ದಾನಿಯೇಲ 2:37 - ಕನ್ನಡ ಸತ್ಯವೇದವು C.L. Bible (BSI)37 ನೀವು ರಾಜಾಧಿರಾಜರು, ಪರಲೋಕ ದೇವರು ನಿಮಗೆ ರಾಜ್ಯಬಲ, ಪರಾಕ್ರಮ ಹಾಗು ವೈಭವಗಳನ್ನು ದಯಪಾಲಿಸಿದ್ದಾರೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201937 ಅರಸನೇ, ನೀನು ರಾಜಾಧಿರಾಜ, ಪರಲೋಕ ದೇವರು ನಿನಗೆ ರಾಜ್ಯಬಲ, ಪರಾಕ್ರಮ, ವೈಭವಗಳನ್ನು ದಯಪಾಲಿಸಿದ್ದಾನೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)37 ಅರಸೇ, ನೀನು ರಾಜಾಧಿರಾಜ, ಪರಲೋಕದೇವರು ನಿನಗೆ ರಾಜ್ಯಬಲಪರಾಕ್ರಮ ವೈಭವಗಳನ್ನು ದಯಪಾಲಿಸಿದ್ದಾನೆ; ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್37 ಅರಸನೇ, ನೀನು ರಾಜಾಧಿರಾಜ. ಪರಲೋಕದ ದೇವರು ನಿನಗೆ ರಾಜ್ಯ, ಬಲ, ಪರಾಕ್ರಮ ಮತ್ತು ವೈಭವಗಳನ್ನು ದಯಪಾಲಿಸಿದ್ದಾನೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ37 ಅರಸನೇ, ನೀನು ಅರಸರಿಗೆ ಅರಸನಾಗಿರುವೆ. ಏಕೆಂದರೆ ಪರಲೋಕದ ದೇವರು ನಿನಗೆ ರಾಜ್ಯವನ್ನೂ, ಬಲವನ್ನೂ, ಅಧಿಕಾರವನ್ನೂ, ಘನವನ್ನೂ ಕೊಟ್ಟಿದ್ದಾರೆ. ಅಧ್ಯಾಯವನ್ನು ನೋಡಿ |
"ಪರ್ಷಿಯದ ರಾಜ ಸೈರಸ್ ಎಂಬ ನನ್ನ ಮಾತಿಗೆ ಕಿವಿಗೊಡಿ; ಪರಲೋಕ ದೇವರಾದ ಸರ್ವೇಶ್ವರ ನನಗೆ ಭೂಲೋಕದ ಎಲ್ಲಾ ರಾಜ್ಯಗಳನ್ನು ಒಪ್ಪಿಸಿದ್ದಾರೆ; ತಮಗಾಗಿ ಜುದೇಯ ನಾಡಿನ ಜೆರುಸಲೇಮಿನಲ್ಲಿ ಆಲಯವನ್ನು ಕಟ್ಟಬೇಕೆಂದು ಆಜ್ಞಾಪಿಸಿದ್ದಾರೆ; ನಿಮ್ಮಲ್ಲಿ ಯಾರು ಅವರ ಪ್ರಜೆಗಳಾಗಿರುತ್ತಾರೋ ಅವರು ಸ್ವಂತನಾಡಿಗೆ ಹೋಗಬಹುದು; ಅವರ ದೇವರಾದ ಸರ್ವೇಶ್ವರ ಅವರೊಂದಿಗೆ ಇರುತ್ತಾರೆ!” ಎಂದು ಪ್ರಕಟಿಸಿದನು.
ಇದನ್ನು ಕೇಳಿದ ಬೇಲ್ತೆಶಚ್ಚರನೆಂದು ಹೆಸರುಗೊಂಡಿದ್ದ ದಾನಿಯೇಲನು ತುಸು ಹೊತ್ತು ಸ್ತಬ್ದನಾದ. ಅವನ ಬುದ್ಧಿಗೆ ಹೊಳೆದ ವಿಷಯ ಅವನಲ್ಲಿ ದಿಗಿಲನ್ನು ಉಂಟುಮಾಡಿತು. ರಾಜನು ಇದನ್ನು ಅರಿತು, “ಬೇಲ್ತೆಶಚ್ಚರನೇ, ನನ್ನ ಕನಸಾಗಲಿ, ಅದರ ಅರ್ಥವಾಗಲಿ ನಿನ್ನನ್ನು ಹೆದರಿಸದಿರಲಿ,” ಎಂದು ಧೈರ್ಯಹೇಳಿದ. ಆಗ ಬೇಲ್ತೆಶಚ್ಚರನು: "ನನ್ನೊಡೆಯಾ, ಈ ಕನಸು ನಿನ್ನ ವೈರಿಗಳಿಗೆ ಬರಲಿ! ಅದರ ಅರ್ಥ ನಿನ್ನ ವಿರೋಧಿಗಳಿಗೆ ತಗಲಲಿ!