Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ದಾನಿಯೇಲ 11:33 - ಕನ್ನಡ ಸತ್ಯವೇದವು C.L. Bible (BSI)

33 ಜನರಲ್ಲಿನ ಬುದ್ಧಿವಂತ ನಾಯಕರು ಅನೇಕರಿಗೆ ಬುದ್ಧಿಹೇಳುವರು. ಕೆಲಕಾಲ ಅವರು ಕತ್ತಿ-ಬೆಂಕಿ-ಸೆರೆ-ಸೂರೆಗಳಿಗೆ ತುತ್ತಾಗುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

33 ಜನರಲ್ಲಿನ ಜ್ಞಾನಿಗಳು ಅನೇಕರಿಗೆ ವಿವೇಕ ಹೇಳಲಾಗಿ, ಅವರು ಬಹಳ ದಿನ ಕತ್ತಿ, ಬೆಂಕಿ, ಸೆರೆಸೂರೆಗಳಿಗೆ ಸಿಕ್ಕಿ ಬೀಳುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

33 ಜನರಲ್ಲಿನ ಜ್ಞಾನಿಗಳು ಅನೇಕರಿಗೆ ವಿವೇಕ ಹೇಳಲಾಗಿ ಅವರು ಬಹು ದಿವಸ ಕತ್ತಿ ಬೆಂಕಿ ಸೆರೆಸೂರೆಗಳಿಗೆ ಸಿಕ್ಕಿಬೀಳುತ್ತಿರುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

33 “ಜ್ಞಾನಿಗಳಾದ ಯೆಹೂದ್ಯರು ಏನು ನಡೆದಿದೆ ಎಂಬುದನ್ನು ತಿಳಿದುಕೊಳ್ಳಲು ಜನರಿಗೆ ಸಹಾಯ ಮಾಡುವರು. ಜ್ಞಾನಿಗಳಾದವರು ಸಹ ಅನೇಕ ಹಿಂಸೆಗಳಿಗೆ ತುತ್ತಾಗುವರು. ಕೆಲವು ಜನ ಜ್ಞಾನಿಗಳು ಕತ್ತಿಯಿಂದ ಕೊಲ್ಲಲ್ಪಡುವರು, ಕೆಲವರನ್ನು ಬೆಂಕಿಯಲ್ಲಿ ಹಾಕಲಾಗುವದು ಅಥವಾ ಬಂಧಿಸಲಾಗುವುದು. ಕೆಲವು ಯೆಹೂದ್ಯರ ಮನೆಯನ್ನು, ಆಸ್ತಿಪಾಸ್ತಿಯನ್ನು ಕಿತ್ತುಕೊಳ್ಳಲಾಗುವದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

33 ಜನರಲ್ಲಿ ಬುದ್ಧಿವಂತರಾದವರು ಅನೇಕರಿಗೆ ಬೋಧಿಸುವರು, ಆದರೂ ಖಡ್ಗದಿಂದಲೂ ಬೆಂಕಿಯಿಂದಲೂ ಸೆರೆಯಿಂದಲೂ ಕೊಳ್ಳೆಯಿಂದಲೂ ಕೆಲಕಾಲ ಸಿಕ್ಕಿ ಬೀಳುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ದಾನಿಯೇಲ 11:33
29 ತಿಳಿವುಗಳ ಹೋಲಿಕೆ  

ಜನರು, ನಿಮ್ಮನ್ನು ಪ್ರಾರ್ಥನಾಮಂದಿರದಿಂದ ಬಹಿಷ್ಕರಿಸುವರು, ಅಷ್ಟೇ ಅಲ್ಲ, ನಿಮ್ಮನ್ನು ಕೊಲ್ಲುವವನು ತಾನು ದೇವರಿಗೆ ಬಲಿಕೊಟ್ಟೆನೆಂದು ಭಾವಿಸುವ ಕಾಲವೂ ಬರಲಿದೆ.


“ಬಳಿಕ ಜನರು ನಿಮ್ಮನ್ನು ಕಷ್ಟಸಂಕಟಗಳಿಗೆ ಗುರಿಮಾಡಿ ಕೊಲ್ಲುವರು. ನೀವು ನನ್ನವರು, ಆದುದರಿಂದಲೇ ಜನಾಂಗಗಳೆಲ್ಲ ನಿಮ್ಮನ್ನು ದ್ವೇಷಿಸುವುವು.


ಯಾಜಕನ ತುಟಿಗಳು ದೈವಜ್ಞಾನದ ದ್ವಾರಗಳು. ಅವನ ಬಾಯಿಂದ ಜನರು ಧರ್ಮೋಪದೇಶವನ್ನು ಕೇಳಬೇಕು. ಅವನು ಸೇನಾಧೀಶ್ವರ ಸರ್ವೇಶ್ವರಸ್ವಾಮಿಯ ದೂತನು.”


ದೇವಜನರ ರಕ್ತವನ್ನು ಮತ್ತು ಕ್ರಿಸ್ತೇಸುವಿಗೋಸ್ಕರ ಹುತಾತ್ಮರಾದವರ ರಕ್ತವನ್ನು ಹೀರಿ ಮತ್ತಳಾಗಿದ್ದಳು ಅವಳು. ಇದನ್ನು ಕಂಡು ನನಗೆ ದಿಗ್ಭ್ರಮೆಯಾಯಿತು.


ಅಗ್ನಿಜ್ವಾಲೆಯನ್ನು ಆರಿಸಿದರು; ಖಡ್ಗದ ಬಾಯಿಂದ ತಪ್ಪಿಸಿಕೊಂಡರು; ಬಲಹೀನರಾಗಿದ್ದರೂ ಬಲಿಷ್ಠರಾದರು; ಯುದ್ಧದಲ್ಲಿ ಪರಾಕ್ರಮಶಾಲಿಗಳಾದರು; ಶತ್ರುಗಳ ಸೈನ್ಯವನ್ನು ಸದೆಬಡಿದರು.


ಅನೇಕರು ತಮ್ಮನ್ನು ಶುದ್ಧೀಕರಿಸಿ, ಶುಭ್ರಮಾಡಿಕೊಂಡು ಶೋಧಿತರಾಗುವರು. ದುಷ್ಟರು ದುಷ್ಟರಾಗಿಯೇ ನಡೆಯುವರು. ಅವರಲ್ಲಿ ಯಾರಿಗೂ ವಿವೇಕವಿರದು. ಬುದ್ಧಿವಂತರಿಗೆ ವಿವೇಕವಿರುವುದು.


ಅದಕ್ಕೆ ನಾನು, “ಸ್ವಾಮೀ ನೀವೇ ಬಲ್ಲಿರಿ,” ಎಂದು ಉತ್ತರಕೊಟ್ಟೆ. ಆಗ ಆತನು ನನಗೆ ಹೀಗೆಂದನು : “ಇವರು ಆ ಭೀಕರ ಹಿಂಸೆಬಾಧೆಯನ್ನು ಅನುಭವಿಸಿ ಬಂದವರು. ತಮ್ಮ ನಿಲುವಂಗಿಗಳನ್ನು ಯಜ್ಞದ ಕುರಿಮರಿಯ ರಕ್ತದಿಂದ ತೊಳೆದು ಬಿಳುಪಾಗಿಸಿಕೊಂಡಿದ್ದಾರೆ.


ಯಜ್ಞದ ಕುರಿಮರಿಯಾದಾತ ಐದನೆಯ ಮುದ್ರೆಯನ್ನು ಒಡೆದನು. ದೇವರ ಸಂದೇಶವನ್ನು ಸಾರಿದ ಪ್ರಯುಕ್ತ ಮತ್ತು ತಮ್ಮ ಪ್ರಾಮಾಣಿಕ ಸಾಕ್ಷ್ಯದ ಪ್ರಯುಕ್ತ ಹತರಾದವರ ಆತ್ಮಗಳು ಬಲಿಪೀಠದ ಕೆಳಗೆ ಇರುವುದನ್ನು ನಾನು ಕಂಡೆ.


ನಿನ್ನ ನಿವಾಸಸ್ಥಳವನ್ನು ನಾನು ಬಲ್ಲೆ. ಅದು ಸೈತಾನನ ಅಧಿಕಾರಸ್ಥಾನ. ಆದರೂ ನೀನು ನನ್ನ ನಾಮವನ್ನೇ ದೃಢವಾಗಿ ಆಶ್ರಯಿಸಿರುವೆ. ಸೈತಾನನ ಬಿಡಾರವಾದ ನಿನ್ನ ಆ ನಗರದಲ್ಲಿಯೇ ನನ್ನ ನಂಬಿಕಸ್ಥನೂ ಸಾಕ್ಷಿಯೂ ಆದ ಅಂತಿಪನನ್ನು ಕೊಂದುಹಾಕಿದರು. ಆ ದಿವಸಗಳಲ್ಲೂ ನೀನು ನನ್ನಲ್ಲಿಟ್ಟಿರುವ ವಿಶ್ವಾಸವನ್ನು ನಿರಾಕರಿಸಲಿಲ್ಲ.


ನಾನು ಯೊವಾನ್ನ, ನಿಮ್ಮ ಸಹೋದರ; ಕ್ರಿಸ್ತೇಸುವಿನಲ್ಲಿ ದೇವರ ಸಾಮ್ರಾಜ್ಯಕ್ಕೆ ಸೇರಿರುವವರಿಗೆ ಬಂದೊದಗುವ ಕಷ್ಟಸಂಕಟಗಳನ್ನು ತಾಳ್ಮೆಯಿಂದ ಸಹಿಸಿಕೊಳ್ಳುವುದರಲ್ಲಿ ನಿಮ್ಮ ಪಾಲುಗಾರ. ದೇವರ ವಾಕ್ಯವನ್ನು ಸಾರಿದುದರಿಂದಲೂ ಕ್ರಿಸ್ತೇಸುವಿಗೆ ಸಾಕ್ಷಿ ನೀಡಿದುದರಿಂದಲೂ ನಾನು ಪತ್ಮೋಸ್ ದ್ವೀಪವಾಸವನ್ನು ಅನುಭವಿಸಬೇಕಾಯಿತು.


ನಾನು ಯಜ್ಞಪಶುವಾಗಿ ಅರ್ಪಿತನಾಗುವ ಸಮಯವು ಬಂದಿದೆ. ಈ ಲೋಕದಿಂದ ತೆರಳಬೇಕಾದ ಕಾಲವೂ ಕೂಡಿಬಂದಿದೆ.


ಇದಕ್ಕಾಗಿಯೇ ಇಷ್ಟೆಲ್ಲಾ ಕಷ್ಟಕಾರ್ಪಣ್ಯಗಳನ್ನು ನಾಚಿಕೆಪಡದೆ ಅನುಭವಿಸುತ್ತಿದ್ದೇನೆ. ನಾನು ಯಾರಲ್ಲಿ ವಿಶ್ವಾಸವನ್ನಿಟ್ಟಿದ್ದೇನೆ ಎಂದು ಚೆನ್ನಾಗಿ ಬಲ್ಲೆ. ನನ್ನ ವಶಕ್ಕೆ ಒಪ್ಪಿಸಿರುವುದನ್ನು ಆ ದಿನದವರೆಗೂ ಕಾಪಾಡುವುದಕ್ಕೆ ಅವರು ಶಕ್ತರು. ಆದ್ದರಿಂದ ನಾನು ಪೂರ್ಣ ಭರವಸೆಯಿಂದ ಇದ್ದೇನೆ.


ಬದಲಿಗೆ, ಪ್ರೇಷಿತರಾದ ನಮ್ಮನ್ನು ದೇವರು ಕಟ್ಟಕಡೆಯವರನ್ನಾಗಿಸಿದ್ದಾರೆಂದು ತೋರುತ್ತದೆ. ಎಲ್ಲರ ಮುಂದೆ ಮರಣದಂಡನೆಗೆ ಎಳೆದೊಯ್ಯಲಾಗುವವರಂತೆ ನಾವು ದೂತರಿಗೂ ಮಾನವರಿಗೂ ಇಡೀ ಜಗತ್ತಿಗೂ ಹಾಸ್ಯಾಸ್ಪದವಾದ ನೋಟವಾಗಿದ್ದೇವೆ.


ದೆರ್ಬೆಯಲ್ಲಿ ಪೌಲ ಮತ್ತು ಬಾರ್ನಬ ಶುಭಸಂದೇಶವನ್ನು ಸಾರಿ ಅನೇಕರನ್ನು ಭಕ್ತವಿಶ್ವಾಸಿಗಳನ್ನಾಗಿ ಮಾಡಿಕೊಂಡರು. ಅನಂತರ ಅಲ್ಲಿಂದ ಲುಸ್ತ್ರಕ್ಕೂ ಇಕೋನಿಯಕ್ಕೂ ಅಂತಿಯೋಕ್ಯಕ್ಕೂ ಹಿಂದಿರುಗಿ ಬಂದರು.


ಅವನನ್ನು ಅಲ್ಲಿ ಕಂಡು ಅಂತಿಯೋಕ್ಯಕ್ಕೆ ಕರೆದುಕೊಂಡು ಬಂದನು. ಅವರಿಬ್ಬರೂ ಬಂದು ವರ್ಷವಿಡೀ ಧರ್ಮಸಭೆಯೊಂದಿಗೆ ಇದ್ದು ಬಹುಜನರಿಗೆ ಉಪದೇಶ ಮಾಡಿದರು. ಭಕ್ತಾದಿಗಳನ್ನು ಮೊದಲಬಾರಿಗೆ ‘ಕ್ರೈಸ್ತರು’ ಎಂದು ಕರೆದದ್ದು - ಅಂತಿಯೋಕ್ಯದಲ್ಲೇ.


ನಾನು ನಿಮಗೆ ಆಜ್ಞಾಪಿಸಿದ ಸಕಲವನ್ನೂ ಅನುಸರಿಸುವಂತೆ ಅವರಿಗೆ ಬೋಧಿಸಿರಿ. ಇಗೋ, ಲೋಕಾಂತ್ಯದವರೆಗೂ ಸದಾ ನಾನು ನಿಮ್ಮೊಡನೆ ಇರುತ್ತೇನೆ,” ಎಂದರು


ಆಗ ಯೇಸು, “ನನ್ನ ಪಾತ್ರೆಯಿಂದ ನೀವೇನೋ ಕುಡಿಯುವಿರಿ. ಆದರೆ ನನ್ನ ಬಲಗಡೆಯಲ್ಲಾಗಲೀ ಎಡಗಡೆಯಲ್ಲಾಗಲೀ ಆಸೀನರಾಗುವಂತೆ ಅನುಗ್ರಹಿಸುವುದು ನನ್ನದಲ್ಲ. ಅದು ಯಾರಿಗಾಗಿ ನನ್ನ ಪಿತನಿಂದ ಸಿದ್ಧಮಾಡಲಾಗಿದೆಯೋ ಅವರಿಗೇ ಸಿಗುವುದು," ಎಂದು ನುಡಿದರು.


ಅದಕ್ಕೆ ಪ್ರತ್ಯುತ್ತರವಾಗಿ ಯೇಸು, “ಸ್ವರ್ಗಸಾಮ್ರಾಜ್ಯದ ರಹಸ್ಯಗಳನ್ನು ಅರಿತುಕೊಳ್ಳುವ ಸದವಕಾಶ ಲಭಿಸಿರುವುದು ನಿಮಗೆ, ಅವರಿಗಲ್ಲ.


ಸಹೋದರನು ಸಹೋದರನನ್ನೇ ತಂದೆಯು ಮಗನನ್ನೇ ಮರಣಕ್ಕೆ ಗುರಿಮಾಡುವರು. ಮಕ್ಕಳು ಹೆತ್ತವರ ಮೇಲೆ ತಿರುಗಿಬಿದ್ದು ಅವರನ್ನು ಕೊಲ್ಲಿಸುವರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು