Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ದಾನಿಯೇಲ 11:28 - ಕನ್ನಡ ಸತ್ಯವೇದವು C.L. Bible (BSI)

28 ಅನಂತರ ಉತ್ತರದ ಆ ನೀಚರಾಜನು ಬಹು ಆಸ್ತಿಯನ್ನು ಕೊಳ್ಳೆಹೊಡೆದು ಸ್ವದೇಶಕ್ಕೆ ಹಿಂತಿರುಗುವನು. ಅವನ ಮನಸ್ಸು ಪವಿತ್ರ ಒಡಂಬಡಿಕೆಗೆ ವಿರುದ್ಧವಾಗಿರುವುದು. ಇಷ್ಟಬಂದ ಹಾಗೆ ವರ್ತಿಸಿ ಮತ್ತೆ ಸ್ವದೇಶವನ್ನು ಸೇರುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

28 ಅನಂತರ ಉತ್ತರ ದಿಕ್ಕಿನ ರಾಜನು ಬಹಳ ಆಸ್ತಿಯನ್ನು ಐಶ್ವರ್ಯವನ್ನು ಕೊಳ್ಳೆಹೊಡೆದು ಸ್ವದೇಶಕ್ಕೆ ಹಿಂದಿರುಗುವನು. ಅವನ ಮನಸ್ಸು ಪರಿಶುದ್ಧ ನಿಬಂಧನೆಗೆ ವಿರುದ್ಧವಾಗಿರುವುದು. ಅವನು ತನಗೆ ಇಷ್ಟ ಬಂದಂತೆ ಮಾಡಿ ಮತ್ತೆ ಸ್ವದೇಶವನ್ನು ಸೇರುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

28 ಅನಂತರ ಉತ್ತರರಾಜನು ಬಹು ಆಸ್ತಿಯನ್ನು ಕೊಳ್ಳೆಹೊಡೆದು ಸ್ವದೇಶಕ್ಕೆ ಹಿಂದಿರುಗುವನು; ಅವನ ಮನಸ್ಸು ಪರಿಶುದ್ಧ ನಿಬಂಧನೆಗೆ ವಿರುದ್ಧವಾಗಿರುವದು; ಅವನು ಮಾಡುವಷ್ಟು ಮಾಡಿ ಮತ್ತೆ ಸ್ವದೇಶವನ್ನು ಸೇರುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

28 “ಉತ್ತರದ ರಾಜನು ಅಪಾರ ಸಂಪತ್ತಿನೊಂದಿಗೆ ಸ್ವದೇಶಕ್ಕೆ ಮರಳುವನು. ಆಗ ಅವನು ಪರಿಶುದ್ಧ ನಿಬಂಧನೆಗೆ ವಿರುದ್ಧವಾಗಿ ಆಚರಿಸುವ ತೀರ್ಮಾನ ಮಾಡುವನು. ಅವನು ಯೋಚಿಸಿದಂತೆ ಮಾಡಿ ತನ್ನ ದೇಶಕ್ಕೆ ಹಿಂತಿರುಗಿ ಹೋಗುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

28 ಆಗ ಉತ್ತರದ ಅರಸನು ಮಹಾ ಐಶ್ವರ್ಯದೊಂದಿಗೆ ಸ್ವದೇಶಕ್ಕೆ ಹಿಂದಿರುಗುವನು, ಆದರೆ ಅವನ ಹೃದಯವು ಪರಿಶುದ್ಧ ಒಡಂಬಡಿಕೆಗೆ ವಿರೋಧವಾಗಿರುವುದು; ಅವನು ಇದಕ್ಕೆ ವಿರುದ್ಧವಾಗಿ ಕಾರ್ಯಸಾಧಿಸಿ, ಸ್ವಂತ ದೇಶಕ್ಕೆ ಹಿಂದಿರುಗುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ದಾನಿಯೇಲ 11:28
7 ತಿಳಿವುಗಳ ಹೋಲಿಕೆ  

ದೇವರು ಪ್ರವಾದಿಗಳ ಮುಖಾಂತರ ಮಾಡಿದ ವಾಗ್ದಾನಗಳಿಗೂ ನಿಮ್ಮ ಪೂರ್ವಜರೊಂದಿಗೆ ಮಾಡಿದ ಒಡಂಬಡಿಕೆಗೂ ನೀವು ಉತ್ತರಾಧಿಕಾರಿಗಳು; ಪೂರ್ವಜ ಅಬ್ರಹಾಮನಿಗೆ, ‘ನಿನ್ನ ಸಂತತಿಯ ಮುಖಾಂತರ ವಿಶ್ವದ ಎಲ್ಲಾ ಜನಾಂಗಗಳು ಧನ್ಯರಾಗುವರು’ ಎಂದಿದ್ದಾರೆ ದೇವರು.


ಅವನನ್ನು ಎದುರಿಸುವ ದೊಡ್ಡ ದೊಡ್ಡ ಸೈನ್ಯಗಳು ಹಾಗು ದೇವರ ಪ್ರಧಾನ ಯಾಜಕನು ಅವನ ಸೈನ್ಯ ಪ್ರವಾಹಕ್ಕೆ ಸಿಕ್ಕಿ ಅದರಲ್ಲಿ ಮುಳುಗಿ ನಾಶವಾಗುವರು.


ಅವನು ಪ್ರಬಲನಾಗುವನು, ಆದರೆ ಸ್ವಬಲದಿಂದಲ್ಲ. ಅತ್ಯಧಿಕವಾಗಿ ಹಾಳುಮಾಡಿ, ಅಭಿವೃದ್ಧಿಯಾಗುವನು. ತನ್ನ ಇಷ್ಟಾರ್ಥವನ್ನು ತೀರಿಸಿಕೊಳ್ಳುವನು. ಬಲಿಷ್ಠರನ್ನೂ ದೇವಜನರನ್ನೂ ಧ್ವಂಸಮಾಡುವನು.


ಆ ಇಬ್ಬರು ರಾಜರು ಪರಸ್ಪರ ಕೇಡಿನ ಮನಸ್ಸು ಉಳ್ಳವರಾಗಿ ಸಹಪಂಕ್ತಿಯಲ್ಲಿ ಕುಳಿತಿದ್ದರೂ ಸುಳ್ಳುಪೊಳ್ಳು ಮಾತಾಡಿಕೊಳ್ಳುವರು. ಆದರೆ ನಿಶ್ಚಿತಕಾಲ ಬರುವ ತನಕ ಅವರಿಂದ ಏನೂ ಸಾಧಿಸಲಾಗದು.


“ನಿಶ್ಚಿತ ಕಾಲದಲ್ಲಿ ಪುನಃ ದಕ್ಷಿಣದೇಶದ ಮೇಲೆ ದಾಳಿಮಾಡುವನು. ಆದರೆ ಮೊದಲು ಆದಂತೆಯೇ ಎರಡನೇಯ ಸಲ ಆಗದು.


ಆತನ ಪವಿತ್ರಾಲಯವನ್ನು ಕೆಡವಿತು. ಅನುದಿನದ ಬಲಿಯರ್ಪಣೆಯನ್ನು ಅಡಗಿಸುವುದಕ್ಕಾಗಿ ನೀಚತನದಿಂದ ಒಂದು ಸೈನ್ಯವನ್ನೆಬ್ಬಿಸಿತು. ಸತ್ಯಧರ್ಮವನ್ನು ನೆಲಕ್ಕೆ ದೊಬ್ಬಿತು. ತನ್ನ ಇಷ್ಟಾರ್ಥವನ್ನು ಈಡೇರಿಸಿಕೊಂಡು ವೃದ್ಧಿಗೆ ಬಂದಿತು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು