Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ದಾನಿಯೇಲ 3:22 - ಕನ್ನಡ ಸತ್ಯವೇದವು C.L. Bible (BSI)

22 ರಾಜಾಜ್ಞೆಯು ಖಡಾಖಂಡಿತವಾಗಿದ್ದರಿಂದಲೂ ಆವಿಗೆಯ ಕಾವು ಅತಿ ತೀಕ್ಷ್ಣವಾಗಿದ್ದರಿಂದಲೂ ಅಗ್ನಿಕುಂಡವು ಶದ್ರಕ್, ಮೇಶಕ್ ಮತ್ತು ಅಬೇದ್‍ನೆಗೋ ಎಂಬುವರನ್ನು ಎತ್ತಿ ತಂದವರನ್ನೇ ಭಸ್ಮಮಾಡಿಬಿಟ್ಟಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

22 ಹೀಗಾಗಿ ರಾಜಾಜ್ಞೆಯು ಖಂಡಿತವಾಗಿದ್ದುದರಿಂದಲೂ ಬೆಂಕಿಯ ಕಾವು ಅತಿ ತೀಕ್ಷ್ಣವಾಗಿದ್ದುದರಿಂದಲೂ ಅಗ್ನಿಜ್ವಾಲೆಯು ಶದ್ರಕ್, ಮೇಶಕ್, ಅಬೇದ್ನೆಗೋ ಎಂಬುವವರನ್ನು ಎತ್ತಿ ಹಾಕಿದವರನ್ನೇ ದಹಿಸಿಬಿಟ್ಟಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

22 ಹೀಗಾಗಲು ರಾಜಾಜ್ಞೆಯು ಖಂಡಿತವಾಗಿದದ್ದರಿಂದಲೂ ಆವಿಗೆಯ ಕಾವು ಅತಿತೀಕ್ಷ್ಣವಾಗಿದ್ದದರಿಂದಲೂ ಅಗ್ನಿಜ್ವಾಲೆಯು ಶದ್ರಕ್ ಮೇಶಕ್ ಅಬೇದ್‍ನೆಗೋ ಎಂಬವರನ್ನು ಎತ್ತಿಹಾಕಿದವರನ್ನೇ ಸಂಹರಿಸಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

22 ಆಜ್ಞೆಯನ್ನು ಕೊಟ್ಟಾಗ ಅರಸನು ತುಂಬ ಕೋಪದಲ್ಲಿದ್ದನು. ಆದ್ದರಿಂದ ತಕ್ಷಣ ಕುಲುಮೆಯಲ್ಲಿ ಅತಿ ಹೆಚ್ಚು ಬೆಂಕಿಯನ್ನು ಉರಿಸಲಾಯಿತು. ಆ ಜ್ವಾಲೆ ಎಷ್ಟು ಭಯಂಕರವಾಗಿತ್ತೆಂದರೆ ಶದ್ರಕ್, ಮೇಶಕ್, ಅಬೇದ್‌ನೆಗೋ ಇವರುಗಳನ್ನು ಕುಲುಮೆಯಲ್ಲಿ ಎಸೆಯಲು ಹೋದ ಶಕ್ತಿಶಾಲಿಗಳಾದ ಸೈನಿಕರೇ ಅದರ ತಾಪಕ್ಕೆ ಸತ್ತುಹೋದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

22 ಅರಸನ ಆಜ್ಞೆಯು ಅವಸರವಾಗಿಯೂ, ಕುಲುಮೆಯು ಬಹು ಉರಿಯಾಗಿಯೂ ಇದ್ದುದರಿಂದ, ಬೆಂಕಿಯ ಜ್ವಾಲೆಯು ಶದ್ರಕ್, ಮೇಶಕ್, ಅಬೇದ್‌ನೆಗೋ ಎಂಬವರನ್ನು ಬೆಂಕಿಗೆ ಹಾಕಲು ಎತ್ತಿದ ಆ ಸೈನಿಕರನ್ನೇ ಸಂಹರಿಸಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ದಾನಿಯೇಲ 3:22
10 ತಿಳಿವುಗಳ ಹೋಲಿಕೆ  

ದುರ್ಜನರು ಸಜ್ಜನರಿಗೆ ದ್ರೋಹಿಗಳು; ನೀತಿವಂತರಿಗೆ ಮಾಡಲಾಶಿಸುವ ಕೇಡಿಗೆ ತಾವೇ ಈಡಾಗುವರು.


ಸಜ್ಜನನು ಇಕ್ಕಟ್ಟಿನಿಂದ ಪಾರಾಗುವನು; ದುರ್ಜನನು ಅದರೊಳಗೆ ಸಿಕ್ಕಿಬೀಳುವನು.


ಈಜಿಪ್ಟಿನವರು, “ನಾವೆಲ್ಲರು ಸಾಯುತ್ತೇವೆ,” ಎಂದುಕೊಂಡು ತಮ್ಮ ದೇಶವನ್ನು ಬಿಟ್ಟು ಬೇಗನೆ ಹೋಗಬೇಕೆಂದು ಇಸ್ರಯೇಲರನ್ನು ಒತ್ತಾಯಪಡಿಸಿದರು.


ಅವನನ್ನು ಹುಡುಕಿತರುವಂತೆ ಹೆರೋದನು ಆಜ್ಞಾಪಿಸಿದನು. ಆದರೆ ಅವನನ್ನು ಕಂಡುಹಿಡಿಯಲು ಅವರಿಂದಾಗಲಿಲ್ಲ. ಆದುದರಿಂದ ಪಹರೆಯವರನ್ನೇ ವಿಚಾರಣೆಗೆ ಗುರಿಮಾಡಿ ಅವರಿಗೆ ಮರಣದಂಡನೆಯನ್ನು ವಿಧಿಸಿದನು. ಇದಾದ ಬಳಿಕ ಹೆರೋದನು ಜುದೇಯದಿಂದ ಹೊರಟು ಕೊಂಚಕಾಲ ಸೆಜರೇಯದಲ್ಲಿ ಇದ್ದನು.


ಆಗ ಅವನು ಆ ಹಣವನ್ನು ದೇವಾಲಯದಲ್ಲೇ ಎಸೆದು, ಹೊರಟುಹೋಗಿ ನೇಣುಹಾಕಿಕೊಂಡು ಸತ್ತನು.


ಅನಂತರ ರಾಜನು ಆಜ್ಞಾಪಿಸಲು ದಾನಿಯೇಲನ ಮೇಲೆ ದೂರು ಹೊರಿಸಿದವರನ್ನು ಮಡದಿಮಕ್ಕಳ ಸಮೇತ ತಂದು ಸಿಂಹಗಳ ಗವಿಯಲ್ಲಿ ಹಾಕಿಬಿಟ್ಟರು. ಅವರು ಗವಿಯ ತಳಮುಟ್ಟುವುದರೊಳಗೆ ಸಿಂಹಗಳು ಅವರ ಮೇಲೆ ಹಾರಿ ಅವರ ಎಲುಬುಗಳನ್ನೆಲ್ಲ ಚೂರುಚೂರು ಮಾಡಿದವು.


“ಈ ರಾಜಾಜ್ಞೆಯೇಕೆ ಇಷ್ಟು ತೀಕ್ಷ್ಣ?” ಎಂದು ಕೇಳಿದನು. ಅರ್ಯೋಕನು ನಡೆದ ಸಂಗತಿಯನ್ನು ದಾನಿಯೇಲನಿಗೆ ತಿಳಿಸಿದನು.


ಕಂಚುಕಿಯರ ನಾಯಕನು ಇವರಿಗೆ ನಾಮಕರಣಮಾಡಿ ದಾನಿಯೇಲನಿಗೆ ‘ಬೇಲ್ತೆಶಚ್ಚರ್’, ಹನನ್ಯನಿಗೆ ‘ಶದ್ರಕ್’, ಮಿಶಾಯೇಲನಿಗೆ ‘ಮೇಶಕ್’, ಹಾಗೂ ಅಜರ್ಯನಿಗೆ ‘ಅಬೇದ್‍ನೆಗೋ’, ಎಂಬ ಹೆಸರಿಟ್ಟನು.


ಅವನು ಹೋಗಿ ಶವವು ದಾರಿಯಲ್ಲಿ ಬಿದ್ದಿರುವುದನ್ನೂ ಕತ್ತೆಯೂ ಸಿಂಹವೂ ಅದರ ಬಳಿಯಲ್ಲಿ ನಿಂತಿರುವುದನ್ನೂ ಕಂಡನು. ಸಿಂಹವು ಶವವನ್ನು ತಿನ್ನಲಿಲ್ಲ, ಕತ್ತೆಯನ್ನು ಕೊಲ್ಲಲೂ ಇಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು