Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ದಾನಿಯೇಲ 2:14 - ಕನ್ನಡ ಸತ್ಯವೇದವು C.L. Bible (BSI)

14 ರಾಜನ ಮೈಗಾವಲಿನವರ ದಳವಾಯಿಯಾದ ಅರ್ಯೋಕನು ಬಾಬಿಲೋನಿನ ವಿದ್ವಾಂಸರ ಸಂಹಾರಕ್ಕಾಗಿ ಹೊರಟಾಗ ದಾನಿಯೇಲನು ಬುದ್ಧಿವಿವೇಕಗಳಿಂದ ಅವನ ಸಂಗಡ ಮಾತಾಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

14 ರಾಜನ ಮೈಗಾವಲಿನವರ ದಳವಾಯಿಯಾದ ಅರ್ಯೋಕನು ಬಾಬೆಲಿನ ವಿದ್ವಾಂಸರ ಸಂಹಾರಕ್ಕೆ ಹೊರಟಾಗ, ದಾನಿಯೇಲನು ಬುದ್ಧಿವಿವೇಕಗಳಿಂದ ಅವನ ಸಂಗಡ ಮಾತನಾಡಿ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

14 ರಾಜನ ಮೈಗಾವಲಿನವರ ದಳವಾಯಿಯಾದ ಅರ್ಯೋಕನು ಬಾಬೆಲಿನ ವಿದ್ವಾಂಸರ ಸಂಹಾರಕ್ಕೆ ಹೊರಟಾಗ ದಾನಿಯೇಲನು ಬುದ್ಧಿವಿವೇಕಗಳಿಂದ ಅವನ ಸಂಗಡ ಮಾತಾಡಿ -

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

14 ಅರ್ಯೋಕನು ಅರಸನ ಮೈಗಾವಲಿನವರ ದಳವಾಯಿಯಾಗಿದ್ದನು. ಅವನು ಬಾಬಿಲೋನಿನ ವಿದ್ವಾಂಸರನ್ನು ಕೊಲ್ಲಲು ಹೊರಟಿದ್ದನು. ಆದರೆ ದಾನಿಯೇಲನು ಅವನೊಂದಿಗೆ ಮಾತನಾಡಿದನು. ದಾನಿಯೇಲನು ಅವನ ಸಂಗಡ ವಿವೇಕ ಮತ್ತು ನಮ್ರತೆಯಿಂದ ಮಾತನಾಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

14 ಬಾಬಿಲೋನಿನ ಜ್ಞಾನಿಗಳನ್ನು ಕೊಲ್ಲಲು ಹೊರಟಿದ್ದ ಅರಸನ ಕಾವಲುಗಾರರ ಅಧಿಪತಿಯಾದ ಅರ್ಯೋಕನಿಗೆ ದಾನಿಯೇಲನು ಜ್ಞಾನದಿಂದಲೂ ಚಾತುರ್ಯದಿಂದಲೂ ಉತ್ತರಕೊಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ದಾನಿಯೇಲ 2:14
8 ತಿಳಿವುಗಳ ಹೋಲಿಕೆ  

ತರುವಾಯ ದಾನಿಯೇಲನು ಬಾಬಿಲೋನಿನ ವಿದ್ವಾಂಸರನ್ನು ಕೊಲ್ಲುವುದಕ್ಕೆ ರಾಜನು ನೇಮಿಸಿದ್ದ ಅರ್ಯೋಕನ ಬಳಿಗೆ ಹೋದನು. ಅವನಿಗೆ, “ಬಾಬಿಲೋನಿನ ವಿದ್ವಾಂಸರನ್ನು ಕೊಲ್ಲಬೇಡ. ನನ್ನನ್ನು ರಾಜನ ಸನ್ನಿಧಿಗೆ ಸೇರಿಸಿಬಿಡು, ನಾನು ಆ ಕನಸಿನ ಉದ್ದೇಶವನ್ನು ರಾಜನಿಗೆ ತಿಳಿಸುವೆನು,” ಎಂದು ಕೇಳಿಕೊಂಡನು.


ಅವನ ಜೊತೆಯಲ್ಲಿ ಬಂದಿದ್ದ ಬಾಬಿಲೋನಿಯದ ಸೈನ್ಯದವರು ಜೆರುಸಲೇಮಿನ ಸುತ್ತ ಗೋಡೆಗಳನ್ನೆಲ್ಲ ಕೆಡವಿದರು.


ಐದನೆಯ ತಿಂಗಳಿನ ಹತ್ತನೆಯ ದಿನ, ಅಂದರೆ ಬಾಬಿಲೋನಿನ ಅರಸ ನೆಬೂಕದ್ನೆಚ್ಚರನ ಆಳ್ವಿಕೆಯ ಹತ್ತೊಂಬತ್ತನೆಯ ವರ್ಷದಲ್ಲಿ, ಬಾಬಿಲೋನಿನ ಅರಸನ ಸೇವಕನೂ ರಕ್ಷಾದಳದ ಅಧಿಪತಿಯೂ ಆಗಿದ್ದ ನೆಬೂಜರದಾನ್ ಎಂಬುವನು ಜೆರುಸಲೇಮಿಗೆ ಬಂದನು.


ರಕ್ಷಾದಳದ ನಾಯಕನಾದ ನೆಬೂಜರದಾನನು ನಗರದಲ್ಲಿ ಉಳಿದಿದ್ದವರನ್ನು ಹಾಗು ಮೊದಲೇ ತನ್ನನ್ನು ಮರೆಹೊಕ್ಕಿದವರನ್ನು ಮತ್ತಿತರ ಕೆಲಸಗಾರರನ್ನೆಲ್ಲಾ ಬಾಬಿಲೋನಿಗೆ ಸೆರೆ ಒಯ್ದನು.


ಮಿದ್ಯಾನ್ಯರು ಜೋಸೆಫನನ್ನು ಈಜಿಪ್ಟ್ ದೇಶಕ್ಕೆ ತೆಗೆದುಕೊಂಡುಹೋಗಿ ಫರೋಹನ ಆಸ್ಥಾನದಲ್ಲಿದ್ದ ಪೋಟೀಫರನಿಗೆ ಮಾರಿದರು; ಇವನು, ದೊಡ್ಡ ಉದ್ಯೋಗಸ್ಥನೂ ಮೈಗಾವಲಿನವರ ದಳಪತಿಯೂ ಆಗಿದ್ದನು.


“ಈ ರಾಜಾಜ್ಞೆಯೇಕೆ ಇಷ್ಟು ತೀಕ್ಷ್ಣ?” ಎಂದು ಕೇಳಿದನು. ಅರ್ಯೋಕನು ನಡೆದ ಸಂಗತಿಯನ್ನು ದಾನಿಯೇಲನಿಗೆ ತಿಳಿಸಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು