ದಾನಿಯೇಲ 4:15 - ಕನ್ನಡ ಸತ್ಯವೇದವು C.L. Bible (BSI)15 ಆದರೆ ಅದರ ಬುಡದ ಮೋಟನ್ನು ನೆಲದಲ್ಲಿ ಉಳಿಸಿ ಹಿತ್ತಾಳೆ ಕಬ್ಬಿಣಗಳ ಪಟ್ಟಿಯನ್ನು ಅದಕ್ಕೆ ಬಿಗಿಯಿರಿ. ಅಡವಿಯ ಹುಲ್ಲು ಅದರ ಸುತ್ತ ಬೆಳೆದಿರಲಿ.’ ‘ಆಕಾಶದ ಇಬ್ಬನಿ ಅದನ್ನು ತೋಯಿಸಲಿ, ಹುಲ್ಲುಗಿಡಗಳ ಹಾಗು ಕಾಡುಮೃಗಗಳ ನಡುವೆ ಅದಿರಲಿ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201915 ಆದರೆ ಬುಡದ ಮೋಟನ್ನು ನೆಲದಲ್ಲಿ ಉಳಿಸಿ ಕಬ್ಬಿಣ, ತಾಮ್ರಗಳ ಪಟ್ಟಿಯನ್ನು ಅದಕ್ಕೆ ಬಿಗಿಯಿರಿ; ಅಡವಿಯ ಹುಲ್ಲು ಅದರ ಸುತ್ತ ಬೆಳೆದಿರಲಿ, ಆಕಾಶದ ಇಬ್ಬನಿಯು ಅದನ್ನು ತೋಯಿಸಲಿ, ಭೂಮಿಯ ಹುಲ್ಲು ಮೃಗಗಳಿಗೆ ಗತಿಯಾದಂತೆ ಅದಕ್ಕೆ ಗತಿಯಾಗಲಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)15 ಆದರೆ ಬುಡದ ಮೋಟನ್ನು ನೆಲದಲ್ಲಿ ಉಳಿಸಿ ಕಬ್ಬಿಣತಾಮ್ರಗಳ ಪಟ್ಟೆಯನ್ನು ಅದಕ್ಕೆ ಬಿಗಿಯಿರಿ; ಅಡವಿಯ ಹುಲ್ಲು ಅದರ ಸುತ್ತ ಬೆಳೆದಿರಲಿ, ಆಕಾಶದ ಇಬ್ಬನಿಯು ಅದನ್ನು ತೋಯಿಸಲಿ, ಭೂವಿುಯ ಹುಲ್ಲು ಮೃಗಗಳಿಗೆ ಗತಿಯಾದಂತೆ ಅದಕ್ಕೆ ಗತಿಯಾಗಲಿ; ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್15 ಆದರೆ ಅದರ ಬೇರುಗಳು ಮತ್ತು ಬುಡದ ಮೋಟು ಭೂಮಿಯಲ್ಲಿ ಉಳಿಯಲಿ. ಅದರ ಸುತ್ತಲೂ ಕಬ್ಬಿಣದ ಮತ್ತು ಕಂಚಿನ ಒಂದು ಪಟ್ಟಿಯನ್ನು ಹಾಕಿರಿ. ಆ ಮೋಟು ಮತ್ತು ಬೇರುಗಳು ಹೊಲದಲ್ಲಿ ಉಳಿಯಲಿ. ಅದರ ಸುತ್ತ ಹುಲ್ಲು ಬೆಳೆದಿರಲಿ. ಅದು ಅಡವಿಯಲ್ಲಿ ಕಾಡುಪ್ರಾಣಿಗಳ ಮತ್ತು ಸಸಿಗಳ ಜೊತೆಯಲ್ಲಿ ಇರಲಿ; ಅದು ಇಬ್ಬನಿಯಿಂದ ನೆನೆಯಲಿ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ15 ಆದರೆ ಅದರ ಬುಡವೂ, ಬೇರೂ, ಕಬ್ಬಿಣ, ಕಂಚಿನ ಕಟ್ಟುಳ್ಳದ್ದಾಗಿ ನೆಲದಲ್ಲಿ ಹೊಲದ ಹುಲ್ಲಿನಲ್ಲಿ ಇರಲಿ. “ ‘ಅವನು ಆಕಾಶದ ಮಂಜಿನಿಂದ ತೇವವಾಗಲಿ, ಭೂಮಿಯ ಗಿಡಗಳ ಮಧ್ಯದಲ್ಲಿರುವ ಮೃಗಗಳೊಂದಿಗೆ ಅವನು ವಾಸಿಸಲಿ. ಅಧ್ಯಾಯವನ್ನು ನೋಡಿ |