Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ದಾನಿಯೇಲ 12:7 - ಕನ್ನಡ ಸತ್ಯವೇದವು C.L. Bible (BSI)

7 ಆ ದೂತ ಎಡಬಲಗೈಗಳನ್ನು ಆಕಾಶದ ಕಡೆಗೆ ಎತ್ತಿಕೊಂಡು, “ಶಾಶ್ವತ ಜೀವಸ್ವರೂಪನಾಣೆ, ಒಂದು ಯುಗ, ಎರಡು ಯುಗ, ಮತ್ತು ಅರ್ಧ ಯುಗ ಕಳೆಯಬೇಕು. ದೇವಜನರಿಗಾಗುವ ಹಿಂಸೆಬಾಧೆಗಳು ಸಂಪೂರ್ಣವಾಗಿ ನಿಂತಮೇಲೆ ಈ ಕಾರ್ಯಗಳೆಲ್ಲ ಮುಕ್ತಾಯವಾಗುವುವು,” ಎಂಬುದಾಗಿ ನನ್ನ ಕಿವಿಗೆ ಬೀಳುವಂತೆ ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

7 ನದಿಯ ನೀರಿನ ಮೇಲೆ ನಾರಿನ ಹೊದಿಕೆಯನ್ನು ಹೊದ್ದುಕೊಂಡು ನಿಂತಿದ್ದ ಪುರುಷನನ್ನು ಕೇಳಲು, ಆ ಪುರುಷನು ಎಡ ಮತ್ತು ಬಲಗೈಗಳನ್ನು ಆಕಾಶದ ಕಡೆಗೆ ಎತ್ತಿಕೊಂಡು, “ಶಾಶ್ವತ ಜೀವಸ್ವರೂಪನಾಣೆ, ಒಂದು ಕಾಲ, ಎರಡುಕಾಲ, ಅರ್ಧಕಾಲ ಕಳೆಯಬೇಕು. ದೇವಜನರ ಬಲವನ್ನು ಸಂಪೂರ್ಣವಾಗಿ ಮುರಿದುಬಿಟ್ಟ ಮೇಲೆ ಈ ಕಾರ್ಯಗಳೆಲ್ಲಾ ಮುಕ್ತಾಯವಾಗುವವು” ಎಂಬುದಾಗಿ ನನ್ನ ಕಿವಿಗೆ ಬೀಳುವಂತೆ ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

7 ಆಕಾಶದ ಕಡೆಗೆ ಎತ್ತಿಕೊಂಡು - ಶಾಶ್ವತ ಜೀವಸ್ವರೂಪನಾಣೆ, ಒಂದುಕಾಲ ಎರಡುಕಾಲ ಅರ್ಧಕಾಲ ಕಳೆಯಬೇಕು; ದೇವರ ಜನರ ಬಲವನ್ನು ಸಂಪೂರ್ಣವಾಗಿ ಮುರಿದುಬಿಟ್ಟ ಮೇಲೆ ಈ ಕಾರ್ಯಗಳೆಲ್ಲಾ ಮುಕ್ತಾಯವಾಗುವವು ಎಂಬದಾಗಿ ನನ್ನ ಕಿವಿಗೆ ಬೀಳುವಂತೆ ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

7 ನಾರುಮಡಿಯನ್ನು ಧರಿಸಿ ನೀರಿನ ಮೇಲೆ ನಿಂತುಕೊಂಡಿದ್ದ ಮನುಷ್ಯನು ತನ್ನ ಎರಡೂ ಕೈಗಳನ್ನು ಆಕಾಶದ ಕಡೆಗೆ ಎತ್ತಿದನು. ಅವನು ಶಾಶ್ವತವಾದ ದೇವರ ಮೇಲೆ ಆಣೆಮಾಡಿ, “ಮೂರುವರೆ ವರ್ಷ ಕಳೆಯಬೇಕು. ದೇವರ ಭಕ್ತರ ಬಲವು ಸಂಪೂರ್ಣವಾಗಿ ಮುರಿದುಹೋಗುವದು. ಆಮೇಲೆ ಎಲ್ಲಾ ಸಂಗತಿಗಳು ಜರುಗುವವು” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

7 ನದಿಯ ನೀರಿನ ಮೇಲೆ ನಿಂತು ನಾರುಬಟ್ಟೆಯನ್ನು ಧರಿಸಿ ನಿಂತಿದ್ದ ಮನುಷ್ಯನು ತನ್ನ ಎಡಗೈಯನ್ನೂ ಬಲಗೈಯನ್ನೂ ಆಕಾಶದ ಕಡೆಗೆ ಎತ್ತಿ ಸದಾಕಾಲ ಜೀವಂತರಾಗಿರುವವರ ಮೇಲೆ ಆಣೆಯಿಟ್ಟು, “ಅದು ಒಂದುಕಾಲ, ಎರಡುಕಾಲ, ಅರ್ಧಕಾಲ ಕಳೆಯಬೇಕು; ಕೊನೆಗೆ ಪರಿಶುದ್ಧರ ಬಲವನ್ನು ಮುರಿದ ಮೇಲೆ ಈ ಕಾರ್ಯಗಳೆಲ್ಲ ಮುಕ್ತಾಯವಾಗುವುವು,” ಎಂಬುದಾಗಿ ನನ್ನ ಕಿವಿಗೆ ಬೀಳುವಂತೆ ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ದಾನಿಯೇಲ 12:7
30 ತಿಳಿವುಗಳ ಹೋಲಿಕೆ  

ಅವನು ಮಹೋನ್ನತ ದೇವರಿಗೆ ವಿರುದ್ಧವಾಗಿ ಕೊಚ್ಚಿಕೊಳ್ಳುವನು. ಮಹೋನ್ನತರ ಪವಿತ್ರ ಪ್ರಜೆಯನ್ನು (ಸಂತರನ್ನು) ಶೋಷಣೆಗೆ ಗುರಿಮಾಡುವನು. ಆ ಪ್ರಜೆ ಅವನಿಗೆ ಮೂರುವರೆ ವರ್ಷ ಅಧೀನರಾಗಿರುವರು.


ಆಗ ಆ ಮಹಿಳೆ ಅರಣ್ಯದಲ್ಲಿರುವ ತನ್ನ ಸ್ಥಳಕ್ಕೆ ಹಾರಿಹೋಗುವಂತೆ ದೊಡ್ಡ ಗರುಡಪಕ್ಷಿಗಿರುವಂಥ ಎರಡು ರೆಕ್ಕೆಗಳನ್ನು ಆಕೆಗೆ ಕೊಡಲಾಯಿತು. ಅಲ್ಲಿ ಘಟಸರ್ಪದ ಕಣ್ಣಿಗೆ ಬೀಳದೆ ಮೂರುವರೆ ವರ್ಷಗಳ ಕಾಲ ಪೋಷಣೆ ಹೊಂದುವಂತಾಯಿತು.


ಅವನು ಪ್ರಬಲನಾಗುವನು, ಆದರೆ ಸ್ವಬಲದಿಂದಲ್ಲ. ಅತ್ಯಧಿಕವಾಗಿ ಹಾಳುಮಾಡಿ, ಅಭಿವೃದ್ಧಿಯಾಗುವನು. ತನ್ನ ಇಷ್ಟಾರ್ಥವನ್ನು ತೀರಿಸಿಕೊಳ್ಳುವನು. ಬಲಿಷ್ಠರನ್ನೂ ದೇವಜನರನ್ನೂ ಧ್ವಂಸಮಾಡುವನು.


ಜಂಬದ ಹೇಳಿಕೆಗಳನ್ನೂ ದೇವದೂಷಣೆಯ ಮಾತುಗಳನ್ನೂ ಆಡುವುದಕ್ಕೆ ಆ ಮೃಗಕ್ಕೆ ಒಂದು ಬಾಯನ್ನು ಕೊಡಲಾಗಿತ್ತು. ನಲವತ್ತ ಎರಡು ತಿಂಗಳುಗಳವರೆಗೆ ತನ್ನ ಕಾರ್ಯ ಸಾಧಿಸಿಕೊಳ್ಳುವ ಅಧಿಕಾರವನ್ನೂ ಅದಕ್ಕೆ ನೀಡಲಾಗಿತ್ತು.


ಆ ಮಹಿಳೆ ಅರಣ್ಯಕ್ಕೆ ಓಡಿಹೋದಳು. ಅಲ್ಲಿ ಸಾವಿರದ ಇನ್ನೂರ ಅರವತ್ತು ದಿನಗಳ ಕಾಲ ಆಕೆಗೆ ಶುಶ್ರೂಷೆಯಾಗಬೇಕೆಂದು ದೇವರೇ ಆ ಸ್ಥಳವನ್ನು ಸಜ್ಜುಗೊಳಿಸಿದ್ದರು.


ಕೆಲವರು ಕತ್ತಿಯ ಬಾಯಿಗೆ ತುತ್ತಾಗುವರು. ಮತ್ತೆ ಕೆಲವರು ಬಂಧಿತರಾಗಿ ದೇಶದೇಶಗಳಿಗೆ ಕೊಂಡೊಯ್ಯಲ್ಪಡುವರು; ಅನ್ಯದೇಶೀಯರು ತಮ್ಮ ಕಾಲಾವಧಿಯ ತನಕ ಜೆರುಸಲೇಮನ್ನು ತುಳಿದುಹಾಕುವರು.


ಗುರುತಿಸಲಾಗಿದ್ದ ಕಾಲವು ಕಳೆಯಿತು. ನೆಬೂಕದ್ನೆಚ್ಚರನು, “ನಾನು ಪರಲೋಕದ ಕಡೆಗೆ ಕಣ್ಣೆತ್ತಿ ನೋಡಿದೆ. ನನ್ನ ಬುದ್ಧಿ ಮತ್ತೆ ನನಗೆ ಸ್ವಾಧೀನವಾಯಿತು. ಆಗ ನಾನು ಪರಾತ್ಪರ ದೇವರನ್ನು ಕೊಂಡಾಡಿದೆ. ಜೀವಸ್ವರೂಪರಾದ ಅವರಿಗೆ ಸ್ತುತಿಸ್ತೋತ್ರಗಳನ್ನು ಸಲ್ಲಿಸಿದೆ: ಆತನ ಆಳ್ವಿಕೆ ಶಾಶ್ವತ ಆತನ ರಾಜ್ಯ ತಲತಲಾಂತರಕ್ಕೂ ಸ್ಥಿರ.


ನೀವು ದೇವರು ಆಯ್ದುಕೊಂಡ ಜನಾಂಗ, ರಾಜಯಾಜಕರು, ಪವಿತ್ರ ಪ್ರಜೆ, ದೇವರ ಸ್ವಕೀಯ ಜನ; ಅವರ ಅದ್ಭುತ ಕಾರ್ಯಗಳನ್ನು ಪ್ರಚುರಪಡಿಸುವುದಕ್ಕಾಗಿಯೇ ಆಯ್ಕೆಯಾದವರು. ಕಾರ್ಗತ್ತಲಿನಿಂದ ತಮ್ಮ ಅದ್ಭುತಕರವಾದ ಬೆಳಕಿಗೆ ನಿಮ್ಮನ್ನು ಕರೆತಂದವರು ಅವರೇ.


‘ಸರ್ವೇಶ್ವರ ಸ್ವಾಮಿಯ ಜೀವದಾಣೆ’ ಎಂದು ಸತ್ಯ, ನ್ಯಾಯ, ನೀತಿಗೆ ಅನುಗುಣವಾಗಿ ಪ್ರಮಾಣಮಾಡಿರಿ, ಆಗ ರಾಷ್ಟ್ರಗಳೆಲ್ಲ ನನ್ನಿಂದ ಆಶೀರ್ವಾದ ಪಡೆಯಲು ಆಶಿಸುವರು, ನನ್ನಲ್ಲೇ ಹೆಮ್ಮೆಪಡುವರು.”


‘ಪವಿತ್ರ ಪ್ರಜೆ’ ಎನಿಸಿಕೊಳ್ಳುವುದು ನಿಮ್ಮ ಜನತೆ ‘ಸರ್ವೇಶ್ವರ ಸ್ವಾಮಿಯೇ ಉದ್ಧರಿಸಿದ ಜನತೆ’. ನಿನ್ನ ಹೆಸರೋ, ‘ಪ್ರಾಪ್ತ ನಗರಿ’ ಪತಿ ವರಿಸಿ ಕೈ ಬಿಡದ ಪುರಿ.


ನಾನು ನಿರ್ಮಿಸಿದ ಬೇರೆ ಎಲ್ಲಾ ಜನಾಂಗಗಳಿಗಿಂತ ಇವರಿಗೆ ಹೆಚ್ಚಾದ ಕೀರ್ತಿಘನಮಾನಗಳನ್ನುಂಟು ಮಾಡುವೆನು ಹಾಗು ಇವರು ನನ್ನ ಮಾತಿನ ಮೇರೆಗೆ ತಮ್ಮ ದೇವರಾದ ಸರ್ವೇಶ್ವರನಿಗೆ ಮೀಸಲಾದ ಜನರಾಗಲು ಒಡಂಬಟ್ಟಿದ್ದಾರೆ,’ ಎನ್ನುವರು,” ಎಂದು ಹೇಳಿದನು.


ಏಕೆಂದರೆ ನೀವು ನಿಮ್ಮ ದೇವರಾದ ಸರ್ವೇಶ್ವರನಿಗೆ ಮೀಸಲಾದ ಜನರು; ಜಗದಲ್ಲಿರುವ ಸಮಸ್ತ ಜನಾಂಗಗಳಲ್ಲಿ ನಿಮ್ಮನ್ನೇ ಸ್ವಕೀಯಜನರಾಗಲು ಅವರು ಆಯ್ದುಕೊಂಡಿದ್ದಾರೆ.


ಇವರಲ್ಲಿ ಒಬ್ಬನು, ನದಿಯ ನೀರಿನ ಮೇಲ್ಗಡೆ ನಾರಿನ ಹೊದಿಕೆಯನ್ನು ಹೊದ್ದು ನಿಂತಿದ್ದ ದೂತನನ್ನು ನೋಡಿ, “ಈ ಆಶ್ಚರ್ಯಕಾರ್ಯಗಳು ನೆರವೇರಲು ಎಷ್ಟುಕಾಲ ಹಿಡಿಯುವುದು?” ಎಂದು ಕೇಳಿದನು.


“ತರುವಾಯ ಉತ್ತರರಾಜನು ಹಿಂದಿನ ದಂಡಿಗಿಂತ ದೊಡ್ಡ ದಂಡನ್ನು ಮತ್ತೆ ಕೂಡಿಸಿಕೊಂಡು ಬಹಳ ವರ್ಷಗಳು ಕಳೆದನಂತರ ಮಹಾಸೈನ್ಯ ಸಮೇತ ಅಧಿಕ ಸನ್ನಾಹದಿಂದ ಬರುವನು.


ಅವನು ಇವನಿಗೆ, “ಉದಯಾಸ್ತಮಾನಗಳ ಎರಡು ಸಾವಿರದ ಮುನ್ನೂರರವರೆಗೆ ನಡೆಯುವುವು. ಅನಂತರ ಪವಿತ್ರಾಲಯಕ್ಕೆ ಪುನಃ ನ್ಯಾಯಸ್ಥಾಪನೆ ಆಗುವುದು,” ಎಂದು ಹೇಳಿದನು.


ಆಕಾಶದತ್ತ ಕೈಯೆತ್ತಿ ಪ್ರಮಾಣಮಾಡುವೆ, ಚಿರಂಜೀವಿಯಾದೆನ್ನ ಮೇಲೆ ಆಣೆಯಿಟ್ಟು ಹೇಳುವೆ:


ಆಗ ವಾದಿಸುವುದು ಹೇಗೆಂದು ನೀವು ಮುಂಚಿತವಾಗಿ ಚಿಂತಿಸಬೇಕಾಗಿಲ್ಲ; ಇದು ನಿಮಗೆ ಮನದಟ್ಟಾಗಿರಲಿ.


“ನನಗೆ ನ್ಯಾಯ ದೊರಕಿಸದ ಜೀವಂತ ದೇವರಾಣೆ, ನನ್ನ ಮನಸ್ಸನು ಕಹಿಯಾಗಿಸಿದ ಸರ್ವಶಕ್ತನಾಣೆ.


ಯುಗಯುಗಾಂತರಕ್ಕೂ ಜೀವಿಸುವ ಹಾಗೂ ಸಿಂಹಾಸನಾರೂಢರಾಗಿರುವ ವ್ಯಕ್ತಿಗೆ ಆ ಜೀವಿಗಳು ಘನತೆ, ಗೌರವ ಮತ್ತು ಕೃತಜ್ಞತಾಸ್ತುತಿಗಳನ್ನು ಸಲ್ಲಿಸುತ್ತಿದ್ದವು.


ಆ ಇಪ್ಪತ್ನಾಲ್ಕು ಸಭಾಪ್ರಮುಖರು ತಮ್ಮ ಕಿರೀಟಗಳನ್ನು ತೆಗೆದು ಬದಿಗಿಟ್ಟು, ಸರ್ವಕಾಲಕ್ಕೂ ಜೀವಿಸುವ ಹಾಗೂ ಸಿಂಹಾಸನದಲ್ಲಿ ಆಸೀನರಾಗಿದ್ದ ವ್ಯಕ್ತಿಯ ಪಾದಗಳಿಗೆ ಅಡ್ಡಬಿದ್ದು ಯುಗಯುಗಾಂತರಗಳಲ್ಲಿಯೂ ಜೀವಿಸುವವರನ್ನು ಆರಾಧಿಸುತ್ತಾ :


ಸರ್ವೇಶ್ವರ ದೇವರು ಇಂತೆನ್ನುತ್ತಾರೆ - ನಾನು ಇಸ್ರಯೇಲರನ್ನು ಆರಿಸಿಕೊಂಡ ದಿನದಂದು ಯಕೋಬ ಸಂತಾನದವರಿಗೆ ಮಾತುಕೊಟ್ಟು, ‘ನಾನೇ ನಿಮ್ಮ ದೇವರಾದ ಸರ್ವೇಶ್ವರ’ ಎಂದು ಈಜಿಪ್ಟ್ ದೇಶದಲ್ಲಿ ಪ್ರಮಾಣಪೂರ್ವಕವಾಗಿ ತಿಳಿಯಪಡಿಸಿದೆ.


ಕಣ್ಣೆತ್ತಿ ನೋಡಲು, ನಾರುಬಟ್ಟೆಯನ್ನು ಹೊದ್ದುಕೊಂಡಿದ್ದ, ಊಫಜಿನ ಬಂಗಾರದ ಪಟ್ಟಿಯನ್ನು ಸೊಂಟಕ್ಕೆ ಬಿಗಿದುಕೊಂಡಿದ್ದ, ಒಬ್ಬ ವ್ಯಕ್ತಿ ನನಗೆ ಕಾಣಿಸಿದ.


ನನಗೆ ಅದು ಕೇಳಿಸಿತ್ತಾದರೂ ಅರ್ಥವಾಗಲಿಲ್ಲ. ಆಗ ನಾನು, “ಎನ್ನೊಡೆಯಾ, ಈ ಕಾರ್ಯಗಳ ಪರಿಣಾಮವೇನು?” ಎಂದು ಪ್ರಶ್ನೆಮಾಡಿದೆ.


ಸ್ವತಂತ್ರರು, ಪರತಂತ್ರರು ನಿರಾಶ್ರಯರಾದಾಗ ಅವರೆಲ್ಲರು ನಿಶ್ಯೇಷರಾದವರು ಎಂದು ತಿಳಿದುಬಂದಾಗ ದೊರಕಿಸುವನು ಸರ್ವೇಶ್ವರನು ನ್ಯಾಯವನು ತನ್ನ ಪ್ರಜೆಗೆ ತೋರುವನು ಅನುಕಂಪವನು ತನ್ನ ಭಕ್ತಾದಿಗಳಿಗೆ.


ಈ ಮಾತು ಅವನ ಬಾಯಿಂದ ಹೊರಡುತ್ತಿರುವಾಗಲೆ, “ಎಲೈ ರಾಜ ನೆಬೂಕದ್ನೆಚ್ಚರನೇ, ನಿನ್ನ ವಿಷಯವಾದ ಈ ದೈವೋಕ್ತಿಯನ್ನು ಕೇಳು -


ನಾನು ನೋಡುತ್ತಿದ್ದ ಹಾಗೆ ಯಾವ ಕೊಂಬು ಮೊಳೆತು ಮೂರು ಕೊಂಬುಗಳನ್ನು ಬೀಳಿಸಿ, ತನ್ನಲ್ಲೆ ಕಣ್ಣುಳ್ಳದ್ದಾಗಿ ಬಡಾಯಿ ಕೊಚ್ಚಿಕೊಳ್ಳುವ ಬಾಯುಳ್ಳದ್ದಾಗಿ, ಮಿಕ್ಕ ಕೊಂಬುಗಳಿಗಿಂತ ಭಯಂಕರವಾಗಿ ಕಾಣಿಸುತ್ತಾ ಇತ್ತೋ, ಆ ಕೊಂಬಿನ ವಿಷಯವಾಗಿ ಸತ್ಯಾರ್ಥವನ್ನೂ ತಿಳಿದುಕೊಳ್ಳಬೇಕೆಂದು ವಿಚಾರಿಸಿದೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು