Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ದಾನಿಯೇಲ 12:2 - ಕನ್ನಡ ಸತ್ಯವೇದವು C.L. Bible (BSI)

2 ಸತ್ತು ಧೂಳಿ ಮಣ್ಣಿನಲ್ಲಿ ‘ದೀರ್ಘನಿದ್ರೆ’ಮಾಡುತ್ತಿರುವ ಅನೇಕರು ಏಳುವರು. ಎಚ್ಚೆತ್ತವರಲ್ಲಿ ಕೆಲವರು ನಿತ್ಯಜೀವವನ್ನು ಅನುಭವಿಸುವರು; ಕೆಲವರು ತಿರಸ್ಕೃತರಾಗಿ ನಿತ್ಯ ನಿಂದನೆಗೆ ಗುರಿಯಾಗುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

2 ಸತ್ತು ಧೂಳಿನ ನೆಲದೊಳಗೆ ದೀರ್ಘ ನಿದ್ರೆಮಾಡುವವರಲ್ಲಿ ಅನೇಕರು ಎಚ್ಚೆತ್ತು ಕೆಲವರು ನಿತ್ಯಜೀವವನ್ನು, ಕೆಲವರು ನಿಂದನೆ ಮತ್ತು ನಿತ್ಯತಿರಸ್ಕಾರಗಳನ್ನು ಅನುಭವಿಸುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

2 ಧೂಳಿನ ನೆಲದೊಳಗೆ ದೀರ್ಘನಿದ್ರೆಮಾಡುವವರಲ್ಲಿ ಅನೇಕರು ಎಚ್ಚತ್ತು ಕೆಲವರು ನಿತ್ಯಜೀವವನ್ನು, ಕೆಲವರು ನಿಂದನ ನಿತ್ಯತಿರಸ್ಕಾರಗಳನ್ನು ಅನುಭವಿಸುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

2 ಮರಣಹೊಂದಿದ, ಸಮಾಧಿಗಳಲ್ಲಿ ದೀರ್ಘನಿದ್ರೆ ಮಾಡುತ್ತಿದ್ದವರಲ್ಲಿ ಅನೇಕರು ಎಚ್ಚೆತ್ತುಕೊಳ್ಳುವರು. ಕೆಲವರು ಎಚ್ಚೆತ್ತು ನಿತ್ಯಜೀವವನ್ನು ಅನುಭವಿಸುವರು. ಕೆಲವರು ಎಚ್ಚೆತ್ತು ನಿತ್ಯನಿಂದನೆಗಳನ್ನೂ ತಿರಸ್ಕಾರಗಳನ್ನೂ ಅನುಭವಿಸುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

2 ಭೂಮಿಯ ಧೂಳಿನೊಳಗೆ ನಿದ್ರೆ ಮಾಡುವವರಲ್ಲಿ ಅನೇಕರು ಎಚ್ಚತ್ತು, ಕೆಲವರು ನಿತ್ಯಜೀವವನ್ನೂ ಮತ್ತು ಕೆಲವರು ತಿರಸ್ಕೃತರಾಗಿ ನಿತ್ಯ ನಿಂದನೆಗೆ ಗುರಿಯಾಗುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ದಾನಿಯೇಲ 12:2
19 ತಿಳಿವುಗಳ ಹೋಲಿಕೆ  

ಬದುಕುವರು ನಿಧನರಾದ ನಮ್ಮ ಜನರು ಜೀವದಿಂದೇಳುವುವು ನಮ್ಮವರ ಶವಗಳು. ಎದ್ದು ಹರ್ಷಧ್ವನಿಗೈಯಲಿ ನೆಲದಲಿ ಬಿದ್ದಿರುವವರು. ನೀ ಸುರಿಸುವ ಇಬ್ಬನಿ ಜ್ಯೋತಿರ್ಮಯ, ಆದುದರಿಂದ ಸತ್ತವರು ಪುನರುತ್ಥಾನಹೊಂದುವರು ನೆಲದಿಂದ.


“ಹೀಗೆ ಈ ದುರ್ಜನರು ನಿತ್ಯಶಿಕ್ಷೆಗೂ, ಆ ಸಜ್ಜನರು ನಿತ್ಯಜೀವಕ್ಕೂ ಹೋಗುವರು,” ಎಂದು ಹೇಳಿದರು ಸ್ವಾಮಿ.


ಆದಕಾರಣ ನೀನು ಈ ದೈವೋಕ್ತಿಯನ್ನು ಅವರಿಗೆ ನುಡಿ: ‘ಸರ್ವೇಶ್ವರನಾದ ದೇವರು ಇಂತೆನ್ನುತ್ತಾರೆ - ನನ್ನ ಜನರೇ, ನೋಡಿ: ನಾನು ನಿಮ್ಮ ಗೋರಿಗಳನ್ನು ತೆರೆದು, ಅವುಗಳೊಳಗಿಂದ ನಿಮ್ಮನ್ನು ಎಬ್ಬಿಸಿ, ಇಸ್ರಯೇಲ್ ನಾಡಿಗೆ ಸೇರಮಾಡುವೆನು.


ಇದಲ್ಲದೆ, ಮೃತರಾಗಿದ್ದ ಹಿರಿಯಕಿರಿಯರೆಲ್ಲರೂ ಸಿಂಹಾಸನದ ಸಾನ್ನಿಧ್ಯದಲ್ಲಿ ನಿಂತಿರುವುದನ್ನು ಕಂಡೆ. ಆಗ ಪುಸ್ತಕಗಳನ್ನು ತೆರೆಯಲಾಯಿತು. ಅನಂತರ ಮತ್ತೊಂದು ಪುಸ್ತಕವನ್ನು ತೆರೆಯಲಾಯಿತು. ಅದು ಜೀವಬಾಧ್ಯರ ಪಟ್ಟಿಯುಳ್ಳ ಪುಸ್ತಕ. ಆ ಪುಸ್ತಕದಲ್ಲಿ ಬರೆದಿದ್ದ ಪ್ರಕಾರ ಅವರವರ ಕೃತ್ಯಗಳಿಗೆ ತಕ್ಕಂತೆ ಮೃತರಿಗೆ ನ್ಯಾಯತೀರ್ಪು ಕೊಡಲಾಯಿತು.


ಮಾನವರು ಸಜ್ಜನರಾಗಿರಲಿ, ದುರ್ಜನರಾಗಿರಲಿ, ಪುನರುತ್ಥಾನ ಹೊಂದುವರೆಂದು ಇವರಂತೆಯೇ ನಾನು ದೇವರಲ್ಲಿ ನಂಬಿಕೆಯುಳ್ಳವನಾಗಿದ್ದೇನೆ.


ಯೇಸು ಸತ್ತು ಪುನರುತ್ಥಾನ ಹೊಂದಿದರೆಂದು ನಾವು ವಿಶ್ವಾಸಿಸುತ್ತೇವೆ ಅಲ್ಲವೇ? ಹಾಗೆಯೇ, ಕ್ರಿಸ್ತಯೇಸುವಿನಲ್ಲಿ ವಿಶ್ವಾಸವಿಟ್ಟು ಮರಣಹೊಂದಿದವರನ್ನು ದೇವರು ಯೇಸುಕ್ರಿಸ್ತರೊಡನೆ ಮರಳಿ ಕರೆದುಕೊಳ್ಳುತ್ತಾರೆ.


ಅವರು ಹೊರಟುಹೋಗುವಾಗ ನೋಡುವರು ನನಗೆ ದ್ರೋಹವೆಸಗಿದವರ ಹೆಣಗಳನು ಸಾಯುವುದಿಲ್ಲ ಅವುಗಳನ್ನು ಕಡಿಯುವ ಹುಳು ಆರುವುದಿಲ್ಲ ಅವುಗಳನ್ನು ಸುಡುವ ಬೆಂಕಿಯು ಎಲ್ಲ ಮನುಜರಿಗವು ಅಸಹ್ಯವಾಗಿರುವುವು.”


ಆದರೆ ನನ್ನ ಸಂಗಡ ಇರುವರು ಸರ್ವೇಶ್ವರ ಭಯಂಕರ ಶೂರನಂತೆ ನನ್ನ ಹಿಂಸಕರು ಮುಗ್ಗರಿಸಿ ಬೀಳುವರು ಜಯಸಾಧಿಸದೆ. ನಾಚಿಕೆಗೆ ಈಡಾಗುವರು ತಮ್ಮ ಯೋಜನೆ ಕೈಗೂಡದೆ ಶಾಶ್ವತ ಅವಮಾನಕ್ಕೆ ಗುರಿಯಾಗುವರು ಎಂದಿಗೂ ಮರೆಯಲಾಗದಂತೆ.


ಅದನ್ನು ಪಾತಾಳದ ಹಿಡಿತದಿಂದ ನಾನು ಬಿಡಿಸಲಾರೆ. ಮರಣದ ಬಾಧೆಯಿಂದ ಅವರನ್ನು ರಕ್ಷಿಸಲಾರೆ. ‘ಮರಣವೇ, ನಿನ್ನ ಮಾರಕ ವ್ಯಾಧಿಗಳಿಂದ ಅವರನ್ನು ಬಾಧಿಸು. ಪಾತಾಳವೇ, ಅವರನ್ನು ಕಬಳಿಸಿ ನಾಶಗೊಳಿಸು. ಕರುಣೆ ನನ್ನಿಂದ ದೂರವಾಗಿದೆ.


ಒಂದೇ ಮಣ್ಣಿನ ಮುದ್ದೆಯಿಂದ ಎರಡು ಕುಡಿಕೆಗಳನ್ನು ಅಂದರೆ ಒಂದನ್ನು ವಿಶೇಷ ಬಳಕೆಗೂ ಇನ್ನೊಂದನ್ನು ಸಾಮಾನ್ಯ ಬಳಕೆಗೂ ಮಾಡುವ ಅಧಿಕಾರ ಕುಂಬಾರನಿಗೆ ಇಲ್ಲವೆ?


ಅನಂತರ ಮೊಣಕಾಲೂರಿ, “ಪ್ರಭೂ, ಈ ಪಾಪವನ್ನು ಇವರ ಮೇಲೆ ಹೊರಿಸಬೇಡಿ,” ಎಂದು ಧ್ವನಿಯೆತ್ತಿ ಹೇಳುತ್ತಾ ಪ್ರಾಣಬಿಟ್ಟನು. ಸೌಲನು ಸ್ತೇಫನನ ಕೊಲೆಗೆ ಸಮ್ಮತಿಸಿದ್ದನು.


ಬುದ್ಧಿವಂತನನ್ನು ಅವರ ಬುದ್ಧಿಗೆ ತಕ್ಕಂತೆ ಜನ ಹೊಗಳುವರು; ವಕ್ರಬುದ್ಧಿಯುಳ್ಳವನನ್ನಾದರೊ ಅವರು ತೆಗಳುವರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು