Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ದಾನಿಯೇಲ 3:30 - ಕನ್ನಡ ಸತ್ಯವೇದವು C.L. Bible (BSI)

30 ಇದಾದ ಬಳಿಕ ರಾಜನು ಶದ್ರಕ್, ಮೇಶಕ್, ಅಬೇದ್‍ನೆಗೋ ಎಂಬುವರನ್ನು ಸಂಸ್ಥಾನದಲ್ಲಿ ಉನ್ನತಪದವಿಗೆ ಏರಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

30 ಬಳಿಕ ರಾಜನು ಶದ್ರಕ್, ಮೇಶಕ್, ಅಬೇದ್ನೆಗೋ ಎಂಬುವವರನ್ನು ಬಾಬೆಲ್ ಸಂಸ್ಥಾನದಲ್ಲಿ ಉನ್ನತ ಪದವಿ ನೀಡಿ ಗೌರವಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

30 ಬಳಿಕ ರಾಜನು ಶದ್ರಕ್ ಮೇಶಕ್ ಅಬೇದ್‍ನೆಗೋ ಎಂಬವರನ್ನು ಬಾಬೆಲ್ ಸಂಸ್ಥಾನದಲ್ಲಿ ಉನ್ನತಪದವಿಗೆ ತಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

30 ಬಳಿಕ ರಾಜನು ಶದ್ರಕ್, ಮೇಶಕ್ ಮತ್ತು ಅಬೇದ್‌ನೆಗೋ ಈ ಮೂವರಿಗೆ ಬಾಬಿಲೋನ್ ಸಂಸ್ಥಾನದಲ್ಲಿ ಹೆಚ್ಚು ಮಹತ್ವದ ಪದವಿಗಳನ್ನು ಕೊಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

30 ಆಗ ಅರಸನು ಶದ್ರಕ್, ಮೇಶಕ್, ಅಬೇದ್‌ನೆಗೋ ಎಂಬುವರನ್ನು ಬಾಬಿಲೋನ್ ಪ್ರಾಂತದಲ್ಲಿ ಉನ್ನತ ಪದವಿಗೆ ತಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ದಾನಿಯೇಲ 3:30
9 ತಿಳಿವುಗಳ ಹೋಲಿಕೆ  

ದಾನಿಯೇಲನ ಕೋರಿಕೆಯ ಪ್ರಕಾರ ರಾಜನು ಶದ್ರಕ್, ಮೇಶಕ್ ಮತ್ತು ಅಬೇದ್‍ನೆಗೋ ಎಂಬುವರನ್ನು ಬಾಬಿಲೋನಿನ ಪ್ರಾಂತ್ಯಾಧಿಪತಿಗಳನ್ನಾಗಿ ನೇಮಿಸಿದನು. ದಾನಿಯೇಲನು ಮಾತ್ರ ಅರಮನೆಯಲ್ಲೇ ಕಾರ್ಯನಿರತನಾದನು.


ನಿನ್ನ ಗೋತ್ರದವರೂ ಸಂತಾನದವರೂ ನನ್ನ ಸನ್ನಿಧಿಯಲ್ಲಿ ಸೇವೆಮಾಡಬಹುದು ಎಂದು ಆಜ್ಞಾಪಿಸಿದ ಇಸ್ರಯೇಲರ ದೇವರಾದ ಸರ್ವೇಶ್ವರನೆಂಬ ನಾನು ಈಗ ತಿಳಿಸುವುದನ್ನು ಕೇಳು: ಇನ್ನು ಇದೆಲ್ಲ ನನ್ನಿಂದ ದೂರ ತೊಲಗಲಿ; ನನ್ನನ್ನು ಸನ್ಮಾನಿಸುವವನನ್ನು ನಾನು ಸನ್ಮಾನಿಸುವೆನು; ನನ್ನನ್ನು ಉಪೇಕ್ಷಿಸುವವನನ್ನು ನಾನು ತಿರಸ್ಕರಿಸುವೆನು.


ಹೀಗಿರುವಲ್ಲಿ ನಾವು ಏನು ಹೇಳೋಣ? ದೇವರೇ ನಮ್ಮ ಪರ ಇರುವಾಗ ನಮ್ಮನ್ನು ವಿರೋಧಿಸುವವರು ಯಾರು?


ನನ್ನ ಸೇವೆಮಾಡಬೇಕೆಂದಿರುವವನು ನನ್ನನ್ನು ಹಿಂಬಾಲಿಸಲಿ. ಆಗ ನಾನಿರುವಲ್ಲಿಯೇ ನನ್ನ ಸೇವಕನೂ ಇರುತ್ತಾನೆ. ನನ್ನ ಸೇವೆಮಾಡುವವನು ನನ್ನ ಪಿತನಿಂದ ಸನ್ಮಾನಹೊಂದುತ್ತಾನೆ,” ಎಂದರು


ತಾವು ಬಾಬಿಲೋನಿನ ಸಂಸ್ಥಾನಾಧಿಕಾರತ್ವವನ್ನು ವಹಿಸಿಕೊಟ್ಟ ಶದ್ರಕ್, ಮೇಶಕ್ ಹಾಗೂ ಅಬೇದ್‍ನೆಗೋ ಎಂಬ ಕೆಲವು ಮಂದಿ ಯೆಹೂದ್ಯರು ಇದ್ದಾರೆ. ರಾಜರೇ ಅವರು ನಿಮ್ಮನ್ನು ಲಕ್ಷಿಸುವುದಿಲ್ಲ. ನಿಮ್ಮ ದೇವರುಗಳಿಗೆ ಸೇವೆಮಾಡುವುದಿಲ್ಲ, ನೀವು ಸ್ಥಾಪಿಸಿದ ಬಂಗಾರದ ಪ್ರತಿಮೆಯನ್ನು ಆರಾಧಿಸುವುದಿಲ್ಲ,” ಎಂದು ಆಪಾದಿಸಿದರು.


ಪ್ರಭು : “ನನ್ನ ಭಕ್ತನಾದ್ದರಿಂದ ವಿಮೋಚಿಸುವೆನು ಅವನನು I ನನ್ನ ನಾಮವನು ಅರಿತವನಾದ್ದರಿಂದ ರಕ್ಷಿಸುವೆನು II


ನದಿಯ ಬದಿಯಲೇ ಬೆಳೆದಿಹ ಮರದಂತೆ I ಸಕಾಲಕೆ ಫಲವೀವ ವೃಕ್ಷದಂತೆ I ಎಲೆಬಾಡದೆ ಪಸಿರಿರುವ ತರುವಂತೆ I ಸಿಗುವುದು ಅವನ ಕಾರ್ಯಗಳಿಗೆ ಸಫಲತೆ II


ಕಂಚುಕಿಯರ ನಾಯಕನು ಇವರಿಗೆ ನಾಮಕರಣಮಾಡಿ ದಾನಿಯೇಲನಿಗೆ ‘ಬೇಲ್ತೆಶಚ್ಚರ್’, ಹನನ್ಯನಿಗೆ ‘ಶದ್ರಕ್’, ಮಿಶಾಯೇಲನಿಗೆ ‘ಮೇಶಕ್’, ಹಾಗೂ ಅಜರ್ಯನಿಗೆ ‘ಅಬೇದ್‍ನೆಗೋ’, ಎಂಬ ಹೆಸರಿಟ್ಟನು.


ರಾಜ ನೆಬೂಕದ್ನೆಚ್ಚರನು 27 ಮೀಟರ್ ಎತ್ತರದ 3 ಮೀಟರ್ ಅಗಲದ ಒಂದು ಬಂಗಾರದ ಪ್ರತಿಮೆಯನ್ನು ಮಾಡಿಸಿ ಬಾಬಿಲೋನ್ ಸಂಸ್ಥಾನದ ‘ದೂರಾ’ ಎಂಬ ಬಯಲಿನಲ್ಲಿ ನಿಲ್ಲಿಸಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು