Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ದಾನಿಯೇಲ 3:2 - ಕನ್ನಡ ಸತ್ಯವೇದವು C.L. Bible (BSI)

2 ಬಳಿಕ ರಾಜ ನೆಬೂಕದ್ನೆಚ್ಚರನು ತಾನು ನಿಲ್ಲಿಸಿದ್ದ ಆ ಪ್ರತಿಮೆಯ ಪ್ರತಿಷ್ಠಾಪನಾ ಸಮಾರಂಭವನ್ನು ಏರ್ಪಡಿಸಿ, ಉಪರಾಜ, ನಾಯಕ, ದೇಶಾಧಿಪತಿ, ಮಂತ್ರಿ, ಕೋಶಾಧ್ಯಕ್ಷ, ನ್ಯಾಯಾಧಿಪತಿ, ವಿಚಾರಕ ಇವರನ್ನೂ, ಸಮಸ್ತ ಸಂಸ್ಥಾನಾಧಿಕಾರಿಗಳನ್ನೂ ಸಭೆ ಸೇರಿಸುವಂತೆ ದೂತರನ್ನು ಕಳುಹಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

2 ಆಗ ರಾಜನಾದ ನೆಬೂಕದ್ನೆಚ್ಚರನು ತಾನು ನಿಲ್ಲಿಸಿದ ಪ್ರತಿಮೆಯ ಪ್ರತಿಷ್ಠೋತ್ಸವಕ್ಕೆ ಉಪರಾಜ, ನಾಯಕ, ದೇಶಾಧಿಪತಿ, ಮಂತ್ರಿ, ಕೋಶಾಧ್ಯಕ್ಷ, ನ್ಯಾಯಾಧಿಪತಿ, ವಿಚಾರಕ ಮುಂತಾದವರನ್ನೂ, ಸಮಸ್ತ ಸಂಸ್ಥಾನಾಧಿಕಾರಿಗಳನ್ನೂ ಒಟ್ಟುಗೂಡಿಸುವಂತೆ ಸಮಾಚಾರವನ್ನು ಕಳುಹಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

2 ಆಗ ರಾಜನಾದ ನೆಬೂಕದ್ನೆಚ್ಚರನು ತಾನು ನಿಲ್ಲಿಸಿದ ಪ್ರತಿಮೆಯ ಪ್ರತಿಷ್ಠೋತ್ಸವಕ್ಕೆ ಉಪರಾಜ, ನಾಯಕ, ದೇಶಾಧಿಪತಿ, ಮಂತ್ರಿ, ಕೋಶಾಧ್ಯಕ್ಷ, ನ್ಯಾಯಾಧಿಪತಿ, ವಿಚಾರಕ ಇವರನ್ನೂ ಸಮಸ್ತ ಸಂಸ್ಥಾನಾಧಿಕಾರಿಗಳನ್ನೂ ಒಟ್ಟುಗೂಡಿಸುವಂತೆ ದೂತರನ್ನು ಕಳುಹಿಸಲು

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

2 ಅರಸನು ಆ ವಿಗ್ರಹದ ಪ್ರತಿಷ್ಠಾಪನೆಯ ಮಹೋತ್ಸವಕ್ಕೆ ಉಪರಾಜರನ್ನು, ನಾಯಕರನ್ನು, ದೇಶಾಧಿಪತಿಗಳನ್ನು, ಮಂತ್ರಿಗಳನ್ನು, ಕೋಶಾಧ್ಯಕ್ಷರನ್ನು, ನ್ಯಾಯಾಧಿಪತಿಗಳನ್ನು ಮತ್ತು ಉಳಿದೆಲ್ಲ ಅಧಿಕಾರಿಗಳನ್ನು ಕರೆಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

2 ಆಮೇಲೆ ನೆಬೂಕದ್ನೆಚ್ಚರನು ಉಪರಾಜರನ್ನೂ ರಾಜ್ಯಪಾಲರನ್ನೂ ಅಧಿಕಾರಸ್ಥರನ್ನೂ ನ್ಯಾಯಾಧಿಪತಿಗಳನ್ನೂ ಖಜಾಂಚಿದವರನ್ನೂ ಮತ್ತು ಸಲಹೆಗಾರರನ್ನೂ ಪಂಡಿತರನ್ನೂ ಎಲ್ಲಾ ಪ್ರಾಂತಗಳ ಅಧಿಕಾರಿಗಳನ್ನೂ ತಾನು ನಿಲ್ಲಿಸಿದ ಪ್ರತಿಮೆಯ ಪ್ರತಿಷ್ಠಾಪನಾ ಸಮಾರಂಭಕ್ಕೆ ಕರೆಯಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ದಾನಿಯೇಲ 3:2
10 ತಿಳಿವುಗಳ ಹೋಲಿಕೆ  

ಅವರನ್ನು ನೋಡಲು ಉಪರಾಜ, ನಾಯಕ, ದೇಶಾಧಿಪತಿ, ಮಂತ್ರಿ ಇವರೆಲ್ಲರು ಕೂಡಿಬಂದರು. ಅವರಿಗೆ ಬೆಂಕಿಯ ತಾಪವೂ ತಟ್ಟಿಲ್ಲ. ತಲೆಗೂದಲೂ ಸುಟ್ಟಿಲ್ಲ, ಅವರ ಬಟ್ಟೆಬರೆಗೆ ಏನೂ ಆಗಿಲ್ಲ, ಬೆಂಕಿಯ ವಾಸನೆಯೂ ಇಲ್ಲ, ಎಂದು ತಿಳಿದುಕೊಂಡರು.


ಸುಳ್ಳುವರದಿಗೆ ಕಿವಿಗೊಡುವ ರಾಜಸೇವಕರೆಲ್ಲರು ದುರುಳರು.


ಅವನು ಎಂಟನೆಯ ತಿಂಗಳ ಹದಿನೈದನೆಯ ದಿವಸ, ನಾಡಿನ ಜಾತ್ರೆಗೆ ಸಮನಾದ ಜಾತ್ರೆ ಬೇತೇಲಿನಲ್ಲಿ ನಡೆಯಬೇಕೆಂದು ಅಪ್ಪಣೆ ಮಾಡಿದನು. ತಾನೂ ಅಲ್ಲಿಗೆ ಹೋಗಿ ಅಲ್ಲಿ ನಿಲ್ಲಿಸಿದ್ದ ಹೋರಿಕರುಗಳ ಮೂರ್ತಿಗಳಿಗೆ, ಪೀಠದ ಮೇಲೆ ಬಲಿ ಅರ್ಪಿಸಿದನು. ತಾನು ಏರ್ಪಡಿಸಿದ ಪೂಜಾಸ್ಥಳಗಳ ಯಾಜಕರನ್ನು ಬೇತೇಲಿನ ದೇವಸ್ಥಾನದ ಸೇವೆಗೆ ನೇಮಿಸಿದನು.


ಶತ್ರುವಾದ ಸಂಸೋನನನ್ನು ತಮ್ಮ ಕೈಗೆ ಒಪ್ಪಿಸಿದ ತಮ್ಮ ದೇವರಾದ ದಾಗೋನನಿಗೆ ಮಹಾಬಲಿಯನ್ನು ಸಮರ್ಪಿಸಿ ಸಂತೋಷಪಡಬೇಕೆಂದು ಫಿಲಿಷ್ಟಿಯರ ಮುಖಂಡರು ಕೂಡಿಬಂದರು.


ಆ ಮಹಿಳೆಯರು ತಮ್ಮ ದೇವತೆಗಳಿಗೆ ಮಾಡಿದ ಬಲಿಔತಣಗಳಲ್ಲಿ ಭಾಗಿಗಳಾಗಲು ಇಸ್ರಯೇಲರನ್ನು ಆಹ್ವಾನಿಸುತ್ತಿದ್ದರು. ಇವರು ಪ್ರಸಾದ ಸ್ವೀಕರಿಸಿ ಆ ದೇವತೆಗಳಿಗೆ ತಲೆಬಾಗುತ್ತಿದ್ದರು.


ಭೂರಾಜರು ಅವಳೊಂದಿಗೆ ಹಾದರ ಮಾಡಿದರು. ಭೂನಿವಾಸಿಗಳು ಅವಳ ಹಾದರವೆಂಬ ಮದ್ಯಸೇವಿಸಿ ಮತ್ತರಾದರು,” ಎಂದು ಹೇಳಿದನು.


ಆ ಉಪರಾಜ, ನಾಯಕ, ದೇಶಾಧಿಪತಿ, ಮಂತ್ರಿ, ಕೋಶಾಧ್ಯಕ್ಷ, ನ್ಯಾಯಾಧಿಪತಿ, ವಿಚಾರಕ ಇವರೂ ಸಮಸ್ತ ಸಂಸ್ಥಾನಾಧಿಕಾರಿಗಳೂ ರಾಜ ನೆಬೂಕದ್ನೆಚ್ಚರನು ನಿಲ್ಲಿಸಿದ್ದ ಪ್ರತಿಮೆಯ ಪ್ರತಿಷ್ಠಾಪನಾ ಸಮಾರಂಭಕ್ಕೆ ನೆರೆದುಬಂದು ಆ ಪ್ರತಿಮೆಯ ಮುಂದೆ ನಿಂತುಕೊಂಡರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು