ದಾನಿಯೇಲ 3:27 - ಕನ್ನಡ ಸತ್ಯವೇದವು C.L. Bible (BSI)27 ಅವರನ್ನು ನೋಡಲು ಉಪರಾಜ, ನಾಯಕ, ದೇಶಾಧಿಪತಿ, ಮಂತ್ರಿ ಇವರೆಲ್ಲರು ಕೂಡಿಬಂದರು. ಅವರಿಗೆ ಬೆಂಕಿಯ ತಾಪವೂ ತಟ್ಟಿಲ್ಲ. ತಲೆಗೂದಲೂ ಸುಟ್ಟಿಲ್ಲ, ಅವರ ಬಟ್ಟೆಬರೆಗೆ ಏನೂ ಆಗಿಲ್ಲ, ಬೆಂಕಿಯ ವಾಸನೆಯೂ ಇಲ್ಲ, ಎಂದು ತಿಳಿದುಕೊಂಡರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201927 ಅಲ್ಲಿ ಕೂಡಿದ್ದ ಉಪರಾಜ, ನಾಯಕ, ದೇಶಾಧಿಪತಿ, ಮಂತ್ರಿಗಳು ಅವರನ್ನು ನೋಡಿ ಅವರ ಮೇಲೆ ಬೆಂಕಿಯ ಅಧಿಕಾರವು ನಡೆದಿಲ್ಲ, ಅವರ ತಲೆಕೂದಲೂ ಸುಟ್ಟಿಲ್ಲ, ಅವರ ಶಲ್ಯಗಳಿಗೆ ವಿಕಾರವಿಲ್ಲ, ಬೆಂಕಿಯ ವಾಸನೆಯೇ ಮುಟ್ಟಿಲ್ಲ” ಎಂದು ತಿಳಿದುಕೊಂಡರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)27 ಅಲ್ಲಿ ಕೂಡಿದ್ದ ಉಪರಾಜ ನಾಯಕ ದೇಶಾಧಿಪತಿ ಮಂತ್ರಿಗಳು ಅವರನ್ನು ನೋಡಿ ಅವರ ಮೇಲೆ ಬೆಂಕಿಯ ಅಧಿಕಾರವು ನಡೆದಿಲ್ಲ, ಅವರ ತಲೆಕೂದಲೂ ಸುಟ್ಟಿಲ್ಲ, ಅವರ ಶಲ್ಯಗಳಿಗೆ ವಿಕಾರವಿಲ್ಲ, ಬೆಂಕಿಯ ವಾಸನೆಯೇ ಮುಟ್ಟಿಲ್ಲ ಎಂದು ತಿಳಿದುಕೊಂಡರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್27 ಅವರು ಹೊರಗೆ ಬಂದ ಮೇಲೆ ಉಪರಾಜರು, ನಾಯಕರು, ದೇಶಾಧಿಪತಿಗಳು, ಮಂತ್ರಿಗಳು ಮತ್ತು ಇತರರು ಅವರ ಸುತ್ತಲೂ ನೆರೆದರು. ಶದ್ರಕ್, ಮೇಶಕ್, ಅಬೇದ್‌ನೆಗೋ ಇವರುಗಳನ್ನು ಬೆಂಕಿಯು ಸುಟ್ಟಿಲ್ಲ. ಅವರ ದೇಹಕ್ಕೆ ಬೆಂಕಿಯು ಮುಟ್ಟಿಲ್ಲ. ಅವರ ಕೂದಲಿಗೂ ವಸ್ತ್ರಗಳಿಗೂ ಬೆಂಕಿಯು ತಾಕಿಲ್ಲ. ಬೆಂಕಿಯ ಸಮೀಪಕ್ಕೆ ಹೋದ ವಾಸನೆಯೂ ಅವರಿಗೆ ಮುಟ್ಟಿಲ್ಲ ಎಂಬುದನ್ನು ಅವರು ತಿಳಿದುಕೊಂಡರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ27 ಆಗ ಉಪರಾಜರು, ರಾಜ್ಯಪಾಲರು, ಅಧಿಪತಿಗಳು, ಅರಸನ ಆಲೋಚನಾಗಾರರು, ಎಲ್ಲರೂ ಒಟ್ಟುಗೂಡಿ ಅವರನ್ನು ಸುತ್ತುವರಿದು, ಅವರ ಶರೀರದ ಮೇಲೆ ಬೆಂಕಿಯಿಂದ ಯಾವ ಅಪಾಯವಾಗಿರದೇ ಇರುವುದನ್ನೂ, ಅವರ ತಲೆಗೂದಲುಗಳಲ್ಲಿ ಒಂದಾದರೂ ಸುಡದಿರುವುದನ್ನೂ, ಅವರ ಅಂಗಿಗಳು ನಾಶವಾಗದಿರುವುದನ್ನೂ, ಬೆಂಕಿಯ ವಾಸನೆಯೂ ಸಹ ಅವರನ್ನು ಮುಟ್ಟದಿರುವುದನ್ನೂ ಕಂಡರು. ಅಧ್ಯಾಯವನ್ನು ನೋಡಿ |
ರಾಜ್ಯದ ಸಕಲ ಮುಖ್ಯಾಧಿಕಾರಿ, ನಾಯಕ, ಪ್ರಾಂತ್ಯಾಧಿಪತಿ, ಮಂತ್ರಿ, ಸಂಸ್ಥಾನಾಧ್ಯಕ್ಷರು ಇವರೆಲ್ಲರ ಅಭಿಪ್ರಾಯದ ಪ್ರಕಾರ ತಾವು ಒಂದು ಶಾಸನವನ್ನು ಹೊರಡಿಸಬೇಕು. ಯಾವನೂ ಮೂವತ್ತು ದಿನಗಳ ತನಕ ರಾಜರಾದ ತಮಗೆ ಹೊರತು ಬೇರೆ ಯಾವ ದೇವರಿಗಾಗಲಿ, ಮನುಷ್ಯನಿಗಾಗಲಿ ಪ್ರಾರ್ಥನೆ ಮಾಡಬಾರದು; ಮಾಡಿದರೆ ಸಿಂಹಗಳ ಗವಿಗೆ ಹಾಕಲಾಗುವುದು ಎಂದು ರಾಜಾಜ್ಞಾರೂಪವಾಗಿ ನಿಷೇಧಿಸುವುದು ಒಳ್ಳೆಯದು.