ದಾನಿಯೇಲ 4:21 - ಕನ್ನಡ ಸತ್ಯವೇದವು C.L. Bible (BSI)21 ಲೋಕದ ಜನರೆಲ್ಲರಿಗೆ ಕಾಣಿಸುತ್ತಿತ್ತು. ಅಂದವಾದ ಎಲೆಗಳನ್ನೂ ಹುಲುಸಾದ ಹಣ್ಣುಗಳನ್ನೂ ಬಿಡುತ್ತಿತ್ತು. ಎಲ್ಲಕ್ಕೂ ಆಹಾರ ಒದಗಿಸುತ್ತಿತ್ತು. ತನ್ನ ನೆರಳನ್ನು ವನ್ಯಮೃಗಗಳಿಗೆ ಆಶ್ರಯವಾಗಿಯೂ ತನ್ನ ಕೊಂಬೆಗಳನ್ನು ಆಕಾಶ ಪಕ್ಷಿಗಳಿಗೆ ನೆಲೆಯಾಗಿಯೂ ಮಾಡಿತ್ತು. ಕನಸಿನಲ್ಲಿ ನಿಮಗೆ ತೋರಿದ ಆ ಮರವು ನೀವೇ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201921 ಲೋಕದವರೆಲ್ಲರಿಗೂ ಕಾಣಿಸುತ್ತಾ, ಅಂದವಾದ ಎಲೆಗಳನ್ನೂ ಬಹಳ ಹಣ್ಣುಗಳನ್ನೂ ಬಿಡುತ್ತಾ, ಎಲ್ಲಕ್ಕೂ ಆಹಾರವನ್ನು ಒದಗಿಸುತ್ತಾ ತನ್ನ ನೆರಳನ್ನು ಭೂಜಂತುಗಳಿಗೆ ಆಶ್ರಯವಾಗಿಯೂ ತನ್ನ ಕೊಂಬೆಗಳನ್ನು ಆಕಾಶ ಪಕ್ಷಿಗಳಿಗೆ ನೆಲೆಯಾಗಿಯೂ ಮಾಡುತ್ತಾ ಕನಸಿನಲ್ಲಿ ನಿನಗೆ ತೋರಿತೋ, ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)21 ಅಂದವಾದ ಎಲೆಗಳನ್ನೂ ಬಹಳ ಹಣ್ಣುಗಳನ್ನೂ ಬಿಡುತ್ತಾ ಎಲ್ಲಕ್ಕೂ ಆಹಾರವನ್ನು ಒದಗಿಸುತ್ತಾ ತನ್ನ ನೆರಳನ್ನು ಭೂಜಂತುಗಳಿಗೆ ಆಶ್ರಯವಾಗಿಯೂ ತನ್ನ ಕೊಂಬೆಗಳನ್ನು ಆಕಾಶಪಕ್ಷಿಗಳಿಗೆ ನೆಲೆಯಾಗಿಯೂ ಮಾಡುತ್ತಾ ಕನಸಿನಲ್ಲಿ ನಿನಗೆ ತೋರಿತೋ ಆ ವೃಕ್ಷವು ನೀನೇ; ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ21 ಅದರ ಎಲೆಗಳು ಅಂದವಾಗಿದ್ದು, ಫಲವು ಬಹಳವಾಗಿತ್ತು. ಅದರಲ್ಲಿ ಎಲ್ಲರಿಗೂ ಆಹಾರ ಇತ್ತು. ಅದರ ಕೆಳಗೆ ಕಾಡುಮೃಗಗಳು ವಾಸಮಾಡಿದ್ದವು. ಅದರ ಕೊಂಬೆಗಳಲ್ಲಿ ಆಕಾಶದ ಪಕ್ಷಿಗಳು ನಿವಾಸ ಮಾಡಿದ್ದವು. ಅಧ್ಯಾಯವನ್ನು ನೋಡಿ |