Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ದಾನಿಯೇಲ 12:9 - ಕನ್ನಡ ಸತ್ಯವೇದವು C.L. Bible (BSI)

9 ಅವನು, “ದಾನಿಯೇಲನೇ ಹೋಗು; ಈ ಮಾತುಗಳು ಅಂತ್ಯಕಾಲದವರೆಗೂ ಮುಚ್ಚಲ್ಪಟ್ಟು ಮುದ್ರಿತವಾಗಿವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

9 ಅವನು, “ದಾನಿಯೇಲನೇ, ಈ ಮಾತುಗಳು ಅಂತ್ಯಕಾಲದ ವರೆಗೆ ಮುಚ್ಚಲ್ಪಟ್ಟು ಮುದ್ರಿತವಾಗಿವೆ, ಹೋಗು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

9 ದಾನಿಯೇಲನೇ, ಈ ಮಾತುಗಳು ಅಂತ್ಯಕಾಲದವರೆಗೆ ಮುಚ್ಚಲ್ಪಟ್ಟು ಮುದ್ರಿತವಾಗಿವೆ, ಹೋಗು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

9 ಅದಕ್ಕೆ ಆತನು, “ದಾನಿಯೇಲನೇ, ನಿನ್ನ ಜೀವನ ಸಾಗಲಿ. ಈ ಸಂದೇಶವು ರಹಸ್ಯವಾದದ್ದು. ಅಂತ್ಯಕಾಲ ಬರುವವರೆಗೆ ಇದು ರಹಸ್ಯವಾಗಿ ಉಳಿಯುವದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

9 ಆಗ ಅವನು, “ದಾನಿಯೇಲನೇ, ನಿನ್ನ ದಾರಿಯಲ್ಲಿ ಹೋಗು, ಏಕೆಂದರೆ ಈ ಮಾತುಗಳು ಅಂತ್ಯಕಾಲದವರೆಗೂ ಮುಚ್ಚಿ, ಮುದ್ರಿತವಾಗಿವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ದಾನಿಯೇಲ 12:9
8 ತಿಳಿವುಗಳ ಹೋಲಿಕೆ  

“ದಾನಿಯೇಲನೇ, ನೀನು ಈ ಮಾತುಗಳನ್ನು ಮುಚ್ಚಿಡು; ಇವುಗಳನ್ನು ಬರೆಯುವ ಗ್ರಂಥಕ್ಕೆ ಮುದ್ರೆಹಾಕು; ಅಂತ್ಯಕಾಲದವರೆಗೆ ಮರೆಯಾಗಿರಲಿ. ಬಹುಜನರು ಅತ್ತಿತ್ತ ಅಲೆದಾಡುವರು (ಸತ್ಯಕ್ಕಾಗಿ). ಅಧರ್ಮ ಹೆಚ್ಚುತ್ತಿರುವುದು.”


ಕನಸಿನಲ್ಲಿ ತಿಳಿಸಲಾದ ಉದಯಾಸ್ತಮಾನಗಳ ವಿಷಯ ನಿಜವೇ ಸರಿ. ಆದರೆ ಆ ಕನಸು ಗುಟ್ಟಾಗಿರಲಿ. ಅದು ಬಹುದೂರದ ಕಾಲದ್ದು,” ಎಂದು ಹೇಳಿದನು.


ಏಳು ಗುಡುಗುಗಳು ನುಡಿದುದನ್ನು ಕೂಡಲೇ ನಾನು ಬರೆಯಬೇಕೆಂದಿದ್ದೆ. ಆಗ ಸ್ವರ್ಗದಿಂದ ಬಂದ ಒಂದು ಧ್ವನಿ, “ಆ ಏಳು ಗುಡುಗುಗಳು ನುಡಿದುದನ್ನು ರಹಸ್ಯವಾಗಿ ಇಡು. ಅವುಗಳನ್ನು ಬರೆಯಬೇಡ,” ಎಂದು ನನಗೆ ಆಜ್ಞಾಪಿಸಿತು.


ಈ ಕಾರಣ, ನಿನ್ನ ಕುರಿತ ದಿವ್ಯದರ್ಶನ ನಿಗೂಢ ಗ್ರಂಥವಾಕ್ಯವಾಗಿಬಿಟ್ಟಿದೆ. ಅದನ್ನು ಅಕ್ಷರಬಲ್ಲವನಿಗೆ, “ದಯಮಾಡಿ ಇದನ್ನು ಓದು,” ಎಂದು ಕೊಟ್ಟರೆ, ಅವನು : “ಇದು ನಿಗೂಢವಾಗಿದೆ, ಆಗುವುದಿಲ್ಲ,” ಎನ್ನುತ್ತಾನೆ.


ದಿವ್ಯಬೋಧನೆಯನ್ನು ಸುಭದ್ರವಾಗಿ ಇರಿಸು. ಅದನ್ನು ನನ್ನ ಶಿಷ್ಯರಿಗೆ ಉಪದೇಶಮಾಡಿ ಸುರಕ್ಷಿತವಾಗಿರಿಸು.


ಅಂತ್ಯಕಾಲದಲ್ಲಿ ನಿನ್ನ ಜನರಿಗೆ ಬರಲಿರುವ ಗತಿಯನ್ನು ನಿನಗೆ ತಿಳಿಸುವುದಕ್ಕೋಸ್ಕರ ಬಂದೆ. ಆ ಕಾಲದ ಸಂಗತಿಯನ್ನು ವ್ಯಕ್ತಪಡಿಸುವ ಇನ್ನೊಂದು ದರ್ಶನವಿದೆ,” ಎಂದು ಹೇಳಿದನು.


“ಅಂತ್ಯಕಾಲದಲ್ಲಿ ದಕ್ಷಿಣರಾಜನು ಉತ್ತರರಾಜನ ಮೇಲೆ ಬೀಳುವನು. ಆದರೆ ಉತ್ತರರಾಜನು ರಥಾಶ್ವಬಲಗಳಿಂದಲೂ ಬಹು ನಾವೆಗಳಿಂದಲೂ ಕೂಡಿದವನಾಗಿ ದಕ್ಷಿಣರಾಜನ ಮೇಲೆ ಧಾಳಿಮಾಡಿ ನಾಡುನಾಡುಗಳನ್ನು ನುಗ್ಗಿ, ಪ್ರವಾಹದಂತೆ ಹರಡಿಕೊಳ್ಳುವನು.


ನನಗೆ ಅದು ಕೇಳಿಸಿತ್ತಾದರೂ ಅರ್ಥವಾಗಲಿಲ್ಲ. ಆಗ ನಾನು, “ಎನ್ನೊಡೆಯಾ, ಈ ಕಾರ್ಯಗಳ ಪರಿಣಾಮವೇನು?” ಎಂದು ಪ್ರಶ್ನೆಮಾಡಿದೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು