Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ದಾನಿಯೇಲ 3:28 - ಕನ್ನಡ ಸತ್ಯವೇದವು C.L. Bible (BSI)

28 ಆಗ ನೆಬೂಕದ್ನೆಚ್ಚರನು, “ಶದ್ರಕ್, ಮೇಶಕ್ ಹಾಗು ಅಬೇದ್‍ನೆಗೋ ಎಂಬುವರ ದೇವರಿಗೆ ಸ್ತೋತ್ರವಾಗಲಿ! ಆತ ತನ್ನ ದೂತರನ್ನು ಕಳಿಸಿ ತನ್ನಲ್ಲಿ ವಿಶ್ವಾಸವಿಟ್ಟ ಇವರನ್ನು ರಕ್ಷಿಸಿದ್ದಾನೆ. ಇವರೋ ರಾಜಾಜ್ಞೆಯನ್ನೂ ಮೀರಿ ತಮ್ಮ ದೇವರನ್ನೇ ಹೊರತು ಇನ್ನಾವ ದೇವರನ್ನೂ ಪೂಜಿಸಿ ಆರಾಧಿಸಬಾರದೆಂದು ಸ್ವಂತ ದೇಹಗಳನ್ನೇ ಸಾವಿಗೊಪ್ಪಿಸಿದಂಥ ಭಕ್ತರು!

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

28 ಆಗ ನೆಬೂಕದ್ನೆಚ್ಚರನು, “ಶದ್ರಕ್, ಮೇಶಕ್, ಅಬೇದ್ನೆಗೋ ಎಂಬುವವರ ದೇವರಿಗೆ ಸ್ತೋತ್ರವಾಗಲಿ! ಆತನು ತನ್ನ ದೂತನನ್ನು ಕಳುಹಿಸಿ ತನ್ನಲ್ಲಿ ಭರವಸವಿಟ್ಟು ರಾಜಾಜ್ಞೆಯನ್ನು ಜಯಿಸಿ ತನ್ನನ್ನೇ ಹೊರತು ಇನ್ನಾವ ದೇವರನ್ನೂ ಸೇವಿಸಿ ಪೂಜಿಸಬಾರದೆಂದು ಸ್ವದೇಹಗಳನ್ನು ಮರಣಕ್ಕೆ ಒಪ್ಪಿಸಿದ ತನ್ನ ಸೇವಕರನ್ನು ಉದ್ಧರಿಸಿದ್ದಾನಲ್ಲವೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

28 ಆಗ ನೆಬೂಕದ್ನೆಚ್ಚರನು - ಶದ್ರಕ್ ಮೇಶಕ್ ಅಬೇದ್‍ನೆಗೋ ಎಂಬವರ ದೇವರಿಗೆ ಸ್ತೋತ್ರವಾಗಲಿ! ಆತನು ತನ್ನ ದೂತನನ್ನು ಕಳುಹಿಸಿ ತನ್ನಲ್ಲಿ ಭರವಸವಿಟ್ಟು ರಾಜಾಜ್ಞೆಯನ್ನು ಜಯಿಸಿ ತನ್ನನ್ನೇ ಹೊರತು ಇನ್ನಾವ ದೇವರನ್ನೂ ಸೇವಿಸಿ ಪೂಜಿಸಬಾರದೆಂದು ಸ್ವದೇಹಗಳನ್ನು ಮರಣಕ್ಕೆ ಒಪ್ಪಿಸಿದ ತನ್ನ ಸೇವಕರನ್ನು ಉದ್ಧರಿಸಿದ್ದಾನಲ್ಲಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

28 ಆಗ ನೆಬೂಕದ್ನೆಚ್ಚರನು, “ಶದ್ರಕ್, ಮೇಶಕ್, ಅಬೇದ್‌ನೆಗೋ ಇವರುಗಳ ದೇವರಿಗೆ ಸ್ತೋತ್ರವಾಗಲಿ. ಅವರ ದೇವರು ತನ್ನ ದೂತನನ್ನು ಕಳುಹಿಸಿ ತನ್ನ ಸೇವಕರನ್ನು ಬೆಂಕಿಯಿಂದ ರಕ್ಷಿಸಿದ್ದಾನೆ. ಈ ಮೂರು ಜನರು ತಮ್ಮ ದೇವರ ಮೇಲೆ ವಿಶ್ವಾಸವಿಟ್ಟರು. ಅವರು ನನ್ನ ಆಜ್ಞೆಯನ್ನು ಪಾಲಿಸಲು ಒಪ್ಪಲಿಲ್ಲ. ಬೇರೆ ಯಾವ ದೇವರನ್ನೂ ಪೂಜಿಸುವುದಕ್ಕೆ ಅಥವಾ ಸೇವಿಸುವುದಕ್ಕೆ ಬದಲಾಗಿ ಸಾಯಲು ಅವರು ಸಿದ್ಧರಾಗಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

28 ನೆಬೂಕದ್ನೆಚ್ಚರನು ಮಾತನಾಡಿ, “ಶದ್ರಕ್, ಮೇಶಕ್, ಅಬೇದ್‌ನೆಗೋ ಎಂಬುವರ ದೇವರಿಗೆ ಸ್ತೋತ್ರವಾಗಲಿ. ಅವರು ತಮ್ಮ ದೂತನನ್ನು ಕಳುಹಿಸಿ, ತಮ್ಮ ಸೇವಕರನ್ನು ರಕ್ಷಿಸಿದ್ದಾರೆ. ಅವರು ದೇವರಲ್ಲಿ ನಂಬಿಕೆ ಇಟ್ಟರು. ಅರಸನ ಆಜ್ಞೆಯನ್ನು ಮೀರಿದರು. ಸ್ವಂತ ದೇವರನ್ನೇ ಹೊರತು ಬೇರೆ ಯಾವ ದೇವರನ್ನೂ ಸೇವಿಸದೆ, ಆರಾಧಿಸದೆ ಇರುವ ಹಾಗೆ ತಮ್ಮ ಪ್ರಾಣಗಳನ್ನು ಕೊಡಲೂ ಸಿದ್ಧರಾದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ದಾನಿಯೇಲ 3:28
45 ತಿಳಿವುಗಳ ಹೋಲಿಕೆ  

ಅವುಗಳಿಗೆ ಅಡ್ಡಬೀಳಬೇಡ, ಅವುಗಳನ್ನು ಆರಾಧಿಸಬೇಡ. ಏಕೆಂದರೆ ನಾನೇ ನಿನ್ನ ದೇವರಾದ ಸರ್ವೇಶ್ವರ. ನನಗೆ ಸಲ್ಲತಕ್ಕ ಗೌರವವನ್ನು ನಾನು ಮತ್ತೊಬ್ಬರಿಗೆ ಸಲ್ಲಗೊಡಿಸುವುದಿಲ್ಲ. ನನ್ನನ್ನು ದ್ವೇಷಿಸುವವರನ್ನು ದಂಡಿಸುತ್ತೇನೆ; ಅವರ ದೋಷಫಲವನ್ನು ಅವರ ಮಕ್ಕಳ ಮೇಲೆ ಮೂರು ನಾಲ್ಕು ತಲೆಗಳವರೆಗೆ ಬರಮಾಡುತ್ತೇನೆ.


ಜಯಿಸಿದರು ಸೋದರರು ಆ ನಿಂದಕನನ್ನು ಯಜ್ಞದ ಕುರಿಮರಿಯ ರಕ್ತದಿಂದ ಸತ್ಯಕ್ಕೆ ಸಾಕ್ಷಿಯನ್ನಿತ್ತುದರಿಂದ ಜೀವದಾಶೆಯನು ತೊರೆದುದರಿಂದ ಮರಣದ ಭಯವನು ಬಿಸುಟುದರಿಂದ.


ಆದುದರಿಂದ ಸಹೋದರರೇ, ದೇವರ ಅಪಾರ ಕೃಪೆಯನ್ನು ನಿಮ್ಮ ನೆನಪಿಗೆ ತಂದು ನಾನು ಬೇಡಿಕೊಳ್ಳುವುದೇನೆಂದರೆ: ನಿಮ್ಮನ್ನೇ ದೇವರಿಗೆ ಮೀಸಲಾದ, ಮೆಚ್ಚುಗೆಯಾದ ಸಜೀವವಾದ ಬಲಿಯಾಗಿ ಸಮರ್ಪಿಸಿಕೊಳ್ಳಿರಿ. ಇದೇ ನೀವು ಸಲ್ಲಿಸಬೇಕಾದ ನಿಜವಾದ ಆರಾಧನೆ.


ಮೆಚ್ಚುವನಾತ ತನ್ನಲಿ ಭಯಭಕ್ತಿಯುಳ್ಳವರನು I ತನ್ನಚಲ ಪ್ರೀತಿಯಲಿ ಭರವಸೆಯುಳ್ಳವರನು II


ಆ ರಾತ್ರಿಯೇ ಪ್ರಭುವಿನ ದೂತನೊಬ್ಬನು ಸೆರೆಮನೆಯ ದ್ವಾರಗಳನ್ನು ತೆರೆದು ಪ್ರೇಷಿತರನ್ನು ಹೊರಕ್ಕೆ ತಂದನು.


ಅದಕ್ಕೆ ಅವರು, “ಆದರೆ, ಇಗೋ ಕಟ್ಟಿಲ್ಲದ ನಾಲ್ವರನ್ನು ನಾನು ನೋಡುತ್ತಿದ್ದೇನೆ. ಬೆಂಕಿಯಲ್ಲಿ ತಿರುಗಾಡುತ್ತಿದ್ದಾರೆ; ಅವರಿಗೆ ಯಾವ ಹಾನಿಯೂ ಆಗುತ್ತಿಲ್ಲ.


ಅದಕ್ಕೆ ಪ್ರತ್ಯುತ್ತರವಾಗಿ ಯೇಸು, “ಸೈತಾನನೇ, ತೊಲಗು. ‘ನಿನ್ನ ದೇವರಾದ ಸರ್ವೇಶ್ವರನನ್ನು ಆರಾಧಿಸು. ಅವರೊಬ್ಬರಿಗೇ ಸೇವೆಸಲ್ಲಿಸು,’ ಎಂದೂ ಪವಿತ್ರಗ್ರಂಥದಲ್ಲಿ ಬರೆದಿದೆ,” ಎಂದರು.


ದಾನಿಯೇಲನ ವಿವರಕ್ಕೆ ಉತ್ತರವಾಗಿ, “ನೀನು ಈ ಗುಟ್ಟನ್ನು ಬಯಲಿಗೆ ತರಲು ಸಮರ್ಥನಾದ ಕಾರಣ ನಿಮ್ಮ ದೇವರು ದೇವಾಧಿದೇವರು, ರಾಜಾಧಿರಾಜರು, ಗುಟ್ಟನ್ನು ಬಟ್ಟಬಯಲಾಗಿಸುವವರು! ಇದು ಸತ್ಯ,” ಎಂದು ಹೇಳಿದನು.


ಜನರೇ, ಸದಾ ಭರವಸೆ ಇಡಿ ದೇವನಲಿ I ತೋಡಿಕೊಳ್ಳಿ ನಿಮ್ಮ ಅಳಲನು ಆತನಲಿ II


ನನ್ನ ಕರ್ತವ್ಯಪಾಲನೆಯಲ್ಲಿ ನಾಚುವಂಥ ಸಂದರ್ಭವು ನನಗೆಂದಿಗೂ ಬರದೆಂದು ಬಲ್ಲೆ; ನಾನು ಬದುಕಿದರೂ ಸರಿ, ಸತ್ತರೂ ಸರಿ; ನನ್ನ ದೇಹದ ಮೂಲಕ ಕ್ರಿಸ್ತಯೇಸುವಿಗೆ ಎಂದಿನಂತೆ ಈಗಲೂ ಮಹಿಮೆ ಉಂಟಾಗಬೇಕೆಂಬುದೇ ನನ್ನ ಉತ್ಕಟ ಆಕಾಂಕ್ಷೆ ಹಾಗೂ ನಿರೀಕ್ಷೆ.


ಆಗ ಸರ್ವೇಶ್ವರ ಸ್ವಾಮಿಯ ದೂತನು ಹೊರಟುಬಂದು ಅಸ್ಸೀರಿಯರ ಪಾಳೆಯದಲ್ಲಿ 185,000 ಮಂದಿ ಸೈನಿಕರನ್ನು ಮರಣಕ್ಕೆ ಈಡುಮಾಡಿದನು; ಬೆಳಿಗ್ಗೆ ಎದ್ದುನೋಡುವಾಗ ಅವರೆಲ್ಲರೂ ಹೆಣಗಳಾಗಿದ್ದರು.


ಅಸ್ಸೀರಿಯದ ಅರಸನ ದಂಡಿನಲ್ಲಿದ್ದ ಎಲ್ಲ ಶೂರರನ್ನೂ ನಾಯಕರನ್ನೂ ಅಧಿಪತಿಗಳನ್ನೂ ಸಂಹರಿಸಿದರು; ಆ ಅರಸನು ನಾಚಿಕೆಯಿಂದ ತನ್ನ ದೇಶಕ್ಕೆ ಹಿಂದಿರುಗಬೇಕಾಯಿತು. ಅಲ್ಲಿ ಅವನು ತನ್ನ ದೇವರ ಗುಡಿಗೆ ಹೋಗಿದ್ದಾಗ ಅವನ ಸ್ವಂತ ಮಕ್ಕಳೇ ಅವನನ್ನು ಕತ್ತಿಯಿಂದ ಕೊಂದರು.


ಅವರು ಮರುದಿನ ಬೆಳಿಗ್ಗೆ ಎದ್ದು ತೆಕೋವ ಮರುಭೂಮಿಗೆ ಹೊರಟರು. ಹೊರಡುವಾಗ ಯೆಹೋಷಾಫಾಟನು ಎದ್ದು ನಿಂತು, “ಯೆಹೂದ್ಯರೇ, ಜೆರುಸಲೇಮಿನವರೇ, ನನ್ನ ಮಾತನ್ನು ಕೇಳಿರಿ; ಸರ್ವೇಶ್ವರನಲ್ಲಿ ಭರವಸೆ ಇಡಿ, ಆಗ ಸುರಕ್ಷಿತರಾಗುವಿರಿ; ಸರ್ವೇಶ್ವರನ ಪ್ರವಾದಿಗಳನ್ನು ನಂಬಿರಿ, ಆಗ ಸಾರ್ಥಕರಾಗುವಿರಿ,” ಎಂದು ಹೇಳಿದನು.


ಮರಣದಿಂದ ಪುನರುತ್ಥಾನಗೊಳಿಸಿ ಮಹಿಮೆಪಡಿಸಿದ ದೇವರಲ್ಲಿ ನೀವು ವಿಶ್ವಾಸವಿಟ್ಟದ್ದು ಇವರ ಮುಖಾಂತರವೇ. ಹೀಗೆ ನಿಮ್ಮ ವಿಶ್ವಾಸವೂ ನಿರೀಕ್ಷೆಯೂ ದೇವರಲ್ಲೇ ನೆಲೆಗೊಂಡಿವೆ.


ಮತ್ತೆ ಕೆಲವರನ್ನು ಜನರು ಕಲ್ಲೆಸೆದು ಕೊಂದರು; ಗರಗಸದಿಂದ ಸೀಳಿ ಸಾಯಿಸಿದರು; ಖಡ್ಗದಿಂದ ಕಡಿದುಹಾಕಿದರು. ಇನ್ನೂ ಕೆಲವರು ನಿರ್ಗತಿಕರಾಗಿ ಕುರಿಮೇಕೆಗಳ ಚರ್ಮಗಳನ್ನು ಹೊದ್ದುಕೊಂಡು ಅಲೆದಾಡಿದರು. ಬಡತನಕ್ಕೂ ಹಿಂಸೆಬಾಧೆಗಳಿಗೂ ಕಷ್ಟಸಂಕಟಗಳಿಗೂ ಈಡಾದರು;


ದೂತರೆಲ್ಲರೂ ಕೇವಲ ಸೇವೆಮಾಡುವ ಆತ್ಮಗಳಲ್ಲವೇ? ಜೀವೋದ್ಧಾರವನ್ನು ಬಾಧ್ಯವಾಗಿ ಹೊಂದಬೇಕಾದವರ ಊಳಿಗಕ್ಕಾಗಿ ಕಳುಹಿಸಲಾದವರಲ್ಲವೇ?


ಆಗ ಪೇತ್ರ ಮತ್ತು ಯೊವಾನ್ನರು, “ನಾವು ದೇವರಿಗೆ ವಿಧೇಯರಾಗಬೇಕೋ? ನಿಮಗೆ ವಿಧೇಯರಾಗಬೇಕೋ? ದೇವರ ದೃಷ್ಟಿಯಲ್ಲಿ ಯಾವುದು ಸರಿ? ನೀವೇ ನಿರ್ಣಯಿಸಿರಿ.


ನನ್ನ ರಾಜ್ಯದ ಪ್ರಜೆಗಳೆಲ್ಲರಿಗೆ ನಾನು ಆಜ್ಞಾಪಿಸುವುದೇನೆಂದರೆ: ನೀವೆಲ್ಲರು ದಾನಿಯೇಲನ ದೇವರ ಮುಂದೆ ಭಯಭಕ್ತಿಯಿಂದ ನಡೆದುಕೊಳ್ಳತಕ್ಕದ್ದು. ಏಕೆಂದರೆ ಆತನೇ ಜೀವಸ್ವರೂಪನಾದ ಸನಾತನ ದೇವರು! ಆತನ ರಾಜ್ಯ ಎಂದೆಂದಿಗೂ ಅಳಿಯದು ಆತನ ಆಳ್ವಿಕೆ ಶಾಶ್ವತವಾದುದು!


ಗುರುತಿಸಲಾಗಿದ್ದ ಕಾಲವು ಕಳೆಯಿತು. ನೆಬೂಕದ್ನೆಚ್ಚರನು, “ನಾನು ಪರಲೋಕದ ಕಡೆಗೆ ಕಣ್ಣೆತ್ತಿ ನೋಡಿದೆ. ನನ್ನ ಬುದ್ಧಿ ಮತ್ತೆ ನನಗೆ ಸ್ವಾಧೀನವಾಯಿತು. ಆಗ ನಾನು ಪರಾತ್ಪರ ದೇವರನ್ನು ಕೊಂಡಾಡಿದೆ. ಜೀವಸ್ವರೂಪರಾದ ಅವರಿಗೆ ಸ್ತುತಿಸ್ತೋತ್ರಗಳನ್ನು ಸಲ್ಲಿಸಿದೆ: ಆತನ ಆಳ್ವಿಕೆ ಶಾಶ್ವತ ಆತನ ರಾಜ್ಯ ತಲತಲಾಂತರಕ್ಕೂ ಸ್ಥಿರ.


ತನ್ನ ದಾಸರನು ಉದ್ಧಾರಮಾಡದಿರನು ಪ್ರಭು I ತನ್ನ ಶರಣರೊಳೊಬ್ಬರನು ದಂಡಿಸನಾ ವಿಭು II


ನೆಮ್ಮದಿಯಿಂದಿದೆ ಎನ್ನ ಮನ ಆತನಲಿ I ನಂಬಿರುವೆವು ಆತನ ಶ್ರೀ ನಾಮದಲಿ II


ಪ್ರಭುವಾದರೋ ಕಟಾಕ್ಷಿಸುವನು ತನಗಂಜಿ ನಡೆದವರನು I ಲಕ್ಷಿಸುವನು ತನ್ನ ಕೃಪೆಯನು ನಿರೀಕ್ಷಿಸುವವರನು II


ಈ ನನ್ನ ಆಜ್ಞೆಯನ್ನು ಯಾವನಾದರೂ ಬದಲಾಯಿಸುವುದಾದರೆ, ಅವನ ಮನೆಯಿಂದಲೇ ಒಂದು ತೊಲೆಯನ್ನು ತೆಗೆದು ಅದನ್ನು ಶೂಲವನ್ನಾಗಿ ಮಾಡಿ, ಅದಕ್ಕೆ ಅವನನ್ನು ಏರಿಸಬೇಕು; ಹಾಗು ಆ ಮನೆಯನ್ನು ತಿಪ್ಪೆಯನ್ನಾಗಿ ಮಾಡಿಬಿಡಬೇಕು. ಇದು ನನ್ನ ತೀರ್ಮಾನ.


ನಿಮ್ಮಲ್ಲಿ ಯಾರು ಅವರ ಪ್ರಜೆಗಳಾಗಿರುತ್ತಾರೋ ಅಂಥವರು ಜುದೇಯ ನಾಡಿನ ಜೆರುಸಲೇಮಿಗೆ ಹೋಗಿ ಅಲ್ಲಿ ವಾಸಿಸುತ್ತಿರುವ ಇಸ್ರಯೇಲ್ ದೇವರಾದ ಸರ್ವೇಶ್ವರನಿಗೆ, ಒಂದು ದೇವಾಲಯವನ್ನು ಕಟ್ಟಲಿ; ಅವರ ಸಂಗಡ ಅವರ ದೇವರಿರಲಿ!


ಅವರು ದೇವರಲ್ಲಿ ನಂಬಿಕೆಯನ್ನಿಟ್ಟು ಸಹಾಯಕ್ಕಾಗಿ ಪ್ರಾರ್ಥಿಸಿದರು. ದೇವರು ಅವರ ಪ್ರಾರ್ಥನೆಯನ್ನು ಆಲಿಸಿ ಹಗ್ರೀಯರನ್ನೂ ಅವರೊಂದಿಗೆ ಒಪ್ಪಂದ ಮಾಡಿಕೊಂಡವರನ್ನೂ ಸೋಲಿಸಿ ಅವರ ಮೇಲೆ ಜಯಹೊಂದುವಂತೆ ಸಹಾಯ ಮಾಡಿದರು.


"ಸ್ತೋತ್ರ, ಶೇಮನ ದೇವರಾದ ಸರ್ವೇಶ್ವರನಿಗೆ ದಾಸನಾಗಲಿ ಕಾನಾನನು ಶೇಮನಿಗೆ"


ಭಜಿಸಿರಿ ಪ್ರಭುವನು ದೇವದೂತರುಗಳೇ I ಆತನ ಆಣತಿ ಪಾಲಿಪ ಪರಾಕ್ರಮಿಗಳೇ I ಆತನ ನುಡಿಯಂತೆಯೇ ನಡೆಯುವ ಜನಾಂಗಗಳೇ II


ನನಗಿರುವುದೆಲ್ಲವನು ನಾ ದಾನಮಾಡೆ ದೇಹವನೆ ಸಜೀವ ದಹಿಸಲು ನೀಡೆ ನಾನಾಗಿರೆ ಪರಮ ಪ್ರೀತಿ ವಿಹೀನ ಏನದು ಜೀವನ, ನನಗೇನದು ಪ್ರಯೋಜನ?


ದೇವರೇ ಉದ್ಧಾರಕನೆನಗೆ ಆತನಲ್ಲಿದೆ ನನಗೆ ನಿರ್ಭೀತ ನಂಬಿಕೆ. ದೇವಾದಿದೇವನೇ ಎನಗೆ ಶಕ್ತಿ ಆತನೆನ್ನ ಕೀರ್ತನೆಯ ವ್ಯಕ್ತಿ ತಂದಿಹನಾತ ಎನಗೆ ಮುಕ್ತಿ.”


ಸರ್ವೇಶ್ವರನ ದಾಸನಾದ ನನ್ನ ಮಾತುಗಳನು ಕೇಳಿ : ಭಯಭಕ್ತಿಯುಳ್ಳವನಾರು ನಿಮ್ಮೊಳು ಆ ಸರ್ವೇಶ್ವರನಲಿ? ಬೆಳಕಿಲ್ಲದೆ ಕತ್ತಲಲಿ ನಡೆಯುವವನು ಭರವಸೆಯಿಡಲಿ ಆ ಸರ್ವೇಶ್ವರನ ನಾಮದಲಿ; ಆಶ್ರಯ ಪಡೆಯಲಿ ತನ್ನಾ ದೇವನಲಿ.


ಈ ಕಾರಣ ರಾಜನು ಅಪ್ಪಣೆ ಕೊಡಲೇಬೇಕಾಯಿತು. ಕೂಡಲೆ ಅವರು ದಾನಿಯೇಲನನ್ನು ತಂದು ಸಿಂಹಗಳ ಗವಿಯಲ್ಲಿ ಹಾಕಿಯೇಬಿಟ್ಟರು. ಆಗ ರಾಜನು ದಾನಿಯೇಲನಿಗೆ, “ನೀನು ದಿನನಿತ್ಯವೂ ಆರಾಧಿಸುವ ದೇವರು ನಿನ್ನನ್ನು ಉದ್ಧರಿಸಲಿ!” ಎಂದು ಹರಸಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು