Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ದಾನಿಯೇಲ 2:49 - ಕನ್ನಡ ಸತ್ಯವೇದವು C.L. Bible (BSI)

49 ದಾನಿಯೇಲನ ಕೋರಿಕೆಯ ಪ್ರಕಾರ ರಾಜನು ಶದ್ರಕ್, ಮೇಶಕ್ ಮತ್ತು ಅಬೇದ್‍ನೆಗೋ ಎಂಬುವರನ್ನು ಬಾಬಿಲೋನಿನ ಪ್ರಾಂತ್ಯಾಧಿಪತಿಗಳನ್ನಾಗಿ ನೇಮಿಸಿದನು. ದಾನಿಯೇಲನು ಮಾತ್ರ ಅರಮನೆಯಲ್ಲೇ ಕಾರ್ಯನಿರತನಾದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

49 ದಾನಿಯೇಲನು ಬಿನ್ನಹ ಮಾಡಲು ರಾಜನು ಶದ್ರಕ್, ಮೇಶಕ್, ಅಬೇದ್ನೆಗೋ ಎಂಬುವವರಿಗೆ ಬಾಬೆಲ್ ಸಂಸ್ಥಾನದ ಕಾರ್ಯಭಾರವನ್ನು ವಹಿಸಿದನು. ದಾನಿಯೇಲನು ಅರಮನೆಯಲ್ಲಿ ಉಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

49 ದಾನಿಯೇಲನು ಬಿನ್ನಹ ಮಾಡಲು ರಾಜನು ಶದ್ರಕ್ ಮೇಶಕ್ ಅಬೇದ್‍ನೆಗೋ ಎಂಬವರಿಗೆ ಬಾಬೆಲ್ ಸಂಸ್ಥಾನದ ಕಾರ್ಯಭಾರವನ್ನು ವಹಿಸಿದನು; ದಾನಿಯೇಲನೋ ಅರಮನೆಯಲ್ಲಿ ನಿಂತನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

49 ಶದ್ರಕ್, ಮೇಶಕ್, ಅಬೇದ್‌ನೆಗೋ ಇವರುಗಳನ್ನು ಬಾಬಿಲೋನ್ ಸಂಸ್ಥಾನದ ದೊಡ್ಡ ಅಧಿಕಾರಿಗಳನ್ನಾಗಿ ನೇಮಿಸಬೇಕೆಂದು ದಾನಿಯೇಲನು ಅರಸನನ್ನು ಕೇಳಿಕೊಂಡನು. ದಾನಿಯೇಲನು ಹೇಳಿದಂತೆ ಅರಸನು ಮಾಡಿದನು. ದಾನಿಯೇಲನು ಅರಸನ ಸನ್ನಿಧಿಯಲ್ಲಿರುವ ಪ್ರಮುಖರಲ್ಲಿ ಒಬ್ಬನಾದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

49 ದಾನಿಯೇಲನು ಅರಸನನ್ನು ಬೇಡಿಕೊಂಡಿದ್ದರಿಂದ, ಅರಸನು ಶದ್ರಕ್, ಮೇಶಕ್, ಅಬೇದ್‌ನೆಗೋ ಎಂಬುವರನ್ನು ಬಾಬಿಲೋನಿನ ಸಂಸ್ಥಾನದ ಕಾರ್ಯಾಧಿಕಾರಿಗಳನ್ನಾಗಿ ನೇಮಿಸಿದನು. ದಾನಿಯೇಲನು ಅರಸನ ಅರಮನೆಯಲ್ಲಿ ಉಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ದಾನಿಯೇಲ 2:49
12 ತಿಳಿವುಗಳ ಹೋಲಿಕೆ  

ಕಂಚುಕಿಯರ ನಾಯಕನು ಇವರಿಗೆ ನಾಮಕರಣಮಾಡಿ ದಾನಿಯೇಲನಿಗೆ ‘ಬೇಲ್ತೆಶಚ್ಚರ್’, ಹನನ್ಯನಿಗೆ ‘ಶದ್ರಕ್’, ಮಿಶಾಯೇಲನಿಗೆ ‘ಮೇಶಕ್’, ಹಾಗೂ ಅಜರ್ಯನಿಗೆ ‘ಅಬೇದ್‍ನೆಗೋ’, ಎಂಬ ಹೆಸರಿಟ್ಟನು.


ಕನ್ಯೆಯರನ್ನು ಎರಡನೆಯ ಸಾರಿ ಕೂಡುಸುವಾಗ, ಮೊರ್ದೆಕೈ ಅರಮನೆಯ ಹೆಬ್ಬಾಗಿಲಿನಲ್ಲಿ ಕುಳಿತುಕೊಂಡಿದ್ದನು.


ಕೆಟ್ಟದ್ದನ್ನು ದ್ವೇಷಿಸಿರಿ, ಒಳ್ಳೆಯದನ್ನು ಪ್ರೀತಿಸಿರಿ. ನ್ಯಾಯಮಂಟಪದಲ್ಲಿ ಸತ್ಯಕ್ಕೆ ಜಯವಾಗುವಂತೆ ನೋಡಿಕೊಳ್ಳಿರಿ. ಆಗ ಬಹುಶಃ ಸೇನಾಧೀಶ್ವರ ದೇವರಾದ ಸರ್ವೇಶ್ವರ ಅಳಿದುಳಿದ ಜೋಸೆಫನ ವಂಶಕ್ಕೆ ಕರುಣೆ ತೋರಿಯಾರು.


ಆ ದಿನಗಳಲ್ಲಿ ಮೊರ್ದೆಕೈ, ಎಂದಿನಂತೆ ಅರಮನೆಯ ಹೆಬ್ಬಾಗಿಲಿನಲ್ಲಿ ಕುಳಿತುಕೊಂಡಿದ್ದಾಗ ದ್ವಾರಪಾಲಕರಾದ ಬಿಗೆತಾನ್ ಮತ್ತು ತೆರೆಷ್ ಎಂಬಿಬ್ಬರು ರಾಜಕಂಚುಕಿಗಳು ಅರಸನ ವಿರುದ್ಧ ಕೈಯೆತ್ತಬೇಕು ಎಂದು ಒಳಸಂಚು ಮಾಡಿದರು.


ಬಳಿಕ ದಾನಿಯೇಲನು ತನ್ನ ಮನೆಗೆ ಹಿಂತಿರುಗಿ ಹನನ್ಯ, ಮೀಶಾಯೇಲ ಮತ್ತು ಅಜರ್ಯ ಎಂಬ ತನ್ನ ಗೆಳೆಯರಿಗೆ ಈ ಸಮಾಚಾರ ತಿಳಿಸಿದನು.


ಹೀಗಿರಲು ದೇವರು ಆ ನಾಲ್ಕುಮಂದಿ ಯುವಕರಿಗೆ ಸಕಲ ಶಾಸ್ತ್ರಗಳಲ್ಲೂ ವಿದ್ಯೆಗಳಲ್ಲೂ ಜ್ಞಾನ ವಿವೇಕಗಳನ್ನು ದಯಪಾಲಿಸಿದರು. ದಾನಿಯೇಲನು ಸಮಸ್ತ ಸ್ವಪ್ನಗಳನ್ನೂ ದಿವ್ಯದರ್ಶನಗಳನ್ನೂ ಅರ್ಥೈಸುವುದರಲ್ಲಿ ಪ್ರವೀಣನಾದನು.


ನೇರ್ಗಲ್‍ಸರೆಚರ್, ಸಮ್ಗರ್‍ನೆಬೊ, ಕಂಚುಕಿಯರ ಮುಖ್ಯಸ್ಥನಾದ ಸರ್ಸೆಕೀಮ್, ಜೋಯಿಸರ ಮುಖ್ಯಸ್ಥ ನೇರ್ಗಲ್‍ಸರೆಚರ್, ಹೀಗೆ ಬಾಬಿಲೋನಿಯದ ಅರಸನ ಎಲ್ಲ ಪದಾಧಿಕಾರಿಗಳು ಪುರಪ್ರವೇಶಮಾಡಿ ಮಧ್ಯಮದ್ವಾರದೊಳಗೆ ಕುಳಿತುಕೊಂಡರು


ಸತ್ಯಸಂಧರಿಗೆ ಜಯವಾದರೆ ಸಂಭ್ರಮ ಸಡಗರ; ದುಷ್ಟರನ್ನು ಉನ್ನತಿಗೇರಿಸಿದರೆ ಬೇರೆಯವರು ಮರೆಯಾಗುವರು.


ಅರಸನ ಆಜ್ಞಾನುಸಾರ ಅರಮನೆಯಲ್ಲಿದ್ದ ಪರಿಚಾರಕರೆಲ್ಲರೂ ಅವನಿಗೆ ನಮಸ್ಕರಿಸುತ್ತಿದ್ದರು. ಆದರೆ ಮೊರ್ದೆಕೈ ಮಾತ್ರ ಹಾಗೆ ಮಾಡುತ್ತಿರಲಿಲ್ಲ.


ಇವರ ಮೇಲ್ವಿಚಾರಣೆಗಾಗಿಯೂ ತನ್ನ ಹಿತಾಸಕ್ತಿಯ ದೃಷ್ಟಿಯಿಂದಲೂ ಮೂವರು ಮುಖ್ಯಾಧಿಕಾರಿಗಳನ್ನು ನೇಮಿಸಲು ನಿಶ್ಚಯಿಸಿದನು. ಈ ಮೂವರು ಮುಖ್ಯಸ್ಥರಲ್ಲಿ ದಾನಿಯೇಲನು ಒಬ್ಬನು.


ರಾಜ ನೆಬೂಕದ್ನೆಚ್ಚರನು 27 ಮೀಟರ್ ಎತ್ತರದ 3 ಮೀಟರ್ ಅಗಲದ ಒಂದು ಬಂಗಾರದ ಪ್ರತಿಮೆಯನ್ನು ಮಾಡಿಸಿ ಬಾಬಿಲೋನ್ ಸಂಸ್ಥಾನದ ‘ದೂರಾ’ ಎಂಬ ಬಯಲಿನಲ್ಲಿ ನಿಲ್ಲಿಸಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು