Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ದಾನಿಯೇಲ 3:16 - ಕನ್ನಡ ಸತ್ಯವೇದವು C.L. Bible (BSI)

16 ಇದನ್ನು ಕೇಳಿದ ಶದ್ರಕ್, ಮೇಶಕ್ ಮತ್ತು ಅಬೇದ್‍ನೆಗೋ ಎಂಬುವರು ರಾಜನಿಗೆ: “ನೆಬೂಕದ್ನೆಚ್ಚರ ಅರಸರೇ, ಈ ವಿಷಯದಲ್ಲಿ ನಾವು ನಿಮಗೆ ಏನನ್ನೂ ಹೇಳಬೇಕಾಗಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

16 ಇದನ್ನು ಕೇಳಿ ಶದ್ರಕ್ ಮೇಶಕ್, ಅಬೇದ್ನೆಗೋ ಎಂಬುವವರು ರಾಜನಿಗೆ, “ನೆಬೂಕದ್ನೆಚ್ಚರನೇ, ಈ ವಿಷಯದಲ್ಲಿ ನಾವು ನಿನಗೆ ಏನೂ ಹೇಳಬೇಕಾಗಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

16 ಇದನ್ನು ಕೇಳಿ ಶದ್ರಕ್ ಮೇಶಕ್ ಅಬೇದ್‍ನೆಗೋ ಎಂಬವರು ರಾಜನಿಗೆ - ನೆಬೂಕದ್ನೆಚ್ಚರನೇ, ಈ ವಿಷಯದಲ್ಲಿ ನಾವು ನಿನಗೆ ಏನೂ ಹೇಳಬೇಕಾಗಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

16 ಇದನ್ನು ಕೇಳಿ ಶದ್ರಕ್, ಮೇಶಕ್, ಅಬೇದ್‌ನೆಗೋ ಎಂಬುವವರು ಅರಸನಿಗೆ, “ನೆಬೂಕದ್ನೆಚ್ಚರನೇ, ಈ ವಿಷಯದಲ್ಲಿ ನಾವು ನಿನಗೆ ಏನೂ ಹೇಳಬೇಕಾಗಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

16 ಆಗ ಶದ್ರಕ್, ಮೇಶಕ್, ಅಬೇದ್‌ನೆಗೋ ಎಂಬವರು ಅರಸನಿಗೆ ಉತ್ತರವಾಗಿ, “ನೆಬೂಕದ್ನೆಚ್ಚರನೇ, ಈ ವಿಷಯದ ಬಗ್ಗೆ ನಾವು ನಿನಗೆ ಉತ್ತರಕೊಡುವ ಅವಶ್ಯಕತೆ ಇಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ದಾನಿಯೇಲ 3:16
4 ತಿಳಿವುಗಳ ಹೋಲಿಕೆ  

ಕಂಚುಕಿಯರ ನಾಯಕನು ಇವರಿಗೆ ನಾಮಕರಣಮಾಡಿ ದಾನಿಯೇಲನಿಗೆ ‘ಬೇಲ್ತೆಶಚ್ಚರ್’, ಹನನ್ಯನಿಗೆ ‘ಶದ್ರಕ್’, ಮಿಶಾಯೇಲನಿಗೆ ‘ಮೇಶಕ್’, ಹಾಗೂ ಅಜರ್ಯನಿಗೆ ‘ಅಬೇದ್‍ನೆಗೋ’, ಎಂಬ ಹೆಸರಿಟ್ಟನು.


ತಾವು ಬಾಬಿಲೋನಿನ ಸಂಸ್ಥಾನಾಧಿಕಾರತ್ವವನ್ನು ವಹಿಸಿಕೊಟ್ಟ ಶದ್ರಕ್, ಮೇಶಕ್ ಹಾಗೂ ಅಬೇದ್‍ನೆಗೋ ಎಂಬ ಕೆಲವು ಮಂದಿ ಯೆಹೂದ್ಯರು ಇದ್ದಾರೆ. ರಾಜರೇ ಅವರು ನಿಮ್ಮನ್ನು ಲಕ್ಷಿಸುವುದಿಲ್ಲ. ನಿಮ್ಮ ದೇವರುಗಳಿಗೆ ಸೇವೆಮಾಡುವುದಿಲ್ಲ, ನೀವು ಸ್ಥಾಪಿಸಿದ ಬಂಗಾರದ ಪ್ರತಿಮೆಯನ್ನು ಆರಾಧಿಸುವುದಿಲ್ಲ,” ಎಂದು ಆಪಾದಿಸಿದರು.


ಆಗ ನೆಬೂಕದ್ನೆಚ್ಚರನು, “ಶದ್ರಕ್, ಮೇಶಕ್ ಹಾಗು ಅಬೇದ್‍ನೆಗೋ ಎಂಬುವರ ದೇವರಿಗೆ ಸ್ತೋತ್ರವಾಗಲಿ! ಆತ ತನ್ನ ದೂತರನ್ನು ಕಳಿಸಿ ತನ್ನಲ್ಲಿ ವಿಶ್ವಾಸವಿಟ್ಟ ಇವರನ್ನು ರಕ್ಷಿಸಿದ್ದಾನೆ. ಇವರೋ ರಾಜಾಜ್ಞೆಯನ್ನೂ ಮೀರಿ ತಮ್ಮ ದೇವರನ್ನೇ ಹೊರತು ಇನ್ನಾವ ದೇವರನ್ನೂ ಪೂಜಿಸಿ ಆರಾಧಿಸಬಾರದೆಂದು ಸ್ವಂತ ದೇಹಗಳನ್ನೇ ಸಾವಿಗೊಪ್ಪಿಸಿದಂಥ ಭಕ್ತರು!


ಒಬ್ಬಂಟಿಗನನ್ನು ಜಯಿಸಬಲ್ಲವನಿಗೆ ಇಬ್ಬರು ಕೂಡ ಎದುರಾಗಿ ನಿಲ್ಲಬಹುದು. ಮೂರು ಹುರಿಗಳಿಂದ ಹೆಣೆದ ಹಗ್ಗ ಸುಲಭವಾಗಿ ಕಿತ್ತುಹೋಗುವುದಿಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು