ದಾನಿಯೇಲ 11:5 - ಕನ್ನಡ ಸತ್ಯವೇದವು C.L. Bible (BSI)5 “ದಕ್ಷಿಣ ದಿಕ್ಕಿನ ರಾಜನು ಮತ್ತು ಅವನ ದಳವಾಯಿಗಳಲ್ಲಿ ಒಬ್ಬನು ಶಕ್ತಿಶಾಲಿಗಳಾಗುವರು. ದಳವಾಯಿ ರಾಜನಿಗಿಂತ ಶಕ್ತಿಶಾಲಿಯಾಗಿ ಪ್ರಭುತ್ವಕ್ಕೆ ಬರುವನು. ಅವನ ರಾಜ್ಯ ದೊಡ್ಡ ರಾಜ್ಯವಾಗುವುದು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20195 ದಕ್ಷಿಣ ರಾಜ್ಯದ ರಾಜನೂ, ಅವನ ಸರದಾರರಲ್ಲಿ ಒಬ್ಬನೂ ಬಲಗೊಳ್ಳುವರು. ಸರದಾರನು ರಾಜನಿಗಿಂತ ಹೆಚ್ಚು ಬಲಗೊಂಡು ಪ್ರಭುತ್ವಕ್ಕೆ ಬರುವನು. ಅವನ ರಾಜ್ಯವು ದೊಡ್ಡ ರಾಜ್ಯವಾಗಿರುವುದು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)5 ದಕ್ಷಿಣದಿಕ್ಕಿನ ರಾಜನೂ ಅವನ ಸರದಾರರಲ್ಲಿ ಒಬ್ಬನೂ ಬಲಗೊಳ್ಳುವರು; ಸರದಾರನು ರಾಜನಿಗಿಂತ ಹೆಚ್ಚು ಬಲಗೊಂಡು ಪ್ರಭುತ್ವಕ್ಕೆ ಬರುವನು; ಅವನ ರಾಜ್ಯವು ದೊಡ್ಡ ರಾಜ್ಯವಾಗಿರುವದು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್5 “ದಕ್ಷಿಣ ದಿಕ್ಕಿನ ರಾಜನು ಪ್ರಬಲನಾಗುವನು. ಆದರೆ ಆಗ ಅವನ ಒಬ್ಬ ಸೇನಾಧಿಪತಿಯು ದಕ್ಷಿಣದಿಕ್ಕಿನ ಅರಸನನ್ನು ಸೋಲಿಸುವನು. ಆ ಸೇನಾಧಿಪತಿಯು ಆಳಲು ಪ್ರಾರಂಭಿಸುವನು; ಅವನು ಬಹಳ ಪ್ರಭಾವಶಾಲಿಯಾಗುವನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ5 ದಕ್ಷಿಣದ ಅರಸನು ಬಲಿಷ್ಠನಾಗುವನು. ಆದರೆ ಅವನ ಸೇನಾಪತಿಗಳಲ್ಲಿ ಒಬ್ಬನು ಅವನಿಗಿಂತ ಬಲಿಷ್ಠನಾಗುವನು ಮತ್ತು ಅವನ ಆಳ್ವಿಕೆಯು ಮಹಾ ಆಳ್ವಿಕೆಯಾಗುವುದು. ಅಧ್ಯಾಯವನ್ನು ನೋಡಿ |