Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ದಾನಿಯೇಲ 4:31 - ಕನ್ನಡ ಸತ್ಯವೇದವು C.L. Bible (BSI)

31 ಈ ಮಾತು ಅವನ ಬಾಯಿಂದ ಹೊರಡುತ್ತಿರುವಾಗಲೆ, “ಎಲೈ ರಾಜ ನೆಬೂಕದ್ನೆಚ್ಚರನೇ, ನಿನ್ನ ವಿಷಯವಾದ ಈ ದೈವೋಕ್ತಿಯನ್ನು ಕೇಳು -

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

31 ಈ ಮಾತು ರಾಜನ ಬಾಯಿಂದ ಹೊರಡುತ್ತಿರುವಾಗ, “ಅರಸನಾದ ನೆಬೂಕದ್ನೆಚ್ಚರನೇ, ನಿನಗಾದ ದೈವೋಕ್ತಿಯನ್ನು ಕೇಳು;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

31 ಈ ಮಾತು ರಾಜನ ಬಾಯಿಂದ ಹೊರಡುತ್ತಿರುವಾಗ - ಅರಸನಾದ ನೆಬೂಕದ್ನೆಚ್ಚರನೇ, ನಿನಗಾದ ದೈವೋಕ್ತಿಯನ್ನು ಕೇಳು;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

31 ಆ ಶಬ್ದಗಳು ಇನ್ನೂ ಬಾಯಿಯಲ್ಲಿಯೇ ಇದ್ದಾಗ, ಆಕಾಶವಾಣಿಯಾಯಿತು. ಆ ಧ್ವನಿಯು, “ಅರಸನಾದ ನೆಬೂಕದ್ನೆಚ್ಚರನೇ, ನಿನ್ನಿಂದ ನಿನ್ನ ರಾಜಪದವಿಯನ್ನು ಕಿತ್ತುಕೊಳ್ಳಲಾಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

31 ಈ ಮಾತು ಅರಸನ ಬಾಯಿಯಲ್ಲಿ ಇರುವಾಗಲೇ ಪರಲೋಕದಿಂದ ಒಂದು ಧ್ವನಿ ಉಂಟಾಯಿತು: “ಅರಸನಾದ ನೆಬೂಕದ್ನೆಚ್ಚರನೇ, ನಿನ್ನ ವಿಷಯವಾದ ದೈವೋಕ್ತಿ ಏನೆಂದರೆ: ನಿನ್ನ ರಾಜ್ಯವು ನಿನ್ನಿಂದ ತೆಗೆಯಲಾಗುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ದಾನಿಯೇಲ 4:31
25 ತಿಳಿವುಗಳ ಹೋಲಿಕೆ  

ಅನಂತರ ಬಲಿಪೀಠದಿಂದ ಹೀಗೆ ಕೇಳಿ ಬಂತು : “ಹೌದು ಪ್ರಭುವೇ, ಸರ್ವಶಕ್ತನೇ, ನೀನಿತ್ತ ತೀರ್ಪು ಸತ್ಯ ಹಾಗೂ ನ್ಯಾಯಬದ್ಧವಾದುದೇ.”


ಆಗ ದೇವರು, ‘ಎಲವೋ ಮೂರ್ಖ, ಇದೇ ರಾತ್ರಿ ನೀನು ಸಾಯಬೇಕಾಗಿದೆ, ನಿನಗಾಗಿ ಸಿದ್ಧಮಾಡಿಟ್ಟಿರುವುದೆಲ್ಲ ಯಾರ ಪಾಲಾಗುವುದು?’ ಎಂದರು.


ಆಗ ಆಕಾಶದಿಂದ, “ಇವನೇ ನನ್ನ ಪುತ್ರ; ನನಗೆ ಪರಮಪ್ರಿಯನು, ನನ್ನ ಅಪಾರ ಮೆಚ್ಚುಗೆಗೆ ಪಾತ್ರನು,” ಎಂಬ ದೈವವಾಣಿ ಕೇಳಿಸಿತು.


ಎಲ್ಲವೂ ಶಾಂತ, ಸುಭದ್ರವೆಂದು ಜನರು ಎಣಿಸುತ್ತಿರುವಾಗಲೇ, ಗರ್ಭಿಣಿಗೆ ಪ್ರಸವವೇದನೆ ಉಂಟಾಗುವಂತೆ, ವಿನಾಶವು ಫಕ್ಕನೆ ಅವರ ಮೇಲೆ ಬಂದೆರಗುವುದು. ಇದರಿಂದ ಯಾರೂ ತಪ್ಪಿಸಿಕೊಳ್ಳುವಂತಿಲ್ಲ.


‘ಪಿತನೇ, ನಿಮ್ಮ ನಾಮ ಮಹಿಮೆಯನ್ನು ಬೆಳಗಿಸಿ’ “ ಎಂದು ನುಡಿದರು. ಆಗ, “ಹೌದು, ಆ ಮಹಿಮೆಯನ್ನು ಬೆಳಗಿಸಿದ್ದೇನೆ, ಪುನಃ ಬೆಳಗಿಸುತ್ತೇನೆ,” ಎಂಬ ಸ್ವರ್ಗೀಯ ವಾಣಿ ಕೇಳಿಸಿತು.


‘ಫರ್ಸಿನ್’ ಎಂದರೆ ನಿನ್ನ ರಾಜ್ಯವನ್ನು ವಿಭಾಗಮಾಡಿ ಮೇದ್ಯರಿಗೂ ಪರ್ಷಿಯದವರಿಗೂ ಕೊಡಲಾಗಿದೆ,” ಎಂದು ಅರಿಕೆಮಾಡಿದನು.


ಗುರುತಿಸಲಾಗಿದ್ದ ಕಾಲವು ಕಳೆಯಿತು. ನೆಬೂಕದ್ನೆಚ್ಚರನು, “ನಾನು ಪರಲೋಕದ ಕಡೆಗೆ ಕಣ್ಣೆತ್ತಿ ನೋಡಿದೆ. ನನ್ನ ಬುದ್ಧಿ ಮತ್ತೆ ನನಗೆ ಸ್ವಾಧೀನವಾಯಿತು. ಆಗ ನಾನು ಪರಾತ್ಪರ ದೇವರನ್ನು ಕೊಂಡಾಡಿದೆ. ಜೀವಸ್ವರೂಪರಾದ ಅವರಿಗೆ ಸ್ತುತಿಸ್ತೋತ್ರಗಳನ್ನು ಸಲ್ಲಿಸಿದೆ: ಆತನ ಆಳ್ವಿಕೆ ಶಾಶ್ವತ ಆತನ ರಾಜ್ಯ ತಲತಲಾಂತರಕ್ಕೂ ಸ್ಥಿರ.


“ರಾಜರೇ, ಕನಸಿನ ತಾತ್ಪರ್ಯ ಇದು: ನನ್ನೊಡೆಯರಾದ ಅರಸರಿಗೆ ಉಂಟಾಗಲಿರುವ ಪರಾತ್ಪರ ದೇವರ ತೀರ್ಪು ಹೀಗಿದೆ -


ಅವನು ಹೊಟ್ಟೆಯನು ತುಂಬಿಸಿಕೊಳ್ಳುವಾಗಲೇ ದೇವರು ಸುರಿಸುವರು ಕೋಪಾಗ್ನಿಯನು ಆಹಾರದಂತೆ.


ತಂತ್ರಮಂತ್ರಗಳಷ್ಟೇ ಕೆಟ್ಟದು ಪ್ರತಿಭಟನೆ ಕಳ್ಳಭಕ್ತಿಗೂ ವಿಗ್ರಹಾರಾಧನೆಗೂ ಸಮಾನ ಹಟಮಾರಿತನ. ನೀ ತಳ್ಳಿಬಿಟ್ಟೆ ಸರ್ವೇಶ್ವರನ ಆದೇಶವನ್ನು; ತಳ್ಳಿಬಿಟ್ಟರವರು ನಿನ್ನ ಅರಸುತನವನ್ನು,” ಎಂದು ನುಡಿದನು.


ಈಗಲಾದರೋ, ನಿನ್ನ ಅರಸುತನ ನಿಲ್ಲುವುದಿಲ್ಲ; ನೀನು ಸರ್ವೇಶ್ವರನ ಆಜ್ಞೆಯನ್ನು ಕೈಗೊಳ್ಳದೆ ಹೋದುದರಿಂದ ಅವರು ತಮಗೆ ಒಪ್ಪಿಗೆಯಾದ ಬೇರೊಬ್ಬ ವ್ಯಕ್ತಿಯನ್ನು ತಮ್ಮ ಪ್ರಜೆಯ ಮೇಲೆ ಅರಸನನ್ನಾಗಿ ನೇಮಿಸಿದ್ದಾರೆ,” ಎಂದು ಹೇಳಿದನು.


ಗರ್ವವು ಮನುಷ್ಯನನ್ನು ದೀನಸ್ಥಿತಿಗೆ ಇಳಿಸುವುದು; ನಮ್ರತೆ ಅವನನ್ನು ಗೌರವಸ್ಥಿತಿಗೆ ಏರಿಸುವುದು.


ವ್ಯರ್ಥಗೊಳಿಸುವವರಾರು ಸೇನಾಧಿಶ್ವರ ಸರ್ವೇಶ್ವರ ಸ್ವಾಮಿಯ ಯೋಜನೆಯನು? ಹಿಂತೆಗೆವವರಾರು ಅವರೆತ್ತಿದ ಕೈಯನು?.


ಆ ಮರದ ಬುಡದ ಮೋಟನ್ನು ಉಳಿಸಿರೆಂದು ಅಪ್ಪಣೆಯಾಗಿದೆ. ಇದರ ತಾತ್ಪರ್ಯವೇನೆಂದರೆ: ಪರಲೋಕದ ದೇವರಿಗೆ ಸರ್ವಾಧಿಕಾರ ಉಂಟೆಂಬುದನ್ನು ತಾವು ಅರಿತುಕೊಂಡ ನಂತರ ನಿಮ್ಮ ರಾಜ್ಯ ನಿಮಗೆ ಸ್ಥಿರವಾಗಿ ದೊರಕುವುದು.


ಆಗ ಅವನು, “ಹಾ, ಬಾಬಿಲೋನ್ ಎಂಥಾ ಮಹಾನಗರ! ಇಗೋ, ನನ್ನ ಶಕ್ತಿ ಸಾಮರ್ಥ್ಯದಿಂದ ನಾನು ಕಟ್ಟಿಸಿರುವ ರಾಜಭವನ! ನನ್ನ ಕೀರ್ತಿ ಪರಾಕ್ರಮವನ್ನು ಇದು ಪ್ರಕಟಿಸುತ್ತಿದೆ!” ಎಂದು ಕೊಚ್ಚಿಕೊಂಡನು.


‘ಈ ರಾಜ್ಯ ನಿನ್ನನ್ನು ಬಿಟ್ಟು ತೊಲಗಿದೆ. ನೀನು ಮಾನವ ಸಮಾಜದಿಂದ ಬಹುಷ್ಕೃತನಾಗುವೆ. ಕಾಡುಮೃಗಗಳ ನಡುವೆ ವಾಸಿಸುವೆ. ದನಗಳಂತೆ ಹುಲ್ಲು ಮೇಯುವ ಗತಿ ನಿನ್ನದಾಗುವುದು. ಪರಾತ್ಪರ ದೇವರಿಗೆ ನರಮಾನವರ ರಾಜ್ಯದ ಮೇಲೆ ಅಧಿಕಾರವಿದೆ. ಆ ರಾಜ್ಯವನ್ನು ತಮಗೆ ಬೇಕಾದವರಿಗೆ ಒಪ್ಪಿಸುತ್ತಾರೆ. ಇದನ್ನು ನೀನು ಗ್ರಹಿಸುವುದರೊಳಗೆ ಏಳು ವರ್ಷ ಕಳೆಯುವುದು,” ಎಂದು ದೈವವಾಣಿಯಾಯಿತು.”


ಹಾಗೆ ಅವರ ಎದೆ ಗರ್ವದಿಂದ ಉಬ್ಬಿಹೋಯಿತು. ಮನಸ್ಸಿಗೆ ಸೊಕ್ಕೇರಿಹೋಯಿತು. ಅವರನ್ನೂ ರಾಜಾಸ್ಥಾನದಿಂದ ತಳ್ಳಲಾಯಿತು. ಮಾನ ಕಳೆದುಹೋಯಿತು.


ಸಾಲೇಮಿನ ಅರಸನೂ ಪರಾತ್ಪರ ದೇವರ ಯಾಜಕನೂ ಆಗಿದ್ದ ಮೆಲ್ಕಿಸದೇಕನು ಸಹ ಅಲ್ಲಿಗೆ ಬಂದು ರೊಟ್ಟಿಯನ್ನೂ ದ್ರಾಕ್ಷಾರಸವನ್ನೂ ಅರ್ಪಿಸಿ ಅಬ್ರಾಮನಿಗೆ ಇಂತೆಂದು ಆಶೀರ್ವಾದ ಮಾಡಿದನು:


ಶಾಶ್ವತವಾದುದು ನಿನ್ನ ರಾಜ್ಯವು I ಇರುವುದೆಂದಿಗು ನಿನ್ನ ಆಳ್ವಿಕೆಯು II


ಆತ ಉದ್ಧರಿಸುವಂಥವನು, ರಕ್ಷಿಸುವಂಥವನು ಭೂಮ್ಯಾಕಾಶಗಳಲ್ಲಿ ಅದ್ಭುತ ಮಹತ್ವಗಳನ್ನು ನಡೆಸುವಂಥವನು! ಆತನೇ ದಾನಿಯೇಲನನ್ನು ಸಿಂಹಗಳ ಬಾಯಿಂದ ತಪ್ಪಿಸಿದವನು!


ಆ ದೂತ ಎಡಬಲಗೈಗಳನ್ನು ಆಕಾಶದ ಕಡೆಗೆ ಎತ್ತಿಕೊಂಡು, “ಶಾಶ್ವತ ಜೀವಸ್ವರೂಪನಾಣೆ, ಒಂದು ಯುಗ, ಎರಡು ಯುಗ, ಮತ್ತು ಅರ್ಧ ಯುಗ ಕಳೆಯಬೇಕು. ದೇವಜನರಿಗಾಗುವ ಹಿಂಸೆಬಾಧೆಗಳು ಸಂಪೂರ್ಣವಾಗಿ ನಿಂತಮೇಲೆ ಈ ಕಾರ್ಯಗಳೆಲ್ಲ ಮುಕ್ತಾಯವಾಗುವುವು,” ಎಂಬುದಾಗಿ ನನ್ನ ಕಿವಿಗೆ ಬೀಳುವಂತೆ ಹೇಳಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು