Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ದಾನಿಯೇಲ 2:30 - ಕನ್ನಡ ಸತ್ಯವೇದವು C.L. Bible (BSI)

30 ಆ ಗುಟ್ಟನ್ನು ನನಗೂ ವ್ಯಕ್ತಪಡಿಸಿದ್ದಾರೆ. ನಾನು ಎಲ್ಲ ಜೀವಂತರಿಗಿಂತ ಹೆಚ್ಚು ಬುದ್ಧಿಯುಳ್ಳವನು ಎಂದೇನೂ ಅಲ್ಲ. ಆ ಕನಸಿನ ಉದ್ದೇಶ ರಾಜರಾದ ತಮಗೆ ಗೋಚರವಾಗಿ ನಿಮ್ಮ ಮನದಾಲೋಚನೆಗಳು ನಿಮಗೆ ಅರ್ಥವಾಗಲಿ ಎಂದು ನನಗೂ ವ್ಯಕ್ತಪಡಿಸಲಾಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

30 ನಾನೇ ಎಲ್ಲಾ ಮನುಷ್ಯರಿಗಿಂತ ಹೆಚ್ಚು ಬುದ್ಧಿವಂತನಲ್ಲ, ಕನಸಿನ ಅಭಿಪ್ರಾಯವು ರಾಜನಿಗೆ ಗೋಚರವಾಗಿ ನಿನ್ನ ಮನಸ್ಸಿನ ಯೋಚನೆಯ ವಿಷಯವು ನಿನಗೆ ತಿಳಿದು ಬರಲಿ ಎಂದು ಈ ರಹಸ್ಯವು ನನಗೂ ಪ್ರಕಟವಾಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

30 ನಾನೇ ಎಲ್ಲಾ ಜೀವಂತರಿಗಿಂತ ಹೆಚ್ಚು ಬುದ್ಧಿಯುಳ್ಳವನೆಂತಲ್ಲ, ಕನಸಿನ ಅಭಿಪ್ರಾಯವು ರಾಜನಿಗೆ ಗೋಚರವಾಗಿ ನಿನ್ನ ಮನಸ್ಸಿನ ಯೋಚನೆಯ ವಿಷಯವು ನಿನಗೆ ತಿಳಿದುಬರಲಿ ಎಂದು ಈ ರಹಸ್ಯವು ನನಗೆ ವ್ಯಕ್ತವಾಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

30 ದೇವರು ರಹಸ್ಯವನ್ನು ನನಗೂ ತಿಳಿಸಿದ್ದಾನೆ! ದೇವರು ನನಗೆ ತಿಳಿಸಿರುವುದು ನಾನು ಬೇರೆಯವರಿಗಿಂತ ಹೆಚ್ಚು ಬುದ್ಧಿವಂತನೆಂದಲ್ಲ. ಆದರೆ ಅರಸನಾದ ನಿನಗೆ ಇದರ ಅರ್ಥ ತಿಳಿಯಲಿ ಎಂಬ ಉದ್ದೇಶದಿಂದ ದೇವರು ನನಗೆ ತಿಳಿಸಿದ್ದಾನೆ. ಇದರಿಂದ ನಿನ್ನ ಮನಸ್ಸಿನ ಯೋಚನೆಗಳ ವಿಷಯ ನಿನಗೆ ತಿಳಿದುಬರುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

30 ಆದರೆ ನಾನೇ ಎಲ್ಲಾ ಜೀವಂತರಿಗಿಂತ ಹೆಚ್ಚು ಬುದ್ಧಿಯುಳ್ಳವನೆಂದಲ್ಲದಿದ್ದರೂ, ಕನಸಿನ ಅರ್ಥವು ಅರಸನಾದ ನಿನಗೆ ಗೋಚರವಾಗಿ, ನಿನ್ನ ಹೃದಯದ ಯೋಚನೆಗಳು ನಿನಗೆ ತಿಳಿದುಬರಲೆಂದು ನನಗೆ ಪ್ರಕಟವಾಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ದಾನಿಯೇಲ 2:30
16 ತಿಳಿವುಗಳ ಹೋಲಿಕೆ  

ಜೋಸೆಫನು, “ನನ್ನಲ್ಲಿ ಅಂಥ ಸಾಮರ್ಥ್ಯವೇನೂ ಇಲ್ಲ; ಆದರೆ ದೇವರು, ಫರೋಹ ಆದ ನಿಮಗೆ ತೃಪ್ತಿಕರವಾದ ಉತ್ತರಕೊಡಬಲ್ಲರು,” ಎಂದು ಹೇಳಿದ.


ಇದನ್ನು ನೋಡಿ ಪೇತ್ರನು ಇಂತೆಂದನು: “ಇಸ್ರಯೇಲಿನ ಜನರೇ, ಈ ಘಟನೆಯಿಂದ ನೀವೇಕೆ ಆಶ್ಚರ್ಯಚಕಿತರಾಗಿದ್ದೀರಿ? ನಮ್ಮನ್ನೇಕೆ ಎವೆಯಿಕ್ಕದೆ ನೋಡುತ್ತಿದ್ದೀರಿ? ನಮ್ಮ ಸ್ವಂತ ಶಕ್ತಿಯಿಂದಾಗಲೀ ಭಕ್ತಿಯಿಂದಾಗಲೀ, ಈ ಮನುಷ್ಯನು ನಡೆಯುವಂತೆ ನಾವು ಮಾಡಿದೆವೆಂದು ಭಾವಿಸುತ್ತೀರೋ?


ಇದೆಲ್ಲವೂ ನಿಮ್ಮ ಒಳಿತಿಗಾಗಿಯೇ. ಹೀಗೆ ಅನೇಕರಲ್ಲಿ ದೇವರ ವರಪ್ರಸಾದವು ಉಕ್ಕಿ ಹರಿಯುವುದು; ಅವರಲ್ಲಿ ಕೃತಜ್ಞತಾಭಾವನೆಯನ್ನು ಹೆಚ್ಚಿಸುವುದು; ಇದರಿಂದಾಗಿ ದೇವರ ಮಹಿಮೆ ಬೆಳಗುವುದು.


ದೇವರನ್ನು ಪ್ರೀತಿಸುವವರಿಗೂ ದೇವರ ಸಂಕಲ್ಪದ ಮೇರೆಗೆ ಕರೆಹೊಂದಿದವರಿಗೂ ಸಕಲವೂ ಹಿತಕರವಾಗಿ ಪರಿಣಮಿಸುವುದು.ಇದನ್ನು ನಾವು ಚೆನ್ನಾಗಿ ಅರಿತಿದ್ದೇವೆ.


ಸರ್ವೇಶ್ವರ ಆ ದಿನಗಳ ಅವಧಿಯನ್ನು ಕಡಿಮೆಮಾಡದಿದ್ದರೆ ಯಾವ ಮಾನವನೂ ಉಳಿಯುವಂತಿಲ್ಲ. ಆದರೆ ತಾವು ಆರಿಸಿಕೊಂಡವರ ಪ್ರಯುಕ್ತ ಆ ದಿನಗಳ ಅವಧಿಯನ್ನು ಅವರು ಕಡಿಮೆಮಾಡಿದ್ದಾರೆ.


ಆ ದಿನಗಳ ಅವಧಿಯನ್ನು ಕಡಿಮೆಮಾಡದೆ ಇದ್ದಲ್ಲಿ ಯಾವ ಮಾನವನೂ ಉಳಿಯುವಂತಿಲ್ಲ. ಆದರೆ ದೇವರು ಆರಿಸಿಕೊಂಡವರ ಪ್ರಯುಕ್ತ ಆ ದಿನಗಳನ್ನು ಕಡಿಮೆಮಾಡಲಾಗುವುದು.


ಬೆಟ್ಟಗುಡ್ಡಗಳನ್ನು ರೂಪಿಸಿದಾತ ದೇವನೇ ಗಾಳಿಬಿರುಗಾಳಿಯನು ಸೃಜಿಸಿದಾತ ಆತನೇ ತನ್ನಾಲೋಚನೆಯನ್ನು ನರರಿಗರುಹಿಸಿದವ ದೇವನೇ ಹಗಲನ್ನು ಇರುಳನ್ನಾಗಿಸುವವನು ಆತನೇ ಪೊಡವಿಯ ಉನ್ನತ ಸ್ಥಾನದಲ್ಲಿ ನಡೆದಾಡುವವನಾತನೇ ಆತನ ನಾಮಧೇಯ - ಸೇನಾಧೀಶ್ವರ ದೇವರಾದ ಸರ್ವೇಶ್ವರನೇ.


ದಾನಿಯೇಲನ ಕೋರಿಕೆಯ ಪ್ರಕಾರ ರಾಜನು ಶದ್ರಕ್, ಮೇಶಕ್ ಮತ್ತು ಅಬೇದ್‍ನೆಗೋ ಎಂಬುವರನ್ನು ಬಾಬಿಲೋನಿನ ಪ್ರಾಂತ್ಯಾಧಿಪತಿಗಳನ್ನಾಗಿ ನೇಮಿಸಿದನು. ದಾನಿಯೇಲನು ಮಾತ್ರ ಅರಮನೆಯಲ್ಲೇ ಕಾರ್ಯನಿರತನಾದನು.


ಹೀಗಿರಲು ದೇವರು ಆ ನಾಲ್ಕುಮಂದಿ ಯುವಕರಿಗೆ ಸಕಲ ಶಾಸ್ತ್ರಗಳಲ್ಲೂ ವಿದ್ಯೆಗಳಲ್ಲೂ ಜ್ಞಾನ ವಿವೇಕಗಳನ್ನು ದಯಪಾಲಿಸಿದರು. ದಾನಿಯೇಲನು ಸಮಸ್ತ ಸ್ವಪ್ನಗಳನ್ನೂ ದಿವ್ಯದರ್ಶನಗಳನ್ನೂ ಅರ್ಥೈಸುವುದರಲ್ಲಿ ಪ್ರವೀಣನಾದನು.


ನನ್ನ ಸೇವಕನಾದ ಯಕೋಬನ ನಿಮಿತ್ತ ನಾನು ಆರಿಸಿಕೊಂಡ ಇಸ್ರಯೇಲಿನ ನಿಮಿತ್ತ ನನ್ನ ಅರಿವೇ ಇಲ್ಲದ ನಿನ್ನನು ಹೆಸರು ಹಿಡಿದು ಕರೆದಿರುವೆನು, ಬಿರುದಿತ್ತು ಸನ್ಮಾನಿಸಿರುವೆನು.


ನಾ ಕೂರುವುದೂ ಏಳುವುದೂ ನಿನಗೆ ಗೊತ್ತಿದೆ I ನನ್ನಾಲೋಚನೆ ದೂರದಿಂದಲೇ ನಿನಗೆ ತಿಳಿದಿದೆ II


ದಾನಿಯೇಲನ ವಿವರಕ್ಕೆ ಉತ್ತರವಾಗಿ, “ನೀನು ಈ ಗುಟ್ಟನ್ನು ಬಯಲಿಗೆ ತರಲು ಸಮರ್ಥನಾದ ಕಾರಣ ನಿಮ್ಮ ದೇವರು ದೇವಾಧಿದೇವರು, ರಾಜಾಧಿರಾಜರು, ಗುಟ್ಟನ್ನು ಬಟ್ಟಬಯಲಾಗಿಸುವವರು! ಇದು ಸತ್ಯ,” ಎಂದು ಹೇಳಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು