ದಾನಿಯೇಲ 2:26 - ಕನ್ನಡ ಸತ್ಯವೇದವು C.L. Bible (BSI)26 ರಾಜನು ಬೇಲ್ತೆಶಚ್ಚರನೆಂದು ಹೆಸರು ಪಡೆದಿದ್ದ ದಾನಿಯೇಲನನ್ನು ನೋಡಿ, “ನಾನು ಕಂಡ ಕನಸನ್ನೂ ಅದರ ಅರ್ಥವನ್ನೂ ತಿಳಿಸಬಲ್ಲೆಯಾ?” ಎಂದು ವಿಚಾರಿಸಿದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201926 ರಾಜನು ಬೇಲ್ತೆಶಚ್ಚರನೆಂಬ ಅಡ್ಡಹೆಸರಿನ ದಾನಿಯೇಲನನ್ನು, “ನಾನು ಕಂಡ ಕನಸನ್ನೂ, ಅದರ ಅರ್ಥವನ್ನೂ ನನಗೆ ತಿಳಿಸಬಲ್ಲೆಯಾ?” ಎಂದು ಕೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)26 ರಾಜನು ಬೇಲ್ತೆಶಚ್ಚರನೆಂಬ ಅಡ್ಡ ಹೆಸರಿನ ದಾನಿಯೇಲನನ್ನು - ನಾನು ಕಂಡ ಕನಸನ್ನೂ ಅದರ ಅರ್ಥವನ್ನೂ ನನಗೆ ತಿಳಿಸಬಲ್ಲೆಯಾ ಎಂದು ಕೇಳಿದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್26 ಅರಸನು ದಾನಿಯೇಲನಿಗೆ (ಬೇಲ್ತೆಶಚ್ಚರನಿಗೆ), “ನೀನು ನನ್ನ ಕನಸನ್ನೂ ಅದರ ಅರ್ಥವನ್ನೂ ಹೇಳಬಲ್ಲೆಯಾ?” ಎಂದು ಕೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ26 ಅರಸನು ಬೇಲ್ತೆಶಚ್ಚರನೆಂಬ ದಾನಿಯೇಲನನ್ನು ಕುರಿತು, “ನಾನು ಕಂಡ ಕನಸನ್ನೂ, ಅದರ ಅರ್ಥವನ್ನೂ ನನಗೆ ತಿಳಿಸುವ ಸಾಮರ್ಥ್ಯವು ನಿನಗಿದೆಯೋ?” ಎಂದನು. ಅಧ್ಯಾಯವನ್ನು ನೋಡಿ |
ಹೌದು, ‘ಬೇಲ್ತೆಶಚ್ಚರ’ನೆಂಬ ಹೆಸರನ್ನು ರಾಜನಿಂದ ಹೊಂದಿದ ಆ ದಾನಿಯೇಲನು ಪರಮ ಬುದ್ಧಿವಂತ, ಜ್ಞಾನಿ, ವಿವೇಕಿ, ಕನಸುಗಳ ಅರ್ಥವನ್ನು ತಿಳಿಸುವ ಜಾಣತನ, ಒಗಟು ಬಿಡಿಸುವ ಚಮತ್ಕಾರ, ಗುಂಜುಗಂಟು ಬಿಚ್ಚುವ ಚಾತುರ್ಯ ಅವನಲ್ಲಿ ತೋರಿಬಂದವು. ಆದ್ದರಿಂದಲೇ ಅವನನ್ನು ಅಧ್ಯಕ್ಷನನ್ನಾಗಿ ನೇಮಿಸಲಾಯಿತು. ದಾನಿಯೇಲನನ್ನು ಈಗಲೇ ಕರೆಯಿಸಿರಿ. ಆತ ಬರಹದ ಅರ್ಥವನ್ನು ವಿವರಿಸುವನು,” ಎಂದಳು.