Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ದಾನಿಯೇಲ 12:13 - ಕನ್ನಡ ಸತ್ಯವೇದವು C.L. Bible (BSI)

13 ನೀನು ಹೋಗಿ ಅಂತ್ಯದವರೆಗೆ ವಿಶ್ವಾಸದಿಂದಿರು. ನೀನು ‘ದೀರ್ಘನಿದ್ರೆ’ಯನ್ನು ಹೊಂದಿ, ನಿನಗೆ ನಿರ್ಧರಿಸಲಾದ ಸ್ಥಾನವನ್ನು ಪಡೆಯಲು ಯುಗಸಮಾಪ್ತಿಯಲ್ಲಿ ಎದ್ದುಬರುವೆ,” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

13 ನೀನು ಹೋಗಿ ಅಂತ್ಯದ ವರೆಗೆ ವಿಶ್ವಾಸದಿಂದ ಇರು. ನೀನು ದೀರ್ಘನಿದ್ರೆಯನ್ನು ಹೊಂದಿ, ಯುಗದ ಸಮಾಪ್ತಿಯಲ್ಲಿ ಎದ್ದು, ನಿನಗಾಗುವ ಸ್ವತ್ತಿನೊಳಗೆ ನಿಲ್ಲುವಿ” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

13 ನೀನು ಹೋಗಿ ಅಂತ್ಯದವರೆಗೆ ಇರು; ನೀನು ದೀರ್ಘ ನಿದ್ರೆಯನ್ನು ಹೊಂದಿ ಯುಗಸಮಾಪ್ತಿಯಲ್ಲಿ ಎದ್ದು ನಿನಗಾಗುವ ಸ್ವಾಸ್ತ್ಯದೊಳಗೆ ನಿಲ್ಲುವಿ ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

13 “ದಾನಿಯೇಲನೇ, ನೀನು ಹೋಗಿ ಕೊನೆಯವರೆಗೆ ನಿನ್ನ ಜೀವನವನ್ನು ಸಾಗಿಸು. ನೀನು ದೀರ್ಘನಿದ್ರೆಯನ್ನು ಪಡೆಯುವೆ. ಅಂತ್ಯಕಾಲದಲ್ಲಿ, ನೀನು ದೀರ್ಘನಿದ್ರೆಯಿಂದ ಎಚ್ಚೆತ್ತು ನಿನ್ನ ಸ್ವಾಸ್ತ್ಯವನ್ನು ಪಡೆಯುವೆ” ಎಂದು ಉತ್ತರಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

13 “ನೀನು ಅಂತ್ಯದವರೆಗೂ ನಿನ್ನ ಮಾರ್ಗದಲ್ಲಿ ಹೋಗು. ನೀನು ವಿಶ್ರಮಿಸಿಕೊಳ್ಳುವೆ ಮತ್ತು ದಿನಗಳ ಅಂತ್ಯದಲ್ಲಿ ನಿನಗೆ ಪಾಲಾಗಿ ಇಟ್ಟಿರುವ ಬಾಧ್ಯತೆಯನ್ನು ಸ್ವೀಕರಿಸಲು ಎದ್ದು ಬರುವೆ,” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ದಾನಿಯೇಲ 12:13
16 ತಿಳಿವುಗಳ ಹೋಲಿಕೆ  

ಇದಾದ ಮೇಲೆ ಸ್ವರ್ಗದಿಂದ ಬಂದ ಧ್ವನಿಯೊಂದು ಕೇಳಿಸಿತು. ಅದು ನನಗೆ, “ನೀನಿದನ್ನು ಬರೆ: ಇಂದಿನಿಂದ ಪ್ರಭುವಿನ ಭಕ್ತರಾಗಿ ಸಾಯುವವರು ಭಾಗ್ಯವಂತರು,” ಎಂದು ತಿಳಿಸಿತು. ಆಗ ದೇವರ ಆತ್ಮ, “ಹೌದು, ಅವರೇ ಭಾಗ್ಯವಂತರು. ಇನ್ನು ಅವರ ಸಂಕಷ್ಟಗಳು ಮುಗಿದು ಅವರಿಗೆ ವಿಶ್ರಾಂತಿ ದೊರಕುವುದು; ಅವರ ಸುಕೃತ್ಯಗಳಿಗೆ ತಕ್ಕ ಪ್ರತಿಫಲ ದೊರಕುವುದು,” ಎಂದು ಹೇಳಿತು.


ಭೂಮಿಯ ಮೇಲಿನ ನಮ್ಮ ಈ ದೇಹ ಎಂಬ ಗುಡಾರವು ನಾಶವಾಗಿಹೋದರೂ ಸ್ವರ್ಗದಲ್ಲಿ ಶಾಶ್ವತವಾದ ಗೃಹವೊಂದು ನಮಗೆ ದೊರಕುವುದು. ಅದು ಮಾನವರಿಂದ ನಿರ್ಮಿತ ಆದುದಲ್ಲ, ದೇವರಿಂದಲೇ ನಿರ್ಮಿತವಾದುದು. ಇದು ನಮಗೆ ತಿಳಿದ ವಿಷಯ.


“ಸೇನಾಧೀಶ್ವರ ಸರ್ವೇಶ್ವರ ಇಂತೆನ್ನುತ್ತಾರೆ: ನೀನು ನನ್ನ ಮಾರ್ಗದಲ್ಲಿ ನಡೆದು, ನಾನು ನಿನಗೆ ವಹಿಸಿದ ಕಾರ್ಯವನ್ನು ನೆರವೇರಿಸಿದರೆ, ನನ್ನ ಆಲಯದ ಮುಖ್ಯಾಧಿಕಾರಿಯಾಗುವೆ. ಅದರ ವ್ಯಾಪ್ತಿಯಲ್ಲಿ ಉಳ್ಳ ಎಲ್ಲದಕ್ಕೂ ವ್ಯವಸ್ಥಾಪಕನಾಗುವೆ. ಈ ಸನ್ನಿಧಾನದ ದೂತರ ಮಧ್ಯೆ ಬಂದುಹೋಗುವ ಹಕ್ಕನ್ನು ನಿನಗೆ ಕೊಡುವೆನು.


ಬುದ್ಧಿವಂತರು ತೇಜೋಮಯವಾದ ಆಕಾಶಮಂಡಲದಂತೆ ಪ್ರಕಾಶಿಸುವರು. ಜನರನ್ನು ಸದ್ಧರ್ಮಿಗಳನ್ನಾಗಿ ಮಾಡುವವರು ಯುಗಯುಗಾಂತರಕ್ಕೂ ನಕ್ಷತ್ರಗಳಂತೆ ಹೊಳೆಯುವರು.


ಅದಕ್ಕೆ ಯೇಸು, “ನಿಮಗೆ ಸತ್ಯವಾಗಿ ಹೇಳುತ್ತೇನೆ: ಹೊಸ ಸೃಷ್ಟಿಯಲ್ಲಿ ನರಪುತ್ರನು ತನ್ನ ಮಹಿಮಾನ್ವಿತ ಸಿಂಹಾಸನದ ಮೇಲೆ ಆಸೀನನಾಗುವಾಗ, ನನ್ನನ್ನು ಹಿಂಬಾಲಿಸಿರುವ ನೀವು ಕೂಡ, ಇಸ್ರಯೇಲಿನ ಹನ್ನೆರಡು ಗೋತ್ರಗಳಿಗೆ ನ್ಯಾಯಾಧಿಪತಿಗಳಾಗಿ ಹನ್ನೆರಡು ಸಿಂಹಾಸನಗಳ ಮೇಲೆ ಆಸೀನರಾಗುವಿರಿ.


ಬಂದೊದಗಲಿರುವ ಇವೆಲ್ಲವುಗಳಿಂದ ಪಾರಾಗಿ ನರಪುತ್ರನ ಮುಂದೆ ನಿಲ್ಲಲು ನೀವು ಶಕ್ತರಾಗುವಂತೆ ನಿರಂತರವಾಗಿ ಪ್ರಾರ್ಥನೆಮಾಡುತ್ತಾ ಎಚ್ಚರಿಕೆಯಿಂದಿರಿ,” ಎಂದರು.


ನನ್ನ ಸ್ವತ್ತೂ ಸ್ವಾಸ್ತ್ಯವೂ ನೀನೇ I ನಿನ್ನ ಕೈಯಲ್ಲಿದೆ ಪ್ರಭು, ನನ್ನ ವಿಮೆ II


ಪ್ರಭು ಯೇಸು ತಮ್ಮ ಪ್ರಭಾವಯುತ ದೂತರೊಂದಿಗೆ ಸ್ವರ್ಗದಿಂದ ಪ್ರತ್ಯಕ್ಷರಾಗುವಾಗ, ಬೆಂಕಿಯ ಜ್ವಾಲೆಗಳು ಕಂಡುಬರುವುವು; ದೇವರನ್ನು ಅರಿತು ಅಲ್ಲಗಳೆದವರಿಗೂ ನಮ್ಮ ಪ್ರಭು ಯೇಸುವಿನ ಶುಭಸಂದೇಶಕ್ಕೆ ಅವಿಧೇಯರಾಗಿ ವರ್ತಿಸಿದವರಿಗೂ ತಕ್ಕ ಪ್ರತೀಕಾರವಾಗುವುದು.


ಎಂದೇ ನಿಲ್ಲಲಾರರು ದುರುಳರು ನ್ಯಾಯಸ್ಥಾನದಲಿ I ಸದಸ್ಯರಾಗರು ಪಾಪಿಗಳು ಸಜ್ಜನರ ಸಂಘದಲಿ II


“ದಾನಿಯೇಲನೇ, ನೀನು ಈ ಮಾತುಗಳನ್ನು ಮುಚ್ಚಿಡು; ಇವುಗಳನ್ನು ಬರೆಯುವ ಗ್ರಂಥಕ್ಕೆ ಮುದ್ರೆಹಾಕು; ಅಂತ್ಯಕಾಲದವರೆಗೆ ಮರೆಯಾಗಿರಲಿ. ಬಹುಜನರು ಅತ್ತಿತ್ತ ಅಲೆದಾಡುವರು (ಸತ್ಯಕ್ಕಾಗಿ). ಅಧರ್ಮ ಹೆಚ್ಚುತ್ತಿರುವುದು.”


ಅದಕ್ಕೆ ಸರ್ವೇಶ್ವರ, “ನನ್ನ ಪ್ರಸನ್ನತೆ ನಿನ್ನ ಜೊತೆಯಲ್ಲಿ ಬರುವುದು. ನಾನು ನಿನಗೆ ವಿಶ್ರಾಂತಿ ನೀಡುವೆನು,” ಎಂದರು.


ಇದು ಕಾರಣ ಹರ್ಷದಿಂದಿದೆ ಎನ್ನಯ ಹೃದಯ I ಆನಂದಗೊಂಡಿದೆ ಮನ, ಸುರಕ್ಷಿತವಿದೆ ಕಾಯ II


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು