Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ದಾನಿಯೇಲ 2:11 - ಕನ್ನಡ ಸತ್ಯವೇದವು C.L. Bible (BSI)

11 ರಾಜರು ಕೇಳುತ್ತಿರುವ ಸಂಗತಿ ಅತಿಕಷ್ಟವಾದುದು. ನರಮಾನವರ ನಡುವೆ ವಾಸಮಾಡದ ದೇವರುಗಳೇ ಹೊರತು ಇನ್ನಾರೂ ರಾಜರ ಸಮ್ಮುಖದಲ್ಲಿ ಇದನ್ನು ತಿಳಿಸಲಾರರು,” ಎಂದು ಉತ್ತರಕೊಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

11 ರಾಜನು ಕೇಳುವ ಸಂಗತಿಯು ಅತಿ ಕಷ್ಟವಾದದ್ದು. ನರಜನ್ಮದವರ ಮಧ್ಯೆ ವಾಸಿಸುವ ದೇವರುಗಳೇ ಹೊರತು ಇನ್ಯಾರೂ ರಾಜನ ಸಮ್ಮುಖದಲ್ಲಿ ಅದನ್ನು ತಿಳಿಸಲಾರರು” ಎಂದು ಉತ್ತರಕೊಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

11 ರಾಜನು ಕೇಳುವ ಸಂಗತಿಯು ಅತಿಕಷ್ಟವಾದದು; ನರಜನ್ಮದವರ ಮಧ್ಯೆ ವಾಸಿಸದ ದೇವರುಗಳೇ ಹೊರತು ಇನ್ನಾರೂ ರಾಜನ ಸಮ್ಮುಖದಲ್ಲಿ ತಿಳಿಸಲಾರರು ಎಂದು ಉತ್ತರಕೊಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

11 ಮಹಾಪ್ರಭುಗಳು ಕೇಳುವ ವಿಷಯ ಅತಿ ಕಠಿಣವಾದದ್ದು. ದೇವತೆಗಳು ಮಾತ್ರ ಅರಸನ ಕನಸನ್ನೂ ಅದರ ಅರ್ಥವನ್ನೂ ತಿಳಿಸಲು ಸಾಧ್ಯ. ಆದರೆ ದೇವತೆಗಳು ಮಾನವರೊಂದಿಗೆ ವಾಸಮಾಡುವುದಿಲ್ಲ” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

11 ಅರಸನು ಕೇಳುವ ಸಂಗತಿಯು ಕಷ್ಟಕರವಾದದ್ದು. ಮಾನವರ ಮಧ್ಯದಲ್ಲಿ ವಾಸಿಸದ ದೇವರುಗಳೇ ಹೊರತು, ಬೇರಾರೂ ಇದನ್ನು ಅರಸನ ಸನ್ನಿಧಿಯಲ್ಲಿ ತಿಳಿಸಲಾರರು.”

ಅಧ್ಯಾಯವನ್ನು ನೋಡಿ ನಕಲು ಮಾಡಿ




ದಾನಿಯೇಲ 2:11
25 ತಿಳಿವುಗಳ ಹೋಲಿಕೆ  

ನಿಮ್ಮ ತಂದೆಯ ಕಾಲದಲ್ಲಿ ಬುದ್ಧಿವಂತಿಕೆ, ತಿಳುವಳಿಕೆ, ದೇವರುಗಳಿಗೆ ಸಮಾನವಾದ ಜ್ಞಾನ ಅವನಲ್ಲಿ ಕಂಡುಬಂದುವು. ನಿಮ್ಮ ತಂದೆ ರಾಜ ನೆಬೂಕದ್ನೆಚ್ಚರನು, ಅವನನ್ನು ಜೋಯಿಸರಿಗೂ ಮಂತ್ರವಾದಿಗಳಿಗೂ ಪಂಡಿತರಿಗೂ ಶಾಕುನಿಕರಿಗೂ ಅಧ್ಯಕ್ಷನನ್ನಾಗಿ ನೇಮಿಸಿದ್ದರು.


ದೇವರ ಆಲಯಕ್ಕೂ ಕಲ್ಲಿನ ವಿಗ್ರಹಕ್ಕೂ ಎಲ್ಲಿಯ ಸಾಮ್ಯ? ನಾವಾದರೋ ಜೀವಂತ ದೇವರ ಮಂದಿರವಾಗಿದ್ದೇವೆ. ಇದನ್ನು ದೇವರೇ ಹೇಳಿದ್ದಾರೆ: “ನನ್ನ ಜನರಲ್ಲೇ ನಾ ಮನೆಮಾಡುವೆನು ಅವರ ನಡುವೆಯೇ ನಾ ತಿರುಗಾಡುವೆನು ಅವರಿಗೆ ನಾನೇ ದೇವರಾಗಿರುವೆನು ಅವರೆನಗೆ ಪ್ರಜೆಯಾಗಿರುವರು.”


ಆಗ ಯೇಸು, “ನನ್ನನ್ನು ಪ್ರೀತಿಸುವವನು ನನ್ನ ಮಾತನ್ನು ಕೈಗೊಂಡು ನಡೆಯುವನು. ಅವನನ್ನು ನನ್ನ ಪಿತನೂ ಪ್ರೀತಿಸುವರು ಮತ್ತು ನಾವಿಬ್ಬರೂ ಅವನ ಬಳಿ ಬಂದು ಅವನಲ್ಲಿ ನೆಲೆಸುವೆವು.


ಸತ್ಯಸ್ವರೂಪಿಯಾದ ಪವಿತ್ರಾತ್ಮನೇ ಈ ಪೋಷಕ. ಲೋಕವು ಇವರನ್ನು ಬರಮಾಡಿಕೊಳ್ಳದು. ಏಕೆಂದರೆ ಲೋಕ ಇವರನ್ನು ಕಾಣುವುದೂ ಇಲ್ಲ, ಅರಿತುಕೊಳ್ಳುವುದೂ ಇಲ್ಲ. ಆದರೆ ನೀವು ಇವರನ್ನು ಅರಿಯುವಿರಿ. ಕಾರಣ, ಇವರು ನಿಮ್ಮೊಂದಿಗೂ ನಿಮ್ಮಲ್ಲಿಯೂ ನೆಲಸಿರುವರು.


ಆ ದಿವ್ಯವಾಣಿ ಮನುಷ್ಯ ಆದರು. ಮನುಷ್ಯನಾಗಿ ನಮ್ಮೊಡನೆ ವಾಸಮಾಡಿದರು. ಅವರ ಮಹಿಮೆಯನ್ನು ನಾವು ನೋಡಿದೆವು, ಪಿತನಿಂದ ಪಡೆದ ಆ ಮಹಿಮೆ ಏಕೈಕ ಪುತ್ರನಿಗೆ ಮೀಸಲಾದ ಮಹಿಮೆಯೇ. ಎಂದೇ ಅವರು ವರಪ್ರಸಾದದಿಂದಲೂ ಸತ್ಯದಿಂದಲೂ ಪರಿಪೂರ್ಣರಾಗಿದ್ದರು.


ಯೇಸು ಅವರನ್ನು ನಿಟ್ಟಿಸಿ ನೋಡುತ್ತಾ, “ಮನುಷ್ಯರಿಗಿದು ಅಸಾಧ್ಯ; ಆದರೆ ದೇವರಿಗೆ ಎಲ್ಲವೂ ಸಾಧ್ಯ,” ಎಂದರು.


“ಪರಮ ಪವಿತ್ರನ, ಶಾಶ್ವತ ಲೋಕದ ನಿತ್ಯನಿವಾಸಿಯಾದ ಮಹೋನ್ನತನ ಮಾತಿದು : ಉನ್ನತವಾದ ಪವಿತ್ರಾಲಯದಲ್ಲಿ ವಾಸಿಸುವವನು ನಾನು; ಆದರೂ ಪಶ್ಚಾತ್ತಾಪಪಡುವ ದೀನಮನದೊಂದಿಗೆ ನಾನಿದ್ದೇನೆ. ದೀನನ ಆತ್ಮವನ್ನು ಹಾಗು ಪಶ್ಚಾತ್ತಾಪಪಡುವ ಮನಸ್ಸನ್ನು ಉಜ್ಜೀವಗೊಳಿಸುವವನಾಗಿದ್ದೇನೆ.


ತಮ್ಮ ಮಧ್ಯೆ ವಾಸವಾಗುವುದಕ್ಕಾಗಿಯೇ ತಮ್ಮನ್ನು ಈಜಿಪ್ಟಿನಿಂದ ಹೊರಗೆ ಬರಮಾಡಿದ ತಮ್ಮ ದೇವರಾದ ಸರ್ವೇಶ್ವರನು ನಾನೇ ಎಂದು ಅವರು ಅರಿತುಕೊಳ್ಳುವರು. ಹೌದು, ನಾನೇ ಅವರ ದೇವರಾದ ಸರ್ವೇಶ್ವರ ಸ್ವಾಮಿ.


ಈತನಿಗಿಂತ ಯೋಗ್ಯವಾದ ವ್ಯಕ್ತಿ ನಮಗೆ ಸಿಕ್ಕುವುದು ಸಾಧ್ಯವೆ?” ಎಂದು ಹೇಳಿ ಜೋಸೆಫನಿಗೆ, “ದೇವರೇ ನಿನಗೆ ಇದನ್ನೆಲ್ಲ ತಿಳಿಸಿರುವುದರಿಂದ ನಿನಗೆ ಸಮಾನವಾದ ಬುದ್ಧಿವಿವೇಕಗಳುಳ್ಳ ವ್ಯಕ್ತಿ ಯಾವನೂ ಇಲ್ಲ.


ಆಗ ಸಿಂಹಾಸನದ ಕಡೆಯಿಂದ ಬಂದ ಮಹಾಧ್ವನಿ ಇಂತೆಂದಿತು : ಇಗೋ ಮಾನವರ ಮಧ್ಯೆಯೇ ಇದೆ ದೇವಾಲಯ, ಆತನವರೊಡನೆ ವಾಸಿಸುವನು; ಅವರಾತನಿಗೆ ಪ್ರಜೆಗಳಾಗುವರು; ದೇವರೇ ಅವರುಗಳ ಜೊತೆಗಾರ; ಆತನಲ್ಲದೆ ಅವರಿಗಿಲ್ಲ ಬೇರಾವ ದೇವ.


ಆದರೆ ಜುದೇಯ ನಾಡು, ಜೆರುಸಲೇಮ್ ನಗರ ಜನಭರಿತವಾಗಿ ಇರುವುದು. ಸರ್ವೇಶ್ವರಸ್ವಾಮಿಯಾದ ನಾನು ಸಿಯೋನ್ ಪರ್ವತದಲ್ಲಿ ನೆಲೆಯಾಗಿರುವೆನು.”


ಇಗೋ, ನನ್ನನ್ನೂ ನನಗೆ ಸ್ವಾಮಿ ದಯಪಾಲಿಸಿರುವ ಮಕ್ಕಳನ್ನೂ ನೋಡು. ಸಿಯೋನ್ ಶಿಖರದಲ್ಲಿ ವಾಸವಾಗಿರುವ ಸೇನಾಧೀಶ್ವರಸ್ವಾಮಿಯೇ ಇಸ್ರಯೇಲರಿಗೆ ನೀಡುವ ಸೂಚನೆಗಳು ಹಾಗೂ ಜೀವಂತ ಸಂಕೇತಗಳು ನಾವೇ ಆಗಿದ್ದೇವೆ.


“ಎಂದೆಂದಿಗು ಇದೇ ನನ್ನ ನಿವಾಸ I ಇರುವೆನಿಲ್ಲೇ, ಇದು ನನ್ನ ಅಭಿಲಾಶ II


ಹೇ ದೇವಾ, ಹೇ ಪ್ರಭು, ನೀನೇರಿದೆ ಉನ್ನತ ಶಿಖರಕೆ I ಕರೆದೊಯ್ದೆ ಖೈದಿಗಳನೇಕರನು ನಿನ್ನ ನಿವಾಸಕೆ I ಸರಳರಿಂದಲೂ ದುರುಳರಿಂದಲೂ ಪಡೆದೆ ಕಪ್ಪಕಾಣಿಕೆ I ದೇವರಾದ ಪ್ರಭುವೇ, ಅಲ್ಲೇ ನೀ ವಾಸಿಸುವೆ II


“ದೇವರು ನಿಜವಾಗಿ ಮಾನವರೊಡನೆ ಭೂಲೋಕದಲ್ಲಿ ವಾಸಿಸುವರೋ? ಆಕಾಶವೂ ಉನ್ನತೋನ್ನತವಾದ ಆಕಾಶವೂ ನಿಮ್ಮ ವಾಸಕ್ಕೆ ಸಾಲವು; ಹೀಗಿರುವಲ್ಲಿ ನಾನು ಕಟ್ಟಿಸಿದ ಈ ಮಂದಿರವು ಹೇಗೆ ತಾನೆ ಸಾಕಾದೀತು?


“ದೇವರು ನಿಜವಾಗಿ ಭೂಲೋಕದಲ್ಲಿ ವಾಸಿಸುವರೋ? ಆಕಾಶವೂ, ಉನ್ನತೋನ್ನತ ಆದ ಆಕಾಶವೂ, ನಿಮ್ಮ ವಾಸಕ್ಕೆ ಸಾಲದು; ಹೀಗಿರುವಲ್ಲಿ ನಾನು ಕಟ್ಟಿಸಿದ ಈ ಮಂದಿರವು ಹೇಗೆ ತಾನೆ ಸಾಕಾದೀತು?


ನೀವು ವಾಸಮಾಡುವ ನಾಡನ್ನು ಅಪವಿತ್ರ ಮಾಡಬೇಡಿ. ಸರ್ವೇಶ್ವರನೆಂಬ ನಾನೇ ಇಸ್ರಯೇಲರ ನಡುವೆ ಆ ನಾಡಿನಲ್ಲಿ ವಾಸಿಸುತ್ತೇನೆ.”


ಆಗ ಆ ಮಾಟಗಾರರು, “ಇದು ದೇವರ ಕೆಲಸವೇ ಸರಿ,” ಎಂದು ಫರೋಹನಿಗೆ ತಿಳಿಸಿದರು. ಆದರೂ ಫರೋಹನ ಹೃದಯ ಕಲ್ಲಾಗಿತ್ತು. ಸರ್ವೇಶ್ವರ ಮುಂತಿಳಿಸಿದಂತೆಯೇ ಅವನು ಅವರ ಮಾತನ್ನು ಕೇಳದೆಹೋದನು.


ಬೆಳಿಗ್ಗೆ ಅವನ ಮನಸ್ಸು ಕಳವಳಗೊಂಡು ಇತ್ತು. ಈಜಿಪ್ಟ್ ದೇಶದ ಎಲ್ಲ ಜೋಯಿಸರನ್ನೂ ವಿದ್ವಾಂಸರನ್ನೂ ಬರಮಾಡಿದ. ಅವರಿಗೆ ತನ್ನ ಕನಸನ್ನು ವಿವರಿಸಿದ. ಅದರ ಅರ್ಥವನ್ನು ಅವನಿಗೆ ಹೇಳಬಲ್ಲವರು ಯಾರೂ ಸಿಕ್ಕಲಿಲ್ಲ.


ಪ್ರಯೋಗಿಸಿ ನೋಡು ನಿನ್ನ ಅಗಣಿತ ಮಂತ್ರತಂತ್ರಗಳನು ಬಾಲ್ಯಾರಭ್ಯ ನೀ ಕಲಿತ ಮಾಯಮಾಟಗಳನು ಪ್ರಾಯಶಃ ನಿನಗವು ಪ್ರಯೋಜನವಾದಾವು ಬಹುಶಃ ನಿನಗವು ಭಯಹುಟ್ಟಿಸಿಯಾವು.


“ನೆಬೂಕದ್ನೆಚ್ಚರನಾದ ನಾನು ನನ್ನ ಅರಮನೆಯಲ್ಲಿ ಸುಖವಾಗಿದ್ದೆ. ನನ್ನ ರಾಜಭವನದಲ್ಲಿ ನೆಮ್ಮದಿಯಿಂದ ಇದ್ದೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು