Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ದಾನಿಯೇಲ 2:4 - ಕನ್ನಡ ಸತ್ಯವೇದವು C.L. Bible (BSI)

4 ಆ ಪಂಡಿತರು ಅರಮೀಯ ಭಾಷೆಯಲ್ಲಿ ರಾಜನಿಗೆ, “ಅರಸರೇ, ಚಿರಂಜೀವಿಯಾಗಿರಿ! ಆ ಕನಸನ್ನು ನಿಮ್ಮ ದಾಸರಾದ ನಮಗೆ ಹೇಳಿ. ಅದರ ತಾತ್ಪರ್ಯವನ್ನು ತಿಳಿಸುತ್ತೇವೆ,” ಎಂದು ಅರಿಕೆಮಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

4 ಆಗ ಆ ಪಂಡಿತರು ಅರಮಾಯ ಭಾಷೆಯಲ್ಲಿ ರಾಜನಿಗೆ, “ಅರಸನೇ, ಚಿರಂಜೀವಿಯಾಗಿರು; ಆ ಕನಸನ್ನು ನಿನ್ನ ದಾಸರಿಗೆ ಹೇಳು; ಅದರ ತಾತ್ಪರ್ಯವನ್ನು ತಿಳಿಸುವೆವು” ಎಂದು ಅರಿಕೆಮಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

4 ಆ ಪಂಡಿತರು ಅರಮಾಯ ಭಾಷೆಯಲ್ಲಿ ರಾಜನಿಗೆ - ಅರಸನೇ, ಚಿರಂಜೀವಿಯಾಗಿರು; ಆ ಕನಸನ್ನು ನಿನ್ನ ದಾಸರಿಗೆ ಹೇಳು; ಅದರ ತಾತ್ಪರ್ಯವನ್ನು ತಿಳಿಸುವೆವು ಎಂದು ಅರಿಕೆಮಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

4 ಆಗ ಆ ಕಸ್ದೀಯರು ಅರಮೇಯಿಕ್ ಭಾಷೆಯಲ್ಲಿ, “ಅರಸನೇ ಚಿರಂಜೀವಿಯಾಗಿರು. ನಾವು ನಿನ್ನ ಸೇವಕರು. ದಯವಿಟ್ಟು ನಮಗೆ ನಿನ್ನ ಕನಸನ್ನು ಹೇಳು. ನಾವು ಅದರ ಅರ್ಥವನ್ನು ತಿಳಿಸುತ್ತೇವೆ” ಎಂದು ಉತ್ತರಕೊಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

4 ಆಗ ಪಂಡಿತರು ಅರಸನಿಗೆ ಅರಮಾಯ ಭಾಷೆಯಲ್ಲಿ, “ಅರಸನೇ, ನಿರಂತರವಾಗಿ ಬಾಳು! ಕನಸನ್ನು ನಿನ್ನ ಸೇವಕರಿಗೆ ಹೇಳು, ಆಗ ನಾವು ಅದರ ಅರ್ಥವನ್ನು ತಿಳಿಸುವೆವು,” ಎಂದು ಹೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ದಾನಿಯೇಲ 2:4
23 ತಿಳಿವುಗಳ ಹೋಲಿಕೆ  

ರಾಜನೂ ಅವನ ಸಾಮಂತರೂ ಆಡಿದ ಮಾತು ರಾಣಿಗೆ ಮುಟ್ಟಿತು. ಆಕೆ ಔತಣ ಶಾಲೆಗೆ ಬಂದು, “ರಾಜರೇ, ಚಿರಂಜೀವಿಯಾಗಿರಿ! ನಿಮ್ಮ ಮನಸ್ಸು ಕಳವಳಗೊಳ್ಳದಿರಲಿ, ನಿಮ್ಮ ಮುಖ ಕಳೆಗುಂದದಿರಲಿ! ಪರಿಶುದ್ಧ ದೇವರ ಆತ್ಮ ನೆಲೆಸಿರುವ ಒಬ್ಬ ವ್ಯಕ್ತಿ ನಿಮ್ಮ ರಾಜ್ಯದಲ್ಲಿದ್ದಾನೆ.


“ಅರಸರೇ, ನೀವು ಚಿರಂಜೀವಿಯಾಗಿರಿ!”


ಪರ್ಷಿಯರಾಜ ಅರ್ತಷಸ್ತನ ಕಾಲದಲ್ಲಿ ಬಿಷ್ಲಾಮ್, ಮಿತ್ರದಾತ, ಟಾಬೆಯೇಲ್, ಈ ಮೊದಲಾದವರು ಅರ್ತಷಸ್ತನಿಗೆ ಪತ್ರ ಬರೆದರು. ಆ ಪತ್ರ ಅರಮಾಯಿಕ್ ಲಿಪಿಯಲ್ಲೂ ಅರಮಾಯಿಕ್ ಭಾಷೆಯಲ್ಲೂ ಇತ್ತು.


ಆಗ ಎಲ್ಯಾಕೀಮ್, ಶೆಬ್ನ ಮತ್ತು ಯೋವ ಎಂಬವರು ಆ ದಳಪತಿಗೆ, “ದಯವಿಟ್ಟು ನಿನ್ನ ಸೇವಕರಾದ ನಮ್ಮೊಡನೆ ಆರಾಮಾಯಿಕ ಭಾಷೆಯಲ್ಲಿ ಮಾತನಾಡಿ, ಅದು ನಮಗೆ ಅರ್ಥವಾಗುತ್ತದೆ. ಆದರೆ ಹಿಬ್ರು ಭಾಷೆಯಲ್ಲಿ ಮಾತನಾಡಬೇಡಿ, ಅದು ಪೌಳಿಗೋಡೆಯ ಮೇಲಿರುವ ಎಲ್ಲರಿಗೂ ಅರ್ಥವಾಗುತ್ತದೆ,” ಎಂದರು.


ಆಗ ದಾನಿಯೇಲನು ರಾಜನಿಗೆ, “ಅರಸರೇ, ಚಿರಂಜೀವಿಯಾಗಿರಿ!


ಬಳಿಕ ಆ ಮುಖ್ಯಾಧಿಕಾರಿಗಳೂ ಪ್ರಾಂತ್ಯಾಧಿಪತಿಗಳೂ ರಾಜನ ಸಮ್ಮುಖದಲ್ಲಿ ಕೂಡಿಬಂದು ಅವನಿಗೆ, “ದಾರ್ಯಾವೆಷ ರಾಜರೇ, ಚಿರಂಜೀವಿಯಾಗಿರಿ!


ಆಗ ಬತ್ಷೆಬೆ ಅರಸನಿಗೆ ಸಾಷ್ಟಾಂಗ ನಮಸ್ಕಾರ ಮಾಡಿದಳು, “ನನ್ನೊಡೆಯರಾದ ದಾವೀದರಸರು ಸುದೀರ್ಘಕಾಲ ಬಾಳಲಿ!” ಎಂದಳು.


ಯೇಸುವಿನ ಹಿಂದೆಯೂ ಮುಂದೆಯೂ ಗುಂಪುಗುಂಪಾಗಿ ಹೋಗುತ್ತಿದ್ದ ಜನರು : “ದಾವೀದ ಕುಲಪುತ್ರನಿಗೆ ಜಯವಾಗಲಿ! ಸರ್ವೇಶ್ವರನ ನಾಮದಲಿ ಬರುವವನಿಗೆ ಮಂಗಳವಾಗಲಿ! ಮಹೋನ್ನತದಲ್ಲಿ ದೇವರಿಗೆ ಜಯವಾಗಲಿ!” ಎಂದು ಹರ್ಷೋದ್ಗಾರ ಮಾಡುತ್ತಿದ್ದರು.


ಆಸ್ಥಾನದ ವಿದ್ವಾಂಸರೆಲ್ಲರು ಬಂದು ಸೇರಿದರು. ಆದರೆ ಆ ಬರಹವನ್ನು ಓದುವುದಕ್ಕಾಗಲಿ, ಅದರ ಅರ್ಥವನ್ನು ರಾಜನಿಗೆ ತಿಳಿಸುವುದಕ್ಕಾಗಲಿ ಅವರಿಂದ ಆಗಲಿಲ್ಲ.


ಇದನ್ನು ಕೇಳಿದ ಬೇಲ್ತೆಶಚ್ಚರನೆಂದು ಹೆಸರುಗೊಂಡಿದ್ದ ದಾನಿಯೇಲನು ತುಸು ಹೊತ್ತು ಸ್ತಬ್ದನಾದ. ಅವನ ಬುದ್ಧಿಗೆ ಹೊಳೆದ ವಿಷಯ ಅವನಲ್ಲಿ ದಿಗಿಲನ್ನು ಉಂಟುಮಾಡಿತು. ರಾಜನು ಇದನ್ನು ಅರಿತು, “ಬೇಲ್ತೆಶಚ್ಚರನೇ, ನನ್ನ ಕನಸಾಗಲಿ, ಅದರ ಅರ್ಥವಾಗಲಿ ನಿನ್ನನ್ನು ಹೆದರಿಸದಿರಲಿ,” ಎಂದು ಧೈರ್ಯಹೇಳಿದ. ಆಗ ಬೇಲ್ತೆಶಚ್ಚರನು: "ನನ್ನೊಡೆಯಾ, ಈ ಕನಸು ನಿನ್ನ ವೈರಿಗಳಿಗೆ ಬರಲಿ! ಅದರ ಅರ್ಥ ನಿನ್ನ ವಿರೋಧಿಗಳಿಗೆ ತಗಲಲಿ!


ಜೋಯಿಸರು, ಮಂತ್ರವಾದಿಗಳು, ಪಂಡಿತರು, ಶಾಕುನಿಕರು ಇವರೆಲ್ಲರು ನನ್ನ ಸಮ್ಮುಖಕ್ಕೆ ಬಂದರು. ನಾನು ಕನಸನ್ನು ತಿಳಿಸಿದೆ. ಆದರೆ ಅದರ ಅರ್ಥವನ್ನು ಅವರಿಂದ ತಿಳಿಸಲಾಗಲಿಲ್ಲ.


ಸುಳ್ಳುಶಕುನ ಹೇಳುವವರನು ನಿರರ್ಥಕಗೊಳಿಸುವವನು ನಾನೆ ಕಣಿ ಹೇಳುವವರನು ಮರುಳುಗೊಳಿಸುವವನು ನಾನೆ ವಿವೇಕಿಗಳೊಡನೆ ವಾದಿಸಿ ಅವರ ವಿವೇಕವೇ ಅವಿವೇಕವೆಂದು ತೋರಿಸಿದವನು ನಾನೆ.


ನಾನು ರಾಜನಿಗೆ, “ರಾಜಾಧಿರಾಜರು ಚಿರಂಜೀವಿಯಾಗಿರಲಿ! ನನ್ನ ಪೂರ್ವಿಕರ ಸಮಾಧಿಗಳಿರುವ ಪಟ್ಟಣವು ಹಾಳಾಗಿ ಅದರ ಬಾಗಿಲುಗಳು ಬೆಂಕಿಯಿಂದ ಸುಟ್ಟುಹೋಗಿವೆ; ಹೀಗಿರುವಲ್ಲಿ, ನನ್ನ ಮುಖ ಕಳೆಗುಂದದೆ ಇರಲು ಸಾಧ್ಯವೆ?,” ಎಂದು ಹೇಳಿದೆ.


ಅವನು ಇಲ್ಲಿಂದ ಇಳಿದುಹೋಗಿ ಹೋರಿ, ಕುರಿ ಮುಂತಾದ ಹಲವು ಕೊಬ್ಬಿದ ಪಶುಗಳನ್ನು ಬಲಿಯಾಗಿ ಅರ್ಪಿಸಿದ್ದಾನೆ. ರಾಜಪುತ್ರರೆಲ್ಲರನ್ನು, ಸೇನಾಪತಿಗಳನ್ನು ಹಾಗು ಯಾಜಕ ಎಬ್ಯಾತಾರನನ್ನು ಔತಣಕ್ಕೆ ಕರೆದಿದ್ದಾನೆ. ಅವರು ಅವನ ಪಂಕ್ತಿಯಲ್ಲೇ ಅನ್ನಪಾನಗಳನ್ನು ತೆಗೆದುಕೊಂಡು ಅರಸನಾದ ಅದೋನೀಯನು ಚಿರಂಜೀವಿಯಾಗಿ ಇರಲಿ!’ ಎಂದು ಕೂಗುತ್ತಿದ್ದಾರೆ.


ಆಗ ಸಮುವೇಲನು ಜನರೆಲ್ಲರಿಗೆ, “ನೋಡಿ, ಸರ್ವೇಶ್ವರನಿಂದ ಆಯ್ಕೆಯಾದವನು ಇವನೇ; ಸರ್ವಜನರಲ್ಲಿ ಇವನಿಗೆ ಸಮಾನರು ಇಲ್ಲವೇ ಇಲ್ಲ,” ಎಂದನು. ಜನರೆಲ್ಲರೂ, “ಅರಸನಿಗೆ ಜಯವಾಗಲಿ!” ಎಂದು ಘೋಷಿಸಿದರು.


ಬೆಳಿಗ್ಗೆ ಅವನ ಮನಸ್ಸು ಕಳವಳಗೊಂಡು ಇತ್ತು. ಈಜಿಪ್ಟ್ ದೇಶದ ಎಲ್ಲ ಜೋಯಿಸರನ್ನೂ ವಿದ್ವಾಂಸರನ್ನೂ ಬರಮಾಡಿದ. ಅವರಿಗೆ ತನ್ನ ಕನಸನ್ನು ವಿವರಿಸಿದ. ಅದರ ಅರ್ಥವನ್ನು ಅವನಿಗೆ ಹೇಳಬಲ್ಲವರು ಯಾರೂ ಸಿಕ್ಕಲಿಲ್ಲ.


ಆ ಕುಪ್ಪೆಗೆ ಲಾಬಾನನು ‘ಯಗರಸಾಹದೂತ’ ಎಂದೂ ಯಕೋಬನು ‘ಗೆಲೇದ್’ ಎಂದೂ ಹೆಸರಿಟ್ಟರು.


ಆಗ ಹಿಲ್ಕೀಯನ ಮಗ ಎಲ್ಯಾಕೀಮ್, ಶೆಬ್ನ ಮತ್ತು ಯೋವ ಎಂಬವರು ರಬ್ಷಾಕೆಗೆ, “ದಯವಿಟ್ಟು ನಿಮ್ಮ ಸೇವಕರಾದ ನಮ್ಮೊಡನೆ ಅರಾಮಾಯಿಕ್ ಭಾಷೆಯಲ್ಲಿ ಮಾತನಾಡಿ. ಅದು ನಮಗೆ ಅರ್ಥವಾಗುತ್ತದೆ. ಆದರೆ ಹಿಬ್ರೂ ಭಾಷೆಯಲ್ಲಿ ಮಾತನಾಡಬೇಡಿ. ಅದು ಪೌಳಿಗೋಡೆಯ ಮೇಲಿರುವವರಿಗೂ ಅರ್ಥವಾಗುತ್ತದೆ,” ಎಂದರು.


ಅವರು ಅಂಗದೋಷವಿಲ್ಲದವರಾಗಿರಬೇಕು. ಸುಂದರರು, ಸಮಸ್ತ ಶಾಸ್ತ್ರಜ್ಞರು, ಪಂಡಿತರು, ವಿದ್ಯಾನಿಪುಣರು, ರಾಜಾಲಯದಲ್ಲಿ ಸನ್ನಿಧಿಸೇವೆಮಾಡಲು ಸಮರ್ಥರೂ ಆಗಿರಬೇಕು. ಅವರಿಗೆ ಬಾಬಿಲೋನ್ ಪಂಡಿತರ ಭಾಷೆಯನ್ನೂ ಶಾಸ್ತ್ರಗಳನ್ನೂ ಕಲಿಸಬೇಕು,” ಎಂದು ಅಪ್ಪಣೆಕೊಟ್ಟನು.


ಪಂಡಿತರು, “ರಾಜರು ತಮ್ಮ ದಾಸರಿಗೆ ಕನಸನ್ನು ತಿಳಿಸೋಣವಾಗಲಿ, ನಾವು ಅದರ ತಾತ್ಪರ್ಯವನ್ನು ವಿವರಿಸುವೆವು,” ಎಂದು ಮತ್ತೊಮ್ಮೆ ಉತ್ತರಕೊಟ್ಟರು.


‘ಬೇಲ್ತೆಶಚ್ಚರನೇ, ಜೋಯಿಸರಲ್ಲಿ ಪ್ರಾಮುಖ್ಯನೇ, ಪರಿಶುದ್ಧ ದೇವರ ಆತ್ಮ ನಿನ್ನಲ್ಲಿ ನೆಲೆಯಾಗಿದೆಯೆಂದು ತಿಳಿದಿದ್ದೇನೆ. ಯಾವ ರಹಸ್ಯವೂ ನಿನಗೆ ಅಶೋಧ್ಯವಲ್ಲವೆಂದು ನನಗೆ ಗೊತ್ತು. ಆದುದರಿಂದ ನಾನು ಕಂಡ ಕನಸನ್ನೂ ಅದರ ಅರ್ಥವನ್ನೂ ನನಗೆ ತಿಳಿಸು.’


ರಾಜ್ಯದ ಸಕಲ ಮುಖ್ಯಾಧಿಕಾರಿ, ನಾಯಕ, ಪ್ರಾಂತ್ಯಾಧಿಪತಿ, ಮಂತ್ರಿ, ಸಂಸ್ಥಾನಾಧ್ಯಕ್ಷರು ಇವರೆಲ್ಲರ ಅಭಿಪ್ರಾಯದ ಪ್ರಕಾರ ತಾವು ಒಂದು ಶಾಸನವನ್ನು ಹೊರಡಿಸಬೇಕು. ಯಾವನೂ ಮೂವತ್ತು ದಿನಗಳ ತನಕ ರಾಜರಾದ ತಮಗೆ ಹೊರತು ಬೇರೆ ಯಾವ ದೇವರಿಗಾಗಲಿ, ಮನುಷ್ಯನಿಗಾಗಲಿ ಪ್ರಾರ್ಥನೆ ಮಾಡಬಾರದು; ಮಾಡಿದರೆ ಸಿಂಹಗಳ ಗವಿಗೆ ಹಾಕಲಾಗುವುದು ಎಂದು ರಾಜಾಜ್ಞಾರೂಪವಾಗಿ ನಿಷೇಧಿಸುವುದು ಒಳ್ಳೆಯದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು