Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ದಾನಿಯೇಲ 3:15 - ಕನ್ನಡ ಸತ್ಯವೇದವು C.L. Bible (BSI)

15 ಈಗಲಾದರು ನೀವು ಸಿದ್ಧರಾಗಿದ್ದು ತುತೂರಿ, ಕೊಳಲು, ಕಿನ್ನರಿ, ತಂಬೂರಿ, ವೀಣೆ, ಓಲಗ ಮುಂತಾದ ಸಕಲ ವಾದ್ಯಗಳ ಧ್ವನಿ ಕೇಳಿದ ಕೂಡಲೆ ಅಡ್ಡಬಿದ್ದು ನಾನು ಸ್ಥಾಪಿಸಿದ ಪ್ರತಿಮೆಯನ್ನು ಆರಾಧಿಸಿದರೆ ಸರಿ, ಇಲ್ಲವಾದರೆ ಈ ಗಳಿಗೆಯಲ್ಲೆ ನಿಮ್ಮನ್ನು ಧಗಧಗನೆ ಉರಿಯುವ ಆವಿಗೆಯೊಳಗೆ ಹಾಕಲಾಗುವುದು. ನಿಮ್ಮನ್ನು ನನ್ನ ಕೈಯಿಂದ ಬಿಡಿಸಬಲ್ಲ ದೇವರು ಯಾರಿದ್ದಾನೆ?” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

15 “ಈಗಲಾದರೂ ನೀವು ಸಿದ್ಧವಾಗಿದ್ದು ತುತ್ತೂರಿ, ಕೊಳಲು, ಕಿನ್ನರಿ, ತಂಬೂರಿ, ವೀಣೆ, ವಾಲಗ ಮುಂತಾದ ಸಕಲ ವಾದ್ಯಗಳ ಧ್ವನಿಯನ್ನು ಕೇಳಿದ ಕೂಡಲೆ ಅಡ್ಡಬಿದ್ದು, ನಾನು ನಿಲ್ಲಿಸಿದ ಪ್ರತಿಮೆಯನ್ನು ಪೂಜಿಸಿದರೆ ಸರಿ; ಇಲ್ಲವಾದರೆ ತಕ್ಷಣವೇ ಧಗಧಗನೆ ಉರಿಯುವ ಬೆಂಕಿಯೊಳಗೆ ಹಾಕಲ್ಪಡುವಿರಿ; ನಿಮ್ಮನ್ನು ನನ್ನ ಕೈಯೊಳಗಿಂದ ಬಿಡಿಸಬಲ್ಲ ದೇವರು ಯಾರು?” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

15 ಈಗಲಾದರೂ ನೀವು ಸಿದ್ಧವಾಗಿದ್ದು ತುತೂರಿ ಕೊಳಲು ಕಿನ್ನರಿ ತಂಬೂರಿ ವೀಣೆ ವಾಲಗ ಮುಂತಾದ ಸಕಲ ವಾದ್ಯಗಳ ಧ್ವನಿಯನ್ನು ಕೇಳಿದ ಕೂಡಲೆ ಅಡ್ಡಬಿದ್ದು ನಾನು ನಿಲ್ಲಿಸಿದ ಪ್ರತಿಮೆಯನ್ನು ಪೂಜಿಸಿದರೆ ಸರಿ; ಇಲ್ಲವಾದರೆ ತಕ್ಷಣವೇ ಧಗಧಗನೆ ಉರಿಯುವ ಆವಿಗೆಯೊಳಗೆ ಹಾಕಲ್ಪಡುವಿರಿ; ನಿಮ್ಮನ್ನು ನನ್ನ ಕೈಯೊಳಗಿಂದ ಬಿಡಿಸಬಲ್ಲ ದೇವರು ಯಾರು ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

15 ಈಗಲಾದರೋ ತುತ್ತೂರಿ, ಕೊಳಲು, ಕಿನ್ನರಿ, ತಂಬೂರಿ, ವೀಣೆ, ವಾಲಗ ಮುಂತಾದ ಸಕಲ ವಾದ್ಯಗಳ ಧ್ವನಿಯನ್ನು ಕೇಳಿದ ಕೂಡಲೆ ನೀವು ಅಡ್ಡಬಿದ್ದು ಚಿನ್ನದ ವಿಗ್ರಹವನ್ನು ಪೂಜಿಸಬೇಕು. ನಾನು ಮಾಡಿಸಿದ ಈ ವಿಗ್ರಹವನ್ನು ಪೂಜಿಸಲು ನೀವು ಸಿದ್ಧರಾಗಿದ್ದರೆ ಸರಿ. ನೀವು ಅದನ್ನು ಪೂಜಿಸದಿದ್ದರೆ ತಕ್ಷಣ ನಿಮ್ಮನ್ನು ಉರಿಯುವ ಕೊಂಡದಲ್ಲಿ ಎಸೆಯಲಾಗುವುದು. ಆಗ ನನ್ನ ಕೈಯಿಂದ ನಿಮ್ಮನ್ನು ಬಿಡಿಸುವುದು ಯಾವ ದೇವರಿಗೂ ಸಾಧ್ಯವಾಗಲಾರದು” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

15 ಈಗ ನೀವು ಸಿದ್ಧವಾಗಿದ್ದು ತುತೂರಿ, ಕೊಳಲು, ತಂಬೂರಿ, ವೀಣೆ, ಕಿನ್ನರಿ, ನಾದಸ್ವರ ಎಲ್ಲಾ ವಿಧವಾದ ವಾದ್ಯಗಳ ಶಬ್ದವನ್ನು ಕೇಳುವ ಸಮಯದಲ್ಲಿ ನಾನು ಮಾಡಿಸಿದ ಪ್ರತಿಮೆಯನ್ನು ಆರಾಧಿಸಿದರೆ ಸರಿ, ಆರಾಧಿಸದಿದ್ದರೆ ಅದೇ ಗಳಿಗೆಯಲ್ಲಿ ಉರಿಯುವ ಬೆಂಕಿಯ ಕುಲುಮೆಯ ಮಧ್ಯದಲ್ಲಿ ಹಾಕಲಾಗುವಿರಿ. ನನ್ನ ಕೈಯಿಂದ ನಿಮ್ಮನ್ನು ಬಿಡಿಸುವ ಆ ದೇವರು ಯಾರು?” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ದಾನಿಯೇಲ 3:15
25 ತಿಳಿವುಗಳ ಹೋಲಿಕೆ  

ಅದಕ್ಕೆ ಪ್ರತ್ಯುತ್ತರವಾಗಿ ಪೇತ್ರ ಮತ್ತು ಉಳಿದ ಪ್ರೇಷಿತರು, “ನಾವು ವಿಧೇಯರಾಗಬೇಕಾದದ್ದು ದೇವರಿಗೆ, ಮಾನವರಿಗಲ್ಲ.


ನಾವು ಸೇವೆಮಾಡುವ ದೇವರಿಗೆ ಚಿತ್ತವಿದ್ದರೆ ಅವರೇ ಧಗಧಗನೆ ಉರಿಯುವ ಆವಿಗೆಯೊಳಗಿಂದಲೂ ನಮ್ಮನ್ನು ಕಾಪಾಡಬಲ್ಲರು. ಅವರೇ ನಮ್ಮನ್ನು ನಿಮ್ಮ ಕೈಯಿಂದಲೂ ಬಿಡಿಸಬಲ್ಲರು.


ಯಾವ ರಾಷ್ಟ್ರದ ದೇವರುಗಳೂ ತಮ್ಮ ನಾಡನ್ನು ನನ್ನ ಕೈಯಿಂದ ಬಿಡಿಸಲಾಗದೆ ಹೋದಮೇಲೆ ಜೆರುಸಲೇಮನ್ನು ನನ್ನ ಕೈಗೆ ಸಿಕ್ಕದಂತೆ ತಪ್ಪಿಸಿ ಕಾಪಾಡಲು ಸರ್ವೇಶ್ವರನಿಗೆ ಸಾಧ್ಯವೋ?”, ಎಂದು ಕೇಳಿದನು.


ಅದಕ್ಕೆ ಫರೋಹನು, “ 'ಸರ್ವೇಶ್ವರ' ಎಂಬುವನು ಯಾರು? ನಾನು ಅವನ ಮಾತನ್ನು ಕೇಳಿ ಇಸ್ರಯೇಲರನ್ನು ಹೋಗಬಿಡಬೇಕೊ? ಆ ಸರ್ವೇಶ್ವರನು ಯಾರೋ ನನಗೆ ಗೊತ್ತಿಲ್ಲ. ಇಸ್ರಯೇಲರನ್ನು ನಾನು ಹೋಗಬಿಡುವುದಿಲ್ಲ,” ಎಂದು ಬಿಟ್ಟನು.


ಆಗ ಪೇತ್ರ ಮತ್ತು ಯೊವಾನ್ನರು, “ನಾವು ದೇವರಿಗೆ ವಿಧೇಯರಾಗಬೇಕೋ? ನಿಮಗೆ ವಿಧೇಯರಾಗಬೇಕೋ? ದೇವರ ದೃಷ್ಟಿಯಲ್ಲಿ ಯಾವುದು ಸರಿ? ನೀವೇ ನಿರ್ಣಯಿಸಿರಿ.


ನಿಮ್ಮನ್ನು ಬಂಧಿಸಿ ನ್ಯಾಯವಿಚಾರಣೆಗೆ ಗುರಿಪಡಿಸಿದಾಗ ಏನು ಹೇಳುವುದು ಎಂದು ಮುಂಚಿತವಾಗಿಯೇ ಚಿಂತಾಕ್ರಾಂತರಾಗದಿರಿ. ಆ ಗಳಿಗೆಯಲ್ಲಿ ನಿಮಗೆ ಅನುಗ್ರಹಿಸಲಾಗುವ ಮಾತುಗಳನ್ನೇ ನುಡಿಯಿರಿ. ಏಕೆಂದರೆ, ಮಾತನಾಡುವವರು ನೀವಲ್ಲ, ಪವಿತ್ರಾತ್ಮ.


ಈ ಕಾರಣ ರಾಜನು ಅಪ್ಪಣೆ ಕೊಡಲೇಬೇಕಾಯಿತು. ಕೂಡಲೆ ಅವರು ದಾನಿಯೇಲನನ್ನು ತಂದು ಸಿಂಹಗಳ ಗವಿಯಲ್ಲಿ ಹಾಕಿಯೇಬಿಟ್ಟರು. ಆಗ ರಾಜನು ದಾನಿಯೇಲನಿಗೆ, “ನೀನು ದಿನನಿತ್ಯವೂ ಆರಾಧಿಸುವ ದೇವರು ನಿನ್ನನ್ನು ಉದ್ಧರಿಸಲಿ!” ಎಂದು ಹರಸಿದನು.


ನ್ಯಾಯಸಭೆಯಲ್ಲಿ ಕುಳಿತಿದ್ದವರೆಲ್ಲರೂ ಅವನ ಮುಖವನ್ನೇ ದಿಟ್ಟಿಸಿ ನೋಡಿದರು. ಅದು ದೇವದೂತನ ಮುಖದಂತೆ ಕಂಗೊಳಿಸಿತು.


ಮುಂದಿನ ವರ್ಷ ಹಣ್ಣು ಬಿಟ್ಟರೆ ಸರಿ; ಇಲ್ಲದಿದ್ದರೆ ಕಡಿದುಹಾಕೋಣ,’ ಎಂದನು.”


“ಪ್ರಾರ್ಥನಾಮಂದಿರಗಳಿಗೆ ಮತ್ತು ನ್ಯಾಯಾಧಿಪತಿಗಳ ಹಾಗೂ ದೇಶಾಧಿಕಾರಿಗಳ ಮುಂದೆ ನಿಮ್ಮನ್ನು ಎಳೆದೊಯ್ಯುವಾಗ ಹೇಗೆ ವಾದಿಸುವುದು, ಏನು ಹೇಳುವುದು ಎಂದು ಚಿಂತಾಕ್ರಾಂತರಾಗಬೇಡಿ.


ದಾನಿಯೇಲನಿದ್ದ ಗವಿಯ ಸಮೀಪಕ್ಕೆ ಬಂದು, ದುಃಖ ಧ್ವನಿಯಿಂದ ದಾನಿಯೇಲನನ್ನು ಕೂಗಿ, “ದಾನಿಯೇಲನೇ, ಜೀವಸ್ವರೂಪನಾದ ದೇವರ ದಾಸನೇ, ನೀನು ದಿನನಿತ್ಯವೂ ಆರಾಧಿಸುವ ನಿನ್ನ ದೇವರಿಗೆ ನಿನ್ನನ್ನು ಸಿಂಹಗಳಿಂದ ಉದ್ಧರಿಸಲು ಸಾಧ್ಯವಾಯಿತೋ?” ಎಂದು ಕೇಳಿದನು.


ನೀನು ನಿಂದಿಸಿ ದೂಷಿಸುತ್ತಿರುವುದು ಯಾರನ್ನು? ಕಿರಿಚಿ ಹೀಯಾಳಿಸುತ್ತಿರುವುದು ಯಾರನ್ನು? ಗರ್ವದಿಂದ ದುರುಗುಟ್ಟಿ ನೋಡಿದುದು ಯಾರನ್ನು? ಇಸ್ರಯೇಲರ ಪರಮಪಾವನ ಸ್ವಾಮಿಯನ್ನಲ್ಲವೇನು?


ಇಲ್ಲವಾದರೆ ನೀವು ಬರೆದಿರುವ (ಜೀವಿತರ) ಪಟ್ಟಿಯಿಂದ ನನ್ನ ಹೆಸರನ್ನು ಅಳಿಸಿಬಿಡಿಯೆಂದು ಕೇಳಿಕೊಳ್ಳುತ್ತೇನೆ,” ಎಂದು ಪ್ರಾರ್ಥಿಸಿದನು.


ದೇವರಲ್ಲಿ ಭರವಸೆಯಿಟ್ಟಿದ್ದ; ತಾನು ‘ದೇವರ ಪುತ್ರ’ ಎಂದು ಹೇಳಿಕೊಳ್ಳುತ್ತಿದ್ದ; ದೇವರಿಗೆ ಇಷ್ಟವಾದವನು ಇವನಾಗಿದ್ದರೆ ದೇವರೇ ಬಂದು ಇವನನ್ನು ಬಿಡುಗಡೆಮಾಡಲಿ,” ಎಂದು ಅಪಹಾಸ್ಯಮಾಡುತ್ತಿದ್ದರು.


ನಿಮ್ಮನ್ನು ಹಿಡಿದೊಪ್ಪಿಸುವಾಗ ಹೇಗೆ ವಾದಿಸುವುದು, ಏನು ಹೇಳುವುದು ಎಂದು ಚಿಂತಾಕ್ರಾಂತರಾಗಬೇಡಿ. ಏಕೆಂದರೆ ನೀವು ಹೇಳಬೇಕಾದುದ್ದನ್ನು ಅದೇ ಗಳಿಗೆಯಲ್ಲಿ ನಿಮಗೆ ಕಲಿಸಿಕೊಡಲಾಗುವುದು.


ಕಾಲ ಬದಲಾಗುತ್ತಿರುತ್ತದೆ ಎಂದುಕೊಂಡೇ ನನ್ನ ಮುಂದೆ ಇಲ್ಲಸಲ್ಲದ್ದನ್ನು ಆಡಲು ಒಪ್ಪಂದ ಮಾಡಿಕೊಂಡಿದ್ದೀರಿ. ಅಂತು ಆ ಕನಸನ್ನು ನೀವು ನನಗೆ ತಿಳಿಸಲೇಬೇಕು. ಆಗ ಅದರ ಉದ್ದೇಶವನ್ನು ವಿವರಿಸಬಲ್ಲಿರೆಂದು ನಾನು ತಿಳಿದುಕೊಳ್ಳುವೆನು,” ಎಂದು ಹೇಳಿದನು.


ದಾನಿಯೇಲನ ವಿವರಕ್ಕೆ ಉತ್ತರವಾಗಿ, “ನೀನು ಈ ಗುಟ್ಟನ್ನು ಬಯಲಿಗೆ ತರಲು ಸಮರ್ಥನಾದ ಕಾರಣ ನಿಮ್ಮ ದೇವರು ದೇವಾಧಿದೇವರು, ರಾಜಾಧಿರಾಜರು, ಗುಟ್ಟನ್ನು ಬಟ್ಟಬಯಲಾಗಿಸುವವರು! ಇದು ಸತ್ಯ,” ಎಂದು ಹೇಳಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು