Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ದಾನಿಯೇಲ 2:39 - ಕನ್ನಡ ಸತ್ಯವೇದವು C.L. Bible (BSI)

39 ನಿಮ್ಮ ಕಾಲವಾದ ಮೇಲೆ ನಿಮಗಿಂತ ಬೀಳಾದ ಮತ್ತೊಂದು ರಾಜ್ಯ ತಲೆಯೆತ್ತಿಕೊಳ್ಳುವುದು. ಅನಂತರ ಬೇರೊಂದು ರಾಜ್ಯ ಕಂಚಿನದಾಗಿ ಕಾಣಿಸಿಕೊಂಡು ಭೂಮಂಡಲವನ್ನೆಲ್ಲ ಆಳುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

39 “ನಿನ್ನ ಕಾಲವಾದ ಮೇಲೆ ನಿನಗಿಂತ ಬಿಳುಪಾದ (ಬೆಳ್ಳಿ) ಮತ್ತೊಂದು ರಾಜ್ಯವು ಉಂಟಾಗುವುದು. ಅನಂತರ ಬೇರೊಂದು ಮೂರನೆಯ ರಾಜ್ಯವು ತಾಮ್ರದ್ದಾಗಿ ತಲೆದೋರಿ ಭೂಮಂಡಲವನ್ನೆಲ್ಲಾ ಆಳುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

39 ನೀನೇ ಆ ಬಂಗಾರದ ತಲೆ. ನಿನ್ನ ಕಾಲವಾದ ಮೇಲೆ ನಿನಗಿಂತ ಕನಿಷ್ಠವಾದ ಮತ್ತೊಂದು ರಾಜ್ಯವುಂಟಾಗುವದು; ಅನಂತರ ಬೇರೊಂದು ಮೂರನೆಯ ರಾಜ್ಯವು ತಾಮ್ರದ್ದಾಗಿ ತಲೆದೋರಿ ಭೂಮಂಡಲವನ್ನೆಲ್ಲಾ ಆಳುವದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

39 “ನಿನ್ನ ಕಾಲವಾದ ಮೇಲೆ ಮತ್ತೊಂದು ರಾಜ್ಯವುಂಟಾಗುವುದು. ಅದು ಬೆಳ್ಳಿಯ ಭಾಗ. ಆದರೆ ಆ ರಾಜ್ಯವು ನಿನ್ನ ರಾಜ್ಯದಷ್ಟು ದೊಡ್ಡದಾಗಿರುವುದಿಲ್ಲ. ಆ ತರುವಾಯ ಬೇರೊಂದು ಮೂರನೇ ರಾಜ್ಯವು ಈ ಭೂಮಿಯ ಮೇಲೆ ಆಳ್ವಿಕೆ ಮಾಡುವುದು. ಅದು ಕಂಚಿನ ಭಾಗ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

39 “ನಿನ್ನ ತರುವಾಯ ನಿನಗಿಂತ ಕನಿಷ್ಠವಾದ ಇನ್ನೊಂದು ರಾಜ್ಯ ಏಳುವುದು. ಅನಂತರ ಮೂರನೆಯ ಕಂಚಿನ ರಾಜ್ಯ ಬರುವುದು. ಅದು ಸಮಸ್ತ ಭೂಮಿಯ ಮೇಲೂ ದೊರೆತನ ನಡೆಸುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ದಾನಿಯೇಲ 2:39
14 ತಿಳಿವುಗಳ ಹೋಲಿಕೆ  

ಆ ಪ್ರತಿಮೆಯ ತಲೆ ಅಪ್ಪಟ ಬಂಗಾರದ್ದು. ಎದೆ ತೋಳುಗಳು ಬೆಳ್ಳಿಯವು. ಹೊಟ್ಟೆ ಸೊಂಟಗಳು ಕಂಚಿನವು.


ಕೋರೆಷನಿಗೆ ಇಂತೆನ್ನುವೆನು ನಾನು : ನನ್ನ ಮಂದೆ ಕಾಯುವವನು ನೀನು ನನ್ನ ಇಷ್ಟಾರ್ಥವನು ನೆರವೇರಿಸುವವನು ನೀನು; 'ಪುನಃ ನಿರ್ಮಾಣವಾಗುವೆ' ಎನ್ನುವೆ ಜೆರುಸಲೇಮಿಗೆ, ನೀನು; ‘ಪುನಃ ನಿನಗೆ ಅಸ್ತಿವಾರ ಹಾಕಿಸುವೆ’ ಎನ್ನುವೆ ಆ ದೇವಾಲಯಕೆ ನೀನು.”


ಅವನು ನನಗೆ ಹೀಗೆಂದು ಹೇಳಿದ: “ನಾನು ನಿನ್ನ ಬಳಿಗೆ ಏಕೆ ಬಂದೆನೆಂಬುದು ನಿನಗೆ ಗೊತ್ತಲ್ಲವೇ? ಈಗ ನಾನು ಪರ್ಷಿಯ ರಾಜ್ಯದ ಕಾವಲುದೂತನೊಂದಿಗೆ ಹೋರಾಡಲು ಹಿಂದಿರುಗಬೇಕು. ನಾನು ಆ ಹೋರಾಟವನ್ನು ತೀರಿಸಿದ ಕೂಡಲೆ ಗ್ರೀಕ್ ರಾಜ್ಯದ ಕಾವಲುದೂತನು ಎದುರುಬೀಳುವನು.


“ನೀನು ನೋಡಿದ ಎರಡು ಕೊಂಬಿನ ಟಗರು ಮೇದ್ಯದ ಮತ್ತು ಪರ್ಷಿಯದ ರಾಜ್ಯ.


ಕಪ್ಪು ಕುದುರೆಗಳ ರಥ ಉತ್ತರ ದೇಶಕ್ಕೆ ಹೊರಟಿತು. ಬಿಳಿ ಕುದುರೆಗಳ ರಥ ಅದನ್ನು ಹಿಂಬಾಲಿಸಿ ಪಶ್ಚಿಮಕ್ಕೆ ಹೋಯಿತು. ಮಚ್ಚೆ ಕುದುರೆಗಳ ರಥ ದಕ್ಷಿಣ ದೇಶಕ್ಕೆ ತೆರಳಿತು.


ಮೂರನೆಯ ರಥಕ್ಕೆ ಬಿಳೀ ಕುದುರೆಗಳು, ನಾಲ್ಕನೆಯ ರಥಕ್ಕೆ ಮಚ್ಚೆ ಮಚ್ಚೆಯ ಬಲವಾದ ಕುದುರೆಗಳು ಕಟ್ಟಿದ್ದವು.


ಆಗ ಅವನು ನನಗೆ ಕೊಟ್ಟ ವಿವರ ಇದು: “ಆ ನಾಲ್ಕನೆಯ ಮೃಗ ಲೋಕದಲ್ಲಿ ತಲೆಯೆತ್ತುವ ನಾಲ್ಕನೆಯ ರಾಜ್ಯ. ಅದು ಮಿಕ್ಕ ರಾಜ್ಯಗಳಿಗಿಂತ ವಿಲಕ್ಷಣವಾದುದು. ಲೋಕವನ್ನೇ ಕಾಲಿನಿಂದ ತುಳಿದು ಚೂರುಚೂರು ಮಾಡಿ ಕಬಳಿಸುವುದು.


ನರಮಾನವರು ವಾಸಿಸುವ ಸಕಲ ಪ್ರಾಂತ್ಯಗಳಲ್ಲಿ ಆಕಾಶಪಕ್ಷಿಗಳನ್ನೂ ಭೂಜಂತುಗಳನ್ನೂ ನಿಮ್ಮ ಕೈಗೆ ಒಪ್ಪಿಸಿದ್ದಾರೆ.


ನಾಲ್ಕನೆಯ ರಾಜ್ಯ ಕಬ್ಬಿಣದಷ್ಟು ಗಟ್ಟಿಗೆ ಕಬ್ಬಿಣ ಎಲ್ಲ ವಸ್ತುಗಳನ್ನು ಚೂರುಚೂರಾಗಿ ಒಡೆದುಹಾಕುತ್ತದೆ. ಅಂತೆಯೇ ಅದು ಎಲ್ಲವನ್ನು ಚೂರುಚೂರಾಗಿಸಿ ಧ್ವಂಸ ಮಾಡುವುದು.


ಆ ಹೋತ ಗ್ರೀಕ್ ರಾಜ್ಯ. ಅದರ ಕಣ್ಣುಗಳ ನಡುವಣ ದೊಡ್ಡ ಕೊಂಬು ಆ ರಾಜ್ಯದ ಮೊದಲನೆಯ ರಾಜ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು