ದಾನಿಯೇಲ 11:32 - ಕನ್ನಡ ಸತ್ಯವೇದವು C.L. Bible (BSI)32 ಒಡಂಬಡಿಕೆಯ ದ್ರೋಹಿಗಳು ಅವನ ನಯನುಡಿಗೆ ಮಾರುಹೋಗುವರು. ತಮ್ಮ ದೇವರನ್ನು ಅರಿತವರೋ ದೃಢಚಿತ್ತರಾಗಿ ಕೃತಾರ್ಥರಾಗುವರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201932 ನಿಬಂಧನ ದ್ರೋಹಿಗಳು ಅವನ ನಯನುಡಿಗಳಿಂದ ಕೆಟ್ಟುಹೋಗುವರು. ತಮ್ಮ ದೇವರನ್ನು ಅರಿತವರೋ ದೃಢಚಿತ್ತರಾಗಿ ಕೃತಾರ್ಥರಾಗುವರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)32 ನಿಬಂಧನದ್ರೋಹಿಗಳು ಅವನ ನಯನುಡಿಗಳಿಂದ ಕೆಟ್ಟುಹೋಗುವರು; ತಮ್ಮ ದೇವರನ್ನು ಅರಿತವರೋ ದೃಢಚಿತ್ತರಾಗಿ ಕೃತಾರ್ಥರಾಗುವರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್32 “ಉತ್ತರದ ರಾಜನು ಪರಿಶುದ್ಧ ನಿಬಂಧನೆಯನ್ನು ತೊರೆದ ಯೊಹೂದ್ಯರನ್ನು ಸುಳ್ಳುಮಾತುಗಳಿಂದ ಮತ್ತು ನಯವಾದ ನುಡಿಗಳಿಂದ ವಂಚಿಸುವನು. ಆ ಯೆಹೂದ್ಯರು ಅದಕ್ಕಿಂತಲೂ ಹೆಚ್ಚಿನ ಪಾಪಕೃತ್ಯಗಳನ್ನು ಮಾಡುವರು. ಆದರೆ ದೇವರನ್ನು ಅರಿತು ಆತನ ಆಜ್ಞೆ ಪಾಲಿಸುತ್ತಿರುವ ಯೆಹೂದ್ಯರು ದೃಢಚಿತ್ತರಾಗಿರುವರು; ಅವರು ಅವನನ್ನು ವಿರೋಧಿಸುವರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ32 ಒಡಂಬಡಿಕೆಗೆ ವಿರೋಧವಾಗಿ ಕೆಟ್ಟವರಾಗಿ ನಡೆಯುವವರನ್ನು ನಯವಾದ ಮಾತುಗಳಿಂದ ಕೆಡಿಸುವನು, ಆದರೆ ತಮ್ಮ ದೇವರನ್ನು ಅರಿಯುವ ಜನರು ದೃಢಚಿತ್ತರಾಗಿ ಎದುರಿಸುವರು. ಅಧ್ಯಾಯವನ್ನು ನೋಡಿ |