Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ದಾನಿಯೇಲ 3:1 - ಕನ್ನಡ ಸತ್ಯವೇದವು C.L. Bible (BSI)

1 ರಾಜ ನೆಬೂಕದ್ನೆಚ್ಚರನು 27 ಮೀಟರ್ ಎತ್ತರದ 3 ಮೀಟರ್ ಅಗಲದ ಒಂದು ಬಂಗಾರದ ಪ್ರತಿಮೆಯನ್ನು ಮಾಡಿಸಿ ಬಾಬಿಲೋನ್ ಸಂಸ್ಥಾನದ ‘ದೂರಾ’ ಎಂಬ ಬಯಲಿನಲ್ಲಿ ನಿಲ್ಲಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

1 ರಾಜನಾದ ನೆಬೂಕದ್ನೆಚ್ಚರನು ಅರುವತ್ತು ಮೊಳ ಎತ್ತರದ, ಆರು ಮೊಳ ಅಗಲದ ಒಂದು ಬಂಗಾರದ ಪ್ರತಿಮೆಯನ್ನು ಮಾಡಿಸಿ, ಬಾಬೆಲ್ ಸಂಸ್ಥಾನದ ದೂರಾ ಎಂಬ ಬಯಲಿನಲ್ಲಿ ನಿಲ್ಲಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

1 ರಾಜನಾದ ನೆಬೂಕದ್ನೆಚ್ಚರನು ಅರುವತ್ತು ಮೊಳ ಎತ್ತರದ ಆರು ಮೊಳ ಅಗಲದ ಒಂದು ಬಂಗಾರದ ಪ್ರತಿಮೆಯನ್ನು ಮಾಡಿಸಿ ಬಾಬೆಲ್ ಸಂಸ್ಥಾನದ ದೂರಾ ಎಂಬ ಬೈಲಿನಲ್ಲಿ ನಿಲ್ಲಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

1 ಅರಸನಾದ ನೆಬೂಕದ್ನೆಚ್ಚರನು ಒಂದು ಬಂಗಾರದ ವಿಗ್ರಹವನ್ನು ಮಾಡಿಸಿದ್ದನು. ಆ ವಿಗ್ರಹವು ಅರವತ್ತು ಮೊಳ ಎತ್ತರವಾಗಿತ್ತು. ಆರು ಮೊಳ ಅಗಲವಾಗಿತ್ತು. ಆ ವಿಗ್ರಹವನ್ನು ಬಾಬಿಲೋನ್ ಪ್ರಾಂತ್ಯದ ದೂರಾ ಎಂಬ ಬಯಲಿನಲ್ಲಿ ನಿಲ್ಲಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

1 ಅರಸನಾದ ನೆಬೂಕದ್ನೆಚ್ಚರನು ಸುಮಾರು 27 ಮೀಟರ್ ಎತ್ತರ ಮತ್ತು ಸುಮಾರು ಎರಡೂವರೆ ಮೀಟರ್ ಅಗಲ ಇರುವ ಒಂದು ಬಂಗಾರದ ಪ್ರತಿಮೆಯನ್ನು ಮಾಡಿಸಿ, ಬಾಬಿಲೋನ್ ಪ್ರಾಂತದಲ್ಲಿರುವ ದೂರಾ ಎಂಬ ಬಯಲಿನಲ್ಲಿ ನಿಲ್ಲಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ದಾನಿಯೇಲ 3:1
29 ತಿಳಿವುಗಳ ಹೋಲಿಕೆ  

ಮರದ ತುಂಡಿಗೆ, ‘ಎಚ್ಚೆತ್ತುಕೊ’; ಜಡಕಲ್ಲಿಗೆ, ‘ಎದ್ದೇಳು’ ಎಂದು ಆಜ್ಞಾಪಿಸುವವನು ನಿಜಕ್ಕೂ ಬುದ್ಧಿಹೀನನು. ಬೊಂಬೆಯು ಬೋಧಿಸಬಲ್ಲದೇ? ಬೆಳ್ಳಿಬಂಗಾರವನ್ನು ಅದಕ್ಕೆ ಹೊದಿಸಿರುವುದೇನೋ ನಿಜ. ಆದರೆ ಅದಕ್ಕೆ ಉಸಿರೋ ಇಲ್ಲವೇ ಇಲ್ಲ.


ಮನುಷ್ಯ ಮಾತ್ರದವನು ದೇವರುಗಳನ್ನು ಕಲ್ಪಿಸಿಕೊಳ್ಳಬಲ್ಲನೆ? ಕಲ್ಪಿಸಿಕೊಂಡರೆ ಅವು ದೇವರುಗಳೇ ಅಲ್ಲ,’ ಎಂದು ನಿವೇದಿಸುವುವು.”


ಸುರಿಯುತ್ತಾರೆ ಜನರು ಚಿನ್ನವನ್ನು ಚೀಲದಿಂದ ತೂಗಿ ತೂಕಹಾಕುತ್ತಾರೆ ಬೆಳ್ಳಿಯನ್ನು ತಕ್ಕಡಿಯಿಂದ. ದೇವರನ್ನು ಮಾಡಿಸುತ್ತಾರೆ ಕೂಲಿಕೊಟ್ಟು ಅಕ್ಕಸಾಲಿಗನಿಂದ ಪೂಜಿಸುತ್ತಾರೆ ಅದನ್ನು ಸಾಷ್ಟಾಂಗ ನಮಸ್ಕಾರದಿಂದ.


“ಅವರು ನನ್ನ ಅನುಮತಿ ಇಲ್ಲದೆ ಅರಸರನ್ನು ನೇಮಿಸಿಕೊಂಡಿದ್ದಾರೆ. ನನಗೆ ತಿಳಿಯದಂತೆ ಅಧಿಪತಿಗಳನ್ನು ಮಾಡಿಕೊಂಡಿದ್ದಾರೆ. ಬೆಳ್ಳಿಬಂಗಾರದ ವಿಗ್ರಹಗಳನ್ನು ನಿರ್ಮಿಸಿಕೊಂಡಿದ್ದಾರೆ. ಅವರು ಮಾಡಿರುವುದೆಲ್ಲ ಅವರ ನಾಶಕ್ಕಾಗಿಯೇ.


ಪೌಲ ಎಂಬವನು ಏನು ಮಾಡುತ್ತಿರುವನೆಂದು ನೀವು ನೋಡಿದ್ದೀರಿ ಹಾಗೂ ಕೇಳಿದ್ದೀರಿ; ಕೈಯಿಂದ ಮಾಡಿದ ಆಕೃತಿಗಳು ದೇವರೇ ಅಲ್ಲವೆಂದು ಇಲ್ಲಿ ಎಫೆಸದಲ್ಲೂ ಹೆಚ್ಚುಕಡಿಮೆ ಇಡೀ ಏಷ್ಯದಲ್ಲೂ ಪ್ರಚಾರಮಾಡುತ್ತಿದ್ದಾನೆ; ಮಾತ್ರವಲ್ಲ, ಅನೇಕ ಜನರನ್ನು ಮನವೊಲಿಸಿ ಮಾರ್ಪಡಿಸಿಬಿಟ್ಟಿದ್ದಾನೆ.


“ನಾವು ದೇವರ ಮಕ್ಕಳಾಗಿರುವುದರಿಂದ ಜನರು ಕಲಾಕುಶಲತೆಯಿಂದಲೂ ಕಲ್ಪನೆಯಿಂದಲೂ ರೂಪಿಸಿದ ಚಿನ್ನ, ಬೆಳ್ಳಿ, ಶಿಲೆಗಳ ಪ್ರತಿಮೆಗೆ ದೇವರು ಸಮಾನರೆಂದು ಭಾವಿಸಲಾಗದು.


ಆ ದಿನ ಬಂದಾಗ ಮಾನವರು ತಮ್ಮ ಪೂಜೆಗೋಸ್ಕರ ಮಾಡಿಸಿಕೊಂಡ ಬೆಳ್ಳಿಯ ಬೊಂಬೆಗಳನ್ನೂ ಬಂಗಾರದ ವಿಗ್ರಹಗಳನ್ನೂ ಇಲಿ ಹೆಗ್ಗಣಗಳ ಬಿಲಗಳಲ್ಲಿ ಬಿಸಾಡುವರು.


ರಾಷ್ಟ್ರಗಳ ವಿಗ್ರಹಗಳು ಬರೀ ಬೆಳ್ಳಿಬಂಗಾರ I ಅವುಗಳೆಲ್ಲ ಮಾನವನ ಕೈಕೆಲಸಗಳು ಮಾತ್ರ II


ಬಹಳವಾಗಿ ಆಲೋಚಿಸಿ, ಕಡೆಗೆ ಬಂಗಾರದ ಎರಡು ಹೋರಿಕರುಗಳ ಮೂರ್ತಿಗಳನ್ನು ಮಾಡಿಸಿ, ಇಸ್ರಯೇಲರಿಗೆ, “ನೀವು ಜಾತ್ರೆಗಾಗಿ ಜೆರುಸಲೇಮಿಗೆ ಹೋದದ್ದು ಇನ್ನು ಸಾಕು. ಇಗೋ, ನಿಮ್ಮನ್ನು ಈಜಿಪ್ಟಿನಿಂದ ಕರೆದುತಂದ ದೇವರುಗಳು ಇಲ್ಲಿರುತ್ತವೆ,” ಎಂದು ಹೇಳಿ


ಪರಲೋಕದ ಒಡೆಯನಿಗೆ ವಿರುದ್ಧವಾಗಿ ನಿಮ್ಮನ್ನೆ ಹೆಚ್ಚಿಸಿಕೊಂಡಿದ್ದೀರಿ. ದೇವಾಲಯದಿಂದ ಪವಿತ್ರ ಪೂಜಾಪಾತ್ರೆಗಳನ್ನು ಇಲ್ಲಿಗೆ ತಂದಿದ್ದೀರಿ. ನೀವೂ ನಿಮ್ಮ ರಾಜ್ಯದ ಪ್ರಮುಖರೂ ಪತ್ನಿ-ಉಪಪತ್ನಿಯರೂ ಅವುಗಳಲ್ಲಿ ದ್ರಾಕ್ಷಾರಸವನ್ನೂ ಕುಡಿದಿದ್ದೀರಿ. ಬುದ್ಧಿ, ಕಣ್ಣು, ಕಿವಿ ಇಲ್ಲದೆ ಬೆಳ್ಳಿಬಂಗಾರಗಳ, ಕಂಚುಕಬ್ಬಿಣಗಳ, ಮರ ಕಲ್ಲುಗಳ ದೇವರುಗಳನ್ನೂ ಆರಾಧಿಸಿದ್ದೀರಿ. ನಿಮ್ಮ ಪ್ರಾಣ ಯಾರ ಕೈಯಲ್ಲಿದೆಯೋ ನಿಮ್ಮ ಸ್ಥಿತಿಗತಿಗಳು ಯಾರ ಅಧೀನದಲ್ಲಿದೆಯೋ ಆ ದೇವರನ್ನು ಮಾತ್ರ ಗೌರವಿಸದೆ ಇದ್ದೀರಿ.


ಬಳಿಕ ರಾಜನು ದಾನಿಯೇಲನನ್ನು ದೊಡ್ಡ ಪದವಿಗೆ ಏರಿಸಿದನು. ಅಮೂಲ್ಯವಾದ ಬಹುಮಾನಗಳನ್ನು ಕೊಟ್ಟನು. ಬಾಬಿಲೋನಿನ ಸಂಸ್ಥಾನವನ್ನೆಲ್ಲ ಅವನಿಗೆ ಅಧೀನಪಡಿಸಿ ಬಾಬಿಲೋನಿನ ಎಲ್ಲಾ ವಿದ್ವಾಂಸರಿಗೂ ಅವನನ್ನು ಅಧ್ಯಕ್ಷನನ್ನಾಗಿ ನೇಮಿಸಿದನು.


ಆ ಬೊಂಬೆಗಳ ಭೂಷಣಕ್ಕಾಗಿ ಸಾಗಿಬರುತ್ತವೆ ತಾರ್ಷೀಷಿನಿಂದ ಬೆಳ್ಳೀತಗಡುಗಳು, ಊಫಜಿನಿಂದ ಚಿನ್ನ. ಅವು ಕೆತ್ತನೆಗಾರನ, ಎರಕದವನ ಕೈಕೆಲಸಗಳು ಅವುಗಳ ಉಡುಪು ನೀಲಧೂಮ್ರ ವರ್ಣದ ವಸ್ತ್ರಗಳು. ಇವೆಲ್ಲವು ಕೇವಲ ಕಲಾಕುಶಲರ ಕೌಶಲ್ಯಗಳು.


ಆಗ ಬೆಳ್ಳಿಯ ಕವಚಗಳಿಂದ ಕೂಡಿದ ನಿಮ್ಮ ವಿಗ್ರಹಗಳನ್ನೂ ಚಿನ್ನದಿಂದ ಲೇಪಿತವಾದ ನಿಮ್ಮ ಬೊಂಬೆಗಳನ್ನೂ ಬಿಸಾಡುವಿರಿ. ಅವುಗಳನ್ನು ಹೊಲೆಮಾಡಿ ‘ತೊಲಗಿ’ ಎಂದು ಹೇಳುತ್ತಾ ಎಸೆದುಬಿಡುವಿರಿ.


“ಆ ಜನರು ದೇವರೆಂದು ಮಾಡಿಕೊಂಡ ಮರದ ವಿಗ್ರಹಗಳನ್ನು ನೀವು ಬೆಂಕಿಯಿಂದ ಸುಟ್ಟುಬಿಡಬೇಕು. ಆ ವಿಗ್ರಹಗಳ ಮೇಲಿರುವ ಬೆಳ್ಳಿಬಂಗಾರವನ್ನು ನೀವು ಬಯಸಬಾರದು. ಅದನ್ನು ತೆಗೆದುಕೊಂಡರೆ ಅದೇ ನಿಮಗೆ ಉರುಲಾಗುವದು. ಅದು ನಿಮ್ಮ ದೇವರಾದ ಸರ್ವೇಶ್ವರನಿಗೆ ಹೇಯವಾದುದು; ಅವರಿಂದ ಶಾಪಗ್ರಸ್ತವಾದುದು.


ಅಂತೆಯೇ ಮೋಶೆ ಸರ್ವೇಶ್ವರನ ಬಳಿಗೆ ಮರಳಿ ಬಂದು, “ಅಕಟಕಟಾ, ಚಿನ್ನದಿಂದ ದೇವರನ್ನು ಮಾಡಿಕೊಂಡು ಈ ಜನರು ಮಹಾಪಾಪವನ್ನು ಕಟ್ಟಿಕೊಂಡಿದ್ದಾರೆ! ಆದರೂ ಕರುಣೆಯಿಟ್ಟು ಅವರ ಪಾಪವನ್ನು ಕ್ಷಮಿಸಿಬಿಡಿ.


ಆದ್ದರಿಂದ ನೀವು ನನಗೆ ಪ್ರತಿಯಾಗಿ ಬೆಳ್ಳಿಬಂಗಾರಗಳಿಂದ ದೇವರುಗಳನ್ನು ಮಾಡಿಕೊಳ್ಳಬಾರದು,


ಆ ವಿಪತ್ತುಗಳಿಂದ ಸಾಯದೆ ಬದುಕಿದ್ದ ಜನರು ತಮ್ಮ ದುಷ್ಕೃತ್ಯಗಳನ್ನು ಬಿಟ್ಟು ದೇವರಿಗೆ ಅಭಿಮುಖರಾಗಲೇ ಇಲ್ಲ; ದೆವ್ವಾರಾಧನೆಯನ್ನು ತ್ಯಜಿಸಲಿಲ್ಲ; ನೋಡಲಾರದ, ಕೇಳಿಸಿಕೊಳ್ಳಲಾರದ ಮತ್ತು ನಡೆಯಲಾರದ ವಿಗ್ರಹಗಳನ್ನು ಚಿನ್ನ, ಬೆಳ್ಳಿ, ತಾಮ್ರ, ಕಲ್ಲು ಮತ್ತು ಮರಗಳಲ್ಲಿ ಮಾಡಿ ಪೂಜಿಸುವುದನ್ನು ಕೈಬಿಡಲಿಲ್ಲ.


ಇದಾದ ಬಳಿಕ ರಾಜನು ಶದ್ರಕ್, ಮೇಶಕ್, ಅಬೇದ್‍ನೆಗೋ ಎಂಬುವರನ್ನು ಸಂಸ್ಥಾನದಲ್ಲಿ ಉನ್ನತಪದವಿಗೆ ಏರಿಸಿದನು.


ಭಾರತ (ಇಂಡಿಯಾ) ದೇಶ ಮೊದಲುಗೊಂಡು ಇಥಿಯೋಪಿಯ ದೇಶದವರೆಗೂ ಇದ್ದ ನೂರಿಪ್ಪತ್ತೇಳು ಸಂಸ್ಥಾನಗಳನ್ನು ಅರಸ ಅಹಷ್ವೇರೋಷನು ಆಳುತ್ತಿದ್ದನು.


ಅದರಂತೆಯೇ ಅವರನ್ನು ಹಿಡಿದುತರಲಾಯಿತು. ನೆಬೂಕದ್ನೆಚ್ಚರನು ಅವರಿಗೆ, “ಶದ್ರಕ್, ಮೇಶಕ್, ಹಾಗು ಅಬೇದ್‍ನೆಗೋ ಎಂಬವರೇ, ನೀವು ಬೇಕುಬೇಕೆಂದು, ನನ್ನ ದೇವರಿಗೆ ಸೇವೆಮಾಡದೆ, ನಾನು ಸ್ಥಾಪಿಸಿದ ಬಂಗಾರದ ಪ್ರತಿಮೆಯನ್ನು ಆರಾಧಿಸದೆ ಇರುವಿರೋ?


ಕುಡಿದುಕೊಂಡೇ ಬಂಗಾರ, ಬೆಳ್ಳಿ, ಕಂಚು, ಕಬ್ಬಿಣ, ಮರ ಮತ್ತು ಕಲ್ಲಿನ ತಮ್ಮ ದೇವರುಗಳನ್ನು ಆರಾಧಿಸಿದರು.


ಅವಳಿಗೆ ದವಸಧಾನ್ಯ, ದ್ರಾಕ್ಷಾರಸ, ತೈಲಗಳನ್ನು ಕೊಟ್ಟವನು ನಾನೇ ಎಂಬುದನ್ನು ಅರಿತುಕೊಳ್ಳದೆಹೋದಳು. ನಾನು ಧಾರಾಳವಾಗಿ ಕೊಟ್ಟ ಬೆಳ್ಳಿಬಂಗಾರಗಳನ್ನು ಬಾಳನ ಪೂಜೆಗೆ ಉಪಯೋಗಿಸಿದಳು.


ದಾನಿಯೇಲನ ಕೋರಿಕೆಯ ಪ್ರಕಾರ ರಾಜನು ಶದ್ರಕ್, ಮೇಶಕ್ ಮತ್ತು ಅಬೇದ್‍ನೆಗೋ ಎಂಬುವರನ್ನು ಬಾಬಿಲೋನಿನ ಪ್ರಾಂತ್ಯಾಧಿಪತಿಗಳನ್ನಾಗಿ ನೇಮಿಸಿದನು. ದಾನಿಯೇಲನು ಮಾತ್ರ ಅರಮನೆಯಲ್ಲೇ ಕಾರ್ಯನಿರತನಾದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು