Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ದಾನಿಯೇಲ 2:2 - ಕನ್ನಡ ಸತ್ಯವೇದವು C.L. Bible (BSI)

2 ಆಗ ಆ ರಾಜನು ತನ್ನ ಕನಸಿನ ಅರ್ಥ ತಿಳಿಸಬೇಕೆಂದು ಜೋಯಿಸರನ್ನೂ ಮಂತ್ರವಾದಿಗಳನ್ನೂ ಮಾಟಗಾರರನ್ನೂ ಪಂಡಿತರನ್ನೂ ಕರೆಯಿಸಿದನು. ಅವರು ಆಸ್ಥಾನಕ್ಕೆ ಬಂದು ರಾಜನ ಮುಂದೆ ನಿಂತುಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

2 ಆಗ ರಾಜನು ತನ್ನ ಕನಸುಗಳ ಅಭಿಪ್ರಾಯವನ್ನು ತಿಳಿದುಕೊಳ್ಳಲು ಜೋಯಿಸರನ್ನೂ, ಮಂತ್ರವಾದಿಗಳನ್ನೂ, ಮಾಟಗಾರರನ್ನೂ, ಪಂಡಿತರನ್ನೂ ಕರೆಯಿಸಲು ಅವರು ಸನ್ನಿಧಿಗೆ ಬಂದು ರಾಜನ ಮುಂದೆ ನಿಂತುಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

2 ಅವನಿಗೆ ನಿದ್ರೆ ತಪ್ಪಿತು. ಆಗ ರಾಜನು ತನ್ನ ಕನಸುಗಳ ಅಭಿಪ್ರಾಯವನ್ನು ತಿಳಿಸಲೆಂದು ಜೋಯಿಸರನ್ನೂ ಮಂತ್ರವಾದಿಗಳನ್ನೂ ಮಾಟಗಾರರನ್ನೂ ಪಂಡಿತರನ್ನೂ ಕರೆಯಿಸಲು ಅವರು ಸನ್ನಿಧಿಗೆ ಬಂದು ರಾಜನ ಮುಂದೆ ನಿಂತುಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

2 ಅರಸನು ತನ್ನ ಎಲ್ಲಾ ಪಂಡಿತರನ್ನು ಕರೆಸಿದನು. ಅವರು ಮಾಟಮಂತ್ರಗಳಿಂದ, ಜ್ಯೋತಿಶ್ಶಾಸ್ತ್ರದ ಸಹಾಯದಿಂದ ಅರಸನ ಕನಸಿನ ಅರ್ಥವನ್ನೂ ಭವಿಷ್ಯದಲ್ಲಿ ಸಂಭವಿಸಲಿರುವುದನ್ನೂ ತಿಳಿದುಕೊಳ್ಳಲು ಪ್ರಯತ್ನ ಮಾಡಿದರು. ರಾಜನು ತಾನು ಕಂಡ ಕನಸಿನ ಅರ್ಥವನ್ನು ತಿಳಿಯಬಯಸಿದ್ದರಿಂದ ಅವರು ಒಳಗೆ ಬಂದು ಅರಸನ ಸಮ್ಮುಖದಲ್ಲಿ ನಿಂತುಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

2 ಆದ್ದರಿಂದ, ಅರಸನು ತನ್ನ ಕನಸನ್ನು ತಿಳಿಸಲು ಮಂತ್ರಗಾರರನ್ನೂ, ಜೋತಿಷ್ಯರನ್ನೂ, ಮಾಟಗಾರರನ್ನೂ, ಪಂಡಿತರನ್ನೂ ಕರೆಯಲು ಆಜ್ಞಾಪಿಸಿದನು. ಇವರೆಲ್ಲರೂ ಬಂದು ಅರಸನ ಮುಂದೆ ನಿಂತರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ದಾನಿಯೇಲ 2:2
16 ತಿಳಿವುಗಳ ಹೋಲಿಕೆ  

ಬಳಿಕ ರಾಜನು ಶಾಸ್ತ್ರೀಯ ವಿದ್ಯೆಯ ಎಲ್ಲ ವಿಷಯಗಳಲ್ಲಿ ಅವರನ್ನು ವಿಚಾರಮಾಡಿದಾಗ ಸಮಸ್ತರಾಜ್ಯದಲ್ಲಿನ ಎಲ್ಲ ಜೋಯಿಸರಿಗಿಂತಲೂ ಮಂತ್ರವಾದಿಗಳಿಗಿಂತಲೂ ಹತ್ತರಷ್ಟು ನಿಪುಣರಾಗಿ ಕಂಡುಬಂದರು.


ಆದ್ದರಿಂದ ಕನಸಿನ ಅರ್ಥವನ್ನು ನನಗೆ ತಿಳಿಸಬೇಕೆಂದು ಬಾಬಿಲೋನಿನ ವಿದ್ವಾಂಸರೆಲ್ಲರನ್ನು ಕರೆದುತರಬೇಕೆಂದು ಆಜ್ಞಾಪಿಸಿದೆ.


ಫರೋಹನು ಈಜಿಪ್ಟ್ ದೇಶದ ವಿದ್ವಾಂಸರನ್ನೂ ಮಂತ್ರಗಾರರನ್ನೂ ಕರೆಸಿದನು. ಆ ಮಾಟಗಾರರು ತಮ್ಮ ಮಂತ್ರತಂತ್ರಗಳಿಂದ ಅದೇ ರೀತಿಯಾಗಿ ಮಾಡಿದರು.


ಬೆಳಿಗ್ಗೆ ಅವನ ಮನಸ್ಸು ಕಳವಳಗೊಂಡು ಇತ್ತು. ಈಜಿಪ್ಟ್ ದೇಶದ ಎಲ್ಲ ಜೋಯಿಸರನ್ನೂ ವಿದ್ವಾಂಸರನ್ನೂ ಬರಮಾಡಿದ. ಅವರಿಗೆ ತನ್ನ ಕನಸನ್ನು ವಿವರಿಸಿದ. ಅದರ ಅರ್ಥವನ್ನು ಅವನಿಗೆ ಹೇಳಬಲ್ಲವರು ಯಾರೂ ಸಿಕ್ಕಲಿಲ್ಲ.


ಕೂಡಲೆ ರಾಜನು ಗಟ್ಟಿಯಾಗಿ ಕೂಗಿ ಮಂತ್ರವಾದಿ, ಪಂಡಿತ ಹಾಗು ಶಾಕುನಿಕರನ್ನು ಕರೆಯಿಸಿದನು. ಬಾಬಿಲೋನಿನ ಆ ವಿದ್ವಾಂಸರಿಗೆ, “ಯಾವನು ಈ ಬರಹವನ್ನು ಓದಿ ಇದರ ಅರ್ಥವನ್ನು ನನಗೆ ತಿಳಿಸುತ್ತಾನೋ ಅವನಿಗೆ ಕೆನ್ನೀಲಿ ರಾಜವಸ್ತ್ರವನ್ನು ತೊಡಿಸಿ, ಕೊರಳಿಗೆ ಚಿನ್ನದ ಹಾರವನ್ನು ಹಾಕಿಸಿ, ಅವನನ್ನು ರಾಜ್ಯದ ಮೂವರು ಮುಖ್ಯಾಧಿಕಾರಿಗಳಲ್ಲಿ ಒಬ್ಬನನ್ನಾಗಿ ನೇಮಿಸುವೆನು,” ಎಂದು ಹೇಳಿದನು.


ಆಗ ಆ ಪಂಡಿತರು ಸನ್ನಿಧಿಯ ಮುಂದೆ, “ರಾಜರು ಕೇಳುವ ಸಂಗತಿಯನ್ನು ತಿಳಿಸಬಲ್ಲವನು ಈ ಲೋಕದಲ್ಲಿ ಯಾವನೂ ಇಲ್ಲ. ಎಷ್ಟೆಷ್ಟೋ ಬಲಿಷ್ಠರಾದ , ಪ್ರಬಲರಾದ ಯಾವ ಅರಸರೂ ಜೋಯಿಸನನ್ನಾಗಲಿ, ಮಾಟಗಾರನನ್ನಾಗಲಿ, ಪಂಡಿತನನ್ನಾಗಲಿ, ಇಂಥ ಸಂಗತಿಯನ್ನು ಎಂದೂ ಕೇಳಿದ್ದಿಲ್ಲ.


ಈಜಿಪ್ಟಿನವರ ಚೈತನ್ಯ ಉಡುಗಿಹೋಗುವುದು. ಅವರ ಯೋಜನೆಗಳು ಭಂಗವಾಗುವುವು. ಜನರು ವಿಗ್ರಹಗಳನ್ನು, ಮಂತ್ರಗಾರರನ್ನು, ಪ್ರೇತವಿಚಾರಕರನ್ನು, ಕಣಿಹೇಳುವವರನ್ನು ಆಶ್ರಯಿಸುವರು.”


‘ಲೊಚಗುಟ್ಟುವ, ಪಿಟಿಪಿಟಿಗುಟ್ಟುವ, ಕಣಿಹೇಳುವವರ ಮತ್ತು ಪ್ರೇತವಿಚಾರಕರ ಸಲಹೆ ಕೇಳಿ’ ಎಂದು ಜನರು ನಿಮಗೆ ಹೇಳಿಯಾರು. ಆಗ, ‘ದೇವರನ್ನೇ ಏಕೆ ವಿಚಾರಿಸಬಾರದು? ಜೀವಿತರಿಗಾಗಿ ಸತ್ತವರನ್ನು ವಿಚಾರಿಸುವುದು ಸರಿಯಲ್ಲ’ ಎಂದು ಅಂಥವರಿಗೆ ನೀವು ಹೇಳಬೇಕು.


ವಿಧಿನಿಯಮಗಳನ್ನು ಬಲ್ಲ ಪಂಡಿತರೆಲ್ಲರ ಮುಂದೆ ಅರಮನೆಯ ಸಂಗತಿಗಳನ್ನು ಇಡುವ ಪದ್ಧತಿಯಿತ್ತು.


ಅವರು ಅಂಗದೋಷವಿಲ್ಲದವರಾಗಿರಬೇಕು. ಸುಂದರರು, ಸಮಸ್ತ ಶಾಸ್ತ್ರಜ್ಞರು, ಪಂಡಿತರು, ವಿದ್ಯಾನಿಪುಣರು, ರಾಜಾಲಯದಲ್ಲಿ ಸನ್ನಿಧಿಸೇವೆಮಾಡಲು ಸಮರ್ಥರೂ ಆಗಿರಬೇಕು. ಅವರಿಗೆ ಬಾಬಿಲೋನ್ ಪಂಡಿತರ ಭಾಷೆಯನ್ನೂ ಶಾಸ್ತ್ರಗಳನ್ನೂ ಕಲಿಸಬೇಕು,” ಎಂದು ಅಪ್ಪಣೆಕೊಟ್ಟನು.


ಅದಕ್ಕೆ ದಾನಿಯೇಲನು ಸನ್ನಿಧಿಯಲ್ಲಿ, “ರಾಜರು ಕೇಳುವ ರಹಸ್ಯವನ್ನು ವಿದ್ವಾಂಸರಾಗಲಿ, ಮಾಟಗಾರರಾಗಲಿ, ಜೋಯಿಸರಾಗಲಿ, ಶಕುನದವರಾಗಲಿ ಯಾರೂ ತಿಳಿಸಲಾರರು.


ಆಗ ಕೆಲವು ಮಂದಿ ಬಾಬಿಲೋನಿಯರು ಯೆಹೂದ್ಯರ ಮೇಲೆ ದೂರು ಹೊರಿಸಲು ರಾಜ ನೆಬೂಕದ್ನೆಚ್ಚರನ ಬಳಿಗೆ ಬಂದರು.


ಫಿಲಿಷ್ಟಿಯರು ಅವರ ಪೂಜಾರಿಗಳನ್ನೂ ಮಂತ್ರಗಾರರನ್ನೂ ಕರೆದು, “ಸರ್ವೇಶ್ವರನ ಮಂಜೂಷವನ್ನು ಏನು ಮಾಡಬೇಕು? ಅದನ್ನು ಮರಳಿ ಅದರ ಸ್ಥಳಕ್ಕೆ ಹೇಗೆ ಕಳುಹಿಸುವುದು? ನಮಗೆ ತಿಳಿಸಿ,” ಎಂದು ಕೇಳಿಕೊಂಡರು.


ದೇವರ ಸೂಚಕಕಾರ್ಯಗಳು ಎಷ್ಟೋ ಅತಿಶಯ! ಅವರ ಅದ್ಭುತಗಳು ಎಷ್ಟೋ ಅಪಾರ! ಅವರ ರಾಜ್ಯ ಶಾಶ್ವತ ಸಾಮ್ರಾಜ್ಯ; ಅವರ ಆಳ್ವಿಕೆ ತಲತಲಾಂತರಕ್ಕೂ ಸ್ಥಿರ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು