Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ದಾನಿಯೇಲ 11:3 - ಕನ್ನಡ ಸತ್ಯವೇದವು C.L. Bible (BSI)

3 “ಅನಂತರ ಪರಾಕ್ರಮಶಾಲಿಯಾದ ಒಬ್ಬ ರಾಜನು ಎದ್ದು ಮಹಾಪ್ರಭುತ್ವದಿಂದ ಆಳುತ್ತಾ ತನ್ನ ಇಷ್ಟಾರ್ಥಗಳನ್ನು ಸಾಧಿಸಿಕೊಳ್ಳುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

3 ಅನಂತರ ಪರಾಕ್ರಮಶಾಲಿಯಾದ ಒಬ್ಬ ರಾಜನು ಎದ್ದು ಮಹಾ ಪ್ರಭುತ್ವದಿಂದ ಆಳುತ್ತಾ, ತನ್ನ ಇಷ್ಟಾರ್ಥಗಳನ್ನು ಸಾಧಿಸಿಕೊಳ್ಳುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

3 ಅನಂತರ ಪರಾಕ್ರಮಶಾಲಿಯಾದ ಒಬ್ಬ ರಾಜನು ಎದ್ದು ಮಹಾಪ್ರಭುತ್ವದಿಂದ ಆಳುತ್ತಾ ತನ್ನ ಇಷ್ಟಾರ್ಥಗಳನ್ನು ಸಾಧಿಸಿಕೊಳ್ಳುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

3 ಆಮೇಲೆ ಒಬ್ಬ ಅತಿ ಪರಾಕ್ರಮಶಾಲಿಯಾದ ಮತ್ತು ಪ್ರಭಾವಶಾಲಿಯಾದ ಅರಸನು ಬರುವನು. ಅವನು ಹೆಚ್ಚಿನ ಸಾಮರ್ಥ್ಯದಿಂದ ಆಳುವನು. ಅವನು ತನ್ನ ಮನಸ್ಸಿಗೆ ಬಂದಂತೆ ಮಾಡುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

3 ಆಗ ಬಲವುಳ್ಳ ಒಬ್ಬ ಅರಸನು ಉದಯಿಸುವನು. ಅವನು ಮಹಾಅಧಿಕಾರದಿಂದ ಆಳುವನು ಮತ್ತು ತನ್ನ ಇಷ್ಟದ ಪ್ರಕಾರ ಮಾಡುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ದಾನಿಯೇಲ 11:3
10 ತಿಳಿವುಗಳ ಹೋಲಿಕೆ  

“(ಉತ್ತರದ) ರಾಜನು ಮನಸ್ಸು ಬಂದ ಹಾಗೆ ನಡೆದು ತಾನು ಎಲ್ಲ ದೇವರುಗಳಿಗಿಂತಲೂ ದೊಡ್ಡವನೆಂದು ತನ್ನನ್ನೇ ಹೆಚ್ಚಿಸಿಕೊಂಡು ಗರ್ವಿಷ್ಠನಾಗುವನು. ದೇವಾಧಿದೇವರನ್ನು ಅತಿಯಾಗಿ ದೂಷಿಸುವನು. ನಿಮ್ಮ ಮೇಲಿನ ದೈವಕೋಪ ತೀರುವ ತನಕ ಅವನು ವೃದ್ಧಿಯಾಗುವನು. ದೈವಸಂಕಲ್ಪ ನೆರವೇರಲೇಬೇಕು.


ದಕ್ಷಿಣದರಾಜನಿಗೆ ವಿರುದ್ಧ ಬರುವವನು ಇಚ್ಛಾನುಸಾರ ವರ್ತಿಸುವನು. ಅವನನ್ನು ಎದುರಿಸಬಲ್ಲವನು ಒಬ್ಬನೂ ಇರನು. ಆ ‘ಚೆಲುವಿನ ನಾಡನ್ನೂ’ ಗೆದ್ದು ಅದನ್ನು ಪೂರ್ತಿಯಾಗಿ ತನ್ನ ಕೈಹಿಡಿತದಲ್ಲಿ ಇಟ್ಟುಕೊಳ್ಳುವನು.


ಆ ಹೋತ ಗ್ರೀಕ್ ರಾಜ್ಯ. ಅದರ ಕಣ್ಣುಗಳ ನಡುವಣ ದೊಡ್ಡ ಕೊಂಬು ಆ ರಾಜ್ಯದ ಮೊದಲನೆಯ ರಾಜ.


ಅನಂತರ ನಾನು ನೋಡುತ್ತಿರುವಾಗಲೆ ಚಿರತೆಯ ಹಾಗಿದ್ದ ಮತ್ತೊಂದು ಮೃಗ ಕಾಣಿಸಿತು. ಅದರ ಪಕ್ಕಗಳಲ್ಲಿ ಪಕ್ಷಿಯ ರೆಕ್ಕೆಗಳಂತಿರುವ ನಾಲ್ಕು ರೆಕ್ಕೆಗಳಿದ್ದವು. ಆ ಮೃಗಕ್ಕೆ ನಾಲ್ಕು ತಲೆಗಳಿದ್ದವು. ಅದಕ್ಕೆ ದೊರೆತನ ಕೊಡಲಾಯಿತು.


ಇಂಥ ಮಹತ್ವ ವರದ ನಿಮಿತ್ತ ಸಕಲ ದೇಶ-ಕುಲ-ಭಾಷೆಗಳವರು ಅವರ ಮುಂದೆ ಭಯದಿಂದ ನಡುಗುತ್ತಿದ್ದರು. ತಮಗೆ ಇಷ್ಟಬಂದ ಹಾಗೆ ಒಬ್ಬನನ್ನು ಬದುಕಿಸಿದರು, ಇನ್ನೊಬ್ಬನನ್ನು ಕೊಲ್ಲಿಸಿದರು. ಮನಸ್ಸಿಗೆ ಬಂದಹಾಗೆ ಒಬ್ಬನನ್ನು ಮೇಲೇರಿಸಿದರು, ಇನ್ನೊಬ್ಬನನ್ನು ಕೆಳಕ್ಕಿಳಿಸಿದರು.


ಸೃಷ್ಟಿಗಳಲ್ಲೆಲ್ಲಾ ನಾವು ಪ್ರಥಮ ಫಲವಾಗುವಂತೆ ದೇವರು ತಮ್ಮ ಸುಚಿತ್ತದ ಪ್ರಕಾರ ಸತ್ಯವಾಕ್ಯದ ಮೂಲಕ ನಮಗೆ ಜೀವವಿತ್ತರು.


ಸೂಚಕಕಾರ್ಯಗಳಿಂದಲೂ ಅದ್ಭುತಕಾರ್ಯಗಳಿಂದಲೂ ಹಲವಾರು ಮಹತ್ಕಾರ್ಯಗಳಿಂದಲೂ ಮತ್ತು ತಮ್ಮ ಚಿತ್ತಾನುಸಾರ ಅನುಗ್ರಹಿಸಿದ ಪವಿತ್ರಾತ್ಮ ಅವರ ವರದಾನಗಳಿಂದಲೂ ದೇವರು ಆ ಪ್ರಮಾಣವನ್ನು ಪುಷ್ಟೀಕರಿಸಿದ್ದಾರೆ.


ದೈವಯೋಜನೆಯಂತೆಯೇ ಸಕಲವೂ ಸಂಭವಿಸುತ್ತದೆ. ದೇವರು ಆದಿಯಲ್ಲೇ ಸಂಕಲ್ಪಿಸಿದ್ದಂತೆ ತಮ್ಮ ಚಿತ್ತಕ್ಕನುಗುಣವಾಗಿ ಕ್ರಿಸ್ತಯೇಸುವಿನ ಅನ್ಯೋನ್ಯತೆಯಲ್ಲಿ ನಮ್ಮನ್ನು ತಮ್ಮವರನ್ನಾಗಿ ಆರಿಸಿಕೊಂಡರು.


ಆತನ ದೃಷ್ಟಿಯಲ್ಲಿ ಭೂನಿವಾಸಿಗಳೆಲ್ಲರು ಶೂನ್ಯರು ಇಹದ ಜನರೂ ಪರದ ದೂತರೂ ಆತನಿಗೆ ಅಧೀನರು. ಆತನ ಶಕ್ತಿಯುತ ಹಸ್ತವನ್ನು ಯಾರಿಂದಲೂ ತಡೆಯಲಾಗದು. ‘ನೀನು ಮಾಡುತ್ತಿರುವುದೇನು?’ ಎಂದು ಯಾರೂ ಆತನನ್ನು ಪ್ರಶ್ನಿಸಲಾರರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು