Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ದಾನಿಯೇಲ 4:3 - ಕನ್ನಡ ಸತ್ಯವೇದವು C.L. Bible (BSI)

3 ದೇವರ ಸೂಚಕಕಾರ್ಯಗಳು ಎಷ್ಟೋ ಅತಿಶಯ! ಅವರ ಅದ್ಭುತಗಳು ಎಷ್ಟೋ ಅಪಾರ! ಅವರ ರಾಜ್ಯ ಶಾಶ್ವತ ಸಾಮ್ರಾಜ್ಯ; ಅವರ ಆಳ್ವಿಕೆ ತಲತಲಾಂತರಕ್ಕೂ ಸ್ಥಿರ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

3 ಆತನ ಮಹತ್ತುಗಳು ಎಷ್ಟೋ ಅತಿಶಯ! ಆತನ ಅದ್ಭುತಗಳು ಎಷ್ಟೋ ವಿಶೇಷ! ಆತನ ರಾಜ್ಯವು ಶಾಶ್ವತರಾಜ್ಯ, ಆತನ ಆಳ್ವಿಕೆಯು ತಲತಲಾಂತರಕ್ಕೂ ಸ್ಥಿರವಾಗಿ ನಿಲ್ಲುವುದು.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

3 ಆತನ ಮಹತ್ತುಗಳು ಎಷ್ಟೋ ಅತಿಶಯ! ಆತನ ಅದ್ಭುತಗಳು ಎಷ್ಟೋ ವಿಶೇಷ! ಆತನ ರಾಜ್ಯವು ಶಾಶ್ವತರಾಜ್ಯ, ಆತನ ಆಳಿಕೆಯು ತಲತಲಾಂತರಕ್ಕೂ ನಿಲ್ಲುವದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

3 ದೇವರು ಅಚ್ಚರಿಗೊಳಿಸುವ ಅದ್ಭುತಕಾರ್ಯಗಳನ್ನು ಮಾಡಿದ್ದಾನೆ. ದೇವರು ಅದ್ಭುತಕಾರ್ಯಗಳನ್ನು ಮಾಡಿದ್ದಾನೆ. ದೇವರ ಸಾಮ್ರಾಜ್ಯವು ಶಾಶ್ವತವಾದದ್ದು. ದೇವರ ಆಳ್ವಿಕೆಯು ಎಲ್ಲಾ ತಲೆಮಾರುಗಳಲ್ಲಿಯೂ ಮುಂದುವರೆಯುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

3 ಅವರ ಸೂಚಕಕಾರ್ಯಗಳು ಎಷ್ಟೋ ದೊಡ್ಡವುಗಳು! ಅವರ ಅದ್ಭುತಗಳು ಪರಾಕ್ರಮವಾದವುಗಳು! ಅವರ ರಾಜ್ಯವು ನಿತ್ಯವಾದ ರಾಜ್ಯವು, ಅವರ ಆಡಳಿತವು ತಲತಲಾಂತರಕ್ಕೂ ಇರುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ದಾನಿಯೇಲ 4:3
29 ತಿಳಿವುಗಳ ಹೋಲಿಕೆ  

ಶಾಶ್ವತವಾದುದು ನಿನ್ನ ರಾಜ್ಯವು I ಇರುವುದೆಂದಿಗು ನಿನ್ನ ಆಳ್ವಿಕೆಯು II


ಆ ರಾಜರ ಕಾಲದಲ್ಲಿ ಪರಲೋಕ ದೇವರು ಒಂದು ಸಾಮ್ರಾಜ್ಯವನ್ನು ಸ್ಥಾಪಿಸುವರು. ಅದು ಎಂದಿಗೂ ಅಳಿಯದು. ಅದರ ಪ್ರಾಬಲ್ಯವು ಬೇರೆ ರಾಷ್ಟ್ರಕ್ಕೆ ಜಾರಿಹೋಗದು. ರಾಷ್ಟ್ರಗಳನ್ನೆಲ್ಲಾ ಭಂಗಪಡಿಸಿ, ನಿರ್ನಾಮಮಾಡಿ ಆ ಸಾಮ್ರಾಜ್ಯ ಶಾಶ್ವತವಾಗಿ ನಿಲ್ಲುವುದು.


ಸರ್ವೇಶ್ವರಾ, ನೀನೆನ್ನ ದೇವನು, ಏಕೆನೆ ನೀನು ಸತ್ಯಸ್ವರೂಪನು, ನಿಷ್ಟಾವಂತನು, ಆದಿ ಯೋಜನೆಗಳನು ಪೂರೈಸುವವನು, ಅದ್ಭುತಕಾರ್ಯಗಳನು ಎಸಗಿದಂತವನು. ಘನಪಡಿಸುವೆ ನಾ ನಿನ್ನನು, ಸ್ತುತಿಸುವೆನು ನಿನ್ನ ನಾಮ ಮಹಿಮೆಯನು.


ಸಕಲ ರಾಷ್ಟ್ರ-ಕುಲ-ಭಾಷೆಗಳವರು ಅವನಿಗೆ ಸೇವೆ ಸಲ್ಲಿಸಲೆಂದು ಅವನಿಗೆ ದೊರೆತನ, ಘನತೆ, ರಾಜ್ಯತ್ವ ಇವುಗಳನ್ನು ಕೊಡಲಾಯಿತು. ಅವನ ಆಳ್ವಿಕೆಗೆ ಅಂತ್ಯವಿಲ್ಲ, ಅದು ಶಾಶ್ವತವಾದುದು, ಅವನ ರಾಜ್ಯ ಎಂದಿಗೂ ಅಳಿಯದು!


ಏಳನೆಯ ದೂತನು ತನ್ನ ತುತೂರಿಯನ್ನು ಊದಿದನು. ಆಗ ಸ್ವರ್ಗದಲ್ಲಿ ಮಹಾಶಬ್ದಗಳು ಉಂಟಾಗಿ ಹೀಗೆ ಮೊಳಗಿದವು : “ವಿಶ್ವವನ್ನಾಳುವ ಅಧಿಕಾರವು ನಮ್ಮ ಸರ್ವೇಶನದು ಹಾಗು ಅವರಿಂದ ಅಭಿಷಿಕ್ತನಾದ ಲೋಕೋದ್ಧಾರಕನದು. ಇನ್ನಾತನು ಆಳುವನು ಎಂದೆಂದಿಗೂ".


ತಮ್ಮ ಪುತ್ರನನ್ನು ಕುರಿತಾದರೋ: “ದೇವಾ, ನಿನ್ನ ಸಿಂಹಾಸನವು ಶಾಶ್ವತವಾದುದು; ನ್ಯಾಯದಂಡವೇ ನಿನ್ನ ರಾಜದಂಡವಾಗಿದೆ.


ಸರ್ವಯುಗಗಳ ಅರಸರೂ ಅಮರರೂ ಅಗೋಚರರೂ ಆಗಿರುವ ಏಕೈಕ ದೇವರಿಗೆ ಯುಗಯುಗಾಂತರಕ್ಕೆ ಗೌರವವೂ ಮಹಿಮೆಯೂ ಸಲ್ಲಲಿ! ಆಮೆನ್.


ರಾಜ್ಯಭಾರವೂ ದೊರೆತನವೂ ಸಮಸ್ತ ಲೋಕದಲ್ಲಿನ ರಾಜ್ಯಗಳ ಮಹಿಮೆಯೂ ಮಹೋನ್ನತರ ಭಕ್ತಜನರಿಗೆ ಕೊಡಲಾಗುವುದು. ಅವರ ರಾಜ್ಯ ಶಾಶ್ವತರಾಜ್ಯ. ಎಲ್ಲ ದೇಶಾಧಿಪತಿಗಳೂ ಅವರಿಗೆ ಅಧೀನರಾಗಿ ಸೇವೆಮಾಡುವರು,” ಎಂದು ಹೇಳಿದನು.


ಬೋಧಿಸುವ ವರವನ್ನು ಪಡೆದವನು ದೇವರ ವಾಕ್ಯವನ್ನು ಬೋಧಿಸುವವನಂತೆ ಬೋಧನೆಮಾಡಲಿ. ಸೇವೆಮಾಡುವ ವರವನ್ನು ಪಡೆದವನು, ದೇವರಿಂದ ಶಕ್ತಿಯನ್ನು ಪಡೆದವನಂತೆ ಸೇವೆಮಾಡಲಿ. ಇದರಿಂದ ಯೇಸುಕ್ರಿಸ್ತರ ಮುಖಾಂತರ ಎಲ್ಲದರಲ್ಲಿಯೂ ದೇವರಿಗೆ ಸ್ತುತಿಯುಂಟಾಗುವುದು. ಅವರಿಗೆ ಸದಾಕಾಲ ಮಹಿಮೆಯೂ ಸರ್ವಾಧಿಕಾರವೂ ಸಲ್ಲಲಿ. ಆಮೆನ್.


ಸೂಚಕಕಾರ್ಯಗಳಿಂದಲೂ ಅದ್ಭುತಕಾರ್ಯಗಳಿಂದಲೂ ಹಲವಾರು ಮಹತ್ಕಾರ್ಯಗಳಿಂದಲೂ ಮತ್ತು ತಮ್ಮ ಚಿತ್ತಾನುಸಾರ ಅನುಗ್ರಹಿಸಿದ ಪವಿತ್ರಾತ್ಮ ಅವರ ವರದಾನಗಳಿಂದಲೂ ದೇವರು ಆ ಪ್ರಮಾಣವನ್ನು ಪುಷ್ಟೀಕರಿಸಿದ್ದಾರೆ.


ಹೇ ಸರ್ವೇಶ್ವರಾ, ನೀವಾದರೋ ಸತ್ಯದೇವರು, ಜೀವಸ್ವರೂಪ ದೇವರು, ಶಾಶ್ವತ ರಾಜರು ನಿಮ್ಮ ಕೋಪಕ್ಕೆ ನಡುಗುತ್ತದೆ ಭೂಲೋಕ ನಿಮ್ಮ ರೋಷವನ್ನು ತಾಳಲಾರದು ಜನಾಂಗ.


ನೋಡಿದರಿವರು ಆತನ ಸೂಚಕಕಾರ್ಯಗಳನು I ಹಾಮ ನಾಡಿನಲಿ ನಾನಾ ಅದ್ಭುತಕಾರ್ಯಗಳನು II


ಇದು ಕಾವಲುಗಾರ ದೂತನ ತೀರ್ಮಾನ; ಹಾಗು ದೇವರ ತೀರ್ಪು. ಪರಾತ್ಪರ ದೇವರಿಗೆ ನರಮಾನವರ ರಾಜ್ಯದ ಮೇಲೂ ಅಧಿಕಾರವಿದೆ. ಅದರ ಆಳ್ವಿಕೆಯನ್ನು ಅವರು ತಮಗೆ ಬೇಕಾದವರಿಗೆ ಒಪ್ಪಿಸುತ್ತಾರೆ. ಕನಿಷ್ಠರನ್ನೂ ಆ ಪದವಿಗೆ ನೇಮಿಸುತ್ತಾರೆ. ಇದು ಎಲ್ಲಾ ಜನರಿಗೆ ತಿಳಿದಿರಬೇಕೆಂಬುದೇ ಈ ತೀರ್ಮಾನ,' ಎಂದು ಸಾರಿದನು.


ಈ ವಿವೇಕವು ಕೂಡ ಸೇನಾಧೀಶ್ವರ ಸರ್ವೇಶ್ವರನಿಂದಲೇ ಬರುತ್ತದೆ. ಅವರ ಆಲೋಚನೆ ಅತಿಶಯವಾದುದು. ಅವರ ಜ್ಞಾನ ಸರ್ವಶ್ರೇಷ್ಠವಾದುದು.


ಅಂತ್ಯವಿರದಾತನ ರಾಜ್ಯಾಭಿವೃದ್ಧಿಗೆ ಕೊನೆಯಿರದಾ ರಾಜ್ಯದ ಶಾಂತಿಗೆ. ಆಸೀನನಾಗುವನಾತ ದಾವೀದನ ಸಿಂಹಾಸನದ ಮೇಲೆ ಅಧಿಕಾರ ನಡೆಸುವನು ಆ ಸಾಮ್ರಾಜ್ಯದ ಮೇಲೆ. ಬಲಪಡಿಸುವನು ನ್ಯಾಯನೀತಿಯಿಂದದನು ಇಂದಿಗೂ ಎಂದೆಂದಿಗೂ ಸ್ಥಿರಪಡಿಸುವನದನು. ಸರ್ವಶಕ್ತಸ್ವಾಮಿಯ ಆಗ್ರಹವೆ ಸಾಧಿಸುವುದದನು.


ಸೃಜಿಸಿರುವೆ ಎಲ್ಲವನು ಸುಜ್ಞಾನದಿಂದ I ಜಗವೆಲ್ಲ ತುಂಬಿದೆ ನಿನ್ನ ಸೃಷ್ಟಿಯಿಂದ II


ಪ್ರಭು, ನಿನ್ನ ಕೃತ್ಯಗಳೆನಿತೋ ಅಮೂಲ್ಯ I ನಿನ್ನಾಲೋಚನೆಗಳು ಎನಿತೋ ಅಶೋಧ್ಯ II


ಪ್ರಭು, ನೀನೊಬ್ಬನೇ ದೇವನು I ಅದ್ಭುತಶಾಲಿ, ಮಹೋನ್ನತನು II


ಸಾಗರವನೆ ನೀ ತುಳಿದು ನಡೆದೆ I ಮಹಾಸಾಗರವನೆ ನೀ ದಾಟಿದೆ I ಹೆಜ್ಜೆಯ ಗುರುತನೂ ಕಾಣಬಿಡದೆ II


ಸುತ್ಯರ್ಹನು ಸ್ವಾಮಿದೇವನು, ಇಸ್ರಯೇಲರ ದೇವನು I ಆತನೋರ್ವನೇ ಮಹತ್ಕಾರ್ಯಗಳನು ಎಸಗುವಂತವನು II


ಆತನಾಳ್ವಿಕೆ ಶಕ್ತಿಯುತ, ನಿರಂತರ I ರಾಷ್ಟ್ರಗಳ ಮೇಲೆ ಅವನ ನೇತ್ರ ಕನಿಕರ I ಜಂಬ ಕೊಚ್ಚದಿರಲಿ ದಂಗೆಕೋರ II


“ದೇವರು ಮಹೋನ್ನತ ಪ್ರಭು; ಭಯಭಕ್ತಿಗೆ ಪಾತ್ರನು ಉನ್ನತಲೋಕದಲ್ಲಿ ಶಾಂತಿಸಮಾಧಾನವನು ಸ್ಥಾಪಿಸಿಹನು.


ಬೇರೆ ಯಾವ ದೇವರು ತಾನೆ ಪರಿಶೋಧನೆ, ಪವಾಡ, ಮಹತ್ಕಾರ್ಯ, ಯುದ್ಧ, ಭುಜಪರಾಕ್ರಮ, ಶಿಕ್ಷಾಹಸ್ತ, ಭಯಂಕರಕಾರ್ಯ ಇವುಗಳನ್ನು ಪ್ರಯೋಗಿಸಿ ಒಂದು ಜನಾಂಗವನ್ನು ಮತ್ತೊಂದು ಜನಾಂಗದ ಕೈಯಿಂದ ತಪ್ಪಿಸಲು ಪ್ರಯತ್ನಿಸಿದ್ದಾರೆ? ನಿಮ್ಮ ದೇವರಾದ ಸರ್ವೇಶ್ವರ ಸ್ವಾಮಿಯಾದರೊ ಈಜಿಪ್ಟಿನಲ್ಲಿ ನಿಮ್ಮ ಪರವಾಗಿ, ಇದನ್ನೆಲ್ಲ ನಿಮ್ಮ ಕಣ್ಮುಂದೆಯೇ, ನಡೆಸಿದರಲ್ಲವೆ?


ದೇವರ ಸಿರಿಸಂಪತ್ತು, ಜ್ಞಾನವಿಜ್ಞಾನ ಎಷ್ಟು ಅಗಾಧ! ಪರಿಶೋಧನೆಗೂ ನಿಲುಕದ ಅವರ ನಿರ್ಣಯ ಎಷ್ಟು ಅಗಮ್ಯ! ಅವರ ನಿಯೋಜನೆಗಳು ಗ್ರಹಿಕೆಗೂ ಎಷ್ಟು ಅಸಾಧ್ಯ!


ಆಗ ಆ ರಾಜನು ತನ್ನ ಕನಸಿನ ಅರ್ಥ ತಿಳಿಸಬೇಕೆಂದು ಜೋಯಿಸರನ್ನೂ ಮಂತ್ರವಾದಿಗಳನ್ನೂ ಮಾಟಗಾರರನ್ನೂ ಪಂಡಿತರನ್ನೂ ಕರೆಯಿಸಿದನು. ಅವರು ಆಸ್ಥಾನಕ್ಕೆ ಬಂದು ರಾಜನ ಮುಂದೆ ನಿಂತುಕೊಂಡರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು