Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ದಾನಿಯೇಲ 11:6 - ಕನ್ನಡ ಸತ್ಯವೇದವು C.L. Bible (BSI)

6 ಕೆಲವು ವರ್ಷಗಳಾದ ಮೇಲೆ ಅವರು ಒಪ್ಪಂದ ಮಾಡಿಕೊಳ್ಳುವರು. ಇದನ್ನು ದೃಢಪಡಿಸಿಕೊಳ್ಳಲು ಆ ದಕ್ಷಿಣ ರಾಜನ ಕುಮಾರಿ ಉತ್ತರ ದಿಕ್ಕಿನ ರಾಜನನ್ನು ಸೇರುವಳು. ಆದರೂ ತನ್ನ ಸಂಬಂಧವನ್ನು ಉಳಿಸಿಕೊಳ್ಳನು. ಅವನೂ ಅವನ ಸಂತಾನವೂ ನಿಲ್ಲವು. ಅವಳು, ಅವಳನ್ನು ಕರೆತಂದವರು, ಪಡೆದವನು, ಕರೆದುಕೊಂಡವನು ಇವರೆಲ್ಲರೂ ಅಂದು ನಾಶಕ್ಕೀಡಾಗುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

6 ಕೆಲವು ವರ್ಷಗಳಾದ ಮೇಲೆ ಅವರು ಸೇರಿಕೊಳ್ಳುವರು. ದಕ್ಷಿಣ ದಿಕ್ಕಿನ ರಾಜನ ಕುಮಾರಿಯು ಉತ್ತರ ರಾಜ್ಯದ ರಾಜನೊಂದಿಗೆ ಒಪ್ಪಂದ ಮಾಡಿಕೊಳ್ಳಲಿಕ್ಕೆ ಬರುವಳು. ಆದರೂ ತನ್ನ ಭುಜಬಲವನ್ನು ಉಳಿಸಿಕೊಳ್ಳಲು ಆಗದು; ಅವನೂ, ಅವನ ತೋಳೂ ನಿಲ್ಲವು; ಅವಳೂ, ಅವಳನ್ನು ಕರೆದು ತಂದವರೂ, ಪಡೆದವನೂ, ತಕ್ಕೊಂಡವನೂ ಆ ಕಾಲದಲ್ಲಿ ನಾಶನಕ್ಕೆ ಈಡಾಗುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

6 ಕೆಲವು ವರುಷಗಳ ಮೇಲೆ ಅವರು ಸೇರಿಕೊಳ್ಳುವರು; ದಕ್ಷಿಣರಾಜನ ಕುಮಾರಿಯು ಉತ್ತರದಿಕ್ಕಿನ ರಾಜನೊಂದಿಗೆ ಒಪ್ಪಂದ ಮಾಡಿಕೊಳ್ಳಲಿಕ್ಕೆ ಬರುವಳು; ಆದರೂ ತನ್ನ ಭುಜಬಲವನ್ನು ಉಳಿಸಿಕೊಳ್ಳಳು; ಅವನೂ ಅವನ ತೋಳೂ ನಿಲ್ಲವು; ಅವಳೂ ಅವಳನ್ನು ಕರತಂದವರೂ ಪಡೆದವನೂ ತಕ್ಕೊಂಡವನೂ ಆ ಕಾಲದಲ್ಲಿ ನಾಶನಕ್ಕೆ ಈಡಾಗುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

6 “ಕೆಲವು ವರ್ಷಗಳಾದ ಮೇಲೆ ದಕ್ಷಿಣ ದಿಕ್ಕಿನ ರಾಜನು ಮತ್ತು ಆ ಸೇನಾಧಿಪತಿಯು ಒಂದು ಒಪ್ಪಂದವನ್ನು ಮಾಡಿಕೊಳ್ಳುವರು. ದಕ್ಷಿಣದ ರಾಜನ ಮಗಳು ಉತ್ತರದ ರಾಜನನ್ನು ಮದುವೆಯಾಗುವಳು. ಶಾಂತಿಯನ್ನು ಸ್ಥಾಪಿಸುವದಕ್ಕಾಗಿ ಅವಳು ಹೀಗೆ ಮಾಡುವಳು. ಆದರೆ ಅವಳು ಮತ್ತು ದಕ್ಷಿಣದ ರಾಜನು ಸಾಕಷ್ಟು ಶಕ್ತಿಶಾಲಿಗಳಾಗಿರುವುದಿಲ್ಲ. ಜನರು ಅವಳನ್ನೂ ಮತ್ತು ಆ ದೇಶಕ್ಕೆ ಅವಳನ್ನು ಕರೆದುಕೊಂಡು ಹೋದ ವ್ಯಕ್ತಿಯನ್ನೂ ವಿರೋಧ ಮಾಡುವರು. ಆ ಜನರು ಅವಳ ಮಗು ಮತ್ತು ಅವಳ ಸಹಾಯಕನನ್ನು ವಿರೋಧಿಸುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

6 ಕೆಲವು ವರ್ಷಗಳ ನಂತರ ಅವರಿಬ್ಬರು ಒಪ್ಪಂದ ಮಾಡಿಕೊಳ್ಳುವರು. ದಕ್ಷಿಣದ ಅರಸನ ಮಗಳು ಒಪ್ಪಂದ ಮಾಡಿಕೊಳ್ಳಲು ಉತ್ತರದ ಅರಸನ ಬಳಿಗೆ ಬರುವಳು. ಆದರೆ ಅವಳು ತನ್ನ ಅಧಿಕಾರವನ್ನು ಉಳಿಸಿಕೊಳ್ಳುವುದಿಲ್ಲ. ಅವನೂ, ಅವನ ಅಧಿಕಾರವೂ ನಿಲ್ಲುವುದಿಲ್ಲ. ಆ ದಿನಗಳಲ್ಲಿ ಅವಳೂ ಅವಳನ್ನು ಕರೆತಂದವರೂ ಮತ್ತು ಅವಳ ತಂದೆಯೂ ಅವಳಿಗೆ ಸಹಾಯ ಮಾಡಿದವರು ಯಾರೂ ಉಳಿಯುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ದಾನಿಯೇಲ 11:6
9 ತಿಳಿವುಗಳ ಹೋಲಿಕೆ  

“ತರುವಾಯ ಉತ್ತರರಾಜನು ಹಿಂದಿನ ದಂಡಿಗಿಂತ ದೊಡ್ಡ ದಂಡನ್ನು ಮತ್ತೆ ಕೂಡಿಸಿಕೊಂಡು ಬಹಳ ವರ್ಷಗಳು ಕಳೆದನಂತರ ಮಹಾಸೈನ್ಯ ಸಮೇತ ಅಧಿಕ ಸನ್ನಾಹದಿಂದ ಬರುವನು.


“ಅಂತ್ಯಕಾಲದಲ್ಲಿ ದಕ್ಷಿಣರಾಜನು ಉತ್ತರರಾಜನ ಮೇಲೆ ಬೀಳುವನು. ಆದರೆ ಉತ್ತರರಾಜನು ರಥಾಶ್ವಬಲಗಳಿಂದಲೂ ಬಹು ನಾವೆಗಳಿಂದಲೂ ಕೂಡಿದವನಾಗಿ ದಕ್ಷಿಣರಾಜನ ಮೇಲೆ ಧಾಳಿಮಾಡಿ ನಾಡುನಾಡುಗಳನ್ನು ನುಗ್ಗಿ, ಪ್ರವಾಹದಂತೆ ಹರಡಿಕೊಳ್ಳುವನು.


ಉತ್ತರರಾಜನು ಬಂದು, ಮುತ್ತಿಗೆಹಾಕಿ, ಕೋಟೆಕೊತ್ತಲದ ನಗರವನ್ನು ಹಿಡಿಯುವನು. ದಕ್ಷಿಣದ ಭುಜಬಲವು ಅವನನ್ನು ನಿಲ್ಲಿಸಲಾರದು. ಅಲ್ಲಿನ ಮಹಾವೀರರು ತಡೆಯಲಾರರು. ಎದುರಿಸುವ ಯಾವ ಶಕ್ತಿಯೂ ಇರದು.


ಅನಂತರ ಅವಳು ಹುಟ್ಟಿದ ಬುಡದಿಂದ ಒಡೆದ ಸಸಿಯೊಂದು ಅದರ ಸ್ಥಾನದಲ್ಲಿ ನಿಲ್ಲುವುದು. ಉತ್ತರರಾಜನ ಸೈನ್ಯಕ್ಕೆ ವಿರುದ್ಧವಾಗಿ ಹೊರಟು, ಅವನ ದುರ್ಗದೊಳಗೆ ನುಗ್ಗಿ, ಅಲ್ಲಿನವರಿಗೆ ಮಾಡುವಷ್ಟೂ ಮಾಡಿ ಗೆಲ್ಲುವನು.


ಏಕೆಂದರೆ ನಾಡಿನಲ್ಲಿ ಒಬ್ಬ ಕುರುಬನು ಏಳುವಂತೆ ನಾನು ಮಾಡುವೆನು. ಅವನು ಅಳಿದುಹೋದ ಕುರಿಗಳನ್ನು ಗುಣಪಡಿಸನು; ಚದರಿಹೋದ ಕುರಿಗಳನ್ನು ಹುಡುಕಿತರನು; ಉಳಿದವುಗಳನ್ನು ಸಾಕಲಾರನು. ಕೊಬ್ಬಿದ ಕುರಿಗಳನ್ನು ಕಡಿದು, ಅವುಗಳ ಗೊರಸುಗಳನ್ನೂ ಸುಲಿದು ಕಬಳಿಸುವನು.


“ನರಪುತ್ರನೇ, ನಾನು ಈಜಿಪ್ಟಿನ ಅರಸ ಫರೋಹನ ಕೈಯನ್ನು ಮುರಿದುಬಿಟ್ಟಿದ್ದೇನೆ; ಇಗೋ, ಅದನ್ನು ಯಾರೂ ಕಟ್ಟಲಿಲ್ಲ, ಔಷಧ ಹಚ್ಚಲಿಲ್ಲ. ಅದು ಖಡ್ಗ ಹಿಡಿಯುವಷ್ಟು ಬಲಗೊಳ್ಳುವಂತೆ ಯಾರೂ ಬಟ್ಟೆ ಸುತ್ತಿ ಅದನ್ನು ಬಿಗಿಸಲಿಲ್ಲ.


ಗೆಲುವೆ ಅವನ ವ್ಯವಹಾರವೆಲ್ಲದರ ಸಾರ I ನಿನ್ನ ನಿರ್ಣಯ ಅವನ ಗ್ರಹಿಕೆಗೆ ಅತಿ ದೂರ II ಶತ್ರುಗಳನು ಕಂಡರೆ ಅವನಿಗೆ ತಾತ್ಸಾರ II


ದುರುಳರಿಂದ ಬೆಳಕನು ಹಿಂತೆಗೆದುಕೊಳ್ಳಲಾಗುವುದು ಅವರು ಎತ್ತಿದ ಕೈಯನು ಮುರಿಯಲಾಗುವುದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು