Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ದಾನಿಯೇಲ 12:1 - ಕನ್ನಡ ಸತ್ಯವೇದವು C.L. Bible (BSI)

1 “ಆ ಕಾಲದಲ್ಲಿ ನಿನ್ನ ಜನರ ಪಕ್ಷ ವಹಿಸುವ ಮಹಾದೂತನಾದ ಮಿಕಾಯೇಲನು ಕಾಣಿಸಿಕೊಳ್ಳುವನು. ಮೊತ್ತಮೊದಲು, ಮಾನವ ಜನಾಂಗ ಉಂಟಾದಂದಿನಿಂದ ಅಂದಿನವರೆಗೆ ಸಂಭವಿಸದ ಘೋರ ಸಂಕಟ ಉಂಟಾಗುವುದು. ಆಗ ನಿನ್ನ ಜನರಲ್ಲಿ ಯಾರ ಯಾರ ಹೆಸರುಗಳು ಜೀವಬಾಧ್ಯರ ಪಟ್ಟಿಯಲ್ಲಿ ಇರುವುದೋ ಅವರೆಲ್ಲರು ಜೀವೋದ್ಧಾರವನ್ನು ಪಡೆಯುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

1 “ನಿನ್ನ ಜನರ ಪಕ್ಷವನ್ನು ಹಿಡಿದಿರುವ ಮಹಾಪಾಲಕನಾದ ದೇವದೂತ ಮೀಕಾಯೇಲನು ಆ ಕಾಲದಲ್ಲಿ ಏಳುವನು. ಮೊಟ್ಟಮೊದಲು ಜನಾಂಗವು ಉಂಟಾದ ದಿನದಿಂದ ಇಂದಿನವರೆಗೂ ಸಂಭವಿಸದಂಥ ಸಂಕಟವು ಸಂಭವಿಸುವುದು. ಆಗ ನಿನ್ನ ಜನರೊಳಗೆ ಯಾರ ಹೆಸರುಗಳು ಜೀವಬಾಧ್ಯರ ಪಟ್ಟಿಯಲ್ಲಿ ಸಿಕ್ಕುವವೋ ಅವರೆಲ್ಲರೂ ರಕ್ಷಿಸಲ್ಪಡುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

1 ನಿನ್ನ ಜನರ ಪಕ್ಷವನ್ನು ಹಿಡಿದಿರುವ ಮಹಾಪಾಲಕನಾದ ಮೀಕಾಯೇಲನು ಆ ಕಾಲದಲ್ಲಿ ಏಳುವನು; ಮೊಟ್ಟ ಮೊದಲು ಜನಾಂಗವು ಉಂಟಾದಂದಿನಿಂದ ಅಂದಿನವರೆಗೆ ಸಂಭವಿಸದಂಥ ಸಂಕಟವು ಸಂಭವಿಸುವದು; ಆಗ ನಿನ್ನ ಜನರೊಳಗೆ ಯಾರ ಹೆಸರುಗಳು [ಜೀವಬಾಧ್ಯರ] ಪಟ್ಟಿಯಲ್ಲಿ ಸಿಕ್ಕುವವೋ ಅವರೆಲ್ಲರೂ ರಕ್ಷಿಸಲ್ಪಡುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

1 “ದರ್ಶನದಲ್ಲಿ ಕಾಣಿಸಿಕೊಂಡ ಮನುಷ್ಯನು, ದಾನಿಯೇಲನೇ, ಆಗ ದೇವದೂತನಾದ ಮಿಕಾಯೇಲನು ಏಳುವನು. ಮಿಕಾಯೇಲನು ಯೆಹೂದ್ಯರಾದ ನಿಮ್ಮ ಹಿತಾಸಕ್ತಿಗಳನ್ನು ನೋಡಿಕೊಳ್ಳುವನು. ಮಹಾಸಂಕಟದ ಕಾಲ ಬರುವದು. ಭೂಮಿಯ ಮೇಲೆ ರಾಷ್ಟ್ರಗಳು ಹುಟ್ಟಿದಂದಿನಿಂದ ಸಂಭವಿಸದಂತಹ ಸಂಕಟಗಳು ಸಂಭವಿಸುವವು. ಆದರೆ ದಾನಿಯೇಲನೇ, ನಿಮ್ಮ ಜನಗಳಲ್ಲಿ ಯಾರ ಹೆಸರುಗಳು ‘ಜೀವಬಾಧ್ಯರ ಗ್ರಂಥದಲ್ಲಿ’ ಬರೆಯಲ್ಪಟ್ಟಿದೆಯೋ ಅವರೆಲ್ಲರನ್ನು ರಕ್ಷಿಸಲಾಗುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

1 “ಆ ಕಾಲದಲ್ಲಿ ನಿನ್ನ ಜನರನ್ನು ಕಾಪಾಡುವುದಕ್ಕಾಗಿ ಮಹಾರಾಜಕುಮಾರನಾದ ಮೀಕಾಯೇಲನು ಏಳುವನು. ಮೊಟ್ಟಮೊದಲು ಜನಾಂಗ ಉಂಟಾದಂದಿನಿಂದ ಇಂದಿನವರೆಗೂ ಸಂಭವಿಸದಂತಹ ಸಂಕಟವು ಸಂಭವಿಸುವುದು. ಆಗ ನಿನ್ನ ಜನರೊಳಗೆ ಎಂದರೆ ಜೀವ ಪುಸ್ತಕದಲ್ಲಿ ಯಾರ ಹೆಸರು ಬರೆಯಲಾಗಿದೆಯೋ, ಅವರೆಲ್ಲರೂ ಬಿಡುಗಡೆಯಾಗುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ದಾನಿಯೇಲ 12:1
48 ತಿಳಿವುಗಳ ಹೋಲಿಕೆ  

ಹೌದು, ಭಯಂಕರವಾದ ದಿನ ಬರಲಿದೆ, ಅದಕ್ಕಿರದು ಎಣೆ! ಅದು ಇಕ್ಕಟ್ಟಿನ ದಿನ, ಆದರೂ ಅದರಿಂದ ಯಕೋಬ್ಯರಿಗಿದೆ ಬಿಡುಗಡೆ.”


ಏಕೆಂದರೆ ಆಗ ಬರಲಿರುವ ಸಂಕಷ್ಟಗಳು ಸೃಷ್ಟಿಯ ಆದಿಯಿಂದ ಇಂದಿನವರೆಗೂ ಇರಲಿಲ್ಲ; ಇನ್ನು ಮುಂದಕ್ಕೂ ಇರುವುದಿಲ್ಲ.


ಆಗ ಬರಲಿರುವ ಸಂಕಷ್ಟಗಳು ದೈವಸೃಷ್ಟಿಯ ಆದಿಯಿಂದ ಇರಲಿಲ್ಲ. ಇನ್ನು ಮುಂದಕ್ಕೂ ಇರುವುದಿಲ್ಲ.


ಪರ್ಷಿಯ ರಾಜ್ಯದ ಕಾವಲುದೂತನು ಇಪ್ಪತ್ತೊಂದು ದಿನ ನನ್ನನ್ನು ಎದುರಿಸಿ ನಿಂತನು. ಆದರೆ ಪ್ರಧಾನ ದೂತರಲ್ಲಿ ಒಬ್ಬನಾದ ಮಿಕಾಯೇಲನು ನನ್ನ ಸಹಾಯಕ್ಕೆ ಬಂದನು. ಅಲ್ಲಿನ ಪರ್ಷಿಯ ರಾಜರ ಸಂಗಡ ಹೋರಾಡಲು ಅವನನ್ನು ಬಿಟ್ಟು ಬಂದಿದ್ದೇನೆ.


ಸತ್ಯಗ್ರಂಥದಲ್ಲಿ ಲಿಖಿತವಾದುದನ್ನು ಈಗ ನಿನಗೆ ತಿಳಿಸುತ್ತೇನೆ. ಇವರಿಬ್ಬರೊಂದಿಗೆ ಹೋರಾಡುವಲ್ಲಿ ನಿಮ್ಮ ಕಾವಲುದೂತನಾದ ಮಿಕಾಯೇಲನ ಹೊರತು ನನಗೆ ಬೆಂಬಲಿಗರಾಗತಕ್ಕವರು ಇನ್ನಾರೂ ಇಲ್ಲ.


ಸ್ವರ್ಗದಲ್ಲಿ ಒಂದು ಯುದ್ಧ ಪ್ರಾರಂಭವಾಯಿತು. ಮಿಕಾಯೇಲನು ತನ್ನ ಸಹದೂತರ ಸಹಿತ ಘಟಸರ್ಪದ ವಿರುದ್ಧ ಯುದ್ಧಮಾಡಿದನು. ಘಟಸರ್ಪವೂ ತನ್ನ ದೂತರ ಸಮೇತ ಯುದ್ಧದಲ್ಲಿ ಕಾದಾಡಿತು.


ಯಾರ ಯಾರ ಹೆಸರು ಜೀವಬಾಧ್ಯರ ಪಟ್ಟಿಯಲ್ಲಿ ಲಿಖಿತವಾಗಿಲ್ಲವೋ ಅಂಥವರನ್ನು ಅಗ್ನಿಸರೋವರಕ್ಕೆ ಎಸೆಯಲಾಯಿತು.


ಇದಲ್ಲದೆ, ಮೃತರಾಗಿದ್ದ ಹಿರಿಯಕಿರಿಯರೆಲ್ಲರೂ ಸಿಂಹಾಸನದ ಸಾನ್ನಿಧ್ಯದಲ್ಲಿ ನಿಂತಿರುವುದನ್ನು ಕಂಡೆ. ಆಗ ಪುಸ್ತಕಗಳನ್ನು ತೆರೆಯಲಾಯಿತು. ಅನಂತರ ಮತ್ತೊಂದು ಪುಸ್ತಕವನ್ನು ತೆರೆಯಲಾಯಿತು. ಅದು ಜೀವಬಾಧ್ಯರ ಪಟ್ಟಿಯುಳ್ಳ ಪುಸ್ತಕ. ಆ ಪುಸ್ತಕದಲ್ಲಿ ಬರೆದಿದ್ದ ಪ್ರಕಾರ ಅವರವರ ಕೃತ್ಯಗಳಿಗೆ ತಕ್ಕಂತೆ ಮೃತರಿಗೆ ನ್ಯಾಯತೀರ್ಪು ಕೊಡಲಾಯಿತು.


ಜಯಹೊಂದುವವನು ಹೀಗೆ ಶ್ವೇತಾಂಬರನಾಗುವನು. ಜೀವಬಾಧ್ಯರ ಪಟ್ಟಿಯಿಂದ ಅವನ ಹೆಸರನ್ನು ನಾನು ಅಳಿಸಿಹಾಕುವುದಿಲ್ಲ. ನನ್ನ ಪಿತನ ಸಾನ್ನಿಧ್ಯದಲ್ಲಿಯೂ ಅವರ ದೂತರ ಮುಂದೆಯೂ ಅವನು ನನ್ನವನೆಂದು ನಾನು ಒಪ್ಪಿಕೊಳ್ಳುತ್ತೇನೆ.


ಆದರೂ ದೆವ್ವಗಳು ನಿಮಗೆ ಅಧೀನವಾಗಿವೆಯೆಂದು ಸಂತೋಷಪಡುವುದಕ್ಕಿಂತ ನಿಮ್ಮ ಹೆಸರುಗಳು ಸ್ವರ್ಗದಲ್ಲಿ ಲಿಖಿತವಾಗಿವೆ ಎಂದು ಸಂತೋಷಪಡಿ,” ಎಂದು ಹೇಳಿದರು.


ನಮ್ಮ ದೇವರು ನಮ್ಮ ಮೇಲೆ ದೊಡ್ಡ ಕೇಡನ್ನು ಬರಮಾಡಿದ್ದಾರೆ. ನಮ್ಮನ್ನೂ ನಮ್ಮನ್ನಾಳುವ ಅಧಿಪತಿಗಳನ್ನೂ ಖಂಡಿಸಿ ಹೇಳಿದ ಮಾತುಗಳನ್ನು ನೆರವೇರಿಸಿದ್ದಾರೆ. ಜೆರುಸಲೇಮಿಗೆ ಆದಂಥ ಕೇಡು ವಿಶ್ವದಲ್ಲಿ ಎಂದೂ ಆಗಲಿಲ್ಲ.


ಭೂನಿವಾಸಿಗಳೆಲ್ಲರೂ ಅಂದರೆ, ಜಗತ್ತು ಸೃಷ್ಟಿ ಆಗುವ ಮೊದಲೇ ಯಾರಯಾರ ಹೆಸರುಗಳು ವಧೆಯಾದ ಯಜ್ಞದ ಕುರಿಮರಿಯಾದಾತನ ಬಳಿಯಲ್ಲಿರುವ ಜೀವಬಾಧ್ಯರ ಪಟ್ಟಿಯಲ್ಲಿ ಲಿಖಿತವಾಗಿಲ್ಲವೋ, ಅಂಥವರೆಲ್ಲರೂ ಆ ಮೃಗವನ್ನು ಆರಾಧಿಸುವರು.


ನಂಬಲರ್ಹವಾದ ಸಾಕ್ಷಿಯೂ ಮೃತ್ಯುವಿನಿಂದ ಪುನರುತ್ಥಾನ ಹೊಂದಿದವರಲ್ಲಿ ಪ್ರಪ್ರಥಮರೂ ಭೂರಾಜರ ಒಡೆಯರೂ ಆದ ಯೇಸುಕ್ರಿಸ್ತರಿಂದಲೂ ನಿಮಗೆ ಕೃಪಾಶೀರ್ವಾದವೂ ಶಾಂತಿಸಮಾಧಾನವೂ ಲಭಿಸಲಿ! ನಮ್ಮನ್ನು ಪ್ರೀತಿಸುವವರೂ ತಮ್ಮ ರಕ್ತದಿಂದ ನಮ್ಮ ಪಾಪಗಳನ್ನು ತೊಳೆದವರೂ


ಪ್ರಧಾನ ದೇವದೂತ ಮಿಕಾಯೇಲನೂ ಇಂಥ ದೂಷಣೆಯನ್ನು ಆಡಲಿಲ್ಲ. ಮೋಶೆಯ ಪಾರ್ಥಿವ ಶರೀರದ ವಿಷಯದಲ್ಲಿ ಸೈತಾನನೊಡನೆ ವಾಗ್ವಾದ ಮಾಡಿದಾಗಲೂ ಅಂಥ ದೂಷಣೆಯನ್ನು ಆಡಲು ಧೈರ್ಯಗೊಳ್ಳದೆ, “ಸರ್ವೇಶ್ವರ ನಿನ್ನನ್ನು ಖಂಡಿಸಲಿ,” ಎಂದಷ್ಟೇ ಹೇಳಿದನು.


ನನ್ನ ಜೊತೆ ಸೇವಕನಾದ ನೀನು ಈ ಮಹಿಳೆಯರಿಗೆ ನೆರವಾಗಬೇಕು. ಇವರು ಸಹ ಕ್ಲೇಮಂತನು ಮತ್ತು ಇತರ ಸಹಸೇವಕರೊಡನೆ ನನ್ನೊಂದಿಗೆ ಶುಭಸಂದೇಶದ ಪ್ರಚಾರಕಾರ್ಯದಲ್ಲಿ ಸಹಕರಿಸಿರುತ್ತಾರೆ. ಇವರೆಲ್ಲರ ಹೆಸರುಗಳು ನಿತ್ಯಜೀವಬಾಧ್ಯರ ಪಟ್ಟಿಯಲ್ಲಿವೆ.


ಅನಂತರ ಇಸ್ರಯೇಲ್ ಜನಾಂಗವೆಲ್ಲವೂ ಜೀವೋದ್ಧಾರವನ್ನು ಹೊಂದುವುದು. ಇದಕ್ಕೆ ಆಧಾರವಾಗಿ ಪವಿತ್ರಗ್ರಂಥದಲ್ಲಿ ಹೀಗೆ ಬರೆಯಲಾಗಿದೆ: “ಲೋಕೋದ್ಧಾರಕನು ಬರುವನು ಸಿಯೋನಿನಿಂದ; ಅಧರ್ಮತೆಯನು ನೀಗಿಸುವನು ಯಕೋಬವಂಶದಿಂದ.


ಮಿಥ್ಯದರ್ಶನ ಹೊಂದಿ ಸುಳ್ಳು ಭವಿಷ್ಯ ಹೇಳುವ ಪ್ರವಾದಿಗಳ ಮೇಲೆ ನಾನು ಕೈಮಾಡುವೆನು; ಅವರು ನನ್ನ ಜನರ ಹಿರಿಯ ಸಭೆಯಲ್ಲಿ ಸೇರಕೂಡದು, ಇಸ್ರಯೇಲ್ ವಂಶದವರ ಪಟ್ಟಿಯಲ್ಲಿ ಅವರ ಹೆಸರು ಲಿಖಿತವಾಗಬಾರದು, ಅವರು ಇಸ್ರಯೇಲ್ ನಾಡನ್ನು ಪ್ರವೇಶಿಸಲೂಬಾರದು. ನಾನೇ ಸರ್ವೇಶ್ವರನಾದ ದೇವರು ಎಂದು ನಿಮಗೆ ಗೊತ್ತಾಗುವುದು.


ಅಂತ್ಯವಿರದಾತನ ರಾಜ್ಯಾಭಿವೃದ್ಧಿಗೆ ಕೊನೆಯಿರದಾ ರಾಜ್ಯದ ಶಾಂತಿಗೆ. ಆಸೀನನಾಗುವನಾತ ದಾವೀದನ ಸಿಂಹಾಸನದ ಮೇಲೆ ಅಧಿಕಾರ ನಡೆಸುವನು ಆ ಸಾಮ್ರಾಜ್ಯದ ಮೇಲೆ. ಬಲಪಡಿಸುವನು ನ್ಯಾಯನೀತಿಯಿಂದದನು ಇಂದಿಗೂ ಎಂದೆಂದಿಗೂ ಸ್ಥಿರಪಡಿಸುವನದನು. ಸರ್ವಶಕ್ತಸ್ವಾಮಿಯ ಆಗ್ರಹವೆ ಸಾಧಿಸುವುದದನು.


ಸಿಯೋನಿನಲ್ಲಿ ಉಳಿದವರು, ಜೆರುಸಲೇಮಿನಲ್ಲಿ ಮಿಕ್ಕವರು - ಅಂದರೆ ಜೀವಬಾಧ್ಯರ ಪಟ್ಟಿಯಲ್ಲಿ ಲಿಖಿತವಾಗಿರುವ ಜೆರುಸಲೇಮಿನ ನಿವಾಸಿಗಳೆಲ್ಲರು - ಪವಿತ್ರರೆನಿಸಿಕೊಳ್ಳುವರು.


ಉಳಿಸಬೇಡವರನು ಜೀವಬಾಧ್ಯರ ಪಟ್ಟಿಯಲಿ I ಸೇರಿಸಬೇಡವರನು ಸಜ್ಜನರ ಸಂಖ್ಯೆಯಲಿ II


ನನ್ನ ಅಲೆಮಾರಿತನದ ಲೆಕ್ಕವಿಟ್ಟಿರುವೆ ನಿನ್ನಲಿ I ನನ್ನ ಕಣ್ಣೀರನು ತುಂಬಿಡು ನಿನ್ನ ಬುದ್ದಲಿಯಲಿ I ಅದರ ಕತೆ ಬರೆದಿದೆಯಲ್ಲವೆ ನಿನ್ನ ಪುಸ್ತಕದಲಿ? II


ಅವರು ಯಜ್ಞದ ಕುರಿಮರಿಯ ಮೇಲೆ ಯುದ್ಧಮಾಡುವರು. ಆದರೆ ಯಜ್ಞದ ಕುರಿಮರಿಗೆ ಜಯವಾಗುವುದು. ಆ ಕುರಿಮರಿಯು ಒಡೆಯರಿಗೆಲ್ಲಾ ಒಡೆಯನೂ ರಾಜಾಧಿರಾಜನೂ ಆಗಿರುವುದೇ ಇದಕ್ಕೆ ಕಾರಣ. ದೇವರ ಕರೆ ಹೊಂದಿದವರೂ ದೇವರು ಆಯ್ದುಕೊಂಡವರೂ ಆದ ಪ್ರಾಮಾಣಿಕ ಅನುಯಾಯಿಗಳು ಆ ಜಯದಲ್ಲಿ ಪಾಲುಗಾರರಾಗುವರು,” ಎಂದನು.


ಇಸ್ರಯೇಲರು ತಿರಸ್ಕೃತರಾದ್ದರಿಂದ ಜಗತ್ತು ದೇವರೊಡನೆ ಸಂಧಾನವಾಗಲು ಸಾಧ್ಯವಾಯಿತಾದರೆ ಅವರು ಸ್ವೀಕೃತರಾಗುವಾಗ ಇನ್ನೇನು ತಾನೆ ಸಂಭವಿಸದು! ಸತ್ತವರು ಜೀವಕ್ಕೆ ಎದ್ದುಬಂದಂತಾಗುವುದಲ್ಲವೆ?


ಕಡಲಿಗೂ ಚೆಲುವಿನ ಪರಿಶುದ್ಧ ಪರ್ವತಕ್ಕೂ ನಡುವೆ ಅರಮನೆಯಂಥ ಗುಡಾರವನ್ನು ಹಾಕಿಸುವನು. ಆದರೂ ಸಹಾಯಕ್ಕೆ ಯಾರೂ ಇಲ್ಲದವನಾಗಿ ಸಾಯುವನು.


ಸರ್ವೇಶ್ವರನಾದ ನಾನು ನನ್ನ ಜನರ ದೇವರಾಗಿರುವೆನು; ನನ್ನ ದಾಸ ದಾವೀದನು ಅವರನ್ನಾಳುವ ಪ್ರಭುವಾಗಿರುವನು; ಸರ್ವೇಶ್ವರನಾದ ನಾನೇ ಇದನ್ನು ನುಡಿದಿದ್ದೇನೆ.


ಅದಕ್ಕೆ ನಾನು, “ಸ್ವಾಮೀ ನೀವೇ ಬಲ್ಲಿರಿ,” ಎಂದು ಉತ್ತರಕೊಟ್ಟೆ. ಆಗ ಆತನು ನನಗೆ ಹೀಗೆಂದನು : “ಇವರು ಆ ಭೀಕರ ಹಿಂಸೆಬಾಧೆಯನ್ನು ಅನುಭವಿಸಿ ಬಂದವರು. ತಮ್ಮ ನಿಲುವಂಗಿಗಳನ್ನು ಯಜ್ಞದ ಕುರಿಮರಿಯ ರಕ್ತದಿಂದ ತೊಳೆದು ಬಿಳುಪಾಗಿಸಿಕೊಂಡಿದ್ದಾರೆ.


ನೀನು ಬಹಳ ಅಸಹ್ಯಕೃತ್ಯಗಳಲ್ಲಿ ತೊಡಗಿದ್ದರಿಂದ ನಾನು ಈವರೆಗೂ ಇನ್ನು ಮುಂದಕ್ಕೂ ಮಾಡದಂಥ ದಂಡನೆಯನ್ನು ಈಗ ನಿನಗೆ ಮಾಡುವೆನು.


ಆ ಸಿಂಹಾಸನದ ಸಮ್ಮುಖದಿಂದ ಪ್ರಜ್ವಲ ಪ್ರವಾಹವೊಂದು ಉಕ್ಕಿ ಹರಿದುಬಂದಿತು. ಲಕ್ಷೋಪಲಕ್ಷ ದೂತರು ಆತನಿಗೆ ಸೇವೆಸಲ್ಲಿಸುತ್ತಿದ್ದರು. ಕೋಟ್ಯಾನುಕೋಟಿ ಕಿಂಕರರು ಆತನ ಮುಂದೆ ನಿಂತಿದ್ದರು. ನ್ಯಾಯಸಭೆಯವರು ತೀರ್ಪುನೀಡಲು ಕುಳಿತುಕೊಂಡರು. ಪಟ್ಟಿಪುಸ್ತಕಗಳನ್ನು ತೆರೆಯಲಾಯಿತು.


ಅದು ಕಾರಿರುಳಿನ ಕರಾಳ ದಿನ, ಕಾರ್ಮುಗಿಲ ಕಾರ್ಗತ್ತಲ ದಿನ. ಮುಂಬೆಳಕು ಗುಡ್ಡದಿಂದ ಗುಡ್ಡಕ್ಕೆ ಹರಡುವಂತೆ ಪ್ರಬಲವಾದ ದೊಡ್ಡಸೈನ್ಯವೊಂದು ಬರುತ್ತಿದೆ; ಇಂಥ ಸೈನ್ಯ ಹಿಂದೆಂದೂ ಬಂದಿಲ್ಲ, ತಲತಲಾಂತರಕ್ಕೂ ಬರುವಂತಿಲ್ಲ.


ಇಂಥ ಮಾತುಗಳನ್ನು ಕೇಳಿ ಸರ್ವೇಶ್ವರನಲ್ಲಿ ಭಯಭಕ್ತಿಯುಳ್ಳವರು ತಮ್ಮ ತಮ್ಮಲ್ಲೇ ಮಾತನಾಡಿಕೊಂಡರು. ಸರ್ವೇಶ್ವರ ಅವರಿಗೆ ಕಿವಿಗೊಟ್ಟು ಆಲಿಸಿದರು. ಭಯಭಕ್ತಿಯಿಂದ ತಮ್ಮ ನಾಮಸ್ಮರಣೆ ಮಾಡುವವರ ಹೆಸರುಗಳನ್ನು ತಮ್ಮ ಮುಂದಿದ್ದ ದಾಖಲೆ ಪುಸ್ತಕದಲ್ಲಿ ಬರೆಸಿದರು.


“ನನ್ನ ದಾಸ ಯಕೋಬನೇ, ಅಂಜಬೇಡ! ಇಸ್ರಯೇಲೇ, ಭಯಪಡಬೇಡ” ಎನ್ನುತ್ತಾರೆ ಸರ್ವೇಶ್ವರ. “ದೂರ ನಾಡಿನಿಂದ ನಿನ್ನನ್ನು ಮುಕ್ತನನ್ನಾಗಿಸುವೆನು ನಿನ್ನ ಸಂತಾನ ಸೆರೆಹೋದ ಸೀಮೆಯಿಂದ ನಿನ್ನನ್ನು ಉದ್ಧರಿಸುವೆನು. ಹಿಂದಿರುಗಿ, ಹಾಯಾಗಿ ನೆಮ್ಮದಿಯಿಂದಿರುವುದು ಯಕೋಬು ಯಾರಿಂದಲೂ ಅದನ್ನು ಹೆದರಿಸಲಾಗದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು