Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ದಾನಿಯೇಲ 3:5 - ಕನ್ನಡ ಸತ್ಯವೇದವು C.L. Bible (BSI)

5 ನೀವು ತುತೂರಿ, ಕೊಳಲು, ಕಿನ್ನರಿ, ತಂಬೂರಿ, ವೀಣೆ, ಓಲಗ ಮುಂತಾದ ಸಕಲ ವಾದ್ಯಗಳ ಧ್ವನಿಯನ್ನು ಕೇಳಿದ ಕೂಡಲೆ ಅಡ್ಡಬಿದ್ದು ರಾಜ ನೆಬೂಕದ್ನೆಚ್ಚರರು ನಿಲ್ಲಿಸಿರುವ ಈ ಬಂಗಾರದ ಪ್ರತಿಮೆಯನ್ನು ಆರಾಧಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

5 ನೀವು ತುತ್ತೂರಿ, ಕೊಳಲು, ಕಿನ್ನರಿ, ತಂಬೂರಿ, ವೀಣೆ, ವಾಲಗ ಮುಂತಾದ ಸಕಲ ವಾದ್ಯಗಳ ಧ್ವನಿಯನ್ನು ಕೇಳಿದ ಕೂಡಲೆ ಅಡ್ಡಬಿದ್ದು, ರಾಜನಾದ ನೆಬೂಕದ್ನೆಚ್ಚರನು ನಿಲ್ಲಿಸಿರುವ ಬಂಗಾರದ ಪ್ರತಿಮೆಯನ್ನು ಪೂಜಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

5 ನೀವು ತುತೂರಿ ಕೊಳಲು ಕಿನ್ನರಿ ತಂಬೂರಿ ವೀಣೆ ವಾಲಗ ಮುಂತಾದ ಸಕಲ ವಾದ್ಯಗಳ ಧ್ವನಿಯನ್ನು ಕೇಳಿದ ಕೂಡಲೆ ನೀವು ಅಡ್ಡಬಿದ್ದು ರಾಜನಾದ ನೆಬೂಕದ್ನೆಚ್ಚರನು ನಿಲ್ಲಿಸಿರುವ ಬಂಗಾರದ ಪ್ರತಿಮೆಯನ್ನು ಪೂಜಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

5 ವಾದ್ಯಗಳ ಧ್ವನಿಯನ್ನು ಕೇಳಿದ ಕೂಡಲೇ ನೀವು ಅಡ್ಡಬೀಳಬೇಕು. ಇದು ರಾಜಾಜ್ಞೆ. ತುತ್ತೂರಿ, ಕೊಳಲು, ಕಿನ್ನರಿ, ತಂಬೂರಿ, ವೀಣೆ, ವಾಲಗ ಮುಂತಾದ ಸಕಲ ವಾದ್ಯಗಳ ಧ್ವನಿಯನ್ನು ಕೇಳಿದ ಕೂಡಲೆ ನೀವು ಬಂಗಾರದ ವಿಗ್ರಹವನ್ನು ಪೂಜಿಸಬೇಕು. ಅರಸನಾದ ನೆಬೂಕದ್ನೆಚ್ಚರನು ಈ ವಿಗ್ರಹವನ್ನು ನಿಲ್ಲಿಸಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

5 ನೀವು ಕೊಂಬು, ಪಿಳ್ಳಂಗೋವಿ, ತಂಬೂರಿ, ವೀಣೆ, ಕಿನ್ನರಿ, ನಾಗಸ್ವರ ಮೊದಲಾದ ವಾದ್ಯಗಳ ಶಬ್ದವನ್ನು ಕೇಳಿದ ಕೂಡಲೇ, ಅರಸನಾದ ನೆಬೂಕದ್ನೆಚ್ಚರನು ನಿಲ್ಲಿಸಿದ ಬಂಗಾರದ ಪ್ರತಿಮೆಯ ಮುಂದೆ ಅಡ್ಡಬಿದ್ದು ಆರಾಧಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ದಾನಿಯೇಲ 3:5
5 ತಿಳಿವುಗಳ ಹೋಲಿಕೆ  

ಈಗಲಾದರು ನೀವು ಸಿದ್ಧರಾಗಿದ್ದು ತುತೂರಿ, ಕೊಳಲು, ಕಿನ್ನರಿ, ತಂಬೂರಿ, ವೀಣೆ, ಓಲಗ ಮುಂತಾದ ಸಕಲ ವಾದ್ಯಗಳ ಧ್ವನಿ ಕೇಳಿದ ಕೂಡಲೆ ಅಡ್ಡಬಿದ್ದು ನಾನು ಸ್ಥಾಪಿಸಿದ ಪ್ರತಿಮೆಯನ್ನು ಆರಾಧಿಸಿದರೆ ಸರಿ, ಇಲ್ಲವಾದರೆ ಈ ಗಳಿಗೆಯಲ್ಲೆ ನಿಮ್ಮನ್ನು ಧಗಧಗನೆ ಉರಿಯುವ ಆವಿಗೆಯೊಳಗೆ ಹಾಕಲಾಗುವುದು. ನಿಮ್ಮನ್ನು ನನ್ನ ಕೈಯಿಂದ ಬಿಡಿಸಬಲ್ಲ ದೇವರು ಯಾರಿದ್ದಾನೆ?” ಎಂದು ಹೇಳಿದನು.


ಪ್ರಭುವೇ, ತುತೂರಿ, ಕೊಳಲು, ಕಿನ್ನರಿ, ತಂಬೂರಿ, ವೀಣೆ, ಓಲಗ ಮುಂತಾದ ಸಕಲ ವಾದ್ಯಗಳ ಧ್ವನಿ ಕೇಳಿದ ಪ್ರತಿಯೊಬ್ಬನೂ ಅಡ್ಡಬಿದ್ದು ಬಂಗಾರದ ಪ್ರತಿಮೆಯನ್ನು ಆರಾಧಿಸಲಿ;


ಅಂತೆಯೇ ಸಮಸ್ತ ಜನಾಂಗ-ಕುಲ-ಭಾಷೆಗಳವರು ತುತೂರಿ, ಕೊಳಲು, ಕಿನ್ನರಿ, ತಂಬೂರಿ, ವೀಣೆ ಮುಂತಾದ ಸಕಲ ವಾದ್ಯಗಳ ಧ್ವನಿಯನ್ನು ಕೇಳಿದ ಕೂಡಲೆ ಎಲ್ಲರು ಅದೇ ಸಮಯದಲ್ಲಿ ಅಡ್ಡಬಿದ್ದು ರಾಜ ನೆಬೂಕದ್ನೆಚ್ಚರನು ನಿಲ್ಲಿಸಿದ್ದ ಆ ಬಂಗಾರದ ಪ್ರತಿಮೆಯನ್ನು ಆರಾಧಿಸಿದರು.


ಇದನ್ನು ಆಲಿಸಿದ ರಾಜ ನೆಬೂಕದ್ನೆಚ್ಚರನು ಎದ್ದು ಅಡ್ಡಬಿದ್ದನು. ದಾನಿಯೇಲನನ್ನು ಪೂಜಿಸಿ, ಅವನಿಗೆ ನೈವೇದ್ಯಮಾಡಿ, ಧೂಪಾರತಿ ಎತ್ತಬೇಕೆಂದು ಆಜ್ಞಾಪಿಸಿದನು.


ಅವರ ವಿಗ್ರಹ ಬರೀ ಬೆಳ್ಳಿ ಬಂಗಾರ I ಅವು ಮಾನವನ ಕೈ ಕೆಲಸಗಳು ಮಾತ್ರ II


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು