆಗಳು ಹಲವು; ಈಡೇರುವುದಾದರೊ ಸರ್ವೇಶ್ವರನ ಸಂಕಲ್ಪವು.


ನರಮಾನವರೆಲ್ಲರು ಬರೇ ಉಸಿರು I ನರಾಧಿಪತಿಗಳು ತೀರಾ ಹುಸಿಯು I ತ್ರಾಸಿನಲಿ ತೂಗಲು ಅವರೆಲ್ಲರು I ಉಸಿರಿಗಿಂತಲೂ ಅತ್ಯಂತ ಹಗುರು II


ಆಗ ಅಬ್ಷಾಲೋಮನು, “ನೀವು ಬಾರದಿದ್ದರೆ ನನ್ನ ಅಣ್ಣನಾದ ಅಮ್ನೋನನನ್ನು ನನ್ನೊಡನೆ ಕಳುಹಿಸಿ,” ಎಂದನು. ಅದಕ್ಕೆ ಅರಸನು, “ಅವನೇಕೆ ನಿನ್ನ ಸಂಗಡ ಬರಬೇಕು?” ಎಂದು ಕೇಳಿದನು.


ಅನಂತರ ಉತ್ತರದ ಆ ನೀಚರಾಜನು ಬಹು ಆಸ್ತಿಯನ್ನು ಕೊಳ್ಳೆಹೊಡೆದು ಸ್ವದೇಶಕ್ಕೆ ಹಿಂತಿರುಗುವನು. ಅವನ ಮನಸ್ಸು ಪವಿತ್ರ ಒಡಂಬಡಿಕೆಗೆ ವಿರುದ್ಧವಾಗಿರುವುದು. ಇಷ್ಟಬಂದ ಹಾಗೆ ವರ್ತಿಸಿ ಮತ್ತೆ ಸ್ವದೇಶವನ್ನು ಸೇರುವನು.


ಅದರಂತೆ ಅವನು ನನ್ನ ಹತ್ತಿರಕ್ಕೆ ಬಂದನು. ನಾನು ಭಯಭ್ರಾಂತನಾಗಿ ಅಡ್ಡಬಿದ್ದೆ. ನನಗೆ ಅವನು, “ನರಪುತ್ರನೇ, ಇದು ಅಂತ್ಯಕಾಲದಲ್ಲಿ ನೆರವೇರುವ ಕನಸು ಎಂಬುದು ನಿನಗೆ ಮನದಟ್ಟಾಗಿರಲಿ;” ಎಂದು ಹೇಳಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು