Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ದಾನಿಯೇಲ 2:25 - ಕನ್ನಡ ಸತ್ಯವೇದವು C.L. Bible (BSI)

25 ಕೂಡಲೆ ಅರ್ಯೋಕನು ದಾನಿಯೇಲನನ್ನು ರಾಜನ ಸನ್ನಿಧಿಗೆ ಬೇಗಬೇಗನೆ ಕರೆದುಕೊಂಡು ಬಂದನು. “ರಾಜರೇ, ಆ ಕನಸಿನ ಉದ್ದೇಶವನ್ನು ನಿಮಗೆ ತಿಳಿಸಬಲ್ಲ ಒಬ್ಬನು ನನಗೆ ಸಿಕ್ಕಿದ್ದಾನೆ. ಅವನು ಜುದೇಯದಿಂದ ಸೆರೆಯಾಳಾಗಿ ತಂದವರಲ್ಲಿ ಒಬ್ಬನಾಗಿದ್ದಾನೆ,” ಎಂದು ಅರಿಕೆಮಾಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

25 ಕೂಡಲೆ ಅರ್ಯೋಕನು ದಾನಿಯೇಲನನ್ನು ರಾಜನ ಬಳಿಗೆ ಶೀಘ್ರವಾಗಿ ಕರೆದುಕೊಂಡು ಹೋಗಿ, “ರಾಜನೇ, ಕನಸಿನ ಅಭಿಪ್ರಾಯವನ್ನು ನಿನಗೆ ತಿಳಿಸಬಲ್ಲವನೊಬ್ಬನು ಯೆಹೂದದಿಂದ ಸೆರೆಯಾಗಿ ತಂದವರಲ್ಲಿ ನನಗೆ ಸಿಕ್ಕಿದ್ದಾನೆ” ಎಂದು ಅರಿಕೆಮಾಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

25 ಕೂಡಲೆ ಅರ್ಯೋಕನು ದಾನಿಯೇಲನನ್ನು ಸನ್ನಿಧಿಗೆ ತ್ವರೆಯಾಗಿ ಕರೆದುಕೊಂಡು ಹೋಗಿ - ರಾಜನೇ, ಕನಸಿನ ಅಭಿಪ್ರಾಯವನ್ನು ನಿನಗೆ ತಿಳಿಸಬಲ್ಲವನೊಬ್ಬನು ಯೆಹೂದದಿಂದ ಸೆರೆಯಾಗಿ ತಂದವರಲ್ಲಿ ನನಗೆ ಸಿಕ್ಕಿದ್ದಾನೆ ಎಂದು ಅರಿಕೆಮಾಡಲು

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

25 ಕೂಡಲೇ ಅರ್ಯೋಕನು ದಾನಿಯೇಲನನ್ನು ಅರಸನ ಹತ್ತಿರ ಕರೆದುಕೊಂಡು ಹೋದನು. ಅರ್ಯೊಕನು ಅರಸನಿಗೆ, “ಯೆಹೂದದಿಂದ ಸೆರೆಯಾಳಾಗಿ ತಂದವರಲ್ಲಿ ಅರಸನ ಕನಸನ್ನು ಮತ್ತು ಅದರ ಅರ್ಥವನ್ನು ಹೇಳಬಲ್ಲ ಒಬ್ಬನನ್ನು ನಾನು ಕಂಡುಹಿಡಿದಿದ್ದೇನೆ. ಅವನು ಅರಸನ ಕನಸನ್ನೂ ಅದರ ಅರ್ಥವನ್ನೂ ತಿಳಿಸುತ್ತಾನೆ” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

25 ಅರ್ಯೋಕನು ದಾನಿಯೇಲನನ್ನು ತ್ವರೆಯಾಗಿ ಅರಸನ ಮುಂದೆ ಕರೆದುಕೊಂಡು ಹೋಗಿ, ಆತನಿಗೆ, “ಯೆಹೂದ್ಯರ ಸೆರೆಯವರಲ್ಲಿ ನನಗೆ ಒಬ್ಬ ಮನುಷ್ಯನು ಸಿಕ್ಕಿದ್ದಾನೆ. ಅವನು ಅರಸನಿಗೆ ಅವನ ಕನಸಿನ ಅರ್ಥವನ್ನು ತಿಳಿಸುತ್ತಾನೆ,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ದಾನಿಯೇಲ 2:25
8 ತಿಳಿವುಗಳ ಹೋಲಿಕೆ  

ಆಗ ಅವರು ರಾಜಸನ್ನಿಧಿಯಲ್ಲಿ, “ರಾಜರೇ, ಜುದೇಯದಿಂದ ಸೆರೆಯಾಳುಗಳಾಗಿ ತಂದವರಲ್ಲಿ ಒಬ್ಬನಾದ ಆ ದಾನಿಯೇಲನು ನಿಮ್ಮನ್ನಾಗಲಿ, ನಿಮ್ಮ ಹಸ್ತಾಕ್ಷರದ ರುಜುವಿರುವ ಶಾಸನವನ್ನಾಗಲಿ ಮಾನ್ಯಮಾಡುತ್ತಿಲ್ಲ.“ ಬದಲಿಗೆ ದಿನಕ್ಕೆ ಮೂರಾವರ್ತಿ ಪ್ರಾರ್ಥನೆ ಮಾಡುತ್ತಿದ್ದಾನೆ,” ಎಂದು ದೂರಿತ್ತರು.


ಅಂತೆಯೇ, ದಾನಿಯೇಲನನ್ನು ರಾಜ ಸನ್ನಿಧಿಗೆ ಬರಮಾಡಲಾಯಿತು. ರಾಜನು ಅವನಿಗೆ: “ರಾಜನಾದ ನನ್ನ ತಂದೆ ಜುದೇಯದಿಂದ ಖೈದಿಯಾಗಿ ತಂದು ಸೆರೆಮಾಡಿದ ಯೆಹೂದ್ಯರಲ್ಲಿ ದಾನಿಯೇಲ್ ಎಂಬುವನು ನೀನೋ?


ಹೀಗೆ ಆರಿಸಿಕೊಂಡ ಯುವಕರಲ್ಲಿ ದಾನಿಯೇಲನು, ಹನನ್ಯನು, ಮಿಶಾಯೇಲನು, ಅಜರ್ಯನು ಎಂಬ ಯೆಹೂದ್ಯರು ಸೇರಿದ್ದರು.


ನಿನ್ನ ಕೈಗೆ ಸಿಕ್ಕಿದ ಕೆಲಸವನ್ನೆಲ್ಲ ಪೂರ್ಣಶಕ್ತಿಯಿಂದ ಮಾಡು. ಏಕೆಂದರೆ ನೀನು ಹೋಗಲಿಕ್ಕಿರುವ ಪಾತಾಳದಲ್ಲಿ ಯಾವ ಕೆಲಸವೂ ಯೋಜನೆಯೂ ತಿಳುವಳಿಕೆಯೂ ಜ್ಞಾನವೂ ಇರುವುದಿಲ್ಲ.


ಮರಣಕ್ಕೆ ಒಯ್ಯಲ್ಪಟ್ಟವನನ್ನು ಬಿಡಿಸಲು ಯತ್ನಿಸು; ಕೊಲೆಗೆ ಗುರಿಯಾದವನನ್ನು ತಪ್ಪಿಸಲು ಯತ್ನಿಸು.


ಸೆರೆಯಿಂದ ಹಿಂತಿರುಗಿ ಬಂದ ಯೆಹೂದ ಜನಾಂಗದವರ ಪಟ್ಟಿ: ಬಾಬಿಲೋನಿನ ಅರಸ ನೆಬೂಕದ್ನೆಚ್ಚರನಿಂದ ಸೆರೆಗೆ ಒಯ್ಯಲ್ಪಟ್ಟವರಲ್ಲಿ ಜೆರುಸಲೇಮಿಗೂ ಜುದೇಯ ಪ್ರಾಂತ್ಯದ ಸ್ವಂತ ಪಟ್ಟಣಗಳಿಗೂ ಹಿಂದಿರುಗಿದವರು ಇವರು: ಅ ಇವರ ನಾಯಕರಲ್ಲಿ


ಇದನ್ನು ಕೇಳಿದ ಫರೋಹನು ಜೋಸೆಫನನ್ನು ಕರೆತರುವಂತೆ ಆಳುಗಳನ್ನು ಕಳಿಸಿದ. ಅವರು ಬಂದು ಅವನನ್ನು ಸೆರೆಯಿಂದ ತ್ವರೆಯಾಗಿ ಬಿಡುಗಡೆ ಮಾಡಿದರು. ಜೋಸೆಫನು ಕ್ಷೌರಮಾಡಿಕೊಂಡು, ಬಟ್ಟೆ ಬದಲಾಯಿಸಿಕೊಂಡು ಫರೋಹನ ಸನ್ನಿಧಿಯಲ್ಲಿ ಹಾಜರಾದ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು