ದಾನಿಯೇಲ 2:21 - ಕನ್ನಡ ಸತ್ಯವೇದವು C.L. Bible (BSI)21 ಕಾಲಗಳು ಋತುಗಳು ಆತನ ಕೈಯಲ್ಲಿವೆ ರಾಜರನ್ನು ಕೆಳಕ್ಕಿಳಿಸುವವನು, ಮೇಲೆ ನಿಲ್ಲಿಸುವವನು ಆತನೆ. ಜ್ಞಾನಿಗಳ ಜ್ಞಾನ, ವಿವೇಕಿಗಳ ವಿವೇಕ ಆತನ ಕೊಡುಗೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201921 ಕಾಲ ಸಮಯಗಳನ್ನು ಮಾರ್ಪಡಿಸುತ್ತಾನೆ, ರಾಜರನ್ನು ಕಡೆಗಣಿಸುತ್ತಾನೆ, ನೆಲೆಸುವಂತೆ ಮಾಡುತ್ತಾನೆ; ಜ್ಞಾನಿಗಳ ಜ್ಞಾನವು, ವಿವೇಕಿಗಳ ವಿವೇಕವು ಆತನ ವರವೇ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)21 ಕಾಲಸಮಯಗಳನ್ನು ಮಾರ್ಪಡಿಸುತ್ತಾನೆ, ರಾಜರನ್ನು ತಳ್ಳುತ್ತಾನೆ, ನಿಲ್ಲಿಸುತ್ತಾನೆ; ಜ್ಞಾನಿಗಳ ಜ್ಞಾನವು, ವಿವೇಕಿಗಳ ವಿವೇಕವು ಆತನ ವರವೇ; ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್21 ಆತನು ಕಾಲಸಮಯಗಳನ್ನು ಮಾರ್ಪಡಿಸುತ್ತಾನೆ. ಆತನು ಅರಸರನ್ನು ಬದಲಾಯಿಸುತ್ತಾನೆ. ಆತನು ಅರಸರಿಗೆ ಪ್ರಭುತ್ವವನ್ನು ಕೊಡುವನು. ಆತನು ಅವರ ಪ್ರಭುತ್ವವನ್ನು ಕಿತ್ತುಕೊಳ್ಳುವನು! ಜನರಿಗೆ ಜ್ಞಾನವನ್ನು ಕೊಟ್ಟು ಜ್ಞಾನಿಗಳನ್ನಾಗಿ ಮಾಡುವವನು ಆತನೇ. ಜನರಿಗೆ ವಿವೇಕವನ್ನು ಕೊಟ್ಟು ವಿವೇಕಿಗಳನ್ನಾಗಿ ಮಾಡುವವನು ಆತನೇ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ21 ಅವರು ಕಾಲವನ್ನೂ, ಸಮಯವನ್ನೂ ಬದಲಾಯಿಸುತ್ತಾ ಅವರು ಅರಸರನ್ನು ಕಡೆಗಣಿಸುತ್ತಾರೆ ಮತ್ತು ಇತರರನ್ನು ಮೇಲಕ್ಕೆತ್ತುತ್ತಾರೆ. ಜ್ಞಾನಿಗಳಿಗೆ ಜ್ಞಾನವನ್ನೂ, ಬುದ್ಧಿವಂತರಿಗೆ ತಿಳುವಳಿಕೆಯನ್ನೂ ಕೊಡುವರು. ಅಧ್ಯಾಯವನ್ನು ನೋಡಿ |