ದಾನಿಯೇಲ 4:30 - ಕನ್ನಡ ಸತ್ಯವೇದವು C.L. Bible (BSI)30 ಆಗ ಅವನು, “ಹಾ, ಬಾಬಿಲೋನ್ ಎಂಥಾ ಮಹಾನಗರ! ಇಗೋ, ನನ್ನ ಶಕ್ತಿ ಸಾಮರ್ಥ್ಯದಿಂದ ನಾನು ಕಟ್ಟಿಸಿರುವ ರಾಜಭವನ! ನನ್ನ ಕೀರ್ತಿ ಪರಾಕ್ರಮವನ್ನು ಇದು ಪ್ರಕಟಿಸುತ್ತಿದೆ!” ಎಂದು ಕೊಚ್ಚಿಕೊಂಡನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201930 “ನನ್ನ ಮಹಿಮೆಯು ಪ್ರಸಿದ್ಧಿಗೆ ಬರುವಂತೆ ನನ್ನ ಸಾಮರ್ಥ್ಯ ಬಲದಿಂದ ರಾಜನಿವಾಸಕ್ಕಾಗಿ ನಾನು ಕಟ್ಟಿಸಿಕೊಂಡಿರುವುದು ಇಗೋ, ಮಹಾ ಪಟ್ಟಣವಾದ ಈ ಬಾಬೆಲ್” ಎಂದು ಕೊಚ್ಚಿಕೊಂಡನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)30 ನನ್ನ ಮಹಿಮೆಯು ಪ್ರಸಿದ್ಧಿಗೆ ಬರುವಂತೆ ನನ್ನ ಸಾಮರ್ಥ್ಯಬಲದಿಂದ ರಾಜನಿವಾಸಕ್ಕಾಗಿ ನಾನು ಕಟ್ಟಿಸಿಕೊಂಡಿರುವದು ಇಗೋ, ಮಹಾಪಟ್ಟಣವಾದ ಈ ಬಾಬೆಲ್ ಎಂದು ಕೊಚ್ಚಿಕೊಂಡನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ30 ಆಗ ಅರಸನು, “ನಾನು ನನ್ನ ಪರಾಕ್ರಮದ ಬಲದಿಂದಲೂ, ನನ್ನ ಮಹಿಮೆಯ ಕೀರ್ತಿಗಾಗಿಯೂ ಕಟ್ಟಿಸಿದ ಮಹಾ ಬಾಬಿಲೋನು ಇದಲ್ಲವೇ?” ಎಂದನು. ಅಧ್ಯಾಯವನ್ನು ನೋಡಿ |