Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ದಾನಿಯೇಲ 2:45 - ಕನ್ನಡ ಸತ್ಯವೇದವು C.L. Bible (BSI)

45 ಬೆಟ್ಟದಿಂದ ಒಂದು ಗುಂಡುಬಂಡೆ, ಯಾವ ಕೈಯೂ ಮುಟ್ಟದೆಯೇ, ಸಿಡಿದುಬಂದು ಕಬ್ಬಿಣ-ಕಂಚು-ಮಣ್ಣು-ಬೆಳ್ಳಿ-ಬಂಗಾರ ಇವುಗಳನ್ನು ಚೂರುಚೂರು ಮಾಡಿದ್ದನ್ನು ನೀವು ನೋಡಿದಿರಿ. ಇದರಿಂದ ಪರಲೋಕ ದೇವರು ಮುಂದೆ ನಡೆಯಲಿರುವ ವಿಷಯಗಳನ್ನು ರಾಜರಾದ ತಮಗೆ ತಿಳಿಯಪಡಿಸಿದ್ದಾರೆ. ಆ ಕನಸು ನಿಜವಾದುದು. ಅದರ ಅರ್ಥವೂ ನಂಬತಕ್ಕದ್ದು,” ಎಂದು ವಿವರಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

45 ಬೆಟ್ಟದೊಳಗಿಂದ ಒಂದು ಗುಂಡು ಬಂಡೆಯು ಕೈಯಿಲ್ಲದೆ ಒಡೆಯಲ್ಪಟ್ಟು ಕಬ್ಬಿಣ, ತಾಮ್ರ, ಮಣ್ಣು, ಬೆಳ್ಳಿಬಂಗಾರಗಳನ್ನು ಚೂರುಚೂರು ಮಾಡಿದ್ದು ನಿನ್ನ ಕಣ್ಣಿಗೆ ಬಿತ್ತಲ್ಲಾ. ಇದರಿಂದ ಪರಲೋಕದೇವರು ಮುಂದೆ ನಡೆಯುವ ವಿಷಯಗಳನ್ನು ರಾಜನಿಗೆ ತಿಳಿಯಪಡಿಸಿದ್ದಾನೆ. ಕನಸು ನಿಜ, ಅದರ ಅರ್ಥವು ನಂಬತಕ್ಕದು” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

45 [ಬೆಟ್ಟದೊಳಗಿಂದ] ಒಂದು ಗುಂಡು ಬಂಡೆಯು ಕೈಯಿಲ್ಲದೆ ಒಡೆಯಲ್ಪಟ್ಟು ಕಬ್ಬಿಣ ತಾಮ್ರ ಮಣ್ಣು ಬೆಳ್ಳಿ ಬಂಗಾರಗಳನ್ನು ಚೂರುಚೂರುಮಾಡಿದ್ದು ನಿನ್ನ ಕಣ್ಣಿಗೆ ಬಿತ್ತಲ್ಲಾ; ಇದರಿಂದ ಪರಲೋಕದೇವರು ಮುಂದೆ ನಡೆಯುವ ವಿಷಯಗಳನ್ನು ರಾಜನಿಗೆ ತಿಳಿಯಪಡಿಸಿದ್ದಾನೆ; ಕನಸು ನಿಜ, ಅದರ ಅರ್ಥವು ನಂಬತಕ್ಕದು ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

45 “ಅರಸನಾದ ನೆಬೂಕದ್ನೆಚ್ಚರನೇ, ಬೆಟ್ಟದಿಂದ ಒಂದು ದೊಡ್ಡ ಬಂಡೆ ಒಡೆದು ಬಂದದ್ದನ್ನು ನೀನು ನೋಡಿದೆ. ಯಾರೂ ಅದನ್ನು ಒಡೆಯಲಿಲ್ಲ! ಆ ಬಂಡೆಯು ಕಬ್ಬಿಣವನ್ನು, ಕಂಚನ್ನು, ಜೇಡಿಮಣ್ಣನ್ನು, ಬೆಳ್ಳಿಯನ್ನು, ಚಿನ್ನವನ್ನು ಚೂರುಚೂರು ಮಾಡಿತು. ಭವಿಷ್ಯದಲ್ಲಿ ಏನಾಗುವದೆಂಬುದನ್ನು ದೇವರು ನಿನಗೆ ಈ ರೀತಿಯಲ್ಲಿ ತೋರಿಸಿದ್ದಾನೆ. ನಿನ್ನ ಕನಸು ನಿಜ. ಅದರ ಅರ್ಥವು ನಂಬಿಕೆಗೆ ಯೋಗ್ಯವಾಗಿದೆ” ಎಂದು ವಿವರಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

45 ಮಾನವ ಹಸ್ತಗಳಿಲ್ಲದೆ, ಆದರೆ ಬೆಟ್ಟದೊಳಗಿಂದ ಕಡಿದು ತೆಗೆದ ಗುಂಡು ಬಂಡೆಯು ಕಬ್ಬಿಣವನ್ನೂ, ಕಂಚನ್ನೂ, ಮಣ್ಣನ್ನೂ, ಬೆಳ್ಳಿಯನ್ನೂ ಹಾಗೂ ಬಂಗಾರವನ್ನೂ ತುಂಡುತುಂಡಾಗಿ ಮಾಡಿದ ಆ ಗುಂಡು ಕಲ್ಲಿನ ದರ್ಶನವು ಇದೆ. “ಇದರಿಂದ ಭವಿಷ್ಯದಲ್ಲಿ ಏನಾಗುತ್ತದೆ ಎಂಬುದನ್ನು ಮಹಾ ದೇವರು ಅರಸನಿಗೆ ತೋರಿಸಿದ್ದಾರೆ. ಕನಸು ನಿಜವಾದದ್ದು, ಅದರ ಅರ್ಥವು ನಂಬತಕ್ಕದ್ದು,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ದಾನಿಯೇಲ 2:45
32 ತಿಳಿವುಗಳ ಹೋಲಿಕೆ  

ಎಂದೇ, ಒಡೆಯರಾದ ಸರ್ವೇಶ್ವರ ಹೀಗೆನ್ನುತ್ತಾರೆ : ‘ಇಗೋ, ನಾನು ಸಿಯೋನಿನಲ್ಲಿ ಅಸ್ತಿವಾರದ ಕಲ್ಲೊಂದನ್ನು ಇಡುತ್ತೇನೆ. ಅದು ಸ್ಥಿರವಾದ, ಪರೀಕ್ಷಿತವಾದ, ಮೌಲ್ಯವಾದ ಮೂಲೆಗಲ್ಲು. ಇದರಲ್ಲಿ ವಿಶ್ವಾಸವಿಡುವವನು ತಾಳ್ಮೆಯಿಂದ ಬಾಳುವನು.


ದೇವರು ಈ ಕಾರ್ಯವನ್ನು ನಿರ್ಧರಿಸಿದ್ದಾರೆ; ಇದು ಬೇಗ ಬರಲಿದೆಯೆಂದು ತಿಳಿದುಕೊಳ್ಳಬೇಕು. ಏಕೆಂದರೆ ನಿಮಗೆ ಇಮ್ಮಡಿ ಕನಸುಬಿದ್ದಿದೆ.


“ಸೂರ್ಯೋದಯದಿಂದ ಸೂರ್ಯಾಸ್ತಮದವರೆಗೆ ಸರ್ವರಾಷ್ಟ್ರಗಳಲ್ಲಿ ನನ್ನ ನಾಮಕ್ಕೆ ಮಹಿಮೆ ಸಲ್ಲುವುದು. ಎಲ್ಲೆಲ್ಲಿಯೂ ನನಗೆ ಧೂಪಾರತಿಯನ್ನೂ ಕಾಣಿಕೆಗಳನ್ನೂ ಜನರು ಅರ್ಪಿಸುವರು. ಹೌದು, ಸರ್ವರಾಷ್ಟ್ರಗಳಲ್ಲಿಯೂ ನನ್ನ ನಾಮಕ್ಕೆ ಮಹಿಮೆ ಸಲ್ಲುವುದು,” ಎನ್ನುತ್ತಾರೆ ಸೇನಾಧೀಶ್ವರ ಸರ್ವೇಶ್ವರ.


ಸರ್ವಸ್ತುತಿಗೆ ಪಾತ್ರ, ಪ್ರಭುವು ಪರಮೋನ್ನತ I ದೇವನಗರದಲಿ ಆತನ ಪವಿತ್ರ ಪರ್ವತ II


ಹೇ ದೇವಾ, ಸರ್ವೇಶ್ವರಾ, ತಾವು ಮಹೋನ್ನತರು, ತಮಗೆ ಸಮಾನರು ಯಾರೂ ಇಲ್ಲ. ನಾವು ಕೇಳಿದ ಅವುಗಳನ್ನೆಲ್ಲಾ ಆಲೋಚಿಸಿ ನೋಡಿದರೆ ತಮ್ಮ ಹೊರತು ದೇವರೇ ಇಲ್ಲ ಎಂಬುದು ನಿಶ್ಚಯ.


ನಿಮ್ಮ ದೇವರಾದ ಸರ್ವೇಶ್ವರ ದೇವಾದಿದೇವರು, ಸರ್ವೇಶ್ವರಾಧಿ ಸರ್ವೇಶ್ವರ. ಅವರು ಪರಮ ದೇವರೂ ಪರಾಕ್ರಮಿಯೂ ಭಯಂಕರರೂ ಆಗಿದ್ದಾರೆ. ಅವರು ಮುಖದಾಕ್ಷಿಣ್ಯ ನೋಡುವವರಲ್ಲ, ಲಂಚ ತೆಗೆದುಕೊಳ್ಳುವವರಲ್ಲ.


ನಾನು ತಮಗೆ ಅರಿಕೆಮಾಡಿದಂತೆ ದೇವರು ಮಾಡಬೇಕೆಂದು ಇರುವುದನ್ನು ತಮಗೆ ತಿಳಿಸಿದ್ದಾರೆ.


ಅನಂತರ ದೇವದೂತನೊಬ್ಬ ಸೂರ್ಯನ ಮೇಲೆ ನಿಂತಿರುವುದನ್ನು ಕಂಡೆ. ಆತನು ಗಟ್ಟಿಯಾದ ಧ್ವನಿಯಿಂದ ಮಧ್ಯಾಕಾಶದಲ್ಲಿ ಹಾರಾಡುವ ಪಕ್ಷಿಗಳಿಗೆ ಹೀಗೆ ಹೇಳಿದನು: “ದೇವರ ದೊಡ್ಡ ಔತಣಕ್ಕೆ ಕೂಡಿಬನ್ನಿ;


ಇದಾದ ಬಳಿಕ ಮತ್ತೊಂದು ದಿವ್ಯದರ್ಶನವನ್ನು ಕಂಡೆ. ಸ್ವರ್ಗದ ಬಾಗಿಲು ತೆರೆದಿತ್ತು. ಮೊದಲು ನನ್ನೊಡನೆ ಮಾತನಾಡಿದ ತುತೂರಿಯಂಥ ನಾದವು ನನಗೆ ಕೇಳಿಸಿತು. ಅದು, “ಮೇಲೆ ಬಾ, ಮುಂದೆ ಸಂಭವಿಸಲಿರುವ ಘಟನೆಗಳನ್ನು ನಿನಗೆ ತೋರಿಸುವೆನು,” ಎಂದು ಹೇಳಿತು.


ಆದುದರಿಂದ ನೀನು ಕಂಡ ಘಟನೆಗಳನ್ನು ಅಂದರೆ, ಈಗ ನಡೆಯುತ್ತಿರುವ ಘಟನೆಗಳನ್ನೂ ಮುಂದೆ ಸಂಭವಿಸಲಿರುವ ಘಟನೆಗಳನ್ನೂ ಕುರಿತು ಬರೆ.


ದೇವರ ಸಾಮ್ರಾಜ್ಯವು ಯಾವಾಗ ಬರುವುದೆಂದು ಫರಿಸಾಯರು ಕೇಳಿದಾಗ ಯೇಸುಸ್ವಾಮಿ ಪ್ರತ್ಯುತ್ತರವಾಗಿ, “ದೇವರ ಸಾಮ್ರಾಜ್ಯವು ಕಣ್ಣುಗಳಿಗೆ ಕಾಣಿಸುವಂತೆ ಬರುವುದಿಲ್ಲ.


ಭೂಮ್ಯಾಕಾಶಗಳು ಗತಿಸಿಹೋಗುವುವು; ಆದರೆ ನನ್ನ ಮಾತುಗಳು ಶಾಶ್ವತವಾಗಿ ನಿಲ್ಲುವುವು.


ಅದಕ್ಕೆ ಯೇಸು, “ನಾನು ನಿಮಗೆ ಒಂದು ಪ್ರಶ್ನೆ ಕೇಳುತ್ತೇನೆ; ಅದಕ್ಕೆ ನೀವು ಉತ್ತರಕೊಟ್ಟರೆ ನಾನು ಯಾವ ಅಧಿಕಾರದಿಂದ ಇದನ್ನೆಲ್ಲಾ ಮಾಡುತ್ತಿದ್ದೇನೆಂದು ನಿಮಗೆ ತಿಳಿಸುತ್ತೇನೆ.


ಆ ದಿನದಂದು ಜೆರುಸಲೇಮನ್ನು ಭಾರಿ ಬಂಡೆಯನ್ನಾಗಿ ಮಾಡುವೆನು. ಅದನ್ನು ಎತ್ತಲು ಯತ್ನಿಸುವವರೆಲ್ಲರಿಗೂ ತೀವ್ರ ಗಾಯವಾಗುವುದು. ವಿಶ್ವದ ರಾಷ್ಟ್ರಗಳು ಅದನ್ನು ಎತ್ತಿಹಾಕಲು ಕೂಡಿಬರುವುವು.


ಆ ರಾಜರ ಕಾಲದಲ್ಲಿ ಪರಲೋಕ ದೇವರು ಒಂದು ಸಾಮ್ರಾಜ್ಯವನ್ನು ಸ್ಥಾಪಿಸುವರು. ಅದು ಎಂದಿಗೂ ಅಳಿಯದು. ಅದರ ಪ್ರಾಬಲ್ಯವು ಬೇರೆ ರಾಷ್ಟ್ರಕ್ಕೆ ಜಾರಿಹೋಗದು. ರಾಷ್ಟ್ರಗಳನ್ನೆಲ್ಲಾ ಭಂಗಪಡಿಸಿ, ನಿರ್ನಾಮಮಾಡಿ ಆ ಸಾಮ್ರಾಜ್ಯ ಶಾಶ್ವತವಾಗಿ ನಿಲ್ಲುವುದು.


ತರುವಾಯ ದಾನಿಯೇಲನು ಬಾಬಿಲೋನಿನ ವಿದ್ವಾಂಸರನ್ನು ಕೊಲ್ಲುವುದಕ್ಕೆ ರಾಜನು ನೇಮಿಸಿದ್ದ ಅರ್ಯೋಕನ ಬಳಿಗೆ ಹೋದನು. ಅವನಿಗೆ, “ಬಾಬಿಲೋನಿನ ವಿದ್ವಾಂಸರನ್ನು ಕೊಲ್ಲಬೇಡ. ನನ್ನನ್ನು ರಾಜನ ಸನ್ನಿಧಿಗೆ ಸೇರಿಸಿಬಿಡು, ನಾನು ಆ ಕನಸಿನ ಉದ್ದೇಶವನ್ನು ರಾಜನಿಗೆ ತಿಳಿಸುವೆನು,” ಎಂದು ಕೇಳಿಕೊಂಡನು.


ಪ್ರಭು ಮಹಾತ್ಮನು, ಸ್ತುತ್ಯರ್ಹನು I ಆತನ ಮಹಿಮೆ ಅಗಮ್ಯವಾದದು II


ಗೊತ್ತೆನಗೆ ನಮ್ಮ ಪ್ರಭು ಘನವಂತನೆಂದು I ಸಕಲ ದೇವರುಗಳಿಗಿಂತಲು ಉನ್ನತನೆಂದು I


ಏಕೆನೆ ಮಹಾತ್ಮನು ಪ್ರಭು, ಬಲು ಸ್ತುತ್ಯರ್ಹನು I ಸಕಲ ದೇವರುಗಳಿಗಿಂತಲೂ ಘನಗಂಭೀರನು II


ದೇವರೆನಿತೋ ಮಹೋನ್ನತನು ನಮ್ಮ ಅರಿವಿಗಾತನು ಎಟುಕನು ಅಸಂಖ್ಯಾತ ಆತನ ವರುಷಗಳು.


ಓ ನಮ್ಮ ದೇವರೇ, ನೀವು ಮಹೋನ್ನತರು, ಶಕ್ತಿಸಾಮರ್ಥ್ಯರು, ಭಯಭಕ್ತಿಗೆ ಪಾತ್ರರು, ಕೃಪಾವಾಗ್ದಾನಗಳ ನೆರವೇರಿಸುವವರು. ಅಲ್ಪವೆಂದೆಣಿಸಬೇಡಿ - ನಮ್ಮ ರಾಜರು, ರಾಜ್ಯಪಾಲರು. ಯಾಜಕರು, ಪ್ರವಾದಿಗಳು, ಹಿರಿಯರು, ಪ್ರಜೆಗಳು ಸಹಿಸಬೇಕಾಗಿಬಂದಿರುವ ಈ ಕಷ್ಟಕಾರ್ಪಣ್ಯಗಳನು.


ಅವರನ್ನು ಸಂದರ್ಶಿಸಿ, ಅವರ ಮುಂದೆ ನಿಂತು, ಶ್ರೀಮಂತರನ್ನೂ ಅಧಿಕಾರಿಗಳನ್ನೂ ಉಳಿದ ಜನರನ್ನೂ ಸಂಬೋಧಿಸಿ, “ನಿಮ್ಮ ಹಗೆಗಳಿಗೆ ಹೆದರಬೇಡಿ; ಮಹೋನ್ನತರೂ ಭಯಭಕ್ತಿಗೆ ಪಾತ್ರರೂ ಆದ ಸರ್ವೇಶ್ವರಸ್ವಾಮಿಯನ್ನು ಸ್ಮರಿಸಿಕೊಂಡು, ನಿಮ್ಮ ಸಹೋದರರಿಗಾಗಿ, ಮಡದಿಮಕ್ಕಳಿಗಾಗಿ ಹಾಗು ನಿಮ್ಮ ಮನೆಮಠಗಳಿಗಾಗಿ ಕಾದಾಡಿರಿ,” ಎಂದು ಹುರಿದುಂಬಿಸಿದೆ.


ಏಕೆನೆ, ಮಹಾತ್ಮನು ಸರ್ವೇಶ್ವರ ಅತಿ ಸ್ತುತ್ಯರ್ಹನು I ಸಕಲ ದೇವರುಗಳಿಗಿಂತಲೂ ಘನಗಂಭೀರನು II


ಆದರೆ ರಹಸ್ಯಗಳನ್ನು ವ್ಯಕ್ತಪಡಿಸಬಲ್ಲವರು ಒಬ್ಬರಿದ್ದಾರೆ. ಅವರೇ ಪರಲೋಕದಲ್ಲಿರುವ ದೇವರು. ಬರಲಿರುವ ಕಾಲದಲ್ಲಿ ನಡೆಯತಕ್ಕದ್ದನ್ನು ರಾಜ ನೆಬೂಕದ್ನೆಚ್ಚರರಾದ ನಿಮಗೆ ಅವರೇ ತಿಳಿಯಪಡಿಸಿದ್ದಾರೆ. ನೀವು ಕಂಡ ಕನಸು, ಹಾಸಿಗೆಯ ಮೇಲೆ ಮಲಗಿದ್ದಾಗ ನಿಮ್ಮ ಮನಸ್ಸಿಗೆ ತೋಚಿದ ಸ್ವಪ್ನಗಳು ಹೀಗಿವೆ:


“ರಾಜರೇ, ನೀವು ಹಾಸಿಗೆಯ ಮೇಲೆ ಮಲಗಿರುವಾಗ ಮುಂದೆ ಏನು ಸಂಭವಿಸುವುದೋ ಎಂಬ ಯೋಚನೆ ನಿಮ್ಮಲ್ಲಿ ಹುಟ್ಟಿತ್ತು. ಗುಟ್ಟುಗಳನ್ನು ಬಟ್ಟಬಯಲಾಗಿಸುವಾತ ಮುಂದೆ ಸಂಭವಿಸುವುದನ್ನು ನಿಮಗೆ ಗೋಚರಪಡಿಸಿದ್ದಾರೆ.


ಯುಕ್ತಿಯಿಂದಲೆ ತನ್ನ ಕಪಟತನವನ್ನು ಸಿದ್ಧಿಗೆ ತರುವನು. ಮನದಲ್ಲೆ ಉಬ್ಬಿಕೊಂಡು ನೆಮ್ಮದಿಯಾಗಿರುವ ಬಹುಜನರನ್ನು ನಾಶಪಡಿಸುವನು. ರಾಜಾಧಿರಾಜನಿಗೂ ವಿರುದ್ಧವಾಗಿ ಏಳುವನು. ಆದರೂ ಯಾರ ಕೈಯೂ ಸೋಕದೆ ಹಾಳಾಗುವನು.


ಆ ಏಳು ಒಳ್ಳೆಯ ಹಸುಗಳೇ ಏಳು ವರ್ಷಗಳು; ಆ ಏಳು ಒಳ್ಳೆಯತೆನೆಗಳೂ ಏಳು ವರ್ಷಗಳು; ಎರಡು ಕನಸುಗಳ ಅರ್ಥ ಒಂದೇ.


ನೀ ಬಡಿದು ಹಾಕುವೆ ಕಬ್ಬಿಣದ ಗದೆಯಿಂದವರನು I ನೀ ಒಡೆದು ಹಾಕುವೆ ಮಣ್ಣಿನ ಮಡಕೆಯಂತವರನು"II


ರಾಜ್ಯಗಳ ಸಿಂಹಾಸನವನ್ನು ಕೆಡವಿಬಿಡುವೆನು. ರಾಷ್ಟ್ರಗಳ ಸಂಸ್ಥಾನಬಲವನ್ನು ಧ್ವಂಸಮಾಡುವೆನು. ರಥಗಳನ್ನೂ ರಥಾರೂಢರನ್ನೂ ದಬ್ಬಿಬಿಡುವೆನು. ಕುದುರೆಗಳೂ ರಾಹುತರೂ ಬಿದ್ದುಹೋಗುವರು; ಒಬ್ಬನು ಮತ್ತೊಬ್ಬನ ಕತ್ತಿಗೆ ತುತ್ತಾಗುವನು.”


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು