ದಾನಿಯೇಲ 11:44 - ಕನ್ನಡ ಸತ್ಯವೇದವು C.L. Bible (BSI)44 ಹೀಗಿರಲು ಪೂರ್ವದಿಂದ ಮತ್ತು ಉತ್ತರದಿಂದ ಬರುವ ಸುದ್ದಿ ಅವನನ್ನು ಬಾಧಿಸುವುದು. ಅವನು ಅತಿರೋಷಗೊಂಡು ಬಹುಜನರನ್ನು ಧ್ವಂಸಿಸಿ ನಿರ್ನಾಮಮಾಡಲು ಹೊರಡುವನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201944 ಹೀಗಿರಲು ಪೂರ್ವದಿಂದಲೂ, ಉತ್ತರದಿಂದಲೂ ಬರುವ ಸುದ್ದಿಯು ಅವನನ್ನು ಬಾಧಿಸುವುದು ಅವನು ಅತಿ ರೋಷಗೊಂಡು ಬಹಳ ಜನರನ್ನು ಧ್ವಂಸ ಮಾಡಿ, ನಿರ್ನಾಮ ಮಾಡುವುದಕ್ಕೆ ಹೊರಡುವನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)44 ಹೀಗಿರಲು ಮೂಡಲಿಂದಲೂ ಬಡಗಲಿಂದಲೂ ಬರುವ ಸುದ್ದಿಯು ಅವನನ್ನು ಬಾಧಿಸುವದು; ಅವನು ಅತಿರೋಷಗೊಂಡು ಬಹು ಜನರನ್ನು ಧ್ವಂಸಿಸಿ ನಿರ್ನಾಮ ಮಾಡುವದಕ್ಕೆ ಹೊರಡುವನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್44 ಹೀಗಿರಲು ಉತ್ತರದ ರಾಜನು ಪೂರ್ವದಿಕ್ಕಿನಿಂದ ಮತ್ತು ಉತ್ತರದಿಕ್ಕಿನಿಂದ ಬರುವ ಸಮಾಚಾರಗಳನ್ನು ಕೇಳಿ ಭಯಪಡುವನು ಮತ್ತು ರೊಚ್ಚಿಗೇಳುವನು. ಹಲವಾರು ದೇಶಗಳನ್ನು ಸಂಪೂರ್ಣವಾಗಿ ನಾಶಮಾಡಲು ಅವನು ಹೋಗುವನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ44 ಆದರೆ ಪೂರ್ವದಿಂದಲೂ, ಉತ್ತರದಿಂದಲೂ ಬರುವ ಸುದ್ದಿಗಳು ಅವನನ್ನು ಹೆದರಿಸುವುವು. ಆದ್ದರಿಂದ ಅವನು ಮಹಾ ಉಗ್ರವಾಗಿ ಅನೇಕರನ್ನು ಸಂಹರಿಸುವುದಕ್ಕೂ, ನಿರ್ಮೂಲ ಮಾಡುವುದಕ್ಕೂ ಹೊರಡುವನು. ಅಧ್ಯಾಯವನ್ನು ನೋಡಿ |