Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ದಾನಿಯೇಲ 2:38 - ಕನ್ನಡ ಸತ್ಯವೇದವು C.L. Bible (BSI)

38 ನರಮಾನವರು ವಾಸಿಸುವ ಸಕಲ ಪ್ರಾಂತ್ಯಗಳಲ್ಲಿ ಆಕಾಶಪಕ್ಷಿಗಳನ್ನೂ ಭೂಜಂತುಗಳನ್ನೂ ನಿಮ್ಮ ಕೈಗೆ ಒಪ್ಪಿಸಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

38 ನರಜಾತಿಯವರು ವಾಸಿಸುವ ಸಕಲ ಪ್ರಾಂತ್ಯಗಳಲ್ಲಿ ಆಕಾಶಪಕ್ಷಿಗಳನ್ನೂ, ಭೂಜಂತುಗಳನ್ನೂ ನಿನ್ನ ಕೈಗೆ ಒಪ್ಪಿಸಿ ನೀನು ಅವುಗಳನ್ನೆಲ್ಲಾ ಆಳುವಂತೆ ಮಾಡಿದ್ದಾನೆ; ನೀನೇ ಆ ಬಂಗಾರದ ತಲೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

38 ನರಜಾತಿಯವರು ವಾಸಿಸುವ ಸಕಲ ಪ್ರಾಂತಗಳಲ್ಲಿ ಆಕಾಶಪಕ್ಷಿಗಳನ್ನೂ ಭೂಜಂತುಗಳನ್ನೂ ನಿನ್ನ ಕೈಗೆ ಒಪ್ಪಿಸಿ ನೀನು ಅವುಗಳನ್ನೆಲ್ಲಾ ಆಳುವಂತೆ ಮಾಡಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

38 ದೇವರು ನಿನಗೆ ಅಧಿಕಾರವನ್ನು ಕೊಟ್ಟಿದ್ದಾನೆ. ಆ ದೇವರು ನಿನ್ನನ್ನು ಎಲ್ಲೆಡೆಯಲ್ಲಿರುವ ಜನರ ಮೇಲೆ, ಕಾಡುಪ್ರಾಣಿಗಳ ಮೇಲೆ, ಪಕ್ಷಿಗಳ ಮೇಲೆ ಆಳುವಂತೆ ಮಾಡಿದ್ದಾನೆ. ಅರಸನಾದ ನೆಬೂಕದ್ನೆಚ್ಚರನೇ, ನೀನೇ ಆ ಪ್ರತಿಮೆಯ ಬಂಗಾರದ ತಲೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

38 ಜನರನ್ನು, ಭೂಮಿಯ ಮೃಗಗಳನ್ನು, ಆಕಾಶದ ಪಕ್ಷಿಗಳನ್ನು, ಜೀವಿಸುವಂಥಾದ್ದೆಲ್ಲವನ್ನೂ ನಿನ್ನ ಕೈಯಲ್ಲಿ ಕೊಟ್ಟು, ಅವೆಲ್ಲವುಗಳಿಗೆ ನಿನ್ನನ್ನು ಆಳುವವನಾಗಿ ಮಾಡಿದ್ದಾರೆ. ಆ ಬಂಗಾರದ ತಲೆಯು ನೀನೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ದಾನಿಯೇಲ 2:38
10 ತಿಳಿವುಗಳ ಹೋಲಿಕೆ  

ಬಾಬಿಲೋನಿನ ಅರಸ ನೆಬೂಕದ್ನೆಚ್ಚರನು, ಅವನ ಸಮಸ್ತ ಸೈನ್ಯವು, ಅವನ ಕೈಕೆಳಗಿನ ಭೂರಾಜರೆಲ್ಲರು ಹಾಗೂ ಸಕಲ ಪ್ರಜೆಗಳು ಜೆರುಸಲೇಮಿಗೂ ಅದಕ್ಕೆ ಸೇರಿದ ಎಲ್ಲ ಊರುಗಳಿಗೂ ವಿರುದ್ಧ ಯುದ್ಧಮಾಡುತ್ತಿದ್ದಾಗ ಸರ್ವೇಶ್ವರ ಯೆರೆಮೀಯನಿಗೆ ಈ ವಿಷಯವನ್ನು ತಿಳಿಸಿದರು:


ಸರ್ವೇಶ್ವರಸ್ವಾಮಿ ಜುದೇಯದ ಅರಸ ಯೆಹೋಯಾಕೀಮನನ್ನು ಅವನ ಕೈವಶ ವಾಗುವಂತೆ ಮಾಡಿದರು . ಅಂತೆಯೇ ದೇವಾಲಯದ ಅನೇಕ ಪೂಜಾಪಾತ್ರೆಗಳು ಅವನ ಕೈವಶವಾದವು. ನೆಬೂಕದ್ನೆಚ್ಚರನು ಅವುಗಳನ್ನು ಶಿನಾರ್ ದೇಶಕ್ಕೆ ಸಾಗಿಸಿ, ತನ್ನ ದೇವರ ಮಂದಿರಕ್ಕೆ ತಂದು, ಆ ದೇವರ ಭಂಡಾರಕ್ಕೆ ಸೇರಿಸಿಕೊಂಡನು.


ಆ ಪ್ರತಿಮೆಯ ತಲೆ ಅಪ್ಪಟ ಬಂಗಾರದ್ದು. ಎದೆ ತೋಳುಗಳು ಬೆಳ್ಳಿಯವು. ಹೊಟ್ಟೆ ಸೊಂಟಗಳು ಕಂಚಿನವು.


ನಿಮ್ಮ ಕಾಲವಾದ ಮೇಲೆ ನಿಮಗಿಂತ ಬೀಳಾದ ಮತ್ತೊಂದು ರಾಜ್ಯ ತಲೆಯೆತ್ತಿಕೊಳ್ಳುವುದು. ಅನಂತರ ಬೇರೊಂದು ರಾಜ್ಯ ಕಂಚಿನದಾಗಿ ಕಾಣಿಸಿಕೊಂಡು ಭೂಮಂಡಲವನ್ನೆಲ್ಲ ಆಳುವುದು.


ಪರಾತ್ಪರ ದೇವರು ನಿಮ್ಮ ತಂದೆಯಾದ ನೆಬೂಕದ್ನೆಚ್ಚರ್ ಅವರಿಗೆ ರಾಜ್ಯ ಮಹತ್ವವನ್ನು ಹಾಗೂ ಮಾನ ಸನ್ಮಾನಗಳನ್ನು ದಯಪಾಲಿಸಿದ್ದರು.


‘ಇದೇ ನಾನು ಕಂಡ ಕನಸು. ಬೇಲ್ತೆಶಚ್ಚರನೇ, ನನ್ನ ರಾಜ್ಯದ ಸಕಲ ವಿದ್ವಾಂಸರಲ್ಲಿ ಯಾರಿಂದಲೂ ಇದರ ಅರ್ಥವನ್ನು ಹೇಳಲಾಗಲಿಲ್ಲ. ಅದನ್ನು ನೀನು ತಿಳಿಸು. ಪರಿಶುದ್ಧ ದೇವರ ಆತ್ಮ ನಿನ್ನಲ್ಲಿ ನೆಲೆಸಿರುವುದರಿಂದ ಇದು ನಿನ್ನಿಂದ ಸಾಧ್ಯ’,” ಎಂದನು ರಾಜ ನೆಬೂಕದ್ನೆಚ್ಚರನು.


ಮೊದಲು ಕಾಣಿಸಿದ ಮೃಗ ಸಿಂಹದ ಹಾಗಿತ್ತು. ಆದರೆ ಅದಕ್ಕೆ ಹದ್ದಿನಂಥ ರೆಕ್ಕೆಗಳಿದ್ದವು. ನಾನು ನೋಡುತ್ತಿರುವಾಗಲೆ ಆ ರೆಕ್ಕೆಗಳು ಕೀಳಲ್ಪಟ್ಟವು. ಆ ಮೃಗವನ್ನು ನೆಲದಿಂದ ಮೇಲಕ್ಕೆತ್ತಿ ಮನುಷ್ಯನ ಹಾಗೆ ಎರಡು ಕಾಲುಗಳ ಮೇಲೆ ನಿಲ್ಲಿಸಲಾಯಿತು. ಅದಕ್ಕೆ ಮನುಷ್ಯನ ಹೃದಯ ಕೊಡಲಾಯಿತು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು