ದಾನಿಯೇಲ 11:45 - ಕನ್ನಡ ಸತ್ಯವೇದವು C.L. Bible (BSI)45 ಕಡಲಿಗೂ ಚೆಲುವಿನ ಪರಿಶುದ್ಧ ಪರ್ವತಕ್ಕೂ ನಡುವೆ ಅರಮನೆಯಂಥ ಗುಡಾರವನ್ನು ಹಾಕಿಸುವನು. ಆದರೂ ಸಹಾಯಕ್ಕೆ ಯಾರೂ ಇಲ್ಲದವನಾಗಿ ಸಾಯುವನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201945 ಸಮುದ್ರಕ್ಕೂ, ಅಂದ ಚಂದದ ಪರಿಶುದ್ಧ ಪರ್ವತಕ್ಕೂ ನಡುವೆ ಅರಮನೆಯಂಥ ತನ್ನ ಗುಡಾರಗಳನ್ನು ಹಾಕಿಸುವನು. ಆಹಾ, ಅವನು ಕೊನೆಗಾಣುವನು, ಯಾರೂ ಅವನಿಗೆ ಸಹಾಯ ಮಾಡರು.” ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)45 ಸಮುದ್ರಕ್ಕೂ ಅಂದಚಂದದ ಪರಿಶುದ್ಧಪರ್ವತಕ್ಕೂ ನಡುವೆ ಅರಮನೆಯಂಥ ತನ್ನ ಗುಡಾರಗಳನ್ನು ಹಾಕಿಸುವನು; ಆಹಾ, ಅವನು ಕೊನೆಗಾಣುವನು, ಯಾರೂ ಅವನಿಗೆ ಸಹಾಯಮಾಡರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್45 ಸಮುದ್ರಕ್ಕೂ ಸುಂದರವಾದ ಪರಿಶುದ್ಧ ಪರ್ವತಕ್ಕೂ ನಡುವೆ, ಅರಮನೆಯಂತಹ ತನ್ನ ಗುಡಾರಗಳನ್ನು ಹಾಕಿಸುವನು. ಕೊನೆಗೆ ಆ ಕೆಟ್ಟ ಅರಸನು ಸತ್ತುಹೋಗುವನು. ಅವನ ಅಂತ್ಯಕಾಲದ ಹೊತ್ತಿಗೆ ಅವನಿಗೆ ಸಹಾಯ ಮಾಡಲು ಯಾರೂ ಇರುವುದಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ45 ಅವನು ತನ್ನ ರಾಜ ಗುಡಾರಗಳನ್ನು ಸಮುದ್ರದ ನಡುವೆ ರಮ್ಯವಾದ ಪರಿಶುದ್ಧ ಪರ್ವತದಲ್ಲಿ ಹಾಕುವನು. ಆದರೂ ಅವನು ಕೊನೆಗಾಣುವನು. ಯಾರೂ ಅವನಿಗೆ ಸಹಾಯ ಮಾಡರು. ಅಧ್ಯಾಯವನ್ನು ನೋಡಿ |