Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ದಾನಿಯೇಲ 2:19 - ಕನ್ನಡ ಸತ್ಯವೇದವು C.L. Bible (BSI)

19 ಆ ರಾತ್ರಿಯೇ ಸ್ವಪ್ನದಲ್ಲಿ ಕನಸಿನ ಗುಟ್ಟು ದಾನಿಯೇಲನಿಗೆ ವ್ಯಕ್ತವಾಯಿತು. ಕೂಡಲೆ ಆತನು ಪರಲೋಕ ದೇವರನ್ನು ಹೀಗೆಂದು ಸ್ತುತಿಸಿದನು:

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

19 ಆಗ ಆ ರಹಸ್ಯವು ರಾತ್ರಿಯ ಸ್ವಪ್ನದಲ್ಲಿ ದಾನಿಯೇಲನಿಗೆ ಪ್ರಕಟವಾಯಿತು. ಕೂಡಲೆ ದಾನಿಯೇಲನು ಪರಲೋಕ ದೇವರನ್ನು ಹೀಗೆ ಸ್ತುತಿಸಿದನು,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

19 ಆಗ ಆ ರಹಸ್ಯವು ರಾತ್ರಿಯ ಸ್ವಪ್ನದಲ್ಲಿ ದಾನಿಯೇಲನಿಗೆ ವ್ಯಕ್ತವಾಯಿತು. ಕೂಡಲೆ ದಾನಿಯೇಲನು ಪರಲೋಕ ದೇವರನ್ನು ಹೀಗೆ ಸ್ತುತಿಸಿದನು -

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

19 ಅಂದು ರಾತ್ರಿ ದಾನಿಯೇಲನಿಗೆ ದೇವದರ್ಶನವಾಯಿತು. ಆಗ ದಾನಿಯೇಲನು ಪರಲೋಕದ ದೇವರನ್ನು ಹೀಗೆ ಸ್ತುತಿಸಿದನು:

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

19 ಆ ರಹಸ್ಯವು ದಾನಿಯೇಲನಿಗೆ ರಾತ್ರಿ ದರ್ಶನದಲ್ಲಿ ಪ್ರಕಟವಾಯಿತು. ದಾನಿಯೇಲನು ಪರಲೋಕದ ದೇವರನ್ನು ಸ್ತುತಿಸಿ,

ಅಧ್ಯಾಯವನ್ನು ನೋಡಿ ನಕಲು ಮಾಡಿ




ದಾನಿಯೇಲ 2:19
16 ತಿಳಿವುಗಳ ಹೋಲಿಕೆ  

ಅವರು ಸಮೀಪಿಸಿದಾಗ, “ನನ್ನ ಮಾತಿಗೆ ಕಿವಿಗೊಡಿ ನಿಮ್ಮಲ್ಲಿ ಪ್ರವಾದಿಯಿದ್ದರೆ ಅವನಿಗೆ ಕಾಣಿಸಿಕೊಳ್ಳುವೆ ಜ್ಞಾನದೃಷ್ಟಿಯಲ್ಲಿ ಇಲ್ಲವೆ ಅವನ ಸಂಗಡ ಮಾತಾಡುವೆ ಸ್ವಪ್ನದಲ್ಲಿ.


ತನ್ನ ಪರಿಚಾರಕರಾದ ಪ್ರವಾದಿಗಳಿಗೆ ತನ್ನ ಯೋಜನೆಯನ್ನು ತಿಳಿಸದೆ ಸ್ವಾಮಿ ಸರ್ವೇಶ್ವರ ಏನೂ ಮಾಡುವುದಿಲ್ಲ.


ಇದಾದ ಬಳಿಕ ಆ ರಾತ್ರಿ ಕನಸಿನಲ್ಲಿ ಕಾಣಿಸಿಕೊಂಡ ನಾಲ್ಕನೇ ಮೃಗ ಭಯಂಕರವಾಗಿತ್ತು. ಹೆದರಿಸುವಂಥದಾಗಿತ್ತು. ಅಧಿಕ ಬಲವುಳ್ಳದ್ದಾಗಿತ್ತು. ಅದಕ್ಕೆ ಕಬ್ಬಿಣದ ದೊಡ್ಡ ಹಲ್ಲುಗಳಿದ್ದವು. ಅದು ತನ್ನ ಬಲಿಯನ್ನು ತುಂಡುತುಂಡಾಗಿಸಿ ಕಬಳಿಸುತ್ತಿತ್ತು. ಮಿಕ್ಕದ್ದನ್ನು ಕಾಲುಗಳಿಂದ ತುಳಿಯುತ್ತಾ ಇತ್ತು. ಅದು ಮುಂಚಿನ ಮೃಗಗಳಿಗಿಂತ ವಿಲಕ್ಷಣವಾಗಿತ್ತು. ಅದಕ್ಕೆ ಹತ್ತು ಕೊಂಬುಗಳಿದ್ದವು.


ಪ್ರಭುವಿನ ಮೈತ್ರಿ, ಭಯಭಕುತಿಯುಳ್ಳವರಿಗೆ I ಅಂಥವರಿಗೆ ವ್ಯಕ್ತ, ಆತನ ಒಡಂಬಡಿಕೆ II


ಹೀಗಿರಲು ದೇವರು ಆ ನಾಲ್ಕುಮಂದಿ ಯುವಕರಿಗೆ ಸಕಲ ಶಾಸ್ತ್ರಗಳಲ್ಲೂ ವಿದ್ಯೆಗಳಲ್ಲೂ ಜ್ಞಾನ ವಿವೇಕಗಳನ್ನು ದಯಪಾಲಿಸಿದರು. ದಾನಿಯೇಲನು ಸಮಸ್ತ ಸ್ವಪ್ನಗಳನ್ನೂ ದಿವ್ಯದರ್ಶನಗಳನ್ನೂ ಅರ್ಥೈಸುವುದರಲ್ಲಿ ಪ್ರವೀಣನಾದನು.


ಜನರಿಗೆ ಗಾಢನಿದ್ರೆ ಹತ್ತುವ ಹೊತ್ತಿನಲಿ ರಾತ್ರಿಕಾಲದ ಸ್ವಪ್ನಯೋಚನೆಗಳ ಸುಳಿಯಲಿ


‘ಬೇಲ್ತೆಶಚ್ಚರನೇ, ಜೋಯಿಸರಲ್ಲಿ ಪ್ರಾಮುಖ್ಯನೇ, ಪರಿಶುದ್ಧ ದೇವರ ಆತ್ಮ ನಿನ್ನಲ್ಲಿ ನೆಲೆಯಾಗಿದೆಯೆಂದು ತಿಳಿದಿದ್ದೇನೆ. ಯಾವ ರಹಸ್ಯವೂ ನಿನಗೆ ಅಶೋಧ್ಯವಲ್ಲವೆಂದು ನನಗೆ ಗೊತ್ತು. ಆದುದರಿಂದ ನಾನು ಕಂಡ ಕನಸನ್ನೂ ಅದರ ಅರ್ಥವನ್ನೂ ನನಗೆ ತಿಳಿಸು.’


ಅಗಾಧ ವಿಷಯಗಳನ್ನೂ ನಿಗೂಢ ರಹಸ್ಯಗಳನ್ನೂ ತರುವನಾತ ಬಯಲಿಗೆ. ಕಗ್ಗತ್ತಲೆಯಲ್ಲಿ ಅಡಗಿರುವುದೂ ಆತನಿಗೆ ಗೋಚರ ಏಕೆಂದರೆ ಬೆಳಕು ಆತನಲ್ಲೇ ಸುಸ್ಥಿರ.


ಅವರು ಕೂಡ ಬಹಳ ಸಂತೋಷಪಟ್ಟು ದೇವರಿಗೆ ಧನ್ಯವಾದ ಸಲ್ಲಿಸಿದರು. ರೂಬೇನ್ ಹಾಗೂ ಗಾದ್ ಕುಲಗಳೊಡನೆ ಯುದ್ಧಮಾಡಿ ಅವರ ನಾಡನ್ನು ಹಾಳುಮಾಡಬೇಕೆಂಬ ಆಲೋಚನೆಯನ್ನು ತೊರೆದುಬಿಟ್ಟರು.


ಆ ಮರದ ಬುಡದ ಮೋಟನ್ನು ಉಳಿಸಿರೆಂದು ಅಪ್ಪಣೆಯಾಗಿದೆ. ಇದರ ತಾತ್ಪರ್ಯವೇನೆಂದರೆ: ಪರಲೋಕದ ದೇವರಿಗೆ ಸರ್ವಾಧಿಕಾರ ಉಂಟೆಂಬುದನ್ನು ತಾವು ಅರಿತುಕೊಂಡ ನಂತರ ನಿಮ್ಮ ರಾಜ್ಯ ನಿಮಗೆ ಸ್ಥಿರವಾಗಿ ದೊರಕುವುದು.


ಅದರ ಸಾರಾಂಶ ಇದು: ನಾನು ರಾತ್ರಿ ಕಂಡ ಕನಸಿನಲ್ಲಿ ನಾಲ್ಕು ದಿಕ್ಕುಗಳಿಂದಲೂ ಗಾಳಿ ಮಹಾಸಾಗರದ ಮೇಲೆ ರಭಸವಾಗಿ ಬೀಸಿ ಬಡಿಯುತ್ತಿತ್ತು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು