10 ಅರಸನೇ, ತುತ್ತೂರಿ, ಕೊಳಲು, ಕಿನ್ನರಿ, ತಂಬೂರಿ, ವೀಣೆ, ವಾಲಗ ಮುಂತಾದ ಸಕಲ ವಾದ್ಯಗಳ ಧ್ವನಿಯನ್ನು ಕೇಳಿದ ಪ್ರತಿಯೊಬ್ಬನೂ ಅಡ್ಡಬಿದ್ದು ಬಂಗಾರದ ವಿಗ್ರಹವನ್ನು ಪೂಜಿಸಬೇಕು ಎಂದು ತಾವು ಆಜ್ಞೆ ಕೊಟ್ಟಿದ್ದೀರಿ.
10 ತುತೂರಿ, ಕೊಳಲು, ತಂಬೂರಿ, ವೀಣೆ, ಕಿನ್ನರಿ ಮತ್ತು ನಾಗಸ್ವರ ಮುಂತಾದ ಎಲ್ಲಾ ವಿಧವಾದ ವಾದ್ಯಗಳ ಶಬ್ದವನ್ನು ಕೇಳಿದಾಗ ಪ್ರತಿಯೊಬ್ಬ ಮನುಷ್ಯನು ಅಡ್ಡಬಿದ್ದು ಬಂಗಾರದ ಪ್ರತಿಮೆಯನ್ನು ಆರಾಧಿಸಬೇಕೆಂದೂ ಅರಸನು ಆಜ್ಞೆಯನ್ನು ಹೊರಡಿಸಿದ್ದಾನೆ.
ಕೂಡಲೆ ಆಸ್ಥಾನಕ್ಕೆ ಬಂದು ರಾಜಾಜ್ಞೆಯ ಪ್ರಸ್ತಾಪವನ್ನೆತ್ತಿ, “ರಾಜರೇ, ಯಾರೂ ಮೂವತ್ತು ದಿನಗಳ ತನಕ ತಮಗೆ ಹೊರತು ಬೇರೆ ಯಾವ ದೇವರಿಗಾಗಲಿ ಮನುಷ್ಯನಿಗಾಗಲಿ ಪ್ರಾರ್ಥನೆ ಮಾಡಕೂಡದು. ಮಾಡಿದರೆ ಅಂಥವನನ್ನು ಸಿಂಹಗಳ ಗವಿಯಲ್ಲಿ ಹಾಕಲಾಗುವುದು ಎಂಬ ಶಾಸನಕ್ಕೆ ನೀವು ರುಜುಹಾಕಿದಿರಲ್ಲವೆ?” ಎಂದು ಕೇಳಿದರು. ಅದಕ್ಕೆ ರಾಜನು, “ಹೌದು, ಮೇದ್ಯರ ಹಾಗು ಪರ್ಷಿಯರ ಧರ್ಮವಿಧಿಗಳಂತೆ ಅದು ಸ್ಥಿರವಾದ ನಿಬಂಧನೆ,” ಎಂದು ಉತ್ತರಕೊಟ್ಟನು.
ಈಗಲಾದರು ನೀವು ಸಿದ್ಧರಾಗಿದ್ದು ತುತೂರಿ, ಕೊಳಲು, ಕಿನ್ನರಿ, ತಂಬೂರಿ, ವೀಣೆ, ಓಲಗ ಮುಂತಾದ ಸಕಲ ವಾದ್ಯಗಳ ಧ್ವನಿ ಕೇಳಿದ ಕೂಡಲೆ ಅಡ್ಡಬಿದ್ದು ನಾನು ಸ್ಥಾಪಿಸಿದ ಪ್ರತಿಮೆಯನ್ನು ಆರಾಧಿಸಿದರೆ ಸರಿ, ಇಲ್ಲವಾದರೆ ಈ ಗಳಿಗೆಯಲ್ಲೆ ನಿಮ್ಮನ್ನು ಧಗಧಗನೆ ಉರಿಯುವ ಆವಿಗೆಯೊಳಗೆ ಹಾಕಲಾಗುವುದು. ನಿಮ್ಮನ್ನು ನನ್ನ ಕೈಯಿಂದ ಬಿಡಿಸಬಲ್ಲ ದೇವರು ಯಾರಿದ್ದಾನೆ?” ಎಂದು ಹೇಳಿದನು.
ಇದಲ್ಲದೆ, ಅವನು ತಾಳ, ಸ್ವರಮಂಡಲ, ಕಿನ್ನರಿ ಇವುಗಳಿಂದ ಭಜಿಸುವುದಕ್ಕಾಗಿ ಲೇವಿಯರನ್ನು ನೇಮಿಸಿದನು. ದಾವೀದನ ರಾಜದರ್ಶಿಯಾದ ಗಾದ್ ಹಾಗು ಪ್ರವಾದಿ ನಾತಾನ್ ಇವರ ಆಜ್ಞಾನುಸಾರ ಸರ್ವೇಶ್ವರನ ಆಲಯದಲ್ಲಿ ಈ ಗಾಯಕರನ್ನು ಇರಿಸಿದ್ದನು. ಸರ್ವೇಶ್ವರಸ್ವಾಮಿಯೇ ಪ್ರವಾದಿಗಳ ಮುಖಾಂತರ ಹೀಗೆ ಆಜ್ಞಾಪಿಸಿದ್ದರು.