Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ದಾನಿಯೇಲ 4:19 - ಕನ್ನಡ ಸತ್ಯವೇದವು C.L. Bible (BSI)

19 ಇದನ್ನು ಕೇಳಿದ ಬೇಲ್ತೆಶಚ್ಚರನೆಂದು ಹೆಸರುಗೊಂಡಿದ್ದ ದಾನಿಯೇಲನು ತುಸು ಹೊತ್ತು ಸ್ತಬ್ದನಾದ. ಅವನ ಬುದ್ಧಿಗೆ ಹೊಳೆದ ವಿಷಯ ಅವನಲ್ಲಿ ದಿಗಿಲನ್ನು ಉಂಟುಮಾಡಿತು. ರಾಜನು ಇದನ್ನು ಅರಿತು, “ಬೇಲ್ತೆಶಚ್ಚರನೇ, ನನ್ನ ಕನಸಾಗಲಿ, ಅದರ ಅರ್ಥವಾಗಲಿ ನಿನ್ನನ್ನು ಹೆದರಿಸದಿರಲಿ,” ಎಂದು ಧೈರ್ಯಹೇಳಿದ. ಆಗ ಬೇಲ್ತೆಶಚ್ಚರನು: "ನನ್ನೊಡೆಯಾ, ಈ ಕನಸು ನಿನ್ನ ವೈರಿಗಳಿಗೆ ಬರಲಿ! ಅದರ ಅರ್ಥ ನಿನ್ನ ವಿರೋಧಿಗಳಿಗೆ ತಗಲಲಿ!

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

19 ಆಗ ಬೇಲ್ತೆಶಚ್ಚರನೆಂಬ ಅಡ್ಡಹೆಸರಿನ ದಾನಿಯೇಲನು ತನ್ನ ಬುದ್ಧಿಗೆ ತೋರಿದ್ದನ್ನು ಕಂಡು ಭಯಪಟ್ಟು ಸ್ವಲ್ಪ ಸಮಯ ಸ್ತಬ್ಧನಾದನು. ರಾಜನು ಇದನ್ನು ನೋಡಿ, “ಬೇಲ್ತೆಶಚ್ಚರನೇ, ನನ್ನ ಕನಸಾಗಲಿ, ಅದರ ಅರ್ಥವಾಗಲಿ ನಿನ್ನನ್ನು ಹೆದರಿಸದಿರಲಿ” ಎಂದು ಹೇಳಲು ಬೇಲ್ತೆಶಚ್ಚರನು, “ನನ್ನ ಒಡೆಯನೇ, ಆ ಕನಸು ನಿನ್ನ ಶತ್ರುಗಳಿಗೆ ಫಲಿಸಲಿ, ಅದರ ಅರ್ಥವು ನಿನ್ನ ವಿರೋಧಿಗಳ ಅನುಭವಕ್ಕೆ ಬರಲಿ!

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

19 ಆಗ ಬೇಲ್ತೆಶಚ್ಚರನೆಂಬ ಅಡ್ಡಹೆಸರಿನ ದಾನಿಯೇಲನು ತನ್ನ ಬುದ್ಧಿಗೆ ತೋರಿದ್ದಕ್ಕೆ ದಿಗಿಲುಪಟ್ಟು ತುಸುಹೊತ್ತು ಸ್ತಬ್ಧನಾದನು. ರಾಜನು ಇದನ್ನು ನೋಡಿ - ಬೇಲ್ತೆಶಚ್ಚರನೇ, ನನ್ನ ಕನಸಾಗಲಿ ಅದರ ಅರ್ಥವಾಗಲಿ ನಿನ್ನನ್ನು ಹೆದರಿಸದಿರಲಿ ಎಂದು ಹೇಳಲು ಬೇಲ್ತೆಶಚ್ಚರನು - ಎನ್ನೊಡೆಯನೇ, ಆ ಕನಸು ನಿನ್ನ ಹಗೆಗಳಿಗೆ ಫಲಿಸಲಿ, ಅದರ ಅರ್ಥವು ನಿನ್ನ ವಿರೋಧಿಗಳ ಅನುಭವಕ್ಕೆ ಬರಲಿ!

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

19 ಆಗ ದಾನಿಯೇಲನು (ಬೇಲ್ತೆಶಚ್ಚರನು) ಸುಮಾರು ಒಂದು ಗಂಟೆಯವರೆಗೆ ಮೌನವಾಗಿದ್ದನು. ಅವನ ಬುದ್ಧಿಗೆ ತೋರಿದ ವಿಷಯಗಳು ಅವನನ್ನು ಗಾಬರಿಪಡಿಸಿದವು. ಆಗ ರಾಜನು, “ಬೇಲ್ತೆಶಚ್ಚರನೇ, ಕನಸು ಅಥವಾ ಕನಸಿನ ಅರ್ಥವು ನಿನ್ನನ್ನು ಭಯಗೊಳಿಸದಿರಲಿ” ಎಂದು ಧೈರ್ಯ ಹೇಳಿದನು. ಆಗ ಬೇಲ್ತೆಶಚ್ಚರನು ಅರಸನಿಗೆ, “ನನ್ನ ಒಡೆಯನೇ, ಈ ಕನಸು ನಿನ್ನ ವಿರೋಧಿಗಳಿಗೆ ಫಲಿಸಲಿ. ಇದರ ಅರ್ಥವು ನಿನ್ನ ವಿರೋಧಿಗಳ ಅನುಭವಕ್ಕೆ ಬರಲಿ ಎಂದು ನಾನು ಹಾರೈಸುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

19 ಆಗ ಬೇಲ್ತೆಶಚ್ಚರನೆಂಬ ಹೆಸರುಳ್ಳ ದಾನಿಯೇಲನು ಒಂದು ಗಳಿಗೆ ವಿಸ್ಮಿತನಾಗಿ ತನ್ನ ಆಲೋಚನೆಗಳಲ್ಲಿ ಕಳವಳಗೊಂಡನು. ಆಗ ಅರಸನು ಮಾತನಾಡಿ, “ಬೇಲ್ತೆಶಚ್ಚರನೇ, ಕನಸಾದರೂ, ಅದರ ಅರ್ಥವಾದರೂ ನಿನ್ನನ್ನು ಕಳವಳಪಡಿಸದಿರಲಿ,” ಎಂದನು. ಬೇಲ್ತೆಶಚ್ಚರನು ಉತ್ತರವಾಗಿ, “ನನ್ನ ಒಡೆಯನೇ, ಆ ಕನಸು ನಿನ್ನ ವೈರಿಗಳಿಗೂ, ಅದರ ಅರ್ಥವು ನಿನ್ನ ಶತ್ರುಗಳಿಗೂ ಆಗಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ದಾನಿಯೇಲ 4:19
27 ತಿಳಿವುಗಳ ಹೋಲಿಕೆ  

ದಾನಿಯೇಲನಾದ ನಾನು ಮೂರ್ಛೆಗೊಂಡೆ. ಕೆಲವು ದಿವಸ ಕಾಯಿಲೆ ಬಿದ್ದೆ. ಆಮೇಲೆ ಎದ್ದು ರಾಜಕಾರ್ಯವನ್ನು ಆರಂಭಿಸಿದೆ. ಆದರೂ ಆ ಕನಸಿಗೆ ಬೆಚ್ಚಿಬೆರಗಾದೆ. ಅದರ ಅರ್ಥವನ್ನು ಗ್ರಹಿಸಿಕೊಳ್ಳಲಾಗಲಿಲ್ಲ.


ಇಲ್ಲಿಗೆ ಆ ಕನಸಿನ ವಿವರ ಮುಗಿಯಿತು. ದಾನಿಯೇಲನಾದ ನಾನು ನನ್ನ ಆಲೋಚನೆಗಳಿಂದ ಬಹಳ ಕಳವಳಗೊಂಡೆ. ನನ್ನ ಮುಖ ಬಾಡಿತು. ಆದರೂ ನಡೆದ ಸಂಗತಿಯನ್ನು ಮನಸ್ಸಿನಲ್ಲೇ ಇಟ್ಟುಕೊಂಡೆ.


“ರಾಜರೇ, ಕನಸಿನ ತಾತ್ಪರ್ಯ ಇದು: ನನ್ನೊಡೆಯರಾದ ಅರಸರಿಗೆ ಉಂಟಾಗಲಿರುವ ಪರಾತ್ಪರ ದೇವರ ತೀರ್ಪು ಹೀಗಿದೆ -


ಅಯ್ಯೋ, ನನ್ನ ಕರುಳು ಯಾತನೆಯಿಂದ ಕಿತ್ತುಬರುವಂತಿದೆ. ಅಕಟಾ ! ನನ್ನ ಗುಂಡಿಗೆಯ ಪಕ್ಕೆಗಳು ಸೀಳುವಂತಿದೆ, ಹೃದಯ ತಳಮಳಗೊಂಡಿದೆ ! ಇನ್ನು ಬಾಯಿಮುಚ್ಚಿಕೊಂಡಿರಲು ನನ್ನಿಂದಾಗದು; ನನ್ನ ಮನವೇ, ಕಾಳಗದ ಕಹಳೆಯನ್ನೂ ಯುದ್ಧದ ಕೋಲಾಹಲವನ್ನೂ ಕೇಳುತ್ತಿರುವೆ, ಅಲ್ಲವೆ?


ಏಲಿ ಅವನಿಗೆ, “ಸರ್ವೇಶ್ವರ ನಿನಗೆ ತಿಳಿಸಿದ್ದೇನು? ಅವರ ಮಾತುಗಳಲ್ಲಿ ಒಂದನ್ನಾದರೂ ಮರೆಮಾಡಬೇಡ; ಮಾಡಿದೆಯಾದರೆ ಸರ್ವೇಶ್ವರ ಇಷ್ಟಬಂದ ಹಾಗೆ ನಿನ್ನನ್ನು ದಂಡಿಸಲಿ,” ಎಂದು ಹೇಳಿದನು.


ನಿನ್ನ ನೋಡಿ ತಳಮಳಗೊಳ್ಳುತ್ತವೆ ಬೆಟ್ಟಗಳು ಹರಿಯುತ್ತವೆ ಆಗಸದಿಂದ ಪ್ರವಾಹಗಳು ಕೈಯೆತ್ತಿ ಭೋರ್ಗರೆಯುತ್ತವೆ ಸಾಗರಗಳು.


ದಾನಿಯೇಲನಾದ ನನ್ನ ಮನ ಒಳಗೇ ವ್ಯಥೆಗೊಂಡಿತು. ನನ್ನ ಮನಸ್ಸಿನಲ್ಲಿ ತೋಚಿದ ದರ್ಶನಗಳು ನನ್ನನ್ನು ಕಳವಳಪಡಿಸಿದವು.


ಹೌದು, ‘ಬೇಲ್ತೆಶಚ್ಚರ’ನೆಂಬ ಹೆಸರನ್ನು ರಾಜನಿಂದ ಹೊಂದಿದ ಆ ದಾನಿಯೇಲನು ಪರಮ ಬುದ್ಧಿವಂತ, ಜ್ಞಾನಿ, ವಿವೇಕಿ, ಕನಸುಗಳ ಅರ್ಥವನ್ನು ತಿಳಿಸುವ ಜಾಣತನ, ಒಗಟು ಬಿಡಿಸುವ ಚಮತ್ಕಾರ, ಗುಂಜುಗಂಟು ಬಿಚ್ಚುವ ಚಾತುರ್ಯ ಅವನಲ್ಲಿ ತೋರಿಬಂದವು. ಆದ್ದರಿಂದಲೇ ಅವನನ್ನು ಅಧ್ಯಕ್ಷನನ್ನಾಗಿ ನೇಮಿಸಲಾಯಿತು. ದಾನಿಯೇಲನನ್ನು ಈಗಲೇ ಕರೆಯಿಸಿರಿ. ಆತ ಬರಹದ ಅರ್ಥವನ್ನು ವಿವರಿಸುವನು,” ಎಂದಳು.


ರಾಜನು ಬೇಲ್ತೆಶಚ್ಚರನೆಂದು ಹೆಸರು ಪಡೆದಿದ್ದ ದಾನಿಯೇಲನನ್ನು ನೋಡಿ, “ನಾನು ಕಂಡ ಕನಸನ್ನೂ ಅದರ ಅರ್ಥವನ್ನೂ ತಿಳಿಸಬಲ್ಲೆಯಾ?” ಎಂದು ವಿಚಾರಿಸಿದನು.


ಕಂಚುಕಿಯರ ನಾಯಕನು ಇವರಿಗೆ ನಾಮಕರಣಮಾಡಿ ದಾನಿಯೇಲನಿಗೆ ‘ಬೇಲ್ತೆಶಚ್ಚರ್’, ಹನನ್ಯನಿಗೆ ‘ಶದ್ರಕ್’, ಮಿಶಾಯೇಲನಿಗೆ ‘ಮೇಶಕ್’, ಹಾಗೂ ಅಜರ್ಯನಿಗೆ ‘ಅಬೇದ್‍ನೆಗೋ’, ಎಂಬ ಹೆಸರಿಟ್ಟನು.


ನಾನು ಯಾವ ನಗರಕ್ಕೆ ನಿಮ್ಮನ್ನು ಸಾಗಿಸಿದ್ದೇನೋ ಅದರ ಕ್ಷೇಮವನ್ನು ಹಾರೈಸಿ, ಅದಕ್ಕಾಗಿ ಸರ್ವೇಶ್ವರನಾದ ನನ್ನನ್ನು ಪ್ರಾರ್ಥಿಸಿರಿ. ಅದರ ಕ್ಷೇಮವೇ ನಿಮ್ಮ ಕ್ಷೇಮ.


ಓಬದ್ಯನು ಪ್ರಯಾಣಮಾಡುತ್ತಿರುವಾಗ ಎಲೀಯನು ತಟ್ಟನೆ ಅವನಿಗೆ ಎದುರಾದನು. ಓಬದ್ಯನು ಅವನ ಗುರುತು ಹಿಡಿದು ಸಾಷ್ಟಾಂಗ ನಮಸ್ಕಾರ ಮಾಡಿದನು. “ತಾವು ನನ್ನ ಸ್ವಾಮಿ ಎಲೀಯರೋ?’ ಎಂದು ಕೇಳಿದನು.


ದಾವೀದನು ಅಬ್ನೇರನಿಗೆ, “ನೀನು ಶೂರನಲ್ಲವೇ? ಇಸ್ರಯೇಲರಲ್ಲಿ ನಿನಗೆ ಸಮನಾರು? ನೀನು ನಿನ್ನ ಒಡೆಯನಾದ ಅರಸನನ್ನು ಏಕೆ ಕಾಯಲಿಲ್ಲ? ಜನರಲ್ಲಿ ಒಬ್ಬನು ಒಳಗೆ ಹೊಕ್ಕು ನಿನ್ನ ಒಡೆಯನಾದ ಅರಸನನ್ನು ಕೊಲ್ಲಬೇಕೆಂದಿದ್ದನು.


ಸೌಲನು ಗವಿಯಿಂದ ಹೊರಗೆ ಬಂದು ಸ್ವಲ್ಪ ಮುಂದೆ ಹೋದಮೇಲೆ ದಾವೀದನೂ ಹೊರಗೆ ಬಂದು, “ಅರಸರೇ, ನನ್ನ ಒಡೆಯರೇ,” ಎಂದು ಅವನನ್ನು ಕೂಗಿದನು. ಸೌಲನು ಹಿಂದಿರುಗಿ ನೋಡಿದನು. ಆಗ ಅವನಿಗೆ ಸಾಷ್ಟಾಂಗ ನಮಸ್ಕಾರಮಾಡಿ,


ಆಕೆ, “ಇಲ್ಲ ಸ್ವಾಮಿ, ನಾನು ಕುಡಿದಿಲ್ಲ, ನಾನು ಬಹಳ ದುಃಖಪೀಡಿತಳು; ದ್ರಾಕ್ಷಾರಸವನ್ನಾಗಲಿ ಬೇರೆ ಯಾವ ಮದ್ಯವನ್ನಾಗಲಿ ಕುಡಿದವಳಲ್ಲ. ನನ್ನ ಮನೋವೇದನೆಯನ್ನು ಸರ್ವೇಶ್ವರನ ಮುಂದೆ ತೋಡಿಕೊಳ್ಳುತ್ತಾ ಇದ್ದೇನೆ.


ಇಲ್ಲವಾದರೆ ನೀವು ಬರೆದಿರುವ (ಜೀವಿತರ) ಪಟ್ಟಿಯಿಂದ ನನ್ನ ಹೆಸರನ್ನು ಅಳಿಸಿಬಿಡಿಯೆಂದು ಕೇಳಿಕೊಳ್ಳುತ್ತೇನೆ,” ಎಂದು ಪ್ರಾರ್ಥಿಸಿದನು.


‘ಇವು ನಿಮ್ಮ ದಾಸ ಯಕೋಬನವು; ಒಡೆಯರಾದ ನಿಮಗೆ ಇವುಗಳನ್ನು ಕಾಣಿಕೆಯಾಗಿ ಕಳಿಸಿಕೊಟ್ಟಿದ್ದಾರೆ; ಅವರೂ ನಮ್ಮ ಹಿಂದೆ ಬರುತ್ತಿದ್ದಾರೆ’ ಎಂದು ಉತ್ತರಕೊಡಬೇಕು,” ಎಂಬುದಾಗಿ ಅಪ್ಪಣೆ ಕೊಟ್ಟನು.


ರಾಖೇಲಳು ತನ್ನ ತಂದೆಗೆ, “ಅಪ್ಪಾ, ನಾನು ನಿಮ್ಮ ಮುಂದೆ ಎದ್ದು ನಿಂತುಕೊಳ್ಳಲಾಗದೆ ಇದ್ದೇನೆ, ಕೋಪಿಸಿಕೊಳ್ಳಬೇಡಿ, ನಾನು ಮುಟ್ಟಾಗಿದ್ದೇನೆ,” ಎಂದು ಹೇಳಿದಳು. ಎಂದೇ ಲಾಬಾನನು ಎಷ್ಟು ಹುಡುಕಿ ನೋಡಿದರೂ ಆ ವಿಗ್ರಹಗಳನ್ನು ಕಂಡುಹಿಡಿಯಲಾಗಲಿಲ್ಲ.


ಅದಕ್ಕೆ ಜೋಸೆಫನು, “ಆ ಕನಸಿನ ಅರ್ಥ ಇದು: ಆ ಮೂರು ಕೊಂಬೆಗಳು ಮೂರು ದಿನಗಳು;


ನೀವು ರಾಜಾಧಿರಾಜರು, ಪರಲೋಕ ದೇವರು ನಿಮಗೆ ರಾಜ್ಯಬಲ, ಪರಾಕ್ರಮ ಹಾಗು ವೈಭವಗಳನ್ನು ದಯಪಾಲಿಸಿದ್ದಾರೆ.


ಪರಾತ್ಪರ ದೇವರು ನಿಮ್ಮ ತಂದೆಯಾದ ನೆಬೂಕದ್ನೆಚ್ಚರ್ ಅವರಿಗೆ ರಾಜ್ಯ ಮಹತ್ವವನ್ನು ಹಾಗೂ ಮಾನ ಸನ್ಮಾನಗಳನ್ನು ದಯಪಾಲಿಸಿದ್ದರು.


ಇಂಥ ಮಹತ್ವ ವರದ ನಿಮಿತ್ತ ಸಕಲ ದೇಶ-ಕುಲ-ಭಾಷೆಗಳವರು ಅವರ ಮುಂದೆ ಭಯದಿಂದ ನಡುಗುತ್ತಿದ್ದರು. ತಮಗೆ ಇಷ್ಟಬಂದ ಹಾಗೆ ಒಬ್ಬನನ್ನು ಬದುಕಿಸಿದರು, ಇನ್ನೊಬ್ಬನನ್ನು ಕೊಲ್ಲಿಸಿದರು. ಮನಸ್ಸಿಗೆ ಬಂದಹಾಗೆ ಒಬ್ಬನನ್ನು ಮೇಲೇರಿಸಿದರು, ಇನ್ನೊಬ್ಬನನ್ನು ಕೆಳಕ್ಕಿಳಿಸಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು