ದಾನಿಯೇಲ 12:6 - ಕನ್ನಡ ಸತ್ಯವೇದವು C.L. Bible (BSI)6 ಇವರಲ್ಲಿ ಒಬ್ಬನು, ನದಿಯ ನೀರಿನ ಮೇಲ್ಗಡೆ ನಾರಿನ ಹೊದಿಕೆಯನ್ನು ಹೊದ್ದು ನಿಂತಿದ್ದ ದೂತನನ್ನು ನೋಡಿ, “ಈ ಆಶ್ಚರ್ಯಕಾರ್ಯಗಳು ನೆರವೇರಲು ಎಷ್ಟುಕಾಲ ಹಿಡಿಯುವುದು?” ಎಂದು ಕೇಳಿದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20196 ಇವರಲ್ಲಿ ನದಿಯ ನೀರಿನ ಮೇಲೆ ನಾರಿನ ಹೊದಿಕೆಯನ್ನು ಹೊದ್ದುಕೊಂಡಿದ್ದ ಒಬ್ಬನು, “ಈ ಅಪೂರ್ವ ಕಾರ್ಯಗಳು ಕೊನೆಗಾಣುವುದಕ್ಕೆ ಎಷ್ಟು ಕಾಲ ಹಿಡಿಯುವುದು?” ಎಂದು ಕೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)6 ಇವರಲ್ಲಿ ಒಬ್ಬನು - ಈ ಅಪೂರ್ವಕಾರ್ಯಗಳು ಕೊನೆಗಾಣುವದಕ್ಕೆ ಎಷ್ಟು ಕಾಲ ಹಿಡಿಯುವದು ಎಂದು ನದಿಯ ನೀರಿನ ಮೇಲೆ ನಾರಿನ ಹೊದಿಕೆಯನ್ನು ಹೊದ್ದು ನಿಂತಿದ್ದ ಪುರುಷನನ್ನು ಕೇಳಲು ಆ ಪುರುಷನು ಎಡಬಲಕೈಗಳನ್ನು ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್6 ನಾರುಮಡಿಯನ್ನು ಧರಿಸಿದ್ದವನೊಬ್ಬನು ನದಿಯಲ್ಲಿ ನೀರಿನ ಮೇಲೆ ನಿಂತಿದ್ದನು. ಅವರಿಬ್ಬರಲ್ಲಿ ಒಬ್ಬನು, “ಆ ಅದ್ಭುತ ಘಟನೆಗಳು ಸಂಭವಿಸುವದಕ್ಕೆ ಇನ್ನು ಎಷ್ಟು ಕಾಲ ಬೇಕು?” ಎಂದು ಅವನನ್ನು ಕೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ6 ಅವರು ನದಿಯ ನೀರಿನ ಮೇಲೆ ನಿಂತು, ನಾರುಬಟ್ಟೆಯನ್ನು ಧರಿಸಿದ್ದ ಒಬ್ಬನಿಗೆ ಇನ್ನೊಬ್ಬನು, “ಈ ಆಶ್ಚರ್ಯದ ಅಂತ್ಯವು ಎಷ್ಟರವರೆಗೆ ಇರುವುದು?” ಎಂದು ಕೇಳಿದನು. ಅಧ್ಯಾಯವನ್ನು ನೋಡಿ |