Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ದಾನಿಯೇಲ 2:23 - ಕನ್ನಡ ಸತ್ಯವೇದವು C.L. Bible (BSI)

23 ನನ್ನ ಪಿತೃಗಳ ದೇವಾ, ಮಾಡುವೆ ನಿನ್ನ ಗುಣಗಾನ, ನಿನಗೆ ನನ್ನ ಧನ್ಯವಾದ. ಏಕೆಂದರೆ ನೀನೇ ನನಗೆ ಜ್ಞಾನಶಕ್ತಿಗಳನ್ನು ದಯಪಾಲಿಸಿದಾತ. ನಾವು ಬೇಡಿದ್ದನ್ನು ನನಗೆ ತೋರ್ಪಡಿಸಿದಾತ ನೀನೇ ಹೌದು, ರಾಜ ಬಯಸಿದ ಗುಟ್ಟನ್ನು ನಮಗೆ ವ್ಯಕ್ತಪಡಿಸಿದಾತ ನೀನೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

23 ನನ್ನ ಪೂರ್ವಿಕರ ದೇವರೇ, ನಿನ್ನನ್ನು ಸ್ತುತಿಸುತ್ತೇನೆ, ಕೊಂಡಾಡುತ್ತೇನೆ, ನೀನು ನನಗೆ ಜ್ಞಾನತ್ರಾಣಗಳನ್ನು ದಯಪಾಲಿಸಿ ನಾವು ಬೇಡಿದ್ದನ್ನು ನನಗೆ ತೋರ್ಪಡಿಸಿದ್ದಿಯಲ್ಲಾ; ಹೌದು, ರಾಜನ ರಹಸ್ಯವನ್ನು ನಮಗೆ ಪ್ರಕಟಪಡಿಸಿರುವೆ” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

23 ನನ್ನ ಪಿತೃಗಳ ದೇವರೇ, ನಿನ್ನನ್ನು ಸ್ತುತಿಸುತ್ತೇನೆ, ಕೊಂಡಾಡುತ್ತೇನೆ, ನೀನು ನನಗೆ ಜ್ಞಾನತ್ರಾಣಗಳನ್ನು ದಯಪಾಲಿಸಿ ನಾವು ಬೇಡಿದ್ದನ್ನು ನನಗೆ ತೋರ್ಪಡಿಸಿದಿಯಲ್ಲಾ; ಹೌದು, ರಾಜನ ರಹಸ್ಯವನ್ನು ನಮಗೆ ವ್ಯಕ್ತಗೊಳಿಸಿದಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

23 ನನ್ನ ಪೂರ್ವಿಕರ ದೇವರೇ, ನಿನ್ನನ್ನು ಕೊಂಡಾಡಿ ಸ್ತುತಿಸುತ್ತೇನೆ. ನೀನು ನನಗೆ ಜ್ಞಾನವನ್ನೂ ಸಾಮರ್ಥ್ಯವನ್ನೂ ದಯಪಾಲಿಸಿದೆ. ನಾನು ಕೇಳಿದ್ದನ್ನು ಅನುಗ್ರಹಿಸಿದೆ. ಅರಸನ ಕನಸಿನ ಬಗ್ಗೆ ತಿಳಿಸಿದೆ.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

23 ನನ್ನ ಪಿತೃಗಳ ದೇವರೇ, ನಾನು ನಿಮ್ಮನ್ನು ಕೊಂಡಾಡಿ, ನಿಮಗೆ ಕೃತಜ್ಞತೆ ಸಲ್ಲಿಸುತ್ತೇನೆ. ಏಕೆಂದರೆ ನೀವು ನನಗೆ ಜ್ಞಾನವನ್ನೂ, ಬಲವನ್ನೂ ಕೊಟ್ಟು; ನಾವು ನಿನ್ನಿಂದ ಅಪೇಕ್ಷಿಸಿಕೊಂಡದ್ದನ್ನು ನಮಗೆ ತಿಳಿಯಪಡಿಸಿದ್ದೀರಿ; ನೀವು ಈಗ ನಮಗೆ ಅರಸನ ಕನಸನ್ನು ತಿಳಿಯಪಡಿಸಿದ್ದೀರಿ.”

ಅಧ್ಯಾಯವನ್ನು ನೋಡಿ ನಕಲು ಮಾಡಿ




ದಾನಿಯೇಲ 2:23
33 ತಿಳಿವುಗಳ ಹೋಲಿಕೆ  

“ನಾವು ಬಾಬಿಲೋನಿನ ಇತರ ವಿದ್ವಾಂಸರೊಂದಿಗೆ ನಾಶವಾಗದಂತೆ ಪರಲೋಕ ದೇವರು ಈ ರಹಸ್ಯದ ವಿಷಯವಾಗಿ ಕೃಪೆತೋರುವಂತೆ ಬೇಡಿಕೊಳ್ಳೋಣ,” ಎಂದು ಹೇಳಿದನು.


ದೇವರು ಮೋಶೆಗೆ ಮತ್ತೆ ಇಂತೆಂದರು: “ನೀನು ಇಸ್ರಯೇಲರಿಗೆ, ‘ನಿಮ್ಮ ಪೂರ್ವಜರಾದ ಅಬ್ರಹಾಮ, ಇಸಾಕ ಹಾಗು ಯಕೋಬರ ದೇವರಾಗಿರುವ ಸರ್ವೇಶ್ವರ ನನ್ನನ್ನು ನಿಮ್ಮ ಬಳಿಗೆ ಕಳುಹಿಸಿದ್ದಾರೆ’ ಎಂದು ಹೇಳು. ಇದು ಸದಾಕಾಲಕ್ಕೂ ನನ್ನ ಹೆಸರು. ಈ ಹೆಸರಿನಿಂದಲೆ ತಲತಲಾಂತರಕ್ಕೂ ನನ್ನನ್ನು ಸ್ಮರಿಸಬೇಕು.


ಅದೇ ಗಳಿಗೆಯಲ್ಲಿ ಯೇಸುಸ್ವಾಮಿ ಪವಿತ್ರಾತ್ಮರಿಂದ ಹರ್ಷಾವೇಶಗೊಂಡು, “ಪಿತನೇ, ಭೂಸ್ವರ್ಗಗಳ ಒಡೆಯನೇ, ಈ ವಿಷಯಗಳನ್ನು ಜ್ಞಾನಿಗಳಿಗೂ ಮೇಧಾವಿಗಳಿಗೂ ಮರೆಮಾಡಿ, ಮಕ್ಕಳಂಥವರಿಗೆ ನೀವು ಶ್ರುತಪಡಿಸಿದ್ದೀರಿ; ಇದಕ್ಕಾಗಿ ನಿಮ್ಮನ್ನು ವಂದಿಸುತ್ತೇನೆ. ಹೌದು ಪಿತನೇ, ಇದೇ ನಿಮ್ಮ ಸುಪ್ರೀತ ಸಂಕಲ್ಪ.


ಆ ಸಮಯದಲ್ಲಿ ಯೇಸುಸ್ವಾಮಿ, “ಪಿತನೇ, ಪರಲೋಕ ಭೂಲೋಕಗಳ ಒಡೆಯನೇ, ಜ್ಞಾನಿಗಳಿಗೂ ಮೇಧಾವಿಗಳಿಗೂ ಈ ವಿಷಯಗಳನ್ನು ಮರೆಮಾಡಿ ಮಕ್ಕಳಂಥವರಿಗೆ ನೀವು ಶ್ರುತಪಡಿಸಿದ್ದೀರಿ; ಇದಕ್ಕಾಗಿ ನಿಮ್ಮನ್ನು ವಂದಿಸುತ್ತೇನೆ.


ತನ್ನ ಪರಿಚಾರಕರಾದ ಪ್ರವಾದಿಗಳಿಗೆ ತನ್ನ ಯೋಜನೆಯನ್ನು ತಿಳಿಸದೆ ಸ್ವಾಮಿ ಸರ್ವೇಶ್ವರ ಏನೂ ಮಾಡುವುದಿಲ್ಲ.


ಹೀಗಿರಲು ದೇವರು ಆ ನಾಲ್ಕುಮಂದಿ ಯುವಕರಿಗೆ ಸಕಲ ಶಾಸ್ತ್ರಗಳಲ್ಲೂ ವಿದ್ಯೆಗಳಲ್ಲೂ ಜ್ಞಾನ ವಿವೇಕಗಳನ್ನು ದಯಪಾಲಿಸಿದರು. ದಾನಿಯೇಲನು ಸಮಸ್ತ ಸ್ವಪ್ನಗಳನ್ನೂ ದಿವ್ಯದರ್ಶನಗಳನ್ನೂ ಅರ್ಥೈಸುವುದರಲ್ಲಿ ಪ್ರವೀಣನಾದನು.


ಆ ದಿನದಂದು ಹಾಡುವುದು ಜನತೆ ಹೀಗೆಂದು : “ಹೇ ಸರ್ವೇಶ್ವರಾ, ನಿನಗೆನ್ನ ವಂದನ; ನಿನಗಿತ್ತು ಎನ್ನ ಮೇಲೆ ಕೋಪ ಮನ. ಆದರೆ ಅದೀಗ ಆಗಿದೆ ಶಮನ, ಬಂದಿತೆನ್ನ ಮನಕೆ ಸಾಂತ್ವನ.


ದೇವರಿಗೆ ಧನ್ಯವಾದವೆ ನಿನ್ನ ಬಲಿಯರ್ಪಣೆಯಾಗಿರಲಿ I ಪರಾತ್ಪರನಿಗೆ ಮಾಡಿದ ಹರಕೆಗಳು ಸಮರ್ಪಿತವಾಗಲಿ II


ಪ್ರಭುವಿನ ಮೈತ್ರಿ, ಭಯಭಕುತಿಯುಳ್ಳವರಿಗೆ I ಅಂಥವರಿಗೆ ವ್ಯಕ್ತ, ಆತನ ಒಡಂಬಡಿಕೆ II


ಆಗ ಸಭಾಪ್ರಮುಖರಲ್ಲಿ ಒಬ್ಬರು ನನಗೆ, “ದುಃಖಿಸಬೇಡ, ಇಗೋ, ಯೂದಕುಲದ ಸಿಂಹವೂ ದಾವೀದನ ವಂಶಜರೂ ಆದ ಒಬ್ಬರು ಜಯಗಳಿಸಿದ್ದಾರೆ. ಅವರು ಆ ಏಳು ಮುದ್ರೆಗಳನ್ನು ಒಡೆದು ಈ ಸುರುಳಿಯನ್ನು ಬಿಚ್ಚಬಲ್ಲರು", ಎಂದು ಹೇಳಿದರು.


ದೇವರು ಯೇಸುಕ್ರಿಸ್ತರಿಗಿತ್ತ ಪ್ರಕಟನೆ ಇದು. ಅತಿ ಶೀಘ್ರದಲ್ಲಿಯೇ ಸಂಭವಿಸಲಿರುವ ಘಟನೆಗಳನ್ನು ತಮ್ಮ ದಾಸರಿಗೆ ತಿಳಿಯಪಡಿಸುವುದಕ್ಕಾಗಿ ಕ್ರಿಸ್ತಯೇಸುವಿಗೆ ಈ ಪ್ರಕಟನೆಯನ್ನು ದೇವರು ದಯಪಾಲಿಸಿದರು. ಕ್ರಿಸ್ತಯೇಸು ತಮ್ಮ ದೂತನನ್ನು ಕಳುಹಿಸಿ ತಮ್ಮ ದಾಸನಾದ ಯೊವಾನ್ನನಿಗೆ ಇವುಗಳನ್ನು ಪ್ರಕಟಿಸಿದರು.


ಆಗ ಕಲ್ಲನ್ನು ತೆಗೆದುಹಾಕಲಾಯಿತು. ಯೇಸು ಕಣ್ಣೆತ್ತಿ ಮೇಲಕ್ಕೆ ನೋಡಿ, “ಪಿತನೇ , ನನ್ನ ಪ್ರಾರ್ಥನೆಗೆ ನೀವು ಕಿವಿಗೊಡುತ್ತೀರಿ; ಆದುದರಿಂದ ನಾನು ನಿಮಗೆ ಕೃತಜ್ಞತೆಯನ್ನು ಸಲ್ಲಿಸುತ್ತೇನೆ.


ಯುದ್ಧಾಯುಧಗಳಿಗಿಂತ ಜ್ಞಾನವೇ ಉತ್ತಮ; ಆದರೆ ಒಬ್ಬನೇ ಒಬ್ಬ ಪಾಪಿ ಸಾಕು ಪುಣ್ಯಕೋಟೆಯನ್ನು ಹಾಳುಮಾಡಲು!


ಹತ್ತು ಅಧಿಕಾರಿಗಳಿಂದ ಪಟ್ಟಣಕ್ಕೆ ಉಂಟಾಗುವ ದೃಢತೆಗಿಂತ ಜ್ಞಾನಿಗೆ ಜ್ಞಾನದಿಂದ ದೊರಕುವ ದೃಢತೆ ಹೆಚ್ಚು.


ಬಲವಂತನಿಗಿಂತ ಬುದ್ಧಿವಂತ ಶಕ್ತಿಶಾಲಿ; ಶೂರನಿಗಿಂತ ಜ್ಞಾನಿಯೇ ಬಲಶಾಲಿ.


ಜ್ಞಾನಿ ಹಿಡಿಯಬಲ್ಲನು ಬಲಿಷ್ಠರ ಪಟ್ಟಣವನ್ನು ಕೆಡವಬಲ್ಲನು ಅವರ ಬಲವಾದ ಕೋಟೆಯನ್ನು.


ಸದಾಲೋಚನೆ, ಸುಜ್ಞಾನ, ವಿವೇಕ ನನ್ನಲ್ಲಿವೆ; ಎಂತಲೇ ಶಕ್ತಿಸಾಮರ್ಥ್ಯ ಹೊಂದಿರುವೆ.


“ಸರ್ವೇಶ್ವರಾ, ನಮ್ಮ ಪಿತೃಗಳ ದೇವರೇ, ಪರಲೋಕದಲ್ಲಿ ದೇವರಾಗಿ ಇರುವವರು ನೀವಲ್ಲವೇ? ನೀವು ಜನಾಂಗಗಳ ಎಲ್ಲ ರಾಜ್ಯಗಳನ್ನೂ ಆಳುತ್ತಿದ್ದೀರಿ. ನಿಮ್ಮ ಹಸ್ತದಲ್ಲಿ ಬಲಪರಾಕ್ರಮಗಳಿವೆ; ನಿಮ್ಮೆದುರಿನಲ್ಲಿ ಯಾರೂ ನಿಲ್ಲಲಾರರು.


ಹೇ, ದೇವಾ, ಸಲ್ಲಿಸುವೆವು ಕೃತಜ್ಞತೆ ನಿಮಗೆ ಹಾಡುವೆವು ಕೀರ್ತನೆ ನಿಮ್ಮ ನಾಮ ಪ್ರತಿಭೆಗೆ!


ಅನಂತರ ದಾವೀದನು ನೆರೆದ ಸಭೆಯ ಮುಂದೆ ಸರ್ವೇಶ್ವರನನ್ನು ಹೀಗೆ ಸ್ತುತಿಸಿದನು:


ಸಂಧ್ಯಾನೈವೇದ್ಯದ ಹೊತ್ತಿಗೆ, ಪ್ರವಾದಿ ಎಲೀಯನು ಪೀಠದ ಹತ್ತಿರ ಬಂದು, “ಅಬ್ರಹಾಮ್, ಇಸಾಕ್, ಇಸ್ರಯೇಲರ ದೇವರೇ, ಸರ್ವೇಶ್ವರಾ, ನೀವೊಬ್ಬರೇ ಇಸ್ರಯೇಲರ ದೇವರಾಗಿರುತ್ತೀರಿ ಎಂಬುದನ್ನು, ನಾನು ನಿನ್ನ ದಾಸನಾಗಿರುತ್ತೇನೆಂಬುದನ್ನು ಹಾಗು ಇದನ್ನೆಲ್ಲಾ ನಿಮ್ಮ ಅಪ್ಪಣೆಯ ಮೇರೆಗೆ ಮಾಡಿದೆನೆಂಬುದನ್ನು ಈ ದಿನ ತೋರಿಸಿಕೊಡಿ.


ನಮ್ಮ ದೇವರಾದ ಸರ್ವೇಶ್ವರ ನಮ್ಮ ಪೂರ್ವಜರೊಂದಿಗೆ ಇದ್ದ ಹಾಗೆ ನಮ್ಮೊಂದಿಗೂ ಇರಲಿ! ಅವರು ನಮ್ಮನ್ನು ಕೈಬಿಡದಿರಲಿ, ತಳ್ಳದಿರಲಿ;


ಆಗ ಸರ್ವೇಶ್ವರ ತಮ್ಮೊಳಗೆ ಇಂತೆಂದುಕೊಂಡರು: “ನಾನು ಮಾಡಬೇಕು ಎಂದಿರುವ ಕಾರ್ಯವನ್ನು ಅಬ್ರಹಾಮನಿಂದ ಮರೆಮಾಡುವುದು ಸರಿಯಲ್ಲ,


ನಾನಿನ್ನು ನಿಮ್ಮನ್ನು ದಾಸರೆಂದು ಕರೆಯುವುದಿಲ್ಲ. ಧಣಿಯ ಕೆಲಸಕಾರ್ಯಗಳು ದಾಸನಿಗೆ ತಿಳಿಯವು. ನಾನಾದರೋ ಪಿತನಿಂದ ಕೇಳಿಸಿಕೊಂಡದ್ದನ್ನೆಲ್ಲಾ ನಿಮಗೆ ತಿಳಿಸಿದ್ದೇನೆ. ಈ ಕಾರಣ ನಿಮ್ಮನ್ನು ಗೆಳೆಯರೆಂದು ಕರೆದಿದ್ದೇನೆ.


ಇದನ್ನು ನೋಡಿದ ನಾನು, ಶಕ್ತಿಗಿಂತ ಜ್ಞಾನವೇ ಶ್ರೇಷ್ಠ; ಆದರೆ ಜನರು ಆ ಬಡವನ ಜ್ಞಾನವನ್ನು ತಾತ್ಸಾರ ಮಾಡುತ್ತಾರೆ, ಅವನ ಮಾತುಗಳನ್ನು ಗಮನಿಸುವುದಿಲ್ಲ, ಎಂದುಕೊಂಡೆ.


ನನ್ನ ತಂದೆಯ ದೇವರು, ಅಬ್ರಹಾಮನ ದೇವರು, ಇಸಾಕನು ಭಯಭಕ್ತಿಯಿಂದ ಸೇವಿಸಿದ ದೇವರು ಆಗಿರುವಂಥವರು ನನ್ನ ಕಡೆ ಇಲ್ಲದೆ ಹೋಗಿದ್ದರೆ, ನಿಶ್ಚಯವಾಗಿ ನೀವು ನನ್ನನ್ನು ಬರಿಗೈಯಾಗಿ ಕಳುಹಿಸುತ್ತಿದ್ದಿರಿ. ದೇವರು ನನ್ನ ಕಷ್ಟದುಃಖವನ್ನೂ ನಾನು ಪಟ್ಟ ಪ್ರಯಾಸವನ್ನೂ ಗಮನಿಸಿದ್ದಾರೆ. ಆದ್ದರಿಂದಲೇ ನಿನ್ನೆಯ ರಾತ್ರಿ ನಿಮಗೆ ಎಚ್ಚರಿಕೆ ನೀಡಿದ್ದಾರೆ,” ಎಂದನು.


ಆತನ ಮನದಾಸೆಯನು ನೀ ಪೂರೈಸಿದೆ I ಆತನಧರ ಬಯಕೆಯನು ಅನುಗ್ರಹಿಸಿದೆ II


ಕೋರಿದನಾತನು ಜೀವಮಾನಕಾಲವನು I ನೀನಿತ್ತೆ ಯುಗಯುಗಾಂತರದಾಯುಷ್ಯವನು II


“ನನ್ನನ್ನು ಬೇಡಿಕೊ, ನಾನು ನಿನಗೆ ಸದುತ್ತರವನ್ನು ದಯಪಾಲಿಸುವೆನು. ನಿನಗೆ ತಿಳಿಯದ ಮಹತ್ತಾದ ಗೂಢಾರ್ಥಗಳನ್ನು ಗೋಚರಪಡಿಸುವೆನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು