Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ದಾನಿಯೇಲ 3:4 - ಕನ್ನಡ ಸತ್ಯವೇದವು C.L. Bible (BSI)

4 ಆಗ, ಸಾರುವವರು ಗಟ್ಟಿಯಾಗಿ ಕೂಗಿ, “ವಿವಿಧ ಜನಾಂಗ-ಕುಲ-ಭಾಷೆಗಳವರೇ, ನಿಮಗೆ ಹೀಗೆಂದು ರಾಜಾಜ್ಞೆಯಾಗಿದೆ:

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

4 ಆಗ ಸಾರುವವನು ಗಟ್ಟಿಯಾಗಿ ಕೂಗಿ, “ವಿವಿಧ ಜನಾಂಗ, ಕುಲ, ಭಾಷೆಗಳವರೇ, ನಿಮಗೆ ರಾಜಾಜ್ಞೆಯಾಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

4 ಆಗ ಸಾರುವವನು ಗಟ್ಟಿಯಾಗಿ ಕೂಗಿ - ವಿವಿಧ ಜನಾಂಗ ಕುಲಭಾಷೆಗಳವರೇ, ನಿಮಗೆ ರಾಜಾಜ್ಞೆಯಾಗಿದೆ -

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

4 ಆಗ ಸಾರುವವನು ದೊಡ್ಡ ಧ್ವನಿಯಲ್ಲಿ, “ವಿವಿಧ ಜನಾಂಗ, ಕುಲ, ಭಾಷೆಗಳ ಜನರೇ, ನಾನು ಹೇಳುವುದನ್ನು ಕೇಳಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

4 ಆಗ ಘೋಷಣೆ ಮಾಡುವವರು ಗಟ್ಟಿಯಾಗಿ ಕೂಗಿ, “ಪ್ರಜೆಗಳೇ, ಜನಾಂಗಗಳೇ, ವಿವಿಧ ಭಾಷೆಯವರೇ

ಅಧ್ಯಾಯವನ್ನು ನೋಡಿ ನಕಲು ಮಾಡಿ




ದಾನಿಯೇಲ 3:4
13 ತಿಳಿವುಗಳ ಹೋಲಿಕೆ  

ಇದಾದ ಮೇಲೆ ರಾಜ ದಾರ್ಯಾವೆಷನು ಜಗದಲ್ಲಿ ವಾಸಿಸುವ ಸಕಲ ದೇಶ-ಕುಲ-ಭಾಷೆಗಳವರಿಗೆ ಈ ಪ್ರಸಿದ್ಧ ಪತ್ರವನ್ನು ಬರೆಯಿಸಿದನು: ನಿಮಗೆ ಹೆಚ್ಚೆಚ್ಚು ಸುಖಶಾಂತಿ ಲಭಿಸಲಿ!”


ಜಗದಲ್ಲಿ ವಾಸಿಸುವ ಎಲ್ಲಾ ಜನಾಂಗದವರಿಗೂ ಕುಲದವರಿಗೂ ಭಾಷೆಯವರಿಗೂ ರಾಜ ನೆಬೂಕದ್ನೆಚ್ಚರನು ಹೊರಡಿಸಿದ ಪ್ರಕಟಣೆ - “ನಿಮಗೆ ಹೆಚ್ಚೆಚ್ಚು ಸುಖಶಾಂತಿ ಲಭಿಸಲಿ!


“ಒಮ್ರಿ ಅರಸನ ಆಜ್ಞೆಗಳನ್ನೂ ಅಹಾಬ್ ಮನೆತನದ ದುರಾಚಾರಗಳನ್ನೂ ಅವರ ಸಂಪ್ರದಾಯಗಳನ್ನೂ ಅನುಸರಿಸುತ್ತಾ ಬಂದಿದ್ದೀರಿ. ಆದಕಾರಣ ನಿಮ್ಮನ್ನು ವಿನಾಶಗೊಳಿಸುವೆನು; ನಿಮ್ಮ ಜನರನ್ನು ಅಪಹಾಸ್ಯಕ್ಕೆ ಈಡುಮಾಡುವೆನು. ನೀವು ಜನಾಂಗಗಳ ನಿಂದೆಗೆ ಗುರಿಯಾಗುವಿರಿ.”


ದುರಾಚಾರಗಳನ್ನು ಅನುಸರಿಸಲು ನಿರ್ಧರಿಸಿದ ಕಾರಣ, ಎಫ್ರಯಿಮ್ ನ್ಯಾಯತೀರ್ಪಿಗೆ ಗುರಿಯಾಗಿದೆ; ಹಿಂಸೆಗೀಡಾಗಿದೆ; ನುಚ್ಚುನೂರಾಗಿದೆ.


ಆ ಮರವನ್ನು ಕಡಿಯಿರಿ, ಕೊಂಬೆಗಳನ್ನು ಕತ್ತರಿಸಿ, ಎಲೆಗಳನ್ನು ಉದುರಿಸಿ, ಹಣ್ಣುಗಳನ್ನು ಕಿತ್ತುಬಿಸಾಡಿ. ಮೃಗಗಳು ಅದರ ನೆರಳನ್ನು ಬಿಟ್ಟು ತೆರಳಲಿ, ಪಕ್ಷಿಗಳು ರೆಂಬೆಗಳನ್ನು ತೊರೆದುಹೋಗಲಿ.


ಸರ್ವೇಶ್ವರ ಸ್ವಾಮಿ ಇಂತೆನ್ನುತ್ತಾರೆ : “ಗಟ್ಟಿಯಾಗಿ ಕೂಗು, ನಿಲ್ಲಿಸಬೇಡ; ಕೊಂಬಿನಂತೆ ಸ್ವರವೆತ್ತಿ ನನ್ನ ಜನರಿಗೆ ಅವರ ದ್ರೋಹವನ್ನು ತಿಳಿಸು; ಯಕೋಬ ವಂಶದವರಿಗೆ ಅವರ ಪಾಪವನ್ನು ತಿಳಿಸು;


ಪರ್ವತವನ್ನೇರು ಶುಭಸಂದೇಶಕಳಾದ ಸಿಯೋನೇ, ಧ್ವನಿಯೇರಿಸು, ಶುಭವಾರ್ತೆ ಸಾರಬಲ್ಲ ಜೆರುಸಲೇಮೇ, ಧ್ವನಿಯೇರಿಸು, ನಿರ್ಭಯದಿಂದ ಏರಿಸು ‘ಇಗೋ, ನಿಮ್ಮ ದೇವರು’ ಎಂದು ಜೂದ ನಗರಗಳಿಗೆ ಸಾರು.


ಆಗ ರಾಜಲೇಖಕರನ್ನು ಕರೆಯಿಸಲಾಯಿತು. ಇವರು ಮೂರನೆಯ ತಿಂಗಳಾದ ಜೇಷ್ಠಮಾಸದ ಇಪ್ಪತ್ತಮೂರನೇ ದಿನದಲ್ಲಿ ಬಂದು ಮೊರ್ದೆಕೈಯ ಆಜ್ಞಾನುಸಾರ, ಯೆಹೂದ್ಯರಿಗೂ ಭಾರತ ಮೊದಲ್ಗೊಂಡು ಕೂಷಿನವರೆಗೂ ಹರಡಿರುವ ನೂರಿಪ್ಪತ್ತೇಳು ಸಂಸ್ಥಾನಗಳ ಉಪರಾಜರಿಗೂ ದೇಶಾಧಿಪತಿಗಳಿಗೂ ಅಧಿಕಾರಿಗಳಿಗೂ, ಆಯಾ ಸಂಸ್ಥಾನಗಳ ಲಿಪಿಯಲ್ಲೂ ಆಯಾ ಜನಾಂಗಗಳ ಭಾಷೆಯಲ್ಲೂ ಪತ್ರಗಳನ್ನು ಬರೆದರು.


ಅವರು ಈ ಹೊಸ ಗೀತೆಯನ್ನು ಹಾಡುತ್ತಿದ್ದರು: :ಸುರುಳಿಯನ್ನು ಸ್ವೀಕರಿಸಲು ನೀ ಯೋಗ್ಯನು ಅದರ ಮುದ್ರೆಗಳನ್ನು ಮುರಿಯಲು ನೀ ಶಕ್ತನು. ಸಮರ್ಪಿಸಿಕೊಂಡಿರುವೆ ನಿನ್ನನೇ ನೀ ಬಲಿಯರ್ಪಣೆಯಾಗಿ ಸಕಲ ದೇಶ, ಭಾಷೆ, ಕುಲಗೋತ್ರಗಳಿಂದ ಕೊಂಡುಕೊಂಡಿರುವೆ ಮಾನವರನು ನಿನ್ನ ರಕ್ತದಿಂದ.


ಆ ಉಪರಾಜ, ನಾಯಕ, ದೇಶಾಧಿಪತಿ, ಮಂತ್ರಿ, ಕೋಶಾಧ್ಯಕ್ಷ, ನ್ಯಾಯಾಧಿಪತಿ, ವಿಚಾರಕ ಇವರೂ ಸಮಸ್ತ ಸಂಸ್ಥಾನಾಧಿಕಾರಿಗಳೂ ರಾಜ ನೆಬೂಕದ್ನೆಚ್ಚರನು ನಿಲ್ಲಿಸಿದ್ದ ಪ್ರತಿಮೆಯ ಪ್ರತಿಷ್ಠಾಪನಾ ಸಮಾರಂಭಕ್ಕೆ ನೆರೆದುಬಂದು ಆ ಪ್ರತಿಮೆಯ ಮುಂದೆ ನಿಂತುಕೊಂಡರು.


ಅಂತೆಯೇ ಸಮಸ್ತ ಜನಾಂಗ-ಕುಲ-ಭಾಷೆಗಳವರು ತುತೂರಿ, ಕೊಳಲು, ಕಿನ್ನರಿ, ತಂಬೂರಿ, ವೀಣೆ ಮುಂತಾದ ಸಕಲ ವಾದ್ಯಗಳ ಧ್ವನಿಯನ್ನು ಕೇಳಿದ ಕೂಡಲೆ ಎಲ್ಲರು ಅದೇ ಸಮಯದಲ್ಲಿ ಅಡ್ಡಬಿದ್ದು ರಾಜ ನೆಬೂಕದ್ನೆಚ್ಚರನು ನಿಲ್ಲಿಸಿದ್ದ ಆ ಬಂಗಾರದ ಪ್ರತಿಮೆಯನ್ನು ಆರಾಧಿಸಿದರು.


ಪ್ರಭುವೇ, ತುತೂರಿ, ಕೊಳಲು, ಕಿನ್ನರಿ, ತಂಬೂರಿ, ವೀಣೆ, ಓಲಗ ಮುಂತಾದ ಸಕಲ ವಾದ್ಯಗಳ ಧ್ವನಿ ಕೇಳಿದ ಪ್ರತಿಯೊಬ್ಬನೂ ಅಡ್ಡಬಿದ್ದು ಬಂಗಾರದ ಪ್ರತಿಮೆಯನ್ನು ಆರಾಧಿಸಲಿ;


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು